ಬೆಂಗಳೂರು: ರಾಜಧಾನಿಯ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಂತರಿಕ ಚುನಾವಣೆ ನಡೆಯಲಿದ್ದು, ನೂತನ ಅಧ್ಯಕ್ಷರ ಆಯ್ಕೆಯಾಗಲಿದೆ.
ಕಾಂಗ್ರೆಸ್ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿರುವ ಡಿ.ಕೆ ಶಿವಕುಮಾರ್ ಅವರು ಅಧ್ಯಕ್ಷರಾಗಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ಡಿಕೆಶಿ ಅವರಿಗೆ ಫೈಟ್ ಕೊಡುವವರೂ ಯಾರೂ ಇಲ್ಲ ಎಂದು ತಿಳಿದುಬಂದಿದೆ.
ಎಐಸಿಸಿ ವರಿಷ್ಠ ಹಾಗೂ ಸದಸ್ಯತ್ವ ನೊಂದಣಿ ಉಸ್ತುವಾರಿ ಸುದರ್ಶನ ನಾಚಿಯಪ್ಪನ್ ಸಮ್ಮುಖದಲ್ಲಿ ಚುನಾವಣೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರಾಗಿ ಶಿವಕುಮಾರ್ ಅವರು ಆಯ್ಕೆಯಾಗಿ ಎರಡು ವರ್ಷಗಳಾಗಿವೆ. ಎಐಸಿಸಿ ವರಿಷ್ಠರ ತೀರ್ಮಾನದ ಪ್ರಕಾರ ಒಂದು ವಾಕ್ಯದ ನಿರ್ಣಯ ತೆಗೆದುಕೊಂಡು ಡಿಕೆಶಿ ಅವರನ್ನು ಅಧ್ಯಕ್ಷರನ್ನಾಗಿ ಮುಂದುವರೆಸುವುದು ಬಹುತೇಕ ಖಚಿತವಾಗಿದೆ.
ಕಾಂಗ್ರೆಸ್‌ನ ಬೈಲಾ ಪ್ರಕಾರ ಮೂರು ವರ್ಷಕ್ಕೊಮ್ಮೆ ಚುನಾವಣೆ ನಡೆಸಬೇಕು. ಆದರೆ ಡಿಕೆಶಿ ಅಧ್ಯಕ್ಷರಾಗಿ ಎರಡು ವರ್ಷಗಳು ಕಳೆದಿವೆ. ಮೆಂಬರ್‌ಶಿಪ್ ಆಗಿ ನೂತನ ಕೆಪಿಸಿಸಿ ಪದಾಧಿಕಾರಿಗಳು ಆಯ್ಕೆಯಾದಾಗ ಸಂಪ್ರದಾಯದಂತೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಮಾಡಬೇಕು. ದಿನೇಶ್ ಗುಂಡೂರಾವ್ ರಾಜಿನಾಮೆ ಬಳಿಕ ಪದಾಧಿಕಾರಿಗಳ ಆಯ್ಕೆ ಆಗಿರಲಿಲ್ಲ. ಡಿಕೆಶಿ ಅಧ್ಯಕ್ಷರಾದ ಬಳಿಕ ಸದಸ್ಯತ್ವ ನೋಂದಣಿಗೆ ಚಾಲನೆ ಸಿಕ್ಕಿತ್ತು. ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಅಗಿರುವ ಕಾರಣದಿಂದ ಚುನಾವಣೆ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ಜೊತೆಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ಚುನಾವಣೆ ನಡೆಯಬೇಕಿದೆ. ಮೂರು ವರ್ಷಗಳ ಅವಧಿ ಪೂರ್ಣವಾಗದವರನ್ನು ಮುಂದುವರಿಸುವ ಚಿಂತನೆ ವರಿಷ್ಠರ ಮಟ್ಟದಲ್ಲಿ ನಡೆದಿದೆ.
ಇದನ್ನೂ ಓದಿ | Bharat Jodo Yatra | ಕಾಂಗ್ರೆಸ್ ಪುನರುಜ್ಜೀವನಕ್ಕೆ ಭಾರತ್ ಜೋಡೋ ಯಾತ್ರೆ ಅತ್ಯವಶ್ಯ: ಸೋನಿಯಾ ಗಾಂಧಿ