ಬೆಂಗಳೂರು: ಮದ್ದೂರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ತೀರ್ಮಾನವೇ ಅಂತಿಮ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ (Karnataka Election 2023) ಕೈ ಮುಖಂಡರು ನಿರ್ಧರಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮದ್ದೂರು ಕ್ಷೇತ್ರದ ಮುಖಂಡರು ಒಕ್ಕೊರಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮದ್ದೂರು ವಿಧಾನ ಸಭಾ ಅಭ್ಯರ್ಥಿಯ ಆಯ್ಕೆ ವಿಚಾರವಾಗಿ ಆಕಾಂಕ್ಷಿಗಳಾದ ಗುರುಚರಣ್ ಮತ್ತು ಕದಲೂರು ಉದಯ್ ಅವರು ತಮ್ಮ ಅಭಿಪ್ರಾಯವನ್ನು ಸಭೆಗೆ ತಿಳಿಸಿ, ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಮಾನ್ಯ ಕೆಪಿಸಿಸಿ ಅಧ್ಯಕ್ಷರು ತೆಗೆದುಕೊಳ್ಳುವ ನಿರ್ಧಾರ ಬದ್ಧವಿರುವುದಾಗಿ ಒಪ್ಪಿದ್ದಾರೆ. ಉಳಿದ ಮುಕಂಡರು ಇದಕ್ಕೆ ಸರ್ವಾನುಮತದ ಒಪ್ಪಿಗೆ ನೀಡಿದ್ದಾರೆ.
ಇದನ್ನೂ ಓದಿ | Pulse of Karnataka: ಸಮಸ್ತ ಕರ್ನಾಟಕ: ವಿಸ್ತಾರ-ಅಖಾಡ ಸಮೀಕ್ಷೆ: ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಬಲಾಬಲ ಇಲ್ಲಿದೆ; ನಾಯಕತ್ವ ಯಾರಿಗೆ?
ಸಭೆಯಲ್ಲಿ ಮಾಜಿ ಸಚಿವರಾದ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ಸಂಸದರಾದ ಡಿ.ಕೆ. ಸುರೇಶ್, ಬಿ.ಸಿ ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ. ಮಾದೇಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಹೊನ್ನಲಗೆರೆ ರಾಮಕೃಷ್ಣ ಮತ್ತಿತರರು ಇದ್ದರು.