Site icon Vistara News

Krishi Bhagya Scheme: 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಮರು ಜಾರಿ: ಎನ್. ಚಲುವರಾಯಸ್ವಾಮಿ

Hello-minister-N-chaluvarayaswamy-in-vistara-news-2

ಬೆಂಗಳೂರು: ಕರ್ನಾಟಕದ ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ ಮಳೆ ನೀರು ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸಲು 2023-24ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಕೃಷಿ ಭಾಗ್ಯ ಯೋಜನೆ ಮರು ಜಾರಿಗೊಳಿಸಲಾಗಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಕರ್ನಾಟಕ ವಿಧಾನ ಸಭೆ ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014 ರನ್ವಯ ರೂ. 100 ಕೋಟಿಗಳ ಅನುದಾನದಲ್ಲಿ ಈ ಯೋಜನೆಯನ್ನು 2023-24ನೇ ಸಾಲಿನಲ್ಲಿ ಪ್ಯಾಕೇಜ್ ಮಾದರಿಯಲ್ಲಿ (ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ತಂತಿಬೇಲಿ, ಪಂಪ್ ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು) ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮುಂಗಾರು 2023ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಸೇರ್ಪಡೆಯಾಗಿದ್ದರೂ 2023-24ನೇ ಸಾಲಿನಲ್ಲಿ ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ಕೃಷಿ ಭಾಗ್ಯ ಯೋಜನೆ ರಾಜ್ಯದ ಒಣ ಕೃಷಿ ಹವಾಮಾನ ವಲಯಗಳಲ್ಲಿ ಇರುವ ತಾಲೂಕುಗಳಲ್ಲಿ ಮಾತ್ರ ಅನುಷ್ಠಾನ ಮಾಡಲಾಗುತ್ತಿರುವ ಕಾರಣ ಹಾಗಾಗಿ ಗದಗ ಜಿಲ್ಲೆಯ ಶಿಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಒಣ ಕೃಷಿ ಹವಾಮಾನ ವಲಯದಲ್ಲಿ ಇಲ್ಲದಿರುವ ಕಾರಣವ ಸೇರ್ಪಡೆ ಮಾಡಲಾಗಿಲ್ಲ ಎಂದು ಎನ್. ಚಲುವರಾಯಸ್ವಾಮಿ ಹೇಳಿದರು.

2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014ರನ್ವಯ ರಾಜ್ಯದ 24 ಜಿಲ್ಲೆ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ನು ಈಗಾಗಲೇ ಜಿಲ್ಲೆಗಳಿಗೆ ನೀಡಲಾಗಿದ್ದು, ಅದರಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ | Karnataka Budget Session 2024: ಹೊಸ ಕಾಯಿದೆ; ಪಬ್ಲಿಕ್‌ ಪ್ಲೇಸ್‌ನಲ್ಲಿ ಸಿಗರೇಟ್‌ ಸೇದಿದ್ರೆ ಭಾರೀ ದಂಡ!

ಪ್ರಸಕ್ತ ಸಾಲಿನ ಆರ್ಥಿಕ ವರ್ಷಾಂತ್ಯಕ್ಕೆ ಕೇವಲ ಒಂದು ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ಯಾವುದೇ ಸೇರ್ಪಡೆ/ಬದಲಾವಣೆ ಹಾಗೂ ಅದರಂತಯೆ ಅನುಷ್ಠಾನ ಕಷ್ಟಸಾಧ್ಯವಾಗಿರುತ್ತದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉತ್ತರಿಸಿದರು.

Exit mobile version