Site icon Vistara News

ಮೀನುಗಾರರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಸಲೀಂ ಅಹ್ಮದ್

kpcc saleem ahmed

ಬೆಂಗಳೂರು: ಮೀನುಗಾರರ ಹಿತ ಕಾಪಾಡುವಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹ್ಮದ್ ಟೀಕಿಸಿದ್ದಾರೆ.

ರಾಜಧಾನಿಯ ರೇಸ್‌ಕೋರ್ಸ್ ರಸ್ತೆಯಲ್ಲಿನ ಕಾಂಗ್ರೆಸ್ ಭವನದಲ್ಲಿ ನಡೆದ ಕೆಪಿಸಿಸಿ ರಾಜ್ಯ ಮೀನುಗಾರಿಕಾ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿ ಸರ್ಕಾರವನ್ನು ಟೀಕಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತದಿಂದ ಜನ ಬೇಸತ್ತಿದ್ದಾರೆ. ಸುಳ್ಳು ಆಶ್ವಾಸನೆ ನೀಡುವ ಮೂಲಕ ಸರ್ಕಾರವು ಜನರನ್ನು ಮರುಳು ಮಾಡಿದೆ. ಭ್ರಷ್ಟಾಚಾರದಿಂದ ಉದಯಿಸಿದ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ ಎಂದು ಅವರು ಆರೋಪಿಸಿದರು.

ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಮೀನುಗಾರರ ಪರವಾಗಿ ಸಾಕಷ್ಟು ಯೋಜನೆಗಳನ್ನು ಕೈಗೊಂಡಿದ್ದೆವು. ಕೆಪಿಸಿಸಿ ಮೀನುಗಾರಿಕಾ ವಿಭಾಗವು ಮೀನುಗಾರರಿಗೆ ರಾಜ್ಯದಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದೆ. ಇದು ಶ್ಲಾಘನೀಯ. ಮೀನುಗಾರರ ಸಂಘಟನೆಗಳು ರಾಜ್ಯದಲ್ಲಿ ಮೀನುಗಾರರ ಸಮಸ್ಯೆಯ ಬಗ್ಗೆ ಮನವಿ ನೀಡಿದ್ದಾರೆ. ಇದರ ಬಗ್ಗೆ ಚರ್ಚೆ ಮಾಡಿ ಮೀನುಗಾರರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಸಲೀಂ ಅಹ್ಮದ್ ಹೇಳಿದರು.‌

ಇದನ್ನೂ ಓದಿ | Congress Crisis | ಪಕ್ಷವನ್ನು ಬಿಟ್ ಹೋದ್ರೂ ಕೆಲವರು ತೆಗಳುತ್ತಿದ್ದಾರೆ! ಕಾಂಗ್ರೆಸ್ ಒಗ್ಗಟ್ಟಾಗಿದೆ ಎಂದ ಕರ್ನಾಟಕದ ಸಂಸದ

ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪ್ರತಿ ಜಿಲ್ಲೆಯಲ್ಲಿ ಮನೆಮನೆಗೆ ತಲುಪಿಸುವ ಕಾರ್ಯ ಮಾಡಬೇಕು. ರಾಜ್ಯ ಮೀನುಗಾರರರ ವಿಭಾಗದಿಂದ ಪ್ರತಿ ಜಿಲ್ಲಾ ಮಟ್ಟದಲ್ಲಿ ಮೀನುಗಾರರ ಸಮಾವೇಶ ನಡೆಸುವ ಮೂಲಕ ಕಾಂಗ್ರೆಸ್ ಪಕ್ಷದ ಸಾಧನೆಯನ್ನು ರಾಜ್ಯದ ಜನತೆಗೆ ತಿಳಿಸುವ ಕೆಲಸ ಮಾಡಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಎಐಸಿಸಿ ಮೀನುಗಾರರ ವಿಭಾಗದ ರಾಷ್ಟ್ರೀಯ ಅಧ್ಯಕ್ಷರಾದ ಆರ್ಮಸ್ಟ್ರಾಂಗ್ ಫರ್ನಾಂಡೋ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ಮಾಜಿ ಶಾಸಕ ಶರಣಪ್ಪ ಟಿ ಸುಣೇಗಾರ, ಕೆಪಿಸಿಸಿ ಮೀನುಗಾರರರ ವಿಭಾಗದ ಅಧ್ಯಕ್ಷ ಮಂಜುನಾಥ ಸುಣೇಗಾರ್, ರಾಜ್ಯ ಬಾಲಭವನ ಸಮಿತಿಯ ಮಾಜಿ ಅಧ್ಯಕ್ಷೆ ನಟಿ ಭಾವನಾ ರಾಮಣ್ಣ, ರಾಮನಗರ ಜಿಲ್ಲಾ ಸಮಿತಿ ಅಧ್ಯಕ್ಷೆ ಗಂಗಾಧರ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ | Rain News | ಮಳೆ ಬಂದಾಗ ಬಿಲ ಸೇರುವ ಬೆಂಗಳೂರಿನ ಸಚಿವರು ಸಾವರ್ಕರ್‌ ಅಂದ್ರೆ ಓಡಿ ಬರ್ತಾರೆ: ಕಾಂಗ್ರೆಸ್‌ ವ್ಯಂಗ್ಯ

Exit mobile version