Bike Accident ನಲ್ಲಿ ಯುವಕನ ಸಾವು, ಅಪಘಾತವಲ್ಲ ಕೊಲೆ ಎಂದ ಕುಟುಂಬ - Vistara News

ಕೊಪ್ಪಳ

Bike Accident ನಲ್ಲಿ ಯುವಕನ ಸಾವು, ಅಪಘಾತವಲ್ಲ ಕೊಲೆ ಎಂದ ಕುಟುಂಬ

bike accidentನಲ್ಲಿ ಒಬ್ಬನಿಗೆ ಏನೂ ಆಗಿಲ್ಲ, ಇನ್ನೊಬ್ಬ ಸತ್ತೇ ಹೋಗಿದ್ದಾನೆ.. ಇದು ಹೇಗೆ ಸಾಧ್ಯ ಎನ್ನುವುದು ಕುಟುಂಬಿಕರ ಪ್ರಶ್ನೆ. ಹಾಗಾಗಿ ಇದೊಂದು ಕೊಲೆ ಇರಬಹುದು ಎನ್ನುವುದು ಅವರ ಸಂಶಯ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾವಿನ ಇಟಗಿ ಗ್ರಾಮದಲ್ಲಿ ಕಳೆದ ಮೇ 6ರಂದು ನಡೆದ ಅಪಘಾತದಲ್ಲಿ ಒಬ್ಬ ಯುವಕ ಮೃತಪಟ್ಟಿದ್ದ. ಈ ಸಾವು ಅಪಘಾತದಿಂದ ಸಂಭವಿಸಿದ್ದಲ್ಲ. ಇದೊಂದು ಕೊಲೆ ಎಂದು ಮನೆ ಮಂದಿ ಕೊಪ್ಪಳ ಎಸ್ಪಿಗೆ ದೂರು ನೀಡಿದ್ದು ತನಿಖೆಗೆ ಆಗ್ರಹಿಸಿದ್ದಾರೆ.

ಆವತ್ತು ಆಗಿದ್ದೇನು?

ಮಸ್ಕಿ ತಾಲೂಕಿನ ತಿಮ್ಮಾಪುರ ಗ್ರಾಮದ ರಾಘವೇಂದ್ರ ಮತ್ತು ಗೆಳೆಯ ಯಮನೂರಪ್ಪ ಮೇ 6ರಂದು ಮಾವಿನ ಇಟಗಿಗೆ ಬೈಕ್‌ ನಲ್ಲಿ ತೆರಳಿದ್ದರು. ಅಲ್ಲಿ ದೇವರ ಕಾರ್ಯವಿದೆ ಎಂದು ಹೇಳಿ ಯಮನೂರಪ್ಪ ರಾಘವೇಂದ್ರನನ್ನು ಕರೆದುಕೊಂಡು ಹೋಗಿದ್ದ.

ಈ ನಡುವೆ ಬೈಕ್‌ ಸ್ಕಿಡ್‌ ಆಗಿ ರಾಘವೇಂದ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಅಪಘಾತದಲ್ಲಿ ಯಮನೂರಪ್ಪ ಅವರಿಗೆ ಏನೂ ಗಾಯಗಳೇ ಆಗಿಲ್ಲ. ಹಾಗಿರುವಾಗ ರಾಘವೇಂದ್ರ ಸಾವನ್ನಪ್ಪಿದ್ದು ಹೇಗೆ ಎಂದು ಕುಟುಂಬಿಕರು ಸಂಶಯಿಸಿದ್ದಾರೆ. ರಾಘವೇಂದ್ರನಿಗೆ ಬೈಕ್‌ ಬಿಡುವುದಕ್ಕೇ ಗೊತ್ತಿಲ್ಲ. ಆದರೆ ಅವನೇ ಬೈಕ್‌ ಚಲಾಯಿಸುತ್ತಿದ್ದ ಎಂದು ಹೇಳಲಾಗಿದೆ. ಇದು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ. ಇದೊಂದು ಕೊಲೆಯಾಗಿರಬಹುದು ಎನ್ನುವುದು ಅವರ ಸಂಶಯ.

ಹೀಗಾಗಿ, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಮೃತ ರಾಘವೇಂದ್ರ ಅವರ ಕುಟುಂಬದವರು ಕೊಪ್ಪಳ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಕೋರಿದ್ದಾರೆ. ಹೀಘಾಗಿ ಹನುಮಸಾಗರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಹೊಸ ತನಿಖೆ ನಡೆಯುವ ಸಾಧ್ಯತೆಯೂ ಇದೆ.

ಇದ್ದನು ಓದಿ | ಕೆಂಗೇರಿ ಬಳಿ ಮೆಟ್ರೊ ಪಿಲ್ಲರ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್‌, ನಾಲ್ಕು ಮಂದಿಗೆ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Rain News : ಬೆಂಗಳೂರಲ್ಲಿ ಎರಡು ದಿನಗಳಿಂದ ಕಾಣೆಯಾಗಿದ್ದ, ಸೋಮವಾರ (ಮೇ.6) ಸಂಜೆ ಆಗುತ್ತಿದ್ದಂತೆ ಮಳೆಯು (Bengaluru Rains) ಮತ್ತೆ ಅಬ್ಬರಿಸಿದೆ. ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲಿನ ಮಳೆಯಾಗಿದೆ. ಇನ್ನೊಂದು ವಾರ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂದ ಬಿಡುವು ಕೊಟ್ಟ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗುತ್ತಿದ್ದಾನೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಸಂಜೆ ಆಗುತ್ತಿದ್ದಂತೆ ಮಳೆಯು ಧರೆಗಿಳಿದಿತ್ತು. ಬೆಂಗಳೂರು (Benagluru Rains), ದೇವನಹಳ್ಳಿ, ಏರ್‌ಪೋರ್ಟ್‌ ಸುತ್ತಮುತ್ತ ಜೋರು ಗಾಳಿಯೊಂದಿಗೆ ಮಳೆ ಶುರುವಾಯಿತು. ಆಗಾಗ ಗುಡುಗು ಸಿಡಿಲು ಬಂದು ಹೋಗಿತ್ತು. ಇನ್ನೊಂದು ವಾರ ಬಿರುಗಾಳಿ ಜತೆಗೆ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸಚನೆಯನ್ನು (Karnataka Weather Forecast) ನೀಡಿದೆ.

ಆನೇಕಲ್‌ನ ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಮಳೆಯು ಸುರಿಯುತ್ತಿದ್ದು, ಕಾದ ಕೆಂಡವಾಗಿದ್ದ ವಾತಾವರಣ ತಂಪಾಗಿದೆ. ಬೆಂಗಳೂರು ನಗರದ ವಿಧಾನಸೌಧ, ಚಾಲುಕ್ಯ ಸರ್ಕಲ್, ಆನಂದ್ ರಾವ್ ಸರ್ಕಲ್, ಮೆಜೆಸ್ಟಿಕ್ ಸೇರಿ ಶಿವಾಜಿನಗರ, ಕೆಂಗೇರಿ ಅಸುಪಾಸು ಮಳೆಯಾಗುತ್ತಿದೆ. ಇನ್ನೂ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಮಳೆಯಲ್ಲಿ ಸಿಲುಕಿಕೊಂಡರು. ಇತ್ತ ದಿಢೀರ್‌ ಮಳೆಗೆ ಬಸ್‌ ನಿಲ್ದಾಣ, ಸೇತುವೆ ಕೆಳಗೆ ಆಶ್ರಯಿಸಿದರು.

ಇದನ್ನೂ ಓದಿ: Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

ದೇವನಹಳ್ಳಿ ಸುತ್ತಮುತ್ತ ತುಂತುರು ಮಳೆ

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನತೆಗೆ ಸ್ವಲ್ಪ ಮಟ್ಟಿಗೆ ವರುಣ ತಂಪೆರದಿದ್ದಾನೆ. ಮಳೆ ಆರಂಭವಾಗುತ್ತಿದ್ದಂತೆ ಜನರು ತಮ್ಮ ಮೊಬೈಲ್‌ಗಳಲ್ಲಿ ಮಳೆ ಸೆರೆ ಹಿಡಿಯಲು ಮುಂದಾದ ದೃಶ್ಯ ಕಂಡು ಬಂತು.

ಮೇ 10ರವರೆಗೆ ಮಳೆಯಾರ್ಭಟ

ಚಾಮರಾಜನಗರ ಮತ್ತು ರಾಮನಗರದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಮೈಸೂರು ಮತ್ತು ಮಂಡ್ಯದಲ್ಲೂ ಕೆಲವೆಡೆ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ.

ಮತದಾನಕ್ಕೆ ಮಳೆ ಅಡ್ಡಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹೀಗಾಗಿ ಮತದಾನಕ್ಕೆ ಮಳೆರಾಯ ಅಡ್ಡಿಯಾಗಲಿದ್ದನ್ನಾ ಎಂಬ ಅನುಮಾನವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lok Sabha Election 2024: ಮತದಾನ ಮಾಡಲು ದುಬೈನಿಂದ ಗಂಗಾವತಿಗೆ ಆಗಮಿಸಿದ ದಂಪತಿ

Lok Sabha Election 2024: ಲೋಕಸಭಾ ಚುನಾವಣೆ-2024 ಹಿನ್ನೆಲೆಯಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ ಗಂಗಾವತಿಗೆ ಮತದಾನ ಮಾಡಲು ಆಗಮಿಸಿದ್ದಾರೆ. ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಐಶ್ವರ್ಯ ಗೌಡರ್ ಮತ್ತು ಕಿರಣ್ ಪಾಟೀಲ್ ದಂಪತಿ ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ತಿಳಿಸಿದ್ದಾರೆ.

VISTARANEWS.COM


on

couple came to Gangavathi from Dubai to vote
Koo

ಗಂಗಾವತಿ: ಲೋಕಸಭಾ ಚುನಾವಣೆ 2024 (Lok Sabha Election 2024) ಹಿನ್ನೆಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಮತದಾನದ ಮಹತ್ವ ಅರಿತಿರುವ ದಂಪತಿ, ದುಬೈನಿಂದ (Dubai) ಗಂಗಾವತಿಗೆ ಮತದಾನಕ್ಕಾಗಿ ಆಗಮಿಸಿದ್ದಾರೆ.

ನಗರದ ಎಪಿಎಂಸಿ ಸಮೀಪದ ನಿವಾಸಿಯಾಗಿರುವ ಉದ್ಯಮಿ ಆರ್ಹಾಳ ಶರಣಪ್ಪ ಅವರ ಪುತ್ರಿ ಐಶ್ವರ್ಯ ಗೌಡರ್ ಮತ್ತು ಅಳಿಯ ಕಿರಣ್ ಪಾಟೀಲ್ ದಂಪತಿ ದುಬೈನಲ್ಲಿ ನೆಲೆಸಿದ್ದಾರೆ. ಲೋಕಸಭಾ ಚುನಾವಣೆಗೆ ಮತದಾನ ಮಾಡುವ ಉದ್ದೇಶಕ್ಕಾಗಿಯೇ ದುಬೈನಿಂದ ಗಂಗಾವತಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

ಕಿರಣ್ ಪಾಟೀಲ್ ಕೂಡ ಗಂಗಾವತಿಯ ಕುವೆಂಪು ಬಡಾವಣೆಯ ನಿವಾಸಿಯಾಗಿದ್ದು, ಕಳೆದ ಒಂದೂವರೆ ವರ್ಷದಿಂದ ದುಬೈನಲ್ಲಿ ನೆಲೆಸಿದ್ದಾರೆ. ಕಳೆದ ಡಿಸಂಬರ್‌ನಲ್ಲಿ ಐಶ್ವರ್ಯ ಮತ್ತು ಕಿರಣ್ ಪಾಟೀಲ್‌ಗೆ ವಿವಾಹವಾಗಿದ್ದು, ಇಬ್ಬರೂ ದುಬೈನಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಇಲ್ಲಿನ ಎಪಿಎಂಸಿ ಮುಂಭಾಗದ ಟಿಎಪಿಸಿಎಂಎಸ್‌ನ ಮತಗಟ್ಟೆಯಲ್ಲಿ ಐಶ್ವರ್ಯ ಮತದಾನ ಮಾಡಲಿದ್ದು, ಬೆಂಡರವಾಡಿಯ ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಕಿರಣ್ ಪಾಟೀಲ್ ಮತದಾನ ಮಾಡಲಿದ್ದಾರೆ. ಮತದಾನದ ಬಳಿಕ ಈ ದಂಪತಿ ಮತ್ತೆ ದುಬೈಗೆ ತೆರಳಲಿದ್ದಾರೆ.

ಇದನ್ನೂ ಓದಿ: No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

`ಭಾರತ ಬದಲಾಗುತ್ತಿದ್ದು, ಅಭಿವೃದ್ಧಿಗೆ ವೇಗ ಸಿಕ್ಕಿದೆ. ವಿದೇಶಗಳಲ್ಲೂ ಭಾರತದ ಬಗ್ಗೆ ಗೌರವ ಭಾವ ಮೂಡಿದೆ. ಹೀಗಾಗಿ ಭಾರತದ ಪ್ರಜೆಗಳೆಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಎನಿಸುತ್ತಿದೆ. ಭಾರತದ ಪೌರರಾಗಿ ಮತದಾನ ಮಾಡಲು ಬಂದಿದ್ದಾಗಿ ಐಶ್ವರ್ಯ ಮತ್ತು ಕಿರಣ್ ದಂಪತಿ ತಿಳಿಸಿದ್ದಾರೆ.

Continue Reading

ಮಳೆ

Karnataka Weather : ಇಂದು ಮಳೆ ಬರುತ್ತಾ? ಯಾವ ಜಿಲ್ಲೆಗಳಲ್ಲಿದೆ ಹೀಟ್‌ ವೇವ್‌?

ರಾಜ್ಯಾದ್ಯಂತ ಹಲವೆಡೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆ ಇದೆ ಎನ್ನಲಾಗಿದೆ. ಇದರೊಟ್ಟಿಗೆ ಮೇ. 8ರವರೆಗೆ ಹೀಟ್‌ ವೇವ್‌ (Heat Wave) ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಶುಷ್ಕ ವಾತಾವರಣ ಇದ್ದರೂ ಕೆಲವೆಡೆ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ಸೋಮವಾರದಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ (Karnataka Weather Forecast) ನೀಡಲಿದೆ.

ಈ ಜಿಲ್ಲೆಗಳಲ್ಲಿ ಬಿಸಿ ಬಿಸಿ ವಾತಾವರಣ

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ 3 ದಿನಗಳವರೆಗೆ ಕರಾವಳಿಯಲ್ಲಿ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ಅಥವಾ ರಾತ್ರಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ.

ಇದನ್ನೂ ಓದಿ: Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
West Bengal
ದೇಶ20 mins ago

West Bengal: ಬಂಗಾಳದಲ್ಲಿ ಮತದಾನದ ವೇಳೆ ಹಿಂಸೆ; ಬಿಜೆಪಿ ಅಭ್ಯರ್ಥಿ ಮೇಲೆ ಟಿಎಂಸಿ ಕಾರ್ಯಕರ್ತರ ದಾಳಿ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ22 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Champions Trophy 2025
ಕ್ರೀಡೆ23 mins ago

Champions Trophy 2025: ಇವರಿಂದ ಒಪ್ಪಿಗೆ ಸಿಕ್ಕರೆ ಪಾಕಿಸ್ತಾನದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧ ಎಂದ ಬಿಸಿಸಿಐ ಉಪಾಧ್ಯಕ್ಷ

Viral News
ವೈರಲ್ ನ್ಯೂಸ್27 mins ago

Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Car Accident
ಕರ್ನಾಟಕ30 mins ago

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Viral Video
ವೈರಲ್ ನ್ಯೂಸ್37 mins ago

Viral Video: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ಕಿಡಿಗೇಡಿಗಳ ವಿಕೃತಿ; ವಿಡಿಯೋ ವೈರಲ್‌

karnataka rains
ಮಳೆ46 mins ago

Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

India’s Jersey T20 World Cup
ಕ್ರೀಡೆ1 hour ago

India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

Narendra Modi
ದೇಶ1 hour ago

Narendra Modi: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ, ಆಶೀರ್ವಾದ ಮಾಡಿದ ಅಜ್ಜಿ; Video ಇದೆ

Aravind Kejriwal
ದೇಶ2 hours ago

Arvind Kejriwal: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Government work against Revanna HD Kumaraswamy gives details of the case
ರಾಜಕೀಯ22 mins ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ22 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ22 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

ಟ್ರೆಂಡಿಂಗ್‌