ಯಾದಗಿರಿ: ಇಲ್ಲಿನ ತಿಂಥಣಿ ಗ್ರಾಮದ ಮೌನೇಶ್ವರ ದೇವಸ್ಥಾನಕ್ಕೆ ಬಂದಿದ್ದ ಯುವಕನೊಬ್ಬ ಕೃಷ್ಣಾ ನದಿಯಲ್ಲಿ (Krishna river) ಭಾನುವಾರ (ಆ.13) ಕೊಚ್ಚಿ (Drowned in river)ಹೋಗಿದ್ದಾನೆ. ಶಹಾಪುರ ತಾಲೂಕಿನ ಕನ್ಯಾಕೋಳೂರ ಗ್ರಾಮದ ರವಿಕಿರಣ್ (22) ಮೃತ ದುರ್ದೈವಿ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಕೃಷ್ಣಾ ನದಿ ತಟದಲ್ಲಿ ಘಟನೆ ನಡೆದಿದೆ. ಗ್ರಾಮದ ಮೌನೇಶ್ವರ ದೇವಸ್ಥಾನಕ್ಕೆ ಕುಟುಂಬ ಸಮೇತವಾಗಿ ಆಗಮಿಸಿದ್ದರು. ಪುಣ್ಯ ಸ್ನಾನ ಮಾಡಲು ಕೃಷ್ಣಾ ನದಿಗೆ ಇಳಿದಾಗ ನೀರಿನ ಪ್ರಮಾಣ ಹೆಚ್ಚಾಗಿತ್ತು. ನೀರಿನ ಸೆಳೆತಕ್ಕೆ ಸಿಲುಕಿ ಹೊರಬರಲು ಆಗದೆ ಮೃತಪಟ್ಟಿದ್ದಾರೆ. ನೀರಲ್ಲಿ ಮುಳುಗುತ್ತಿದ್ದವನ್ನು ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ.
ಸದ್ಯ ಸ್ಥಳೀಯರ ಸಹಾಯದಿಂದ ಯುವಕನ ಮೃತ ದೇಹವನ್ನು ಹೊರತೆಗೆಯಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಪತ್ತೆಯಾಗಿದ್ದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಗ್ರಾಮದಲ್ಲಿ ನಾಪತ್ತೆಯಾದ ವ್ಯಕ್ತಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಸವಶೆಟ್ಟಿ ( 60) ಆತ್ಮಹತ್ಯೆ ಮಾಡಿಕೊಂಡಿರುವವರು. ಬಸವಶೆಟ್ಟಿ ಬೇಲೂರು ತಾಲೂಕಿನ ಅಂದಲೆ ಗ್ರಾಮದವರು.
ಅರೆಹಳ್ಳಿ ಸಮೀಪದ ಬಿಳಗುಲಿ ಗ್ರಾಮದ ಸಮೀಪ ಮರವೊಂದಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಕಳೆದ ಹತ್ತು ದಿನಗಳಿಂದ ಕಾಣದೆ ಇದ್ದಾಗ, ಹಳೇಬೀಡು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಆಗಿರುವ ಸಂಬಂಧ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಹತ್ತು ದಿನಗಳ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ ಆಗಿದೆ. ಗ್ರಾಮದಿಂದ ಸುಮಾರು 30 ಕಿ.ಮೀ.ದೂರ ಇರುವ ಬೇರೊಂದು ಗ್ರಾಮದ ಸಮೀಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ