Site icon Vistara News

KSET 2023: ಕೆಸೆಟ್‌ ಕೀ ಉತ್ತರ ಬಿಡುಗಡೆ ಮಾಡಿದ ಕೆಇಎ; ಈ ರೀತಿ ಚೆಕ್‌ ಮಾಡಿ

KEA releases kset 2023 provisional key

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (KSET 2023) ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ.

ಕರ್ನಾಟಕ ಪರೀಕ್ಷೆ ಪ್ರಾಧಿಕಾರದಿಂದ ಜ.13ರಂದು ಕೆಸೆಟ್‌-2023 ನಡೆಸಲಾಗಿತ್ತು. ಇದೀಗ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ಕೀ ಉತ್ತರ ಚೆಕ್ ಮಾಡಿಕೊಳ್ಳಬಹುದು. ಇನ್ನು ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಇದ್ದಲ್ಲಿ, ಅಗತ್ಯ ಪೂರಕ ದಾಖಲೆಗಳನ್ನು ಲಗತ್ತಿಸುವ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ತಾತ್ಕಾಲಿಕ ಸರಿಯುತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಫೆ.7 ಕೊನೆಯ ದಿನವಾಗಿದೆ.

ಕೀ ಉತ್ತರ ಚೆಕ್ ಮಾಡುವುದು ಹೇಗೆ?

1.https://cetonline.karnataka.gov.in/kea/indexnew (ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ)
2. ಮುಖಪುಟದಲ್ಲಿ ‘ಪ್ರವೇಶ’ ಕೆಟಗರಿಯಲ್ಲಿ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023′ ಆಯ್ಕೆ ಮಾಡಿ ಕ್ಲಿಕ್ ಮಾಡಿ.
3. ನಂತರ ‘KSET ತಾತ್ಕಾಲಿಕ ಕೀ ಉತ್ತರಗಳು’ ಎಂಬುದರ ಮೇಲೆ ಕ್ಲಿಕ್ ಮಾಡಿ.
4. ಬಳಿಕ ವೆಬ್‌ಪುಟದಲ್ಲಿ ತಾತ್ಕಾಲಿಕ ಕೀ ಉತ್ತರಗಳ ಲಿಂಕ್ ಬರುತ್ತದೆ.
5. ಪರೀಕ್ಷೆ ಬರೆದ ವಿಷಯದ ಕೀ ಉತ್ತರ ಲಿಂಕ್ ಮೇಲೆ ಕ್ಲಿಕ್ ಮಾಡಿ.
6. ಪಿಡಿಎಫ್ ಪುಟವೊಂದು ಓಪನ್ ಆಗುತ್ತದೆ, ಈ ಮೂಲಕ ಕೀ ಉತ್ತರ ಪರಿಶೀಲಿಸಿಕೊಳ್ಳಬಹುದು.

PSI Exam: ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಪ್ರಕಟ

ಬೆಂಗಳೂರು: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯ (PSI Exam) ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ತಾತ್ಕಾಲಿಕ ಕೀ ಉತ್ತರಗಳನ್ನು ಪಡೆಯಬಹುದಾಗಿದೆ.

ಕಳೆದ ಬಾರಿ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಬಾರಿ ಜ.23ರಂದು ಕಟ್ಟೆಚ್ಚರದಿಂದ ಪರೀಕ್ಷೆ ನಡೆಸಲಾಗಿತ್ತು. ಇದೀಗ ಮರು ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜ.30ರಿಂದ ಫೆ.05ರ ಸಂಜೆ 5 ಗಂಟೆಯೊಳಗೆ ಕೆಇಎ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ಪಿಎಸ್‌ಐ ಮರು ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಬುಕ್ಲೆಟ್‌ ಪ್ರಕಾರ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ.

ಇದನ್ನೂ ಓದಿ | Job Alert: ಗುಡ್‌ ನ್ಯೂಸ್‌!: ಸದ್ಯವೇ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇಮಕ

545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ಹೀಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದಿಂದ ಜ. 23ರಂದು ಮರು ಪರೀಕ್ಷೆ ನಡೆಸಲಾಗಿತ್ತು. ಇದೀಗ ಪಿಎಸ್‌ಐ ಮರು ಪರೀಕ್ಷೆಯ ಕೀ ಉತ್ತರ ಪ್ರಕಟವಾಗಿದ್ದು, ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

Exit mobile version