ಕನಕಗಿರಿ: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ನಿಮಿತ್ತ ಮತದಾರರ ಪಟ್ಟಿಯ (Electoral Roll) ನೋಂದಣಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಕನಕಗಿರಿ ತಹಸೀಲ್ದಾರ್ ವಿಶ್ವನಾಥ ಮುರುಡಿ ತಿಳಿಸಿದರು.
ಕಂದಾಯ ಇಲಾಖೆ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯಲ್ಲಿ ನೋಂದಣಿಗೆ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿ ಚುನಾವಣೆಗೆ ಹೊಸದಾಗಿ ಹೆಸರನ್ನು ನೋಂದಾಯಿಸುವದು ಕಡ್ಡಾಯವಾಗಿರುತ್ತದೆ. ಆದ್ದರಿಂದ ತಾವುಗಳು ಕೆಲ ದಾಖಲೆ ಝರಾಕ್ಸ್ ಪ್ರತಿಗಳೊಂದಿಗೆ ಸ್ವಯಂ ಸಹಿ ಹಾಗೂ ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಫಾರ್ಮ್ ನಂಬರ್ 18 ನ್ನು ಭರ್ತಿ ಮಾಡಿ, ಸಂಬಂಧಿಸಿದ ತಾಲೂಕಿನ ತಹಸೀಲ್ದಾರ್ ಕಾರ್ಯಾಲಯದ ಚುನಾವಣಾ ವಿಭಾಗದಲ್ಲಿ ಸಲ್ಲಿಸಬೇಕು ಎಂದು ಹೇಳಿದರು.
ಇದನ್ನೂ ಓದಿ: Sugar Production : ರಾಜ್ಯದಲ್ಲಿ ಸಕ್ಕರೆ ಉತ್ಪಾದನೆ ಈ ಬಾರಿ 42.30% ಕುಸಿತ ಭೀತಿ
ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ 18 ರ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ರಿಂದ ನವೆಂಬರ್ 06 ರವರಗೆ ಕಾಲಾವಕಾಶವಿದೆ. ಸೇರಿಸಲು ಬೇಕಾದ ದಾಖಲೆಗಳ ಮತದಾರರ ಗುರುತಿನ ಚೀಟಿ, ಆಧಾರ ಕಾರ್ಡ್ , ಡಿಗ್ರಿ ಕಾನ್ವೊಕೇಶನ್ ಪ್ರಮಾಣಪತ್ರ, ಪದವಿ ಅಂಕಪಟ್ಟಿಗಳು (ನವೆಂಬರ್ 2020 ರೊಳಗೆ ಪದವಿ ಮುಗಿದಿರಬೇಕು) ಎರಡು ಭಾವಚಿತ್ರಗಳು ಸಲ್ಲಿಸಬೇಕಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ: PAK vs AUS: ಬೆಂಗಳೂರಿನ ವಿಶ್ವಕಪ್ ಪಂದ್ಯಗಳಿಗೆ ಭಾರಿ ಬಿಗಿ ಬಂದೋಬಸ್ತ್
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರು, ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.