ಬೆಂಗಳೂರು: ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಕಾರ್ಮಿಕರೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ನೇತೃತ್ವದಲ್ಲಿ ೧೭ ಲಕ್ಷ ಕಾರ್ಮಿಕರು ಈ ಅಭಿಯಾನದಲ್ಲಿ ರಾಜ್ಯಾದ್ಯಂತ ಭಾಗಿಯಾಗಿದ್ದಾರೆ.
ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಶುಕ್ರವಾರ (ಅ. ೨೮) ಬೆಂಗಳೂರಿನ ಕಾರ್ಮಿಕ ಭವನದಲ್ಲಿ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಭಾಗಿಯಾಗಿ ಕನ್ನಡದ ಆರು ಗೀತೆಗಳನ್ನು ಹಾಡುವ ಮೂಲಕ ಕನ್ನಡ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.
ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಇಲಾಖೆಯು 67ನೇ ರಾಜ್ಯೋತ್ಸವದ ಅಂಗವಾಗಿ ಆಯೋಜಿಸಿರುವ ಈ ಅಭಿಯಾನದಲ್ಲಿ ಕಾರ್ಮಿಕ ಇಲಾಖೆಯು ಸಕ್ರಿಯವಾಗಿ ಪಾಲ್ಗೊಂಡಿದ್ದಕ್ಕೆ ಸಚಿವರು ಈ ವೇಳೆ ಧನ್ಯವಾದ ಅರ್ಪಿಸಿದರು. ರಾಜ್ಯದ 17 ಸಾವಿರ ಕಾರ್ಖಾನೆಯ 17 ಲಕ್ಷ ಕಾರ್ಮಿಕರು ಈ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಕೋಟಿ ಕಂಠ ಗಾಯನದ ಭಾಗವಾಗಿದ್ದರು.
ಈ ಸಂದರ್ಭದಲ್ಲಿ ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿ ಗುರುಪ್ರಸಾದ್ ಎಂ.ಪಿ. ಹಾಗೂ ಕಾರ್ಮಿಕ ಇಲಾಖೆಯು ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ | ಕೋಟಿ ಕಂಠ ಗಾಯನ | ಕಾರವಾರದ ಸದಾಶಿವಗಡದಲ್ಲಿ ಬಿಸಿಲಿಗೆ ಬಸವಳಿದ ಮಕ್ಕಳು, ಪೆಂಡಾಲ್ ವ್ಯವಸ್ಥೆ ಇಲ್ಲ!