Site icon Vistara News

KPTCL Scam | ಕೆಪಿಟಿಸಿಎಲ್‌ ನೇಮಕಾತಿ ಹಗರಣದ 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

KPTCL BENDI

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿಯಲ್ಲಿ (KPTCL Irregularity) ಅಕ್ರಮ ಪ್ರಕರಣದಲ್ಲಿ ಕಿಂಗ್‌ಪಿನ್ ಸಂಜು ಭಂಡಾರಿ ಸೇರಿ 20 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಜೆಎಂಎಫ್‌ಸಿ ಎರಡನೇ ಕೋರ್ಟ್‌ನ ನ್ಯಾಯಾಧೀಶ ಜಿ. ರಾಜೀವ್ ಅವರು ಈ ಆದೇಶ ನೀಡಿದ್ದಾರೆ. ಪರೀಕ್ಷಾರ್ಥಿಗಳು ಸೇರಿ ಅಕ್ರಮಕ್ಕೆ ಸಹಕರಿಸಿದ್ದ 20 ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದರು.

ಗೋಕಾಕ ಜಿಎಸ್ಎಸ್ ಪರೀಕ್ಷಾ ಕೇಂದ್ರದಲ್ಲಿ ಆ.7ರಂದು ನಡೆದ ಪರೀಕ್ಷೆಯ ವೇಳೆ ಅಕ್ರಮ ನಡೆದಿತ್ತು. ಸಿದ್ದಪ್ಪ ಮದಿಹಳ್ಳಿ ಎಂಬಾತ ಸ್ಮಾರ್ಟ್‌ ವಾಚ್‌ ಬಳಸಿ ಪ್ರಶ್ನೆಪತ್ರಿಕೆಯನ್ನು ಹೊರಗೆ ರವಾನಿಸಿದ್ದ. ಸಿಸಿ ಟಿವಿ ಫೂಟೇಜ್‌ ಆಧರಿಸಿ ಬೆಳಕಿಗೆ ಬಂದಿದ್ದ ಪ್ರಕರಣದಲ್ಲಿ ಆಗಸ್ಟ್ 10ರಂದು ಸಿದ್ದಪ್ಪ ಮದಿಹಳ್ಳಿಯನ್ನು ಬಂಧಿಸಲಾಗಿತ್ತು. ಸಿದ್ದಪ್ಪ ಅಕ್ರಮ ಎಸಗುವ ದೃಶ್ಯ ಪರೀಕ್ಷಾ ಕೇಂದ್ರದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಮುಂದೆ ಆ. 23ರಂದು ಒಂಬತ್ತು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಮುಂದೆ ಬಳಿಕ ಹಂತ ಹಂತವಾಗಿ 20 ಆರೋಪಿಗಳನ್ನು ಜಿಲ್ಲಾ ಪೊಲೀಸರು ಸೆರೆ ಹಿಡಿದಿದ್ದರು.

ಲಕ್ಷ್ಮಣ ಭಂಡಾರಿ ಪ್ರಮುಖ ಆರೋಪಿ
ಬೆಳಗಾವಿ ಮೂಲದ ಸಂಜೀವ್ ಲಕ್ಷ್ಮಣ ಭಂಡಾರಿ ಪ್ರಮುಖ ಆರೋಪಿಯಾಗಿದ್ದು, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ. ಸಂಜೀವ್‌ನನ್ನು ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸರ ಸಹಾಯ ಪಡೆದು ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.

ಜಾಮೀನು ಲಭ್ಯವಾದ ಆರೋಪಿಗಳು
ಗೋಕಾಕ ತಾಲ್ಲೂಕಿನ ನಾಗನೂರು ಗ್ರಾಮದ ಸಿದ್ದಪ್ಪ ಕೆಂಪಣ್ಣ ಮದಿಹಳ್ಳಿ (ಅಭ್ಯರ್ಥಿ)
ಗೋಕಾಕದ ಸಂಜೀವ ಭಂಡಾರಿ (ಕಿಂಗ್‌ಪಿನ್‌)
ಬೆಂಗಳೂರಿನ ಮಹಮ್ಮದ್‌ ಅಜೀಮುದ್ದೀನ್‌ (ಉಪಕರಣ ಮಾರಿದವ)
ಮಾಲದಿನ್ನಿಯ ಸುನೀಲ ಅಜ್ಜಪ್ಪ ಭಂಗಿ
ಶಿರಹಟ್ಟಿ ಬಿ.ಕೆ. ಗ್ರಾಮದ ಬಸವಣ್ಣಿ ಶಿವಪ್ಪ ಡೊಣವಾಡ
ವೀರನಗಡ್ಡಿಯ ಸಂತೋಷ ಪ್ರಕಾಶ ಮಾಣಗಾವಿ
ಬೆಣಚಿನಮರಡಿಯ ಸಿದ್ಧಪ್ಪ ಕೆಂಚಪ್ಪ ಕೊತ್ತಲ
ಮಾಲದಿನ್ನಿಯ ರೇಣುಕಾ ವಿಠಲ ಜವಾರಿ
ಗದಗ– ಬೆಟಗೇರಿಯ ಅಮರೇಶ ಚಂದ್ರಶೇಖರಯ್ಯ ರಾಜೂರ
ಮಾರುತಿ ಶಂಕರ ಸೋನವಣೆ (ಉಪ ಪ್ರಾಂಶುಪಾಲ)
ಸಮಿತ್‌ಕುಮಾರ ಮಾರುತಿ ಸೋನವಣೆ (ಉಪ ಪ್ರಾಂಶುಪಾಲರ ಪುತ್ರ)
ಹುಕ್ಕೇರಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾದ ಕಮತನೂರ ನಿವಾಸಿ ಆದೇಶ ಈರಪ್ಪ ನಾಗನೂರಿ
ಬೈಲಹೊಂಗಲ ತಾಲ್ಲೂಕಿನ ನಾವಲಗಟ್ಟಿ ಗ್ರಾಮದ ಮಡಿವಾಳಪ್ಪ ಬಾಳಪ್ಪ ತೋರಣಗಟ್ಟಿ
ಹೊಸಕೋಟಿಯ ಶಂಕರ ಕಲ್ಲಪ್ಪ ಉಣಕಲ್‌
ಗೋಕಾಕ ತಾಲ್ಲೂಕಿನ ಅರಭಾವಿಯ ಶಿವಾನಂದ ದುಂಡಪ್ಪ ಹಳ್ಳೂರ
ಹನಗಂಡಿಯ ಬೀರಪ್ಪ ಲಕ್ಷ್ಮಣ ಹನಗಂಡಿ
ಗೋಕಾಕ ತಾಲ್ಲೂಕು ಅರಭಾವಿಯ ಅಕ್ಷಯ್ ದುಂದಪ್ಪ ಭಂಡಾರಿ
ಬೀರಣಗಡ್ಡಿಯ ಬಸವರಾಜ ರುದ್ರಪ್ಪ ದುಂದನಟ್ಟಿ
ರಾಜಾಪುರದ ಶ್ರೀಧರ ಲಕ್ಕಪ್ಪ ಕಟ್ಟಿಕಾರ್

KPTCL Irregularity | ಕೆಪಿಟಿಸಿಎಲ್‌ ಪರೀಕ್ಷಾ ಅಕ್ರಮ: ಕೊನೆಗೂ ಪೊಲೀಸ್ ಖೆಡ್ಡಾಕ್ಕೆ ಬಿದ್ದ ಕಿಂಗ್‌ಪಿನ್‌!

Exit mobile version