Site icon Vistara News

Krishna Water Dispute: ಕೃಷ್ಣಾ ನೀರಿನ ವಿಚಾರ ಮತ್ತೆ ಮಹಾ ಕ್ಯಾತೆ; ರಾಜ್ಯಕ್ಕೆ ಹರಿದು ಬರ್ತಿದ್ದ ನೀರು ತಡೆ ಹಿಡಿದ ಮಹಾರಾಷ್ಟ್ರ!

Krishna Water Dispute

ಚಿಕ್ಕೋಡಿ: ಕೃಷ್ಣಾ ನದಿ ನೀರಿನ (Krishna Water Dispute) ವಿಚಾರವಾಗಿ ಮಹಾರಾಷ್ಟ್ರ ಮತ್ತೆ ಕ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ಹರಿದು ಬರ್ತಿದ್ದ ನೀರನ್ನು ತಡೆ ಹಿಡಿದಿರುವ ಮಹಾರಾಷ್ಟ್ರ ಸರ್ಕಾರ, ನದಿ ನೀರಿನ ಹರಿವಿನ ಮೇಲೆ ನಿಗಾ ಇಡಲು ನಾಲ್ವರು ಸಿಬ್ಬಂದಿಯನ್ನು ನೇಮಿಸಿದೆ.

ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ತಡೆ ಹಿಡಿಯಲಾಗಿದೆ. ಇಬ್ಬರು ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಇಬ್ಬರು ನೀರಾವರಿ ಇಲಾಖೆ ಸಿಬ್ಬಂದಿ ಸೇರಿ ಎರಡು ಗಸ್ತು ತಂಡಗಳನ್ನು ನೇಮಿಸಲಾಗಿದೆ.

ಕೃಷ್ಣಾ ನದಿ ನೀರು ತಡೆದ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ.

ಇದನ್ನೂ ಓದಿ | Congress Karnataka: ಬದಲಾಗ್ತಾರಾ ಕೆಪಿಸಿಸಿ ಅಧ್ಯಕ್ಷರು?; ಡಿಕೆಶಿ ಹೇಳಿಕೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ನಲ್ಲಿ ಚರ್ಚೆ ಶುರು!

ಮೇ 31 ರಿಂದ ಕರ್ನಾಟಕದಲ್ಲಿ ಶುರುವಾಗುತ್ತಾ ಮುಂಗಾರು ಮಳೆ ದರ್ಬಾರ್‌!

ಬೆಂಗಳೂರು: ಮೇ 31ರಂದು ಪ್ರಸಕ್ತ ಸಾಲಿನ ಮುಂಗಾರು ಮಳೆಯು (Monsoon 2024) ಕೇರಳವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದೇಶದ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುವ ಮಳೆಯಾಗಿದ್ದರಿಂದ ರೈತರಲ್ಲಿ ಸಹಜವಾಗಿಯೇ ಸಮಾಧಾನ ತಂದಿದೆ. ಇನ್ನೂ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಜೂನ್‌ ಮೊದಲ ವಾರ ನೈರುತ್ಯ ಮುಂಗಾರು ಮಳೆ ಕರ್ನಾಟಕವನ್ನು ಪ್ರವೇಶ (Karnataka Monsoon 2024) ಮಾಡಲಿದೆ. ಈ ಬಾರಿ ಮುಂಗಾರಿನಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿದೆ.

ಒಂದು ವೇಳೆ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಕಾಣಿಸಿಕೊಂಡರೆ ಮುಂಗಾರು ಆಗಮನವು ಮುಂದಕ್ಕೆ ಹೋಗಲಿದೆ. ನೈರುತ್ಯ ಮಾನ್ಸೂನ್ ಈಗಾಗಲೇ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ವ್ಯಾಪಿಸಿದೆ. ಮೇ 31ಕ್ಕೆ ನೈರುತ್ಯ ಮುಂಗಾರು ಕೇರಳ ಕರಾವಳಿಗೆ ಆಗಮಿಸುವ ನಿರೀಕ್ಷೆ ಇದೆ. ಅಲ್ಲಿಂದ ಕರ್ನಾಟಕ ಕರಾವಳಿಗೆ ಜೂನ್ 1 ಅಥವಾ 2ರಂದು ಪ್ರವೇಶಿಸಬಹುದು. ಕರಾವಳಿಯಿಂದ ಕ್ರಮೇಣ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಪ್ರದೇಶಗಳಿಗೆ ವ್ಯಾಪಿಸಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ಹೇಳಿದ್ದಾರೆ.

ಕೊಡಗಿನಲ್ಲಿ ವಿಪತ್ತು ನಿರ್ವಹಣಾ ತಂಡ ವಾಸ್ತವ್ಯ

ಮುಂಗಾರು ಪ್ರವೇಶಕ್ಕೆ ದಿನಗಣನೆ ಆರಂಭವಾಗಿದೆ. ಜೂನ್ ಮೊದಲ ವಾರಕ್ಕೆ ಕೊಡಗು ಜಿಲ್ಲೆಗೆ ಮುಂಗಾರು ಎಂಟ್ರಿಯಾಗಲಿದೆ. ಕಳೆದ ಬಾರಿಗಿಂತ ಮೂರರಿಂದ ನಾಲ್ಕು ಪಟ್ಟು ಹೆಚ್ಚು ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆಯು ಕೊಡಗು ಜಿಲ್ಲಾಡಳಿತಕ್ಕೆ‌ ಮಾಹಿತಿ ರವಾನಿಸಿದೆ. ಈ ಬಾರಿಯ ಮಳೆಗಾಲಕ್ಕೆ ಕೊಡಗು ಜಿಲ್ಲಾಡಳಿತ ಕೂಡ ತಯಾರಿ ನಡೆಸಿಕೊಳ್ಳುತ್ತಿದೆ. ಮೇ ತಿಂಗಳ ಅಂತ್ಯಕ್ಕೆ ಜಿಲ್ಲೆಗೆ ಎನ್.ಡಿ.ಆರ್ ಎಫ್ ತಂಡ ಆಗಮಿಸಲಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ತಿಳಿಸಿದ್ದಾರೆ. 26 ಮಂದಿಯನ್ನು ಒಳಗೊಂಡ ಎನ್.ಡಿ.ಆರ್ ಎಫ್ ಟೀಮ್ ಈ ಬಾರಿ ಆಗಮಿಸಲಿದೆ. ಕಳೆದ ಬಾರಿ ಜಿಲ್ಲೆಗೆ ಬಂದಿದ್ದ ಎನ್.ಡಿ.ಆರ್.ಎಫ್‌ಗೆ ಬೆಟಾಲಿಯನ್ ಕಳುಹಿಸುವಂತೆ ಜಿಲ್ಲಾಡಳಿತ ಮ‌ನವಿ‌ ಮಾಡಿದೆ. ಕಳೆದ ಬಾರಿ ಬಂದ ತಂಡವೆ ಈ ಸಲವು ಆಗಮಿಸಲಿದೆ. ಕೊಡಗಿನಲ್ಲಿ ಮಳೆಗಾಲ ಮುಗಿಯುವವರೆಗೂ ವಿಪತ್ತು ನಿರ್ವಹಣಾ ತಂಡ ಜಿಲ್ಲೆಯಲ್ಲೆ ವಾಸ್ತವ್ಯ ಹೂಡಲಿದೆ.

ಇದನ್ನೂ ಓದಿ: Monsoon 2024: ರೈತರಿಗೆ ಗುಡ್‌ ನ್ಯೂಸ್;‌ ಮುಂಗಾರು ಮಳೆ ಆಗಮನಕ್ಕೆ ಫಿಕ್ಸ್‌ ಆಯ್ತು ದಿನಾಂಕ!

ಭಾರಿ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಣೆ

ಮೇ 26ರಂದು ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version