KS Eshwarappa : ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಫುಲ್ ರಿಲೀಫ್‌ - Vistara News

ಉಡುಪಿ

KS Eshwarappa : ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪಗೆ ಫುಲ್ ರಿಲೀಫ್‌

KS Eshwarappa : ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ನೀಡಿದ ಬಿ ರಿಪೋರ್ಟನ್ನು ಕೋರ್ಟ್‌ ಅಂಗೀಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರಿಗೆ ಫುಲ್‌ ರಿಲೀಫ್‌ ಸಿಕ್ಕಿದೆ.

VISTARANEWS.COM


on

KS Eshwarappa santhosh pateel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್‌ (Contractor Santosh Pateel) ಆತ್ಮಹತ್ಯೆ ಪ್ರಕರಣದಲ್ಲಿ (Contractor suicide case) ಮಾಜಿ ಸಚಿವ, ಹಿರಿಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ (KS Eshwarappa) ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಜನಪ್ರತಿನಿಧಿ ನ್ಯಾಯಾಲಯವು (Peoples representative court) ಈ ಆತ್ಮಹತ್ಯೆಯಲ್ಲಿ ಈಶ್ವರಪ್ಪ ಅವರು ಯಾವುದೇ ರೀತಿಯಲ್ಲೂ ಶಾಮೀಲಾಗಿದ್ದಾರೆ ಎಂಬುದಕ್ಕೆ ಆಧಾರಗಳಿಲ್ಲ ಎಂದು ಸ್ಪಷ್ಟಪಡಿಸಿ ಉಡುಪಿ ಪೊಲೀಸರು (Udupi police) ಸಲ್ಲಿಸಿದ್ದ ಬಿ ರಿಪೋರ್ಟ್‌ನ್ನು ಅಂಗೀಕರಿಸಿದೆ (B report accepted). ಈ ಮೂಲಕ ಬಿ ರಿಪೋರ್ಟ್‌ ಬಗ್ಗೆ ಸಂತೋಷ್‌ ಪಾಟೀಲ್‌ ಕುಟುಂಬ ಎತ್ತಿದ್ದ ಆಕ್ಷೇಪವನ್ನು ಕೋರ್ಟ್‌ ತಳ್ಳಿ ಹಾಕಿದಂತಾಗಿದೆ.

2022ರ ಏಪ್ರಿಲ್‌ 12ರಂದು ಬೆಳಗಾವಿ ಮೂಲದ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತರಾಗಿದ್ದ ಸಂತೋಷ್‌ ಪಾಟೀಲ್‌ ಅವರು ಉಡುಪಿಯ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನಿಬ್ಬರು ಗೆಳೆಯರೊಂದಿಗೆ ಉಡುಪಿಗೆ ಬಂದಿದ್ದ ಅವರು ಉಳಿದಿಬ್ಬರನ್ನು ಬೇರೆ ರೂಮಿಗೆ ಕಳುಹಿಸಿ ತಾವೊಬ್ಬರೇ ಒಂದು ಕೋಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಸಂತೋಷ್‌ ಪಾಟೀಲ್‌ ಅವರು ಅದಕ್ಕೆ ಮುನ್ನ ಆಗ ರಾಜ್ಯದ ಗ್ರಾಮೀಣ ಮತ್ತು ಪಂಚಾಯಿತಿ ರಾಜ್‌ ಸಚಿವರಾಗಿದ್ದ ಕೆ.ಎಸ್‌. ಈಶ್ವರಪ್ಪ ಅವರ ಮೇಲೆ ಕಮಿಷನ್‌ ಆರೋಪ ಮಾಡಿದ್ದರು. ತನಗೆ ಬರಬೇಕಾಗಿರುವ ಕಾಮಗಾರಿ ಹಣದಲ್ಲಿ 40% ಹಣ ಕೇಳಲಾಗುತ್ತಿದೆ. ಇದರಲ್ಲಿ ಈಶ್ವರಪ್ಪ ಅವರೂ ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಹೀಗೆ ಆರೋಪ ಮಾಡಿದ್ದ ಸಂತೋಷ್‌ ಆತ್ಮಹತ್ಯೆ ಈಶ್ವರಪ್ಪ ಅವರ ಕಡೆಗೆ ಬೆಟ್ಟು ಮಾಡುವಂತೆ ಮಾಡಿತ್ತು. ಜತೆಗೆ ಆವತ್ತು ಆತ್ಮಹತ್ಯೆಗೆ ಮುನ್ನ ಸಂತೋಷ್‌ ಪಾಟೀಲ್‌ ತಮ್ಮ ಕೆಲವು ಆತ್ಮೀಯರಿಗೆ ವಾಟ್ಸ್‌ ಆಪ್‌ ಸಂದೇಶ ಕಳುಹಿಸಿ ಅದರಲ್ಲಿ ಕಾಮಗಾರಿ ಹಣ ಬಿಡುಗಡೆ ಆಗುತ್ತಿರುವ ತೊಂದರೆಯನ್ನು ಎದುರಿಸಲಾಗದೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಿದ್ದರು. ಈಶ್ವರಪ್ಪ ಅವರ ಆಪ್ತ ಸಹಾಯಕರಿಗೆ ಲಂಚ ಕೊಟ್ಟಿರುವ ಮಾಹಿತಿಯೂ ಅದರಲ್ಲಿತ್ತು.

ಇದೆಲ್ಲ ಆಧಾರದಲ್ಲಿ ಎಫ್‌ಐಆರ್‌ನಲ್ಲಿ ಕೆ.ಎಸ್‌. ಈಶ್ವರಪ್ಪ ಅವರ ಹೆಸರನ್ನು ಸೇರಿಸಲಾಗಿತ್ತು. ಇದರ ಆಧಾರದಲ್ಲಿ ಕೆ.ಎಸ್‌ ಈಶ್ವರಪ್ಪ ಅವರು ತಮ್ಮ ಸಚಿವ ಖಾತೆಗೆ ರಾಜೀನಾಮೆ ನೀಡಬೇಕಾಗಿ ಬಂದಿತ್ತು.

ಈಶ್ವರಪ್ಪಗೆ ವರವಾದ ಬಿ ರಿಪೋರ್ಟ್‌

ಇದೆಲ್ಲದರ ನಡುವೆ, 2022ರ ಜುಲೈ 20ರಂದು ಉಡುಪಿ ಪೊಲೀಸರು ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ಅವರ ಯಾವುದೇ ಪಾತ್ರವಿಲ್ಲ ಎಂದು ಬಿ ರಿಪೋರ್ಟ್‌ ಸಲ್ಲಿಸಿದ್ದರು. ತನಿಖಾಧಿಕಾರಿ, ಇನ್ಸ್‌ಪೆಕ್ಟರ್‌ ಪ್ರಮೋದ್‌ ಕುಮಾರ್‌ ಅವರು ಸಲ್ಲಿಸಿದ ವರದಿಯಲ್ಲಿ ಈಶ್ವರಪ್ಪ ಅವರು ಸಾವಿಗೆ ಕಾರಣರಾಗಿರುವ ಆರೋಪ ಸಾಬೀತುಪಡಿಸಲು ಯಾವುದೇ ಪೂರಕ ಅಂಶಗಳು ದೊರೆಯುವುದಿಲ್ಲ ಎಂದು ಹೇಳಿದ್ದರು. ಸಂತೋಷ್ ಪಾಟೀಲ್ ಪತ್ನಿ ಮತ್ತು ಗೆಳೆಯರ ಹೇಳಿಕೆ ಹೊರತುಪಡಿಸಿದರೆ ಈಶ್ವರಪ್ಪ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಜತೆಗೆ ಸಂತೋಷ್‌ ತನ್ನ ಸಬ್‌ ಕಾಂಟ್ರಾಕ್ಟರ್‌ಗಳಿಗೆ ಕೋಟ್ಯಂತರ ರೂ. ಬಾಕಿ ಇಟ್ಟಿದ್ದ ಮತ್ತು ಈಶ್ವರಪ್ಪ ಅವರು ಹಾಕಿದ ಮಾನನಷ್ಟ ಮೊಕದ್ದಮೆಯಿಂದ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಸಂಶಯವನ್ನು ವ್ಯಕ್ತಪಡಿಸಲಾಗಿತ್ತು. ಪೊಲೀಸರ ಈ ಬಿ ರಿಪೋರ್ಟ್‌ ವರದಿಯನ್ನು ರಾಜ್ಯದ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಬಿ ರಿಪೋರ್ಟ್‌ ಪ್ರಶ್ನಿಸಿ ಮೇಲ್ಮನವಿ ಸಲ್ಲಿಕೆ

ಪೊಲೀಸರ ಬಿ ರಿಪೋರ್ಟ್‌ ಸಲ್ಲಿಕೆ ಬೆನ್ನಿಗೇ ಪೊಲೀಸರು ಸಲ್ಲಿಸಿದ ಬೆನ್ನಿಗೇ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಅವರು ಈ ವರದಿಯನ್ನು ಅಂಗೀಕರಿಸದಂತೆ ಮನವಿ ಮಾಡಿದ್ದರು. ತನಿಖೆ ವೇಳೆ ಅಸಲಿ ಸಾಕ್ಷ್ಯಗಳನ್ನ ಮರೆಮಾಚಿದ್ದಾರೆ. ಪೊಲೀಸರೇ ಉಲ್ಲೇಖಿಸಿರುವ ಸಾಕ್ಷ್ಯಗಳನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ. ಪೊಲೀಸರ ಬಳಿ ಇರುವ ಸಾಕ್ಷಿಗಳನ್ನು ಹಾಜರುಪಡಿಸಿದರೆ ಎಲ್ಲವೂ ಬಯಲಾಗುತ್ತದೆ ಎಂದು ಹೇಳಿದ್ದರು. ಜತೆಗೆ ಈ ಪ್ರಕರಣದಲ್ಲಿ ಈಶ್ವರಪ್ಪ ಅವರ ವಿಚಾರಣೆಯನ್ನೇ ನಡೆಸಿಲ್ಲ ಎಂದು ಆಕ್ಷೇಪಿಸಿದ್ದರು.

ಈ ಮೇಲ್ಮನವಿಯ ಆಧಾರದಲ್ಲಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ 42ನೇ ವಿಶೇಷ ನ್ಯಾಯಾಲಯ 2023ರ ಜನವರಿ 31ರೊಳಗೆ ಎಲ್ಲ ಸಾಕ್ಷ್ಯಾಧಾರಗಳನ್ನು ಕೋರ್ಟ್‌ಗೆ ನೀಡುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿತ್ತು. ಪ್ರಮುಖವಾಗಿ ಸಂತೋಷ್‌ ಬಳಸುತ್ತಿದ್ದ ಎರಡು ಮೊಬೈಲ್‌ಗಳಲ್ಲಿದ್ದ ಡೇಟಾ, ಎಫ್ಎಸ್ಎಲ್​​ನಿಂದ ಪಡೆದ ಎಲ್ಲಾ ತಾಂತ್ರಿಕ ಸಾಕ್ಷ್ಯ, ಮೃತದೇಹ ಸಿಕ್ಕ ಹೋಟೆಲ್ ಸಿಸಿಟಿವಿ ಫೂಟೇಜ್‌ ನೀಡಬೇಕು ಎಂದು ನ್ಯಾಯಾಲಯ ಸೂಚಿಸಿತ್ತು. ಪೊಲೀಸರು ಮಾಡಿದ ಎಲ್ಲ ವಿಡಿಯೊಗಳ ಅನ್‌ ಎಡಿಟೆಡ್‌ ವರ್ಷನ್‌ಗಳನ್ನು ನೀಡಲು ಆದೇಶಿಸಿತ್ತು.

ಅಂತಿಮ ವಿಚಾರಣೆ ನಡೆದು ವರದಿ ಅಂಗೀಕಾರ

ಈ ಎಲ್ಲ ಹಂತಗಳನ್ನು ದಾಟಿ ಇದೀಗ ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟನ್ನು ಅಂಗೀಕರಿಸಿದೆ. ಇದರೊಂದಿಗೆ ಈಶ್ವರಪ್ಪ ಅವರು ತಮ್ಮ ಮೇಲಿನ ಆರೋಪದಿಂದ ತಾಂತ್ರಿಕವಾಗಿ ಮುಕ್ತಿ ಹೊಂದಿದಂತಾಗಿದೆ.

ಈಶ್ವರಪ್ಪ ಅವರು ಪೊಲೀಸರ ಬಿ ರಿಪೋರ್ಟ್‌ ಸಲ್ಲಿಕೆ ಬೆನ್ನಿಗೇ ಮರಳಿ ಮಂತ್ರಿಯಾಗುವ ಪ್ರಯತ್ನ ಮಾಡಿದ್ದರು. ಅದರೆ, ಮೇಲ್ಮನವಿ ಮತ್ತಿತರ ತಾಂತ್ರಿಕ ವಿಚಾರಗಳು, ರಾಜಕೀಯ ಕಾರಣಗಳು ಅಡ್ಡಿಯಾಗಿದ್ದವು. ಈಗ ಅವರು ಪೂರ್ಣವಾಗಿ ಕ್ಲೀನ್‌ ಚಿಟ್‌ ಪಡೆದ ಹೊತ್ತಿನಲ್ಲಿ ಸರ್ಕಾರವೇ ಬದಲಾಗಿದೆ.

ಹಿಂದಿನ ವರದಿ : KS Eshwarappa | ಗುತ್ತಿಗೆದಾರನ ಸಾವಿನ ಪ್ರಕರಣಕ್ಕೆ ಮರುಜೀವ: ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain
Karnataka rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain
Karnataka rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain
Karnataka rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru
Karnataka rain

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain
Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

By

Karnataka Rain
Koo

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
HK patil
ಗದಗ10 ಗಂಟೆಗಳು ago

HK Patil : ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್ನುವ ಬದಲಿಗೆ `ಡಿಕೆಶಿ’ ಎಂದು ಸಚಿವ ಎಚ್‌ಕೆ ಪಾಟೀಲ್‌ ಯಡವಟ್ಟು

Dolly Dhananjay
ಸಿನಿಮಾ14 ಗಂಟೆಗಳು ago

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dina Bhavishya
ಭವಿಷ್ಯ24 ಗಂಟೆಗಳು ago

Dina Bhavishya : ಪ್ರಮುಖ ವ್ಯಕ್ತಿಗಳೊಂದಿಗೆ ಮಾತನಾಡುವಾಗ ಜಾಗೃತೆ ಇರಲಿ

Dina Bhavishya
ಭವಿಷ್ಯ2 ದಿನಗಳು ago

Dina Bhavishya : ಭೂ ಸಂಬಂಧಿ ವ್ಯವಹಾರಗಳಲ್ಲಿ ಡಬಲ್‌ ಲಾಭ; ಬಹುದಿನಗಳ ಕನಸು ನನಸಾಗುವ ಕಾಲ

Hc grants interim bail to actor Darshan
ಸಿನಿಮಾ3 ದಿನಗಳು ago

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

dina bhavishya
ಭವಿಷ್ಯ3 ದಿನಗಳು ago

Dina Bhavishya : ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ

Doctors at Fortis Hospital remove fish bone from man's stomach for 5 years
ಬೆಂಗಳೂರು4 ದಿನಗಳು ago

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

murder case
ಕೊಡಗು4 ದಿನಗಳು ago

Murder case : ಸುಳಿವೆ ಇಲ್ಲದಿರುವ ಕೊಲೆ ಪ್ರಕರಣ ಭೇದಿಸಿದ ಸುಂಟಿಕೊಪ್ಪ ಪೊಲೀಸರಿಗೆ ಸನ್ಮಾನ

ಬೆಂಗಳೂರು4 ದಿನಗಳು ago

Assault Case : ಬೆಂಗಳೂರಿನಲ್ಲೊಬ್ಬ ಸೈಕೋಪಾಥ್ ಪತಿ; ನಿಧಿಗಾಗಿ ಮಗುನಾ ಬಲಿ ಕೊಡೋಣವೆಂದು ಪತ್ನಿಗೆ ಕಿರುಕುಳ

Dina Bhavishya
ಭವಿಷ್ಯ4 ದಿನಗಳು ago

Dina Bhavishya : ಈ ದಿನ ಯಾವುದೇ ಕಾರಣಕ್ಕೂ ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ11 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ12 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ4 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌