Site icon Vistara News

Kolar Election Results: ಕೋಲಾರದಲ್ಲಿ ಗೆಲುವಿನ ನಗಾರಿ ಬಾರಿಸಿದ ಕಾಂಗ್ರೆಸ್‌ನ ಕೊತ್ತೂರು ಮಂಜುನಾಥ್‌

Kolar Election Results Kottur Manjunath wins

Kolar Election Results Kottur Manjunath wins

ಕೋಲಾರ: ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಣೆಯಾಗಿದ್ದು, ಕೋಲಾರ ಕ್ಷೇತ್ರದಲ್ಲಿ (Kolar Election Results) ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಜಿ.ಮಂಜುನಾಥ್ ಜಯಭೇರಿ ಮೊಳಗಿಸಿದ್ದಾರೆ. ಇವರು 30,761 ಮತಗಳ ಅಂತರದಿಂದ ಜೆಡಿಎಸ್ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್‌ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಜಿ.ಮಂಜುನಾಥ್ 83,990 ಜೆಡಿಎಸ್‌ ಅಭ್ಯರ್ಥಿ ಸಿಎಂಆರ್‌ ಶ್ರೀನಾಥ್ 53‌,229 ಮತ, ಬಿಜೆಪಿ ಅಭ್ಯರ್ಥಿ ವರ್ತೂರ್‌ ಪ್ರಕಾಶ್‌ 50,914 ಮತ ಗಳಿಸಿದ್ದಾರೆ.

2018ರ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಕೆ. ಶ್ರೀನಿವಾಸಗೌಡ 82,788 ಮತ ಪಡೆದು ಗೆದ್ದಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ಸೈಯದ್ ಜಮೀರ್ ಪಾಷಾ 38,537, ಪಕ್ಷೇತರ ಅಭ್ಯರ್ಥಿ ಆರ್‌. ವರ್ತೂರು ಪ್ರಕಾಶ್ 35, 544 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ | Chikkaballapur Election Results : ಚಿಕ್ಕಬಳ್ಳಾಪುರದಲ್ಲಿ ಡಾ. ಕೆ ಸುಧಾಕರ್‌ರನ್ನು ಹೀನಾಯವಾಗಿ ಸೋಲಿಸಿದ ಪ್ರದೀಪ್‌ ಈಶ್ವರ್‌

ಜೆಡಿಎಸ್‌ ಶಾಸಕ ಕೆ.ಶ್ರೀನಿವಾಸಗೌಡ ಅವರು ಕಾಂಗ್ರೆಸ್‌ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್‌ನಿಂದ ಸಿಎಂಆರ್‌ ಶ್ರೀನಾಥ್‌ ಈ ಬಾರಿ ಕಣಕ್ಕಿಳಿದಿದ್ದರು. ಕಾಂಗ್ರೆಸ್‌ನಿಂದ ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ಗೆ ಟಿಕೆಟ್‌ ನೀಡಲಾಗಿತ್ತು. ಇನ್ನು ಬಿಜೆಪಿಯಿಂದ ಮಾಜಿ ಸಚಿವ ವರ್ತೂರ್‌ ಪ್ರಕಾಶ್‌ ಸ್ಪರ್ಧಿಸಿದ್ದರು.

Exit mobile version