ಬಳ್ಳಾರಿ: ಕೆಎಸ್ಆರ್ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್ಪೆಕ್ಟರ್ ಒಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ (Crime News) ನಡೆದಿದೆ. ಬೈಕ್ನಲ್ಲಿ ಹೋಗುತ್ತಿರುವಾಗ ತಲೆಗೆ ಪೆಟ್ಟಾಗಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರ ರಾತ್ರಿ ಇಲ್ಲಿನ ಕಾರಾಗೃಹದ ಸಮೀಪದಲ್ಲಿ ಘಟನೆ ನಡೆದಿದೆ. ತಲೆಗೆ ಮೂರು ಕಡೆ ಪೆಟ್ಟಾಗಿರುವುದರಿಂದ ಹತ್ಯೆಯ ಶಂಕೆ ಬಲವಾಗಿದೆ .
ಹುಸೇನಪ್ಪ(54) ಹೆಣವಾಗಿ ಪತ್ತೆಯಾದವರು. ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ತಲೆಗೆ ಗಂಭೀರ ಪೆಟ್ಟಾಗಿದ್ದರಿಂದ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತಪಟ್ಟ ಸೆಕ್ಯುರಿಟಿ ಇನ್ಸ್ಪೆಕ್ಟರ್ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ನಾಳೆ ಬೀದರ್ಗೆ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದರು.
ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಬೈಕ್ನಲ್ಲಿ ಬಂದು ಹತ್ಯೆ ಗೈದು ಪರಾರಿಯಾದ್ದಾರೆಂದು ಹೇಳಲಾಗಿದೆ. ಸ್ಥಳಕ್ಕೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು, ಎಎಸ್ಪಿ ನಟರಾಜ್, ಡಿವೈಎಸ್ಪಿ ಶೇಖರಪ್ಪ, ಕೆಎಸ್ ಆರ್ ಟಿಸಿ ಡಿಸಿ ದೇವರಾಜ್, ಗಾಂಧಿ ನಗರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ವಿಮ್ಸ್ ಕೊಂಡೊಯ್ಯಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ
ಬಳ್ಳಾರಿ:ನಗರ ಇನ್ಫೆಂಟ್ರಿ ರಸ್ತೆಯಲ್ಲಿರುವ ಐಯರ್ ಸೆಲೂನ್ನಲ್ಲಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಕೌಲ್ ಬಜಾರ್ ಪೊಲೀಸರು ಭಾನುವಾರ ಸಂಜೆ ದಾಳಿ (Police Raid) ಮಾಡಿ 7 ಮಹಿಳೆಯರನ್ನು ರಕ್ಷಿಸಿ, 8 ಪುರುಷರನ್ನು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಪ್ರೊಬೇಷನರಿ ಡಿವೈಎಸ್ಪಿ ಉಮಾರಾಣಿ ನೇತೃತ್ವದಲ್ಲಿ ಕೌಲ್ ಬಜಾರ್ ಪೊಲೀಸರು ಭಾನುವಾರ ಸಂಜೆ ದಾಳಿ ಮಾಡಿ ನಾಗಲ್ಯಾಂಡ್, ದೆಹಲಿ, ವೆಸ್ಟ್ ಬೆಂಗಾಲ್ ಮತ್ತು ಓಡಿಸ್ಸಾ ಮೂಲದ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ವ್ಯವಸ್ಥಾಪಕ ಪ್ರಭುಗೌಡ ಸೇರಿದಂತೆ 8 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Death News : ವಿದ್ಯುತ್ ತಂತಿ ತಗುಲಿ ದಂಪತಿ ದುರ್ಮರಣ
ಇಸ್ಪಿಟ್ ಅಡ್ಡೆಯ ಮೇಲೆ ದಾಳಿ, 7 ಜನರ ಬಂಧನ
ಕೌಲ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ದುಲ್ ಸಲಾಂ ಸ್ಟ್ರೀಟ್ ನಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜಾಟ ಅಡ್ಡೆಯ ಮೇಲೆ ಪ್ರೊಬೇಷನರಿ ಡಿವೈಎಸ್ಪಿ ಉಮಾರಾಣಿ ನೇತೃತ್ವದಲ್ಲಿ ಕೌಲ್ ಪೊಲೀಸರು ಭಾನುವಾರ ಸಂಜೆ ದಾಳಿ ಮಾಡಿ, 7 ಜನರನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಇಮ್ರಾನ್ ಅಲಿಯಾಸ್ ಅಕ್ಷಯ್ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ