Physical Abuse : ಹುಡುಗಿ ಒಪ್ಪದೆ ಪುರುಷ ಅತ್ಯಾಚಾರ ಮಾಡಲಾಗದು!; ಕಾಂಗ್ರೆಸ್‌ ನಾಯಕನ ಸಂಶೋಧನೆ! Vistara News

ಕೊಪ್ಪಳ

Physical Abuse : ಹುಡುಗಿ ಒಪ್ಪದೆ ಪುರುಷ ಅತ್ಯಾಚಾರ ಮಾಡಲಾಗದು!; ಕಾಂಗ್ರೆಸ್‌ ನಾಯಕನ ಸಂಶೋಧನೆ!

Physical Abuse : ಪುರುಷನೊಬ್ಬನೇ ಅತ್ಯಾಚಾರ ಮಾಡಲಾರ, ಎರಡೂ ಕೈ ಸೇರಿದರೆ ಮಾತ್ರ ಚಪ್ಪಾಳೆ ಎಂದು ವಿಚಿತ್ರ ವಾದ ಮಂಡನೆ ಮಾಡಿದ್ದಾರೆ ರಾಜ್ಯದ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ.

VISTARANEWS.COM


on

Amaregowda bayyapura Former Kushtagi MLA
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಯಾರೇ ಆಗಲಿ ಸೂಕ್ಷ್ಮ ಸಂವೇದನೆಗಳನ್ನು ಕಳೆದುಕೊಂಡಾಗ, ತಮ್ಮವರ ಪರವಾಗಿ ನಿಲ್ಲಬೇಕು ಎಂದಾದಾಗ ಯಾವ ಕೆಳಮಟ್ಟಕ್ಕೂ ಇಳಿಯಬಲ್ಲರು ಎನ್ನುವುದಕ್ಕೆ ಈ ಘಟನೆಯೇ ಉದಾಹರಣೆ. ತನ್ನ ಆಪ್ತನ ಮೇಲೆ ಅತ್ಯಾಚಾರದ (Physical Abuse) ಆರೋಪ ಕೇಳಿ ಬಂದಾಗ ಕಾಂಗ್ರೆಸ್‌ ನಾಯಕ, ಮಾಜಿ ಶಾಸಕರೊಬ್ಬರು (Former MLA) ಯುವತಿಯನ್ನೇ ದೂಷಣೆ ಮಾಡಿದ್ದಾರೆ. ನೀನು ಒಪ್ಪದೆ ಅತ್ಯಾಚಾರ ಹೇಗೆ ನಡೆಯುತ್ತದೆ ಎಂದು ಪ್ರಶ್ನಿಸಿದ್ದಾರೆ. ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ʻʻಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆಯೇ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲʼʼ ಎನ್ನುವುದು ಕುಷ್ಟಗಿ ಕ್ಷೇತ್ರದ ಮಾಜಿ ಶಾಸಕ (Kushtagi Former MLA), ಕಾಂಗ್ರೆಸ್‌ ಮುಖಂಡ ಅಮರೇಗೌಡ ಬಯ್ಯಾಪುರ (Amaregouda Bayyapura) ಅವರ ವಾದ.

ಏನಿದು ಪ್ರಕರಣ? ಯಾಕೆ ಹೀಗೆ ಹೇಳಿದರು?

ಕುಷ್ಟಗಿ ತಾಲೂಕಿನ ಎಂ. ಗುಡದೂರು ಗ್ರಾಮದ ಕಾಂಗ್ರೆಸ್​ ಮುಖಂಡ ಸಂಗನಗೌಡ ಎಂಬಾತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಾಗಿತ್ತು. ಅಕ್ಟೋಬರ್ 10ರಂದು ಆತ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ಕೊಪ್ಪಳ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಹಿಳೆ ದೂರು ನೀಡಿದ್ದನ್ನು ದಾಖಲಿಸಿಕೊಂಡ ಪೊಲೀಸರು ಆರೋಪಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಮೀನಮೇಷ ಎಣಿಸುತ್ತಿದ್ದರು. ಹೀಗಾಗಿ ಸಂತ್ರಸ್ತೆಯ ಮಾವನಾಗಿರುವ ಯಮನೂರಪ್ಪ ಎಂಬವರು ನ್ಯಾಯ ಕೋರಿ ಕೊಪ್ಪಳ ಎಸ್ಪಿಗೆ ದೂರು ನೀಡಿದ್ದರು. ಹಾಗೆಯೇ ಕುಷ್ಟಗಿಯ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ಬಳಿಯೂ ಯಮನೂರಪ್ಪ ಅವರಿಗೂ ಮನವಿ ಮಾಡಿದ್ದರು. ಆರೋಪಿ ಕೂಡಾ ಕಾಂಗ್ರೆಸ್‌ ಪಕ್ಷದವನಾಗಿರುವುದರಿಂದ ನ್ಯಾಯ ಸಿಗಬಹುದು ಎಂಬ ನಂಬಿಕೆಯಲ್ಲಿ ಯಮನೂರಪ್ಪ ದೂರು ಕೊಟ್ಟಿದ್ದರು.

ಆರೋಪಿ ಪರವೇ ನಿಂತ ಅಮರೇಗೌಡ ಬಯ್ಯಾಪುರ!

ಯಮನೂರಪ್ಪ ಹೋಗಿ ಸಂಗನ ಗೌಡ ಹೀಗೆ ಮಾಡಿದ್ದಾನೆ, ನ್ಯಾಯ ಕೊಡಿಸಿ ಎಂದು ಅಮರೇಗೌಡ ಬಯ್ಯಾಪುರ ಅವರಿಗೆ ಮನವಿ ಮಾಡಿದರೆ ಬಯ್ಯಾಪುರ ಅವರು ಆರೋಪಿ ಪರವಾಗಿಯೇ ವಾದ ಮಾಡಿದ್ದಾರೆ. ಜತೆಗೆ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ದೂರು ನೀಡಬಾರದಿತ್ತು ಎಂದು ಹೇಳಿದ್ದಾರೆ.

ಎಸ್‌ಪಿಗೆ ಯಾಕೆ ದೂರು ಕೊಟ್ಟಿದ್ದೀಯಾ? ನಿಮ್ಮ ಮರ್ಯಾದೆಯನ್ನು ನೀನೇ ಕಳೆದುಕೊಳ್ಳುತ್ತಿದ್ದೀಯಾʼʼ ಎಂದು ಹೇಳಿದ ಅವರು, ಒಬ್ಬರಿಂದ ಹೇಗೆ ಅತ್ಯಾಚಾರ ಮಾಡಲು ಸಾಧ್ಯ? ಇಬ್ಬರು ಸೇರಿದರೆ ಮಾತ್ರ ಇದು ಸಾಧ್ಯ ಎಂದು ಸಂತ್ರಸ್ತೆಯನ್ನೇ ಪ್ರಶ್ನಿಸಿದ್ದಾರೆ.

ʻʻನೀನು ಒಬ್ಬನನ್ನು ಕರೆದುಕೊಂಡು ಬಾ, ನಾನು ಓರ್ವ ಮಹಿಳೆಯನ್ನು ಕಳುಹಿಸುತ್ತೇನೆ. ಆ ವ್ಯಕ್ತಿ ಆಕೆಯನ್ನು ಅತ್ಯಾಚಾರ ಮಾಡಲಿ ನೋಡೋಣ. ಒಬ್ಬನಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ. ಸೂಕ್ಷ್ಮ ವಿಚಾರ ಇದು, ಮರ್ಯಾದೆ ಪ್ರಶ್ನೆ ಇದೆ ಯೋಚಿಸು” ಎಂದು ಅಮರೇಗೌಡ ಬಯ್ಯಾಪುರ ಸಂತ್ರಸ್ತೆಯ ಮಾವನಿಗೇ ಬುದ್ಧಿ ಹೇಳಿದ್ದಾರೆ. ಈ ಆಡಿಯೋ ಈಗ ಸದ್ದು ಮಾಡಿದ್ದು, ಬಯ್ಯಾಪುರ ಅವರ ಸೂಕ್ಷ್ಮತೆಗೆ ಆಕ್ರೋಶ ವ್ಯಕ್ತವಾಗಿದೆ.

ಅತ್ಯಾಚಾರವಾಗಿದೆ ನ್ಯಾಯ ಕೊಡಿಸಿ ಎಂದು ಸಂತ್ರಸ್ತೆ ಮಾಜಿ ಶಾಸಕರಿಗೆ ದೂರು ನೀಡಿದರೆ, ಆ ಮನುಷ್ಯ ಮಾತ್ರ ತಪ್ಪು ನಿಂದೂ ಇದೆ, ಎರಡು ಕೈ ಸೇರಿಸಿದರೆ ಮಾತ್ರ ಚಪ್ಪಾಳೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಪ್ಪಳ

Koppala News: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು; ಗಂಗಾವತಿಯಲ್ಲಿ ಸಂಭ್ರಮಾಚರಣೆ

Koppala News: 3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿಯ ಮಹಾತ್ಮಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ಮಾಡಿದರು.

VISTARANEWS.COM


on

BJP wins in 3 states Celebration in Gangavathi
3 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿಯ ಗಾಂಧಿವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
Koo

ಗಂಗಾವತಿ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ (Assembly Election) ಬಿಜೆಪಿ (BJP) ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ಮಾಡಿದರು.

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತ ಪಡೆದು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಗಂಗಾವತಿ ಮಾಜಿ ಶಾಸಕ ಪರಣ್ಣ ಮುನವಳ್ಳಿ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪ್ರಮುಖರು, ಪಕ್ಷದ ಕಾರ್ಯಕರ್ತರು, ಪ್ರಮುಖರು ಪಾಲ್ಗೊಂಡಿದ್ದರು.

ಇದನ್ನೂ ಓದಿ: Masala Tea: ಚಳಿಗಾಲವೆಂದು ಅತಿಯಾಗಿ ಮಸಾಲೆ ಚಹಾ ಕುಡಿಯುತ್ತೀರಾ? ಹಾಗಾದರೆ ಎಚ್ಚರ!

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಜನರಿಗೆ ಕಾಂಗ್ರೆಸ್ ಪಕ್ಷದ ಬಿಟ್ಟಿ ಭಾಗ್ಯಗಳು ಬೇಕಿಲ್ಲ. ಅವರಿಗೆ ಬೇಕಿರುವುದು ಮೋದಿ ಎಂಬ ಒಂದೇ ಒಂದು ಗ್ಯಾರಂಟಿ ಎಂಬುವುದು ಈ ಚುನಾವಣಾ ಫಲಿತಾಂಶದಿಂದ ಗೊತ್ತಾಗಿದೆ ಎಂದು ತಿಳಿಸಿದರು.

ಯುವ ಮುಖಂಡ ಸಂಗಮೇಶ ಸುಗ್ರೀವಾ, ಕಾಡಾದ ಮಾಜಿ ಅಧ್ಯಕ್ಷ ಎಚ್.ಗಿರೇಗೌಡ, ಎಚ್.ಎಂ. ತಿಪ್ಪೇರುದ್ರಸ್ವಾಮಿ, ಬಿಜೆಪಿ ನಗರ ಘಟಕದ ಅಧ್ಯಕ್ಷ ಕಾಶಿನಾಥ ಚಿತ್ರಗಾರ ಮಾತನಾಡಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

ಈ ಸಂದರ್ಭದಲ್ಲಿ ಮುಖಂಡರಾದ ಶೋಭಾ ರಾಯ್ಕರ್, ಗಿರಿಜಮ್ಮ, ಶೈಲಜಾ, ಸರಸ್ವತಿ ರಾಯಭಾಗಿ, ರೂಪಾ, ಸರಸ್ವತಿ ಕಾಟ್ವಾ, ಅಕ್ಕಮ್ಮ ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಕರ್ನಾಟಕ

Vijayanagara News: ಹೊಸಪೇಟೆಯಲ್ಲಿ ವಿಸ್ತಾರ ನ್ಯೂಸ್‌ ಬೆಸ್ಟ್ ಟೀಚರ್‌ ಅವಾರ್ಡ್ ಕಾರ್ಯಕ್ರಮಕ್ಕೆ ಚಾಲನೆ

Vijayanagara News: ವಿಸ್ತಾರ ನ್ಯೂಸ್‌ ವತಿಯಿಂದ ಬೆಸ್ಟ್‌ ಟೀಚರ್‌ ಅವಾರ್ಡ್‌ ನೀಡುತ್ತಿರುವುದು ಸಂತಸದ ಸಂಗತಿ. ಇದು ಸಾಮಾಜಿಕ ಕಳಕಳಿಯ ಪ್ರತೀಕ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌ ಶ್ಲಾಘಿಸಿದರು.

VISTARANEWS.COM


on

Vistara News Best Teacher Award 2023 programme inaugurated by Vijayanagara DC M.S. Diwakar at hosapete
ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಆಯೋಜಿಸಲಾಗಿದ್ದ ವಿಸ್ತಾರ ನ್ಯೂಸ್‌ ಬೆಸ್ಟ್ ಟೀಚರ್‌ ಅವಾರ್ಡ್ 2023 ಕಾರ್ಯಕ್ರಮವನ್ನು ವಿಜಯನಗರ ಡಿಸಿ ಎಂ.ಎಸ್. ದಿವಾಕರ್‌, ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.
Koo

ವಿಜಯನಗರ/ಕೊಪ್ಪಳ: ವಿಸ್ತಾರ ನ್ಯೂಸ್‌ ಬೆಸ್ಟ್ ಟೀಚರ್‌ ಅವಾರ್ಡ್ 2023 (Vistara News Best Teacher Award 2023) ರ ವಿಜಯನಗರ ಹಾಗೂ ಕೊಪ್ಪಳ ಜಿಲ್ಲೆಯ ಸಾಧಕ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಹೊಸಪೇಟೆ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆಯಿತು.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ, ಕೊಪ್ಪಳ ತಾಲೂಕು ಭಾಗ್ಯನಗರದ ನ್ಯಾಷನಲ್ ಸ್ಕೂಲ್, ಹೂವಿನ ಹಡಗಲಿ ತಾಲೂಕು ಹೊಳಲು ಗ್ರಾಮದ ಸರ್ ಎಂ. ವಿಶ್ವೇಶ್ವರಯ್ಯ ಪ್ರೌಢಶಾಲೆ ಮತ್ತು ಕೊಟ್ಟೂರು ತಾಲೂಕಿನ ಹಾರಕನಾಳದ ದ ಪ್ರಿಸ್ಟೀನ್ ಸ್ಕೂಲ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್‌, ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ವಿಸ್ತಾರ ನ್ಯೂಸ್‌ ವತಿಯಿಂದ ಬೆಸ್ಟ್‌ ಟೀಚರ್‌ ಅವಾರ್ಡ್‌ ಕಾರ್ಯಕ್ರಮ ಮಾಡುತ್ತಿರುವುದು ಸಂತಸದ ಸಂಗತಿ. ಇದು ಸಾಮಾಜಿಕ ಕಳಕಳಿಯ ಪ್ರತೀಕ ಎಂದು ತಿಳಿಸಿದರು. ಶಿಕ್ಷಕರ ಹುದ್ದೆಯು ಅತ್ಯಂತ ಪವಿತ್ರ ಹಾಗೂ ಗೌರವಯುತವಾದದ್ದು ಎಂದು ಹೇಳಿದರು.

ಇದನ್ನೂ ಓದಿ: Masala Tea: ಚಳಿಗಾಲವೆಂದು ಅತಿಯಾಗಿ ಮಸಾಲೆ ಚಹಾ ಕುಡಿಯುತ್ತೀರಾ? ಹಾಗಾದರೆ ಎಚ್ಚರ!

ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ತಮ್ಮ ತಂದೆಯವರು ಸಹ ಶಿಕ್ಷಕರಾಗಿದ್ದರು. ಈ ಕಾರ್ಯಕ್ರಮಕ್ಕೆ ಬರಲು ಅದೇ ಪ್ರೇರಣೆಯಾಗಿದೆ. ಶಿಕ್ಷಕರ ವೃತ್ತಿ ಗೌರವಯುತ ವೃತ್ತಿ. ಪ್ರತಿಯೊಬ್ಬ ವ್ಯಕ್ತಿಯ, ಸಾಧಕನ ಹಿಂದೆ ಶಿಕ್ಷಕರ ಪಾತ್ರವಿದೆ ಎಂದು ತಿಳಿಸಿದರು.

ಪ್ರಾಥಮಿಕ ಶಾಲಾ ಹಂತದಲ್ಲಿ ಗೌರಮ್ಮ ಎಂಬ ಶಿಕ್ಷಕರು ತಮಗೆ ಪ್ರೋತ್ಸಾಹ ಹಾಗೂ ಪ್ರೇರಣೆಯಾಗಿದ್ದರು ಎಂದು ತಮ್ಮ ಬಾಲ್ಯದಲ್ಲಿ ಶಿಕ್ಷಣ ನೀಡಿದ ಶಿಕ್ಷಕರನ್ನು ಇದೇ ವೇಳೆ ಸ್ಮರಿಸಿಕೊಂಡರು.

ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ್ದ ಹೊಸಪೇಟೆಯ ಕೊಟ್ಟೂರು ಮಹಾಸಂಸ್ಥಾನ ಮಠದ ಶ್ರೀ ಜಗದ್ಗುರು ಬಸವಲಿಂಗ ಮಹಾಸ್ವಾಮೀಜಿ ಮಾತನಾಡಿ, ಸಾಧನೆ ಮಾಡಲು ಗುರು ಅಥವಾ ಶಿಕ್ಷಕರ ಮಾರ್ಗದರ್ಶನವಿರುತ್ತದೆ. ಅವರ ಪ್ರೇರಣೆ ಇರುತ್ತದೆ. ಸಾಧಕರ ಸಾಧನೆ ಹಿಂದೆ ಒಬ್ಬ ಗುರುವಿರುತ್ತಾನೆ. ಗುರುವಿಲ್ಲದೆ ಏನೂ ಇಲ್ಲ. ಅಂತಹ ಗುರುಗಳನ್ನು ಅಥವಾ ಶಿಕ್ಷಕರನ್ನು ಗುರುತಿಸಿ, ಗೌರವಿಸುತ್ತಿರುವ ವಿಸ್ತಾರ ನ್ಯೂಸ್‌ನ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಚಿನ್ನದ ಬೆಲೆ ದಿಢೀರನೆ 40 ರೂ. ಏರಿಕೆ; ಇಷ್ಟಿದೆ ಇಂದಿನ ದರ

ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕಿನ ಭಾಗ್ಯನಗರದ ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕ ಪ್ರಹ್ಲಾದ ಅಗಳಿ ಮಾತನಾಡಿ, ಸಮಾಜದಲ್ಲಿ ಅನೇಕ ಕ್ಷೇತ್ರಗಳಲ್ಲಿ ಸಾಧಕರು ಇದ್ದಾರೆ. ನಿಜವಾದ ಸಾಧಕರನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸವನ್ನು ವಿಸ್ತಾರ ನ್ಯೂಸ್ ಮಾಡುತ್ತಿದೆ. ಖಾಸಗಿ ಶಾಲೆಯ ಶಿಕ್ಷಕರನ್ನೂ ಗುರುತಿಸಿ ಅವರಿಗೂ ಗೌರವ ಸಲ್ಲಿಸುತ್ತಿರುವುದಕ್ಕೆ ವಿಸ್ತಾರ ನ್ಯೂಸ್ ಸಂಸ್ಥೆಯನ್ನು ಅಭಿನಂದಿಸುತ್ತೇನೆ.

ಪ್ರತಿವರ್ಷ 88 ಲಕ್ಷ ಜನ ಪದವೀಧರರಾಗುತ್ತಿದ್ದಾರೆ. ಖಾಸಗಿ ಶಾಲೆಗಳ ಶಿಕ್ಷಕರ ಸೇವೆಯೂ ಸ್ಮರಣೀಯ ಸೇವೆ. ಶೈಕ್ಷಣಿಕ ಸಾಧನೆಯಲ್ಲಿ ಖಾಸಗಿ ಶಾಲೆಗಳ ಶಿಕ್ಷಕರ ಸೇವೆಯೂ ಸಿಂಹಪಾಲು ಇದೆ. ಶಿಕ್ಷಣ ಪದ್ದತಿಯನ್ನು ಬದಲಾಯಿಸುವ ಹಕ್ಕನ್ನು ರಾಜಕಾರಣಿಗಳಿಗೆ ನೀಡದೆ ಅಧಿಕಾರಿಗಳಿಗೆ, ಆ ಕ್ಷೇತ್ರದಲ್ಲಿ ಕೆಲಸ ಮಾಡಿದವರಿಗೆ ನೀಡಬೇಕು ಎಂದು ತಿಳಿಸಿದರು.

ಉದ್ಯಮಿ ಶ್ರೀನಿವಾಸ ರೆಡ್ಡಿ ಮಾತನಾಡಿದರು.

ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಕಾರ್ಯಕ್ರಮದಲ್ಲಿ ವಿಸ್ತಾರ ನ್ಯೂಸ್‌ ಬೆಸ್ಟ್‌ ಟೀಚರ್‌ ಅವಾರ್ಡ್‌-2023 ಗೆ ಆಯ್ಕೆಯಾದ ಕಾರಟಗಿ ತಾಲೂಕಿನ ಸೋಮನಾಳ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಕಂಠಿ, ಕುಷ್ಟಗಿ ತಾಲೂಕಿನ ಎಂ.ರಾಂಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ‌ ಸಹ ಶಿಕ್ಷಕ ರಾಜು ಬಿ. ರಾಠೋಡ, ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ರೋಟರಿನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗುರುಸ್ವಾಮಿ ಆರ್., ಯಲಬುರ್ಗಾ ತಾಲೂಕಿನ ಬುಕನಟ್ಟಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಶಂಕ್ರಪ್ಪ ಇಂಗಳದಾಳ, ಗಂಗಾವತಿ ತಾಲೂಕಿನ ಶ್ರೀರಾಮನಗರದ ವಿದ್ಯಾನಿಕೇತನ ಪಬ್ಲಿಕ್‌ ಶಾಲೆಯ ಶಿಕ್ಷಕಿ ನಾದಿರಾ ಬೇಗಂ, ಕೊಪ್ಪಳದ ಭಾಗ್ಯನಗರದ ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್‌ನ ಮುಖ್ಯಗುರು ಕಲ್ಪನಾ ವಿಜಯಕುಮಾರ್, ಹೊಸಪೇಟೆ ತಾಲೂಕಿನ 76 ವೆಂಕಟಾಪುರ ಕ್ಯಾಂಪ್‌ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ನಿರಂಜನ್ ಪಿ.ಜೆ., ಕೂಡ್ಲಿಗಿ ತಾಲೂಕಿನ ಗಜಾಪುರದ ಸಿಆರ್‌‌ಪಿ ಸಂದೀಪ್ ಬಿ., ಹೂವಿನ ಹಡಗಲಿ ತಾಲೂಕು ಹೊಳಲು ಗ್ರಾಮದ ಸರ್‌‌‌.ಎಂ ವಿಶ್ವೇಶ್ವರಯ್ಯ ಪ್ರೌಢಶಾಲೆಯ ಮುಖ್ಯಗುರು ಜಾವಿದ್‌ ಜಿ. ಹಾಲಗಿ ಅವರಿಗೆ ವಿಸ್ತಾರ ನ್ಯೂಸ್‌ ಬೆಸ್ಟ್‌ ಟೀಚರ್‌ ಅವಾರ್ಡ್‌-2023 ಪ್ರಶಸ್ತಿ ನೀಡಿ, ಗೌರವಿಸಲಾಯಿತು.

ವಿಸ್ತಾರ ನ್ಯೂಸ್‌ ಬೆಸ್ಟ್‌ ಟೀಚರ್‌ ಅವಾರ್ಡ್‌ 2023 ಪ್ರಶಸ್ತಿ ಪುರಸ್ಕೃತ ಶಿಕ್ಷಕರು

ಕಾರ್ಯಕ್ರಮದಲ್ಲಿ ಕಲಾವಿದ ಶ್ರೀ ಮಾರುತಿರಾವ್ ಹಾಗೂ ತಂಡದಿಂದ ಸಂಗೀತ ಕಾರ್ಯಕ್ರಮ ಜರುಗಿತು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ, ಜಿಲ್ಲಾ ಘಟಕ ಮತ್ತು ತಾಲೂಕು ಘಟಕಗಳು, ವಿಜಯನಗರ ಜಿಲ್ಲೆ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾ ಘಟಕ ಮತ್ತು ತಾಲೂಕು ಘಟಕಗಳು, ವಿಜಯನಗರ ಜಿಲ್ಲೆ ಇವರ ಸಹಕಾರದಲ್ಲಿ ಕಾರ್ಯಕ್ರಮವು ಅದ್ಭುತವಾಗಿ ಮೂಡಿಬಂತು.

ಇದನ್ನೂ ಓದಿ: Actor Yash: ಸಿಹಿ ಸುದ್ದಿ ಕೊಟ್ಟೇ ಬಿಟ್ರು ರಾಕಿಂಗ್‌ ಸ್ಟಾರ್‌ ಯಶ್‌; ಟೈಟಲ್ ಅನೌನ್ಸ್‌ಗೆ ಮುಹೂರ್ತ ಫಿಕ್ಸ್!

ಈ ಸಂದರ್ಭದಲ್ಲಿ ಬಿಇಒ ಚನ್ನಬಸಪ್ಪ, ಹೊಳಲು ಗ್ರಾಮದ ಸರ್‌‌‌.ಎಂ ವಿಶ್ವೇಶ್ವರಯ್ಯ ಪ್ರೌಢಶಾಲೆಯ ನಿರ್ದೇಶಕ ಎಂ.ಎಂ. ಹಾಲಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿಸ್ತಾರ ನ್ಯೂಸ್‌ನ ಬಳ್ಳಾರಿ ಬ್ಯೂರೊ ಮುಖ್ಯಸ್ಥ ಶಶಿಧರ ಮೇಟಿ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ರೀನಾ ನಂದನ್ ಹಾಗೂ ಕವಿತಾ ಪ್ರಾರ್ಥಿಸಿದರು. ಶಿಕ್ಷಕ ಬಸವರಾಜ ನಿರೂಪಿಸಿದರು.

Continue Reading

ಕರ್ನಾಟಕ

Fire Accident : ಬೆಂಕಿಗೆ ಸಿಲುಕಿ ಸುಟ್ಟು ಕರಕಲಾದ ಹಸುಗಳು! ನಿಂತಲ್ಲೇ ಹೊತ್ತಿ ಉರಿದ ಲಾರಿ

Fire Accident : ಪ್ರತ್ಯೇಕ ಕಡೆಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸಾವು- ನೋವು ಸಂಭವಿಸಿದೆ. ದನದ ಕೊಟ್ಟಿಗೆಯಲ್ಲಿ ಆಕಸ್ಮಿಕ ಅಗ್ನಿ ಅವಘಡದಿಂದ ಜಾನುವಾರುಗಳು ಮೃತಪಟ್ಟಿದ್ದರೆ ಮತ್ತೊಂದು ಕಡೆ ಲಾರಿ ಹಾಗೂ ಜ್ಯುವೆಲರಿ ಶಾಪ್‌ವೊಂದು ಸುಟ್ಟು ಕರಕಲಾಗಿದೆ.

VISTARANEWS.COM


on

By

Fire Accident Cows die in fire
Koo

ಆನೇಕಲ್‌/ಕೊಪ್ಪಳ/ಧಾರವಾಡ : ದನದ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ, ಬೆಂಕಿಯ ಮಧ್ಯೆ (Fire Accident) ಸಿಕ್ಕಿಹಾಕಿಕೊಂಡ ದನಗಳು ಪ್ರಾಣ ಕಳೆದುಕೊಂಡಿವೆ. ಒಂಬತ್ತು ಹಸುಗಳು ದಾರುಣವಾಗಿ ಮೃತಪಟ್ಟಿದ್ದರೆ, ಉಳಿದ ಐದು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರು ಹೊರವಲಯ ಹುಳಿಮಂಗಲ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.

ಕೊಟ್ಟಿಗೆಯಲ್ಲಿ ಹದಿನೈದು ಹಸುಗಳನ್ನು ಕಟ್ಟ ಹಾಕಲಾಗಿತ್ತು. ಅದೇ ಕೊಟ್ಟಿಗೆಯಲ್ಲಿ ಎರಡು ಬೈಕ್ ನಿಲ್ಲಿಸಲಾಗಿತ್ತು. ಶುಕ್ರವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡನೋಡುತ್ತಲೇ ಬೆಂಕಿ ಆವರಿಸಿದ್ದು, ಒಂಬತ್ತು ಹಸುಗಳು ಸುಟ್ಟು ಕರಕಲಾಗಿವೆ. ಬದುಕುಳಿದಿರುವ ಐದು ಹಸುಗಳಿಗೆ ಗಂಭೀರವಾದ ಸುಟ್ಟಗಾಯಗಳಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿವೆ. ಕೊಟ್ಟಿಗೆಯಲ್ಲಿದ್ದ ಬೈಕ್‌ಗಳು ಬೆಂಕಿಗಾಹುತಿ ಆಗಿದೆ. ಸ್ಥಳಕ್ಕೆ ಪಶುವೈದ್ಯರ ತಂಡ ಹಾಗೂ ಜಿಗಣಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Trains cancelled : ಮೂರು ತಿಂಗಳು ಈ ಮಾರ್ಗಗಳ ರೈಲು ಸಂಚಾರ ರದ್ದು!

ಕೊಪ್ಪಳದಲ್ಲಿ ಹೊತ್ತಿ ಉರಿದ ಜ್ಯುವೆಲರಿ ಶಾಪ್‌

ಅಗ್ನಿ ಅವಘಡ ಸಂಭವಿಸಿ ಜ್ಯುವೆಲರಿ ಶಾಪ್‌ವೊಂದು ಹೊತ್ತಿ ಉರಿದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ನಗರದಲ್ಲಿ ತಡರಾತ್ರಿ ಘಟನೆ ನಡೆದಿದ್ದು, ಮೂರು ಅಂತಸ್ತಿನ ಕಟ್ಟಡವು ಸಂಪೂರ್ಣ ಬೆಂಕಿಗಾಹುತಿ ಆಗಿದೆ. ಅಪಾರ ಪ್ರಮಾಣದ ಚಿನ್ನಾಭರಣವು ಬೆಂಕೆಗಾಹುತಿ ಆಗಿದೆ. ಗಂಗಾವತಿ ನಗರದ ಗಣೇಶ ಸರ್ಕಲ್‌ನಲ್ಲಿರುವ ಕೆಜಿಪಿ ಜ್ಯುವೆಲರಿ ಶಾಪ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳು ದೌಡಿಯಿಸಿದ್ದು, ಸತತ ಕಾರ್ಯಾಚರಣೆಯಿಂದ ಬೆಂಕಿ ತಹಬದಿಗೆ ಬಂದಿದೆ.

Fire Accident
ಕ್ಷಣಾರ್ಧದಲ್ಲೇ ಹೊತ್ತಿ ಉರಿದ ಲಾರಿ

ಧಾರವಾಡದಲ್ಲಿ ಕಂಟೆನರ್ ಹೊತ್ತು ಹೊರಟಿದ್ದ ಲಾರಿಯಲ್ಲಿ‌ ದಿಢೀರ್‌ ಬೆಂಕಿ

ಕಂಟೆನರ್ ಹೊತ್ತು ಹೊರಟಿದ್ದ ಲಾರಿಯಲ್ಲಿ‌ ದಿಢೀರ್‌ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ. ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಮಂಡ್ಯಾಳ್ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಗೋವಾದಿಂದ ಧಾರವಾಡ ಕಡೆ ಬರುತ್ತಿದ್ದಾಗ ಏಕಾಏಕಿ‌ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ತಕ್ಷಣ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಕೆಳಗಿಳಿದು ಓಡಿದಿದ್ದಾರೆ.

ಲಾರಿಗೆ ಬೆಂಕಿ‌ ಹತ್ತಿದ ಕಾರಣ ಅಳ್ನಾವರ ರಸ್ತೆ ಕೆಲ ಕಾಲ ಬಂದ್ ಆಗಿತ್ತು. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆದರು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading

ಉಡುಪಿ

Karnataka Weather : ದಕ್ಷಿಣ ಒಳನಾಡು, ಮಲೆನಾಡಲ್ಲಿ ಮಳೆಯಾಟ; ಇನ್ನೊಂದು ವಾರ ಮೋಡ ಕವಿದ ವಾತಾವರಣ

Rain News : ದಕ್ಷಿಣ ಒಳನಾಡು, ಮಲೆನಾಡಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಟಕ್ಕೆ ಬ್ರೇಕ್‌ (Karnataka Weather Forecast) ಬಿದ್ದಿದೆ. ಎಲ್ಲೆಲ್ಲಿದೆ ಮಳೆ ಅಲರ್ಟ್‌?

VISTARANEWS.COM


on

By

Rain in south interior and malnad Cloudy weather for another week
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಘಳಿಗೆಗೊಂದು ವಾತಾವರಣ (Karnataka weather Forecast) ಇರಲಿದೆ. ಒಮ್ಮೊಮ್ಮೆ ಬಿಸಿಲು ಇದ್ದರೆ ಮತ್ತೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಸಮಯ ಸಣ್ಣ ಮಳೆಯೊಂದಿಗೆ ಭಾರಿ ಮಳೆಯಾಗುವ (rain News) ಸಾಧ್ಯತೆ ಇದೆ..

ಭಾರಿ ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಲ್ಲಿ ಭರ್ಜರಿ ಮಳೆಯಾಗುವ ನಿರೀಕ್ಷೆ ಇದೆ. ಪ್ರಮುಖವಾಗಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಸೇರಿದಂತೆ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲೂ ಮಳೆ ಅಬ್ಬರ ಇರಲಿದೆ.

ಅಲ್ಲಲ್ಲಿ ಮಳೆ

ಉತ್ತರ ಒಳನಾಡಲ್ಲಿ ಸಕ್ರಿಯವಾಗಿದ್ದ ಮಳೆಯು ದುರ್ಬಲಗೊಳ್ಳಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು, ಯಾದಗಿರಿ ವಿಜಯಪುರದ ಅಲ್ಲಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಉಳಿದಂತೆ ಗದಗ, ಕೊಪ್ಪಳದಲ್ಲಿ ಒಣಹವೆ ಇರಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆಯಾದರೆ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿಂದು ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 35.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶಿವಮೊಗ್ಗ, ಉಡುಪಿ ಹಾಗೂ ಉತ್ತರ ಕನ್ನಡ, ಕೊಪ್ಪಳ, ಗದಗ, ಯಾದಗಿರಿ, ಕಲಬುರಗಿ, ಚಿಕ್ಕಮಗಳೂರು, ಹಾವೇರಿ, ವಿಜಯಪುರ, ದಾವಣಗೆರೆ, ಧಾರವಾಡ, ರಾಯಚೂರು, ಬೆಳಗಾವಿ, ಬಾಗಲಕೋಟೆ, ಬಳ್ಳಾರಿಯಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ನಿಂದ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.

ಇದನ್ನೂ ಓದಿ: Mens Winter Fashion: ಚಳಿಗಾಲದ ಮೆನ್ಸ್ ಲೇಯರ್‌ ಲುಕ್‌ಗೆ 3 ಮಿಕ್ಸ್‌ ಮ್ಯಾಚ್‌ ಸ್ಟೈಲಿಂಗ್‌ ರೂಲ್ಸ್

ಹಾಸನ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಜತೆಗೆ ಚಾಮರಾಜನಗರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಬೀದರ್ ಮತ್ತು ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರಿನಲ್ಲಿ ಕನಿಷ್ಠ ಉಷ್ಣಾಂಶ 16 ರಿಂದ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 29 ಡಿ.ಸೆ -18 ಡಿ.ಸೆ
ಮಂಗಳೂರು: 35 ಡಿ.ಸೆ – 23 ಡಿ.ಸೆ
ಚಿತ್ರದುರ್ಗ: 32 ಡಿ.ಸೆ – 19 ಡಿ.ಸೆ
ಗದಗ: 33 ಡಿ.ಸೆ – 18ಡಿ.ಸೆ
ಹೊನ್ನಾವರ: 36 ಡಿ.ಸೆ- 24 ಡಿ.ಸೆ
ಕಲಬುರಗಿ: 34 ಡಿ.ಸೆ – 21 ಡಿ.ಸೆ
ಬೆಳಗಾವಿ: 32 ಡಿ.ಸೆ – 18 ಡಿ.ಸೆ
ಕಾರವಾರ: 35 ಡಿ.ಸೆ – 24 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ.ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ.

Continue Reading
Advertisement
TPCC president Revanth Reddy To be Next CM Of Telangana, Says congress
ದೇಶ3 mins ago

Revanth Reddy: ರೇವಂತ್ ರೆಡ್ಡಿ ತೆಲಂಗಾಣ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಘೋಷಣೆ

Siddaramaiah
ಕರ್ನಾಟಕ14 mins ago

Captain Pranjal: ಯಾರವರು ಯೋಧ ಎಂದರಾ ಸಿಎಂ; ಸಿದ್ದರಾಮಯ್ಯ ಸ್ಪಷ್ಟೀಕರಣ ಏನು?

BJP can only win gau mutra states Says DMK MP
ದೇಶ28 mins ago

ಬಿಜೆಪಿ ‘ಗೋ ಮೂತ್ರ’ ರಾಜ್ಯಗಳಲ್ಲಷ್ಟೇ ಗೆಲ್ಲೋದು! ಡಿಎಂಕೆ ಸಂಸದನ ಹೇಳಿಕೆಗೆ ಬಿಜೆಪಿ ವ್ಯಘ್ರ

Anjuna elephant the end
ಕರ್ನಾಟಕ38 mins ago

Elephant Arjuna : ಅರ್ಜುನನ ಬದುಕೇ ಒಂದು ಹೋರಾಟ; ದುರಂತ ನಾಯಕನಿಗೆ ಕಣ್ಣೀರ ವಿದಾಯ

Dinesh gundu roa and doctors Amendment Bill
ಕರ್ನಾಟಕ42 mins ago

Belagavi Winter Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ; ತಿದ್ದುಪಡಿ ವಿಧೇಯಕ ಮಂಡನೆ

Labourer dies after crane ceiling cut another critical
ಕರ್ನಾಟಕ42 mins ago

Ceiling collapses : ಕ್ರೇನ್‌ ಸೀಲಿಂಗ್‌ ಕಟ್‌ ಆಗಿ ಬಾವಿಗೆ ಬಿದ್ದ ಕಾರ್ಮಿಕ ಸಾವು, ಮತ್ತೊಬ್ಬ ಗಂಭೀರ!

bigg boss
ಕಿರುತೆರೆ45 mins ago

BBK SEASON 10: ಬಿಗ್‌ ಬಾಸ್‌ ಮನೆಯೊಳಗೆ ಹೊಸ ಲೋಕ; ಗಂಧರ್ವರು-ರಕ್ಕಸರು ಎಂಟ್ರಿ!

Makeup kit
ಫ್ಯಾಷನ್48 mins ago

Winter Makeup kit : ವಿಂಟರ್‌ ಮೇಕಪ್‌ ಕಿಟ್‌ನಲ್ಲಿರಲೇಬೇಕಾದ 5 ಸೌಂದರ್ಯವರ್ಧಕಗಳು

surath
ದೇಶ55 mins ago

Viral News: ಇನ್‌ಸ್ಟಾಗ್ರಾಮ್‌ ಇನ್‌ಫ್ಲುಯೆನ್ಸರ್‌ ʼಅನಾಗರಿಕ ನಡೆʼಗೆ ನೆಟ್ಟಿಗರಿಂದ ಟೀಕೆ; ಆಗಿದ್ದೇನು?

chennai
ದೇಶ1 hour ago

Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌