ಗದಗ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆದರೆ, ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಸ್‌ನಲ್ಲಿದ್ದ ೧೦ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಗದಗ ನಗರದಿಂದ ಹೊಂಬಳ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದ್ದು, ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅರ್ಧ ಗಂಟೆಯಾದರೂ ಆಂಬ್ಯುಲೆನ್ಸ್ ಬಾರದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಗದಗ ತಾಲೂಕಿನ ಲಿಂಗದಾಳ ಗ್ರಾಮದ ಯುವಕ ಹನುಮಂತಪ್ಪ ಚಲವಾದಿ (20) ಮೃತಪಟ್ಟಿದ್ದಾರೆ.
ಲಿಂಗದಾಳದಿಂದ ಹನುಮಂತಪ್ಪ ಅವರು ಬೈಕ್‌ನಲ್ಲಿ ಬರುತ್ತಿದ್ದರು ಎನ್ನಲಾಗಿದ್ದು, ಮಾರ್ಗ ಮಧ್ಯೆ ಈ ಅವಘಡ ಸಂಭವಿಸಿದೆ. ಅಪಘಾತ ನಡೆದು ಅರ್ಧ ಗಂಟೆಯಾದರೂ ಆಂಬ್ಯುಲೆನ್ಸ್ ಬಾರದ ಹಿನ್ನೆಲೆಯಲ್ಲಿ ಪೊಲೀಸ್ ವಾಹನದಲ್ಲಿಯೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Road Accident | ಸ್ಕೂಟರ್‌ಗೆ ಲಾರಿ ಡಿಕ್ಕಿ; ರಸ್ತೆ ಅಪಘಾತದಲ್ಲಿ ನವವಿವಾಹಿತೆ ಸಾವು