ಕೊಪ್ಪಳ: ಭಾರತ ಸರ್ಕಾರದ ಯುವ ಜನ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ (Koppala) ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ-2023-24 (Yuva Utsav) ಕಾರ್ಯಕ್ರಮ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಹಾಗೂ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು. ನಾವು ಓದುಲು ಬಂದಿದ್ದೇನೆ ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: Aditya L1 Mission: ಸೂರ್ಯನೆಡೆ ನಮ್ಮ ನಡೆ; ನಾಳೆ ಆದಿತ್ಯ L1 ಉಡಾವಣೆಗೆ ಕ್ಷಣಗಣನೆ; ಇಲ್ಲಿ ವೀಕ್ಷಿಸಿ!
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಮಾತನಾಡಿದರು.
ಗಮನ ಸೆಳೆದ ವಿವಿಧ ಮಳಿಗೆಗಳು
ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಮತ್ತು ಜೀವನೋವ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತೋಟಗಾರಿಕೆ ಇಲಾಖೆ ಹಾಗೂ ಇತರ ಇಲಾಖೆಗಳಿಂದ ಹಾಕಿದ್ದ ನಾನಾ ಯೋಜನೆಗಳ ಕುರಿತಾದ ಮಾಹಿತಿಯುಳ್ಳು ಪ್ರಚಾರ ಮಳಿಗೆಗಳು ಗಮನ ಸೆಳೆದವು. ಕಾಲೇಜು ವಿದ್ಯಾರ್ಥಿಗಳು, ಯುವ ಜನರು ಹಾಗೂ ಸಾರ್ವಜನಿಕರು ಮಳಿಗೆಗಳಿಗೆ ಭೇಟಿ ನೀಡಿ, ಸರ್ಕಾರದ ಕಾರ್ಯಕ್ರಮ, ಸೌಲಭ್ಯಗಳು ಹಾಗೂ ಯೋಜನೆಗಳ ಮಾಹಿತಿ ಪಡೆದರು.
ಇದನ್ನೂ ಓದಿ: IND vs PAK: ಮಳೆಯಿಂದ ಪಂದ್ಯ ರದ್ದಾದರೆ ಟೀಮ್ ಇಂಡಿಯಾ ಲೆಕ್ಕಾಚಾರವೇನು?
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಯುವ ಕೇಂದ್ರ ಯುವ ಅಧಿಕಾರಿ ಮಾಂಟು ಪಾತರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ತಿಮ್ಮಾರೆಡ್ಡಿ ಮೇಟಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ಕಾರ್ಯದರ್ಶಿ ಡಾ.ಭಾಗ್ಯಜೋತಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಂಜುನಾಥ ಗೊಂಡಬಾಳ, ನೆಹರು ಯುವ ಕೇಂದ್ರದ ಲೆಕ್ಕ ಹಾಗೂ ಕಾರ್ಯಕ್ರಮಾಧಿಕಾರಿ ರಾಮರಾವ್ ಬಿರಾದಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.