ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ (KPTCL Irregularity) ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್‌ಪಿನ್‌ನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದು, ಒಟ್ಟು ೧೩ ಮಂದಿಯನ್ನು ಬಂಧಿಸಿದಂತಾಗಿದೆ.
ಬೆಳಗಾವಿ ಮೂಲದ ಸಂಜೀವ್ ಲಕ್ಷ್ಮಣ ಭಂಡಾರಿ ಪ್ರಮುಖ ಆರೋಪಿಯಾಗಿದ್ದು, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ. ಸಂಜೀವ್‌ನನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರ ಸಹಾಯ ಪಡೆದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಗೋಕಾಕಿನ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪಿಯನ್ನು ಪೊಲೀಸರು ಹಾಜರುಪಡಿಸಲಾಗಿದೆ.
ಆರೋಪಿಯನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಲು ನ್ಯಾಯಾಲಯ ಆದೇಶ ಹೊರಡಿಸಿದೆ. ಇತ್ತೀಚೆಗಷ್ಟೇ ಸಂಜೀವ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗೋಕಾಕಿನ 12ನೇ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ಸತ್ರ ನ್ಯಾಯಾಲಯದಿಂದ ಅರ್ಜಿ ವಜಾ ಮಾಡಿತ್ತು.
ಆಗಸ್ಟ್ ೭ರಂದು ಕೆಪಿಟಿಸಿಎಲ್ ಕಿರಿಯ ಸಹಾಯಕ ಹುದ್ದೆಗೆ ಪರೀಕ್ಷೆ ನಡೆದಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್ ನೇತೃತ್ವದ ತಂಡ ಎಲ್ಲ ಮಾಹಿತಿಗಳನ್ನು ಕಲೆ ಹಾಕಿತ್ತು. ಪ್ರಕರಣದಲ್ಲಿ ಒಬ್ಬೊಬ್ಬರೇ ಆರೋಪಿಗಳನ್ನು ಬಂಧಿಸುತ್ತಾ ಬಂದಿದ್ದ ಪೊಲೀಸರು ಈಗ ಅಕ್ರಮದಲ್ಲಿ ಭಾಗಿಯಾಗಿದ್ದಾರೆನ್ನಲಾದ ಒಟ್ಟು ೧೩ ಮಂದಿಯನ್ನೂ ಬಂಧಿಸಿದಂತಾಗಿದೆ. ಈ ಪ್ರಕರಣ ಸಂಬಂಧ ಸಮಗ್ರ ವರದಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕಳುಹಿಸಲಾಗಿದೆ.
ಇದನ್ನೂ ಓದಿ | ಕೆಪಿಸಿಟಿಸಿಎಲ್ ಪರೀಕ್ಷಾ ಅಕ್ರಮ: 9 ಮಂದಿ ಬಂಧನ, ಎಲೆಕ್ಟ್ರಾನಿಕ್ ಸಾಧನ ಬಳಸಿದ್ದ ಆರೋಪಿಗಳು