Site icon Vistara News

KPSC exam : ಕೆಪಿಎಸ್ಸಿ ಪರೀಕ್ಷಾ ಕೇಂದ್ರಕ್ಕೆ ಮಕ್ಕಳೇ ಸೆಕ್ಯುರಿಟಿ ಆಫೀಸರ್ಸ್‌!

Appointment of children for security of KPSC exams

ಮಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆಯುವ ಅಕ್ರಮವನ್ನು ತಡೆಗಟ್ಟಲು ಇಲಾಖೆ ಅದೆಷ್ಟೇ ಕಠಿಣ ಕ್ರಮ ತಂದರೂ ಪ್ರಯೋಜನ ಆಗುತ್ತಿಲ್ಲ. ಸದ್ಯ ಕೆಪಿಎಸ್ಸಿ ಪರೀಕ್ಷಾ ಕೇಂದ್ರದಲ್ಲಿ (KPSC exam) ಅಭ್ಯರ್ಥಿಗಳ ತಪಾಸಣೆಗೆ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ.

ಮಂಗಳೂರಿನ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಬಳಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ಲೆಕ್ಕ ಪರಿಶೋಧನೆ ಹಾಗೂ ಲೆಕ್ಕಪತ್ರ ಇಲಾಖೆಯ ಲೆಕ್ಕ ಸಹಾಯಕರ ಹುದ್ದೆಗೆ ಪರೀಕ್ಷೆ ನಡೆಯುತ್ತಿದೆ. ಆದರೆ ಮಂಗಳೂರಿನ ಬಲ್ಮಠ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನೇ ಸೆಕ್ಯುರಿಟಿಯಾಗಿ ಬಳಸಿಕೊಂಡು ಬೇಜವಾಬ್ದಾರಿ ತೋರಿದ್ದಾರೆ.

ಇದನ್ನೂ ಓದಿ: ಮೊಬೈಲ್‌ ಟಾರ್ಚ್‌ ಆನ್‌ ಮಾಡಿದ್ದೇ ಸಿಲಿಂಡರ್‌ ಬ್ಲ್ಯಾಸ್‌ಗೆ ಕಾರಣ; ಹಸುಗೂಸು ಸೇರಿ 7 ಮಂದಿ ಗಂಭೀರ

ಮೆಟಲ್ ಡಿಟೆಕ್ಟರ್ ಹಿಡಿದು ನಿಂತ ವಿದ್ಯಾರ್ಥಿಗಳು ಬೇಕಾಬಿಟ್ಟಿಯಾಗಿ ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡುತ್ತಿದ್ದಾರೆ. ಪರೀಕ್ಷಾ ಕ್ರಮವನ್ನು ತಡೆಯುವ ದೃಷ್ಟಿಯಿಂದ ಮೊಬೈಲ್ ಜಾಮರ್, ಮೆಟಲ್ ಡಿಟೆಕ್ಟರ್, ಬಯೋ ಮೆಟ್ರಿಕ್ ಫೇಸ್ ಡಿಟೆಕ್ಷನ್ ಹಾಗೂ ಬಾಡಿ ಕ್ಯಾಮೆರಾ ಬಳಕೆಗೆ ಕೆಪಿಎಸ್‌ಸಿ ಸೂಚಿಸಿದೆ.

ಆದರೆ ವಿದ್ಯಾರ್ಥಿಗಳನ್ನು ಬಳಸಿಕೊಂಡು ಕಾಟಾಚಾರದ ತಪಾಸಣೆಯನ್ನು ನಡೆಸಲಾಗುತ್ತಿದೆ. ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ಏಳೆಂಟು ವಿದ್ಯಾರ್ಥಿಗಳಿಂದ ಅಭ್ಯರ್ಥಿಗಳ ತಪಾಸಣೆ ಮಾಡಲಾಗುತ್ತದೆ. ಭದ್ರತೆ ಬಗ್ಗೆ ಅರಿವೇ ಇಲ್ಲದ ಮಕ್ಕಳನ್ನು ಪರೀಕ್ಷಾ ಕೇಂದ್ರದ ಭದ್ರತೆಗೆ ನೇಮಕ ಮಾಡಲಾಗಿದೆ. ಕೆಪಿಎಸ್ಸಿ ಪರೀಕ್ಷಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version