ಕಾರಟಗಿ: ಪರಿಸರವನ್ನು (World Environment Day) ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀದೇವಿ ತಿಳಿಸಿದರು.
ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ತಾ.ಪಂ. ಹಾಗೂ ಸಾಮಾಜಿಕ ಅರಣ್ಯ ವಲಯ ಗಂಗಾವತಿ ಅವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಇದನ್ನೂ ಓದಿ: World Environment Day: ಇಂದು ವಿಶ್ವ ಪರಿಸರ ದಿನ; ಭೂಮಿಯನ್ನು ಉಳಿಸಲು ಈ 5 ಸೂತ್ರ ಪಾಲಿಸೋಣ
ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆ. ಈ ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಇತ್ಯಾದಿಗಳು ಎಂದೆಂದಿಗೂ ಉಳಿಯಬೇಕು. ನಾವೆಲ್ಲರೂ ಅವಲಂಬಿತರಾಗಿರುವುದು ಈ ಪರಿಸರ, ಅದಕ್ಕಾಗಿ ಪರಿಸರವನ್ನು ಸಂರಕ್ಷಿಸಲು ಮುಂದಾಗಬೇಕು ಎಂದು ಹೇಳಿದರು.
ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಮಾತನಾಡಿ, ಪರಿಸರದ ಕಾಳಜಿ ಹಾಗೂ ಪರಿಸರದ ಮಹತ್ವವನ್ನು ತಿಳಿಸಿ ನಾವೆಲ್ಲರೂ ಪರಿಸರ ಸ್ನೇಹಿಯಾಗಿ ಬಾಳೋಣ ಎಂದು ತಿಳಿಸಿದರು.
ನಂತರ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ಸಸಿಗಳನ್ನು ನೆಡಲಾಯಿತು.
ಇದನ್ನೂ ಓದಿ: SCO vs ENG: ಮಳೆಯಿಂದ ಇಂಗ್ಲೆಂಡ್-ಸ್ಕಾಟ್ಲೆಂಡ್ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್
ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕಿ ವೈ. ವನಜಾ, ಉಪ ವಲಯ ಅರಣ್ಯ ಅಧಿಕಾರಿ ಕವಿತಾ ನಾಯಕ, ತಾಲೂಕಿನ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ತಾ.ಪಂ. ವಿವಿಧ ಯೋಜನೆಗಳ ವಿಷಯ ನಿರ್ವಾಹಕರು, ನರೇಗಾ, ತಾ.ಪಂ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.