Site icon Vistara News

Krishna River: ತುಂಬಿದ ಬಸವಸಾಗರ ಡ್ಯಾಮ್, ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಆತಂಕ, ಮೊಸಳೆಗಳು ಪ್ರತ್ಯಕ್ಷ

krishan river

ಯಾದಗಿರಿ: ಕೃಷ್ಣಾ ನದಿಗೆ (krishna river) 1.20 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ ಉಂಟಾಗಿದೆ.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದ ಬಸವಸಾಗರ (narayanapura dam) ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಮಾಡಲಾಗಿದೆ. ಜಲಾಶಯಕ್ಕೆ 170000 ನೀರಿನ ಒಳಹರಿವು ಇದೆ. ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಗೆ ನದಿಗೆ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯದ 30 ಗೇಟ್ ಓಪನ್ ಮಾಡಿ 178760 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. 33.33 ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 27.09 ಟಿಎಂಸಿ ನೀರು ಸಂಗ್ರಹವಾಗಿದೆ.

krishan river dam

ಯಾರೂ ನದಿ ತೀರಕ್ಕೆ ತೆರಳದಂತೆ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಎಚ್ಚರಿಕೆ ನೀಡಿದ್ದಾರೆ. ಕೃಷಿ ಕೆಲಸಕ್ಕೆ ನದಿ ತೀರಕ್ಕೆ ಹೋಗಬೇಡಿ. ನದಿ ತೀರಕ್ಕೆ ಸೆಲ್ಫಿ ತೆಗೆದುಕೊಳ್ಳಲು ಹೋಗಬಾರದು ಎಂದು ಡಂಗುರ ಮೂಲಕ ಕೃಷ್ಣಾ ಹಾಗೂ ಭೀಮಾನದಿ ತೀರದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.

ತೇಲಿ ಬಂದ ಮೊಸಳೆಗಳು

ರಾಯಚೂರು: ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಬಿಟ್ಟ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡುಗಡ್ಡೆ ಗ್ರಾಮಸ್ಥರಿಗೆ ಮೊಸಳೆಗಳ ಆತಂಕ ಶುರುವಾಗಿದೆ. ಕೃಷ್ಣಾ ನದಿ ತೀರದ ಗ್ರಾಮಗಳಾದ ಕುರುವಕಲ, ಕುರುವಕುರ್ದಾಗಳಲ್ಲಿ ಹರಿಯುವ ನೀರಿನಲ್ಲಿ ಮೊಸಳೆಗಳು ತೇಲಿ ಬಂದಿವೆ. ಜನವಾಸ ಇರುವ ಜಾಗದಲ್ಲೇ ಮೊಸಳೆಗಳು ಪ್ರತ್ಯಕ್ಷವಾಗಿದ್ದು, ಬೃಹತ್ ಗಾತ್ರದ ಮೊಸಳೆಗಳನ್ನು ಕಂಡು ಜನ ಬೆಚ್ಚಿಬಿದ್ದಿದ್ದಾರೆ. ನದಿ ತೀರದ ಪೊದೆ, ಬಂಡೆಗಳ ಮೇಲೆ ಮೊಸಳೆಗಳು ಪ್ರತ್ಯಕ್ಷವಾಗಿದ್ದು, ವಿಸ್ತಾರ ನ್ಯೂಸ್ ತಂಡ ಇವುಗಳ ಪ್ರತ್ಯಕ್ಷ ವರದಿ ಮಾಡಿದೆ.

ಇದನ್ನೂ ಓದಿ: ರಾಜಾಪುರ ಬ್ಯಾರೇಜ್‌ನಿಂದ 1500 ಕ್ಯುಸೆಕ್ ನೀರು ಬಿಡುಗಡೆ; ಕೃಷ್ಣಾ ನದಿಗೆ ಮತ್ತೆ ಜೀವಕಳೆ

Exit mobile version