Site icon Vistara News

Woman Delivers in Bus: ಕೆಎಸ್‌ಆರ್‌ಟಿಸಿ ಬಸ್‌ನಲ್ಲೇ ಹೆರಿಗೆ ಮಾಡಿಸಿದ ಲೇಡಿ ಕಂಡಕ್ಟರ್; ಎಲ್ಲೆಡೆ ವ್ಯಾಪಕ ಮೆಚ್ಚುಗೆ

Woman Delivers in Bus in Chikmagalur

Woman Delivers in Bus in Chikmagalur

‌ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ‌ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಮಾರ್ಗಮಧ್ಯದಲ್ಲಿಯೇ ಹೆರಿಗೆ ನೋವು (Woman Delivers in Bus) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿರ್ವಾಹಕಿಯೇ, ಹೆರಿಗೆ ಮಾಡಿಸಿ ಬಳಿಕ ತಾಯಿ, ಮಗುವನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗಿರುವ ಘಟನೆ ಚಿಕ್ಕಮಗಳೂರು ಸಮೀಪ ನಡೆದಿದೆ. ಸದ್ಯ ತಾಯಿ ಮತ್ತು ಮಗು ಆರೋಗ್ಯವಾಗಿದ್ದು, ಬಸ್‌ ನಿರ್ವಾಹಕಿಯ ಮಾನವೀಯತೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ಕೆ.ಎ-18, ಎಫ್-0865 ಸಂಖ್ಯೆy ಬಸ್‌‌, 45 ಪ್ರಯಾಣಿಕರೊಂದಿಗೆ ಬೆಂಗಳೂರು- ಚಿಕ್ಕಮಗಳೂರು ಮಾರ್ಗದಲ್ಲಿ ಸೋಮವಾರ ಮಧ್ಯಾಹ್ನ ಸಾಗುತ್ತಿತ್ತು. ಇಲ್ಲಿನ ಉದಯಪುರ ಸಮೀಪದ ಕೃಷಿ ಕಾಲೇಜು ಹತ್ತಿರ ಪ್ರಯಾಣಿಕರ ಪೈಕಿ ಬೇಲೂರಿಗೆ ತೆರಳುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಹತ್ತಿರದಲ್ಲಿ ಯಾವುದೇ ಆಸ್ಪತ್ರೆ ಇರದ ಕಾರಣ ಪ್ರಯಾಣಿಕರನ್ನು ಕೆಳಗೆ ಇಳಿಸಿ, ನಿರ್ವಾಹಕಿ ಎಸ್. ವಸಂತಮ್ಮ ಅವರು ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ.

ಇದನ್ನೂ ಓದಿ | Sagara News : ಸೋಲು ಅನಾಥ, ಗೆಲುವಿಗೆ ಸಾವಿರ ಜನ: ಮಾಜಿ ಶಾಸಕ ಹರತಾಳು ಹಾಲಪ್ಪ

ಮಹಿಳೆಯ ಆರ್ಥಿಕವಾಗಿ ದುರ್ಬಲಳಾಗಿದ್ದ ಕಾರಣ ನಿಗಮದ ಸಿಬ್ಬಂದಿ ಮಹಿಳೆಯ ತುರ್ತು ಖರ್ಚಿಗಾಗಿ ಎಲ್ಲಾ ಪ್ರಯಾಣಿಕರಿಂದ ಒಟ್ಟು 1500 ರೂ.ಗಳನ್ನು ಸಂಗ್ರಹಿಸಿ ನೀಡಿದ್ದಾರೆ. ನಂತರ ಮಹಿಳೆಯನ್ನು ಆಂಬ್ಯುಲೆನ್ಸ್‌ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈಗ ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ.

ಸಕಾಲದಲ್ಲಿ ಮಹಿಳೆ ಸಮಸ್ಯೆಗೆ ಸ್ಪಂದಿಸಿ ಮಗು‌ ಮತ್ತು ತಾಯಿಯನ್ನು‌ ಉಳಿಸಿ ಮಾನವೀಯ ನೆರವನ್ನು ನೀಡಿದ ನಿರ್ವಾಹಕಿ ವಸಂತಮ್ಮ ಕಾರ್ಯವು ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ವ್ಯವಸ್ಥಾಪಕ ನಿರ್ದೇಶಕಿ ಜಿ.ಸತ್ಯವತಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Chitradurga News: ಕಾಂಗ್ರೆಸ್‌ ಸರ್ಕಾರ ಬಂದಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ ಎಂದ ಜನ; ವಿಡಿಯೊ ವೈರಲ್

Exit mobile version