ಕೊರಟಗೆರೆ: ಕ್ವಿಂಟಲ್ ಕೊಬ್ಬರಿಗೆ (Coconut) 25 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಕೊರಟಗೆರೆ ಬಂದ್ (Koratagere bandh) ಯಶಸ್ವಿಯಾಯಿತು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ರಣಧೀರರ ವೇದಿಕೆ ಹಾಗೂ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಪಟ್ಟಣದ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್ ಮಾಡಿ, ಕೊರಟಗೆರೆ ಬಂದ್‌ಗೆ ಬೆಂಬಲ ನೀಡಿದರು.
ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ತಾಲೂಕು ಕಛೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ, ಬೇಡಿಕೆ ಈಡೇರಿಸುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
ಇದನ್ನೂ ಓದಿ: Shakti Scheme: ಉಚಿತ ಬಸ್ ಪ್ರಯಾಣ ಯೋಜನೆ ನಿಲ್ಲಲ್ಲ ಎಂದ ಸಚಿವ ಚಲುವರಾಯಸ್ವಾಮಿ
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವ ವಹಿಸಿ ಮಾತನಾಡಿ, ಕ್ವಿಂಟಲ್ ಕೊಬ್ಬರಿಗೆ 25 ಸಾವಿರ ರೂಪಾಯಿ ಬೆಂಬಲ ಬೆಲೆ ನೀಡಬೇಕು, ಸಾಗುವಳಿದಾರರಿಗೆ ಖಾತೆ ಪಹಣಿ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಬಿತ್ತನೆ ಸಮಯಕ್ಕೆ ಮಳೆಯಾಗಿಲ್ಲ, ಈ ಪ್ರದೇಶದಲ್ಲಿ ಅಲ್ಪ ಸ್ವಲ್ಪ ಮಳೆಯಾಗಿದ್ದು ರೈತರು ಎರಡು ಮೂರು ಬಾರಿ ಬಿತ್ತನೆ ಮಾಡಿ ಬೀಜ ಗೊಬ್ಬರ ಕಳೆದುಕೊಂಡಿದ್ದಾರೆ, ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದು, ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರಿಯ ವಿಪತ್ತು ಮಾನದಂಡ ಅದು ತೀರ ಹಳೆದಾಗಿದ್ದು ಅದರ ಮಾನ ದಂಡವನ್ನು ಬದಲಾಯಿಸಬೇಕು, 1972 ನೇ ಇಸವಿಯ ಮಾನದಂಡವನ್ನು ಇಟ್ಟುಕೊಂಡು ರೈತರಿಗೆ ಪರಿಹಾರ ನೀಡಲಾಗುತ್ತಿದೆ, ಒಂದು ಲಕ್ಷ ನಷ್ಟವಾದರೆ ಹತ್ತರಿಂದ ಹನ್ನೆರೆಡು ಸಾವಿರ ರೂಪಾಯಿ ಪರಿಹಾರ ನೀಡುತ್ತಿದ್ದಾರೆ, ಈ ಹಿನ್ನಲೆಯಲ್ಲಿ ರಾಷ್ಟ್ರಿಯ ವಿಪತ್ತು ಮಾನದಂಡವನ್ನು 2023 ರ ಮಾನದಂಡವಾಗಿ ಪರಿಗಣಿಸಿ ಪರಿಹಾರ ನೀಡಬೇಕು, 70ರ ದಶಕದ ಮಾನದಂಡವನ್ನು ಸರ್ಕಾರ ಕೈ ಬಿಟ್ಟು ಹೊಸ ಮಾನದಂಡವನ್ನು ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಒತ್ತಾಯಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ವಿಶ್ವಕಪ್‌ಗೆ ಸಂಭಾವ್ಯ ತಂಡ ಪ್ರಕಟಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್; ಜೋಫ್ರಾ ಆರ್ಚರ್‌ಗೆ ಕೊಕ್
ಪ್ರತಿಭಟನೆಯಲ್ಲಿ ರೈತ ಮುಖಂಡರು, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಇತರರು ಪಾಲ್ಗೊಂಡಿದ್ದರು.