ವಿಜಯನಗರ: ಕೂಡ್ಲಿಗಿ ತಾಲೂಕಿನ ಸಕಲಾಪುರಹಟ್ಟಿ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ ನಡೆಸಿ 12 ಜನರನ್ನು ಬಂಧಿಸಿ, 65,530 ರೂ.ಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾನಾಹೊಸಹಳ್ಳಿ ಹೋಬಳಿಯ ಮುಖ್ಯರಸ್ತೆಯಲ್ಲಿ ಇಸ್ಪೀಟ್ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ 10 ಲಕ್ಷ ಬೆಲೆಬಾಳುವ 12 ಮೋಟಾರ್ ಬೈಕ್, 65 ಸಾವಿರ ನಗದನ್ನು ವಶಕ್ಕೆ ಪಡೆದಿದ್ದಾರೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | Cyber Crime: ಆನ್‌ಲೈನ್ ವಂಚನೆಗೆ ಇನ್ನೊಂದು ಬಲಿ; ಮೆಸೇಜ್ ಕ್ಲಿಕ್ ಮಾಡಿ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ
ಬಳ್ಳಾರಿ ಪೊಲೀಸರ ಭರ್ಜರಿ ಬೇಟೆ; 5.6 ಕೋಟಿ ರೂ. ನಗದು, 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ವಶ!
ಬಳ್ಳಾರಿ: ಲೋಕಸಭಾ ಚುನಾವಣೆ (Lok Sabha Election 2024) ಹೊತ್ತಿನಲ್ಲಿ ಬಳ್ಳಾರಿಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಹೇಮಾ ಜ್ಯುವೆಲರ್ಸ್ ಮಾಲೀಕರಾದ ನರೇಶ್ ಸೋನಿ ಎಂಬುವವರ ಬ್ರೂಸ್‌ಪೇಟೆ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ದಾಖಲೆಗಳಿಲ್ಲದ 5.6 ಕೋಟಿ ರೂಪಾಯಿ ನಗದು ಹಾಗೂ 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ಗಟ್ಟಿ, 103 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಈ ದಾಳಿ ನಡೆಸಿದ್ದು, ಈ ಎಲ್ಲ ವಸ್ತುಗಳನ್ನು ಮಹಜರು ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ. 98 ಕೆಪಿ ಆ್ಯಕ್ಟ್ ಅಡಿ ಪ್ರಕರಣವನ್ನು ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಇದನ್ನು ಹಸ್ತಾಂತರ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.
ಅಲ್ಲದೆ, ನರೇಶ್ ಸೋನಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಹಣದ ಮೂಲ ಪತ್ತೆಗೆ ವಿಚಾರಣೆ ನಡೆಸಲಾಗುತ್ತದೆ. ವಿಚಾರಣೆ ನಂತರ ಖಚಿತ ಮಾಹಿತಿ ಲಭ್ಯವಾಗಬೇಕಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಬಳ್ಳಾರಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಿದ್ದ ಪೊಲೀಸರಿಗೆ ಈ ವಿಷಯ ತಿಳಿದುಬಂದಿದೆ ಎಂದು ಗೊತ್ತಾಗಿದೆ.
ಇದನ್ನೂ ಓದಿ: Lok Sabha Election 2024: ಬೆಂಗಳೂರಲ್ಲಿ ಅಬ್ಬರದ ರೋಡ್ ಶೋ ನಡೆಸಿದ ಸಿಎಂ ಸಿದ್ದರಾಮಯ್ಯ!
ಇಷ್ಟೊಂದು ಪ್ರಮಾಣದ ಹಣ ಸಂಗ್ರಹ ಏಕೆ?
ಹಾಲಿ ಲೋಕಸಭೆ ಚುನಾವಣೆ ನಡೆಯುತ್ತಿದೆ. ಈ ಸಮಯದಲ್ಲಿ ಮನೆಯಲ್ಲಿ ದಾಖಲೆ ಇಲ್ಲದೆ ಕೋಟಿಗಟ್ಟಲೆ ಹಣವನ್ನು ಇಟ್ಟುಕೊಂಡಿದ್ದು ಏಕೆ? ಇವುಗಳಿಗೆ ದಾಖಲೆ ಏಕಿಲ್ಲ? ಇದನ್ನು ಚುನಾವಣೆಯಲ್ಲಿ ಹಂಚಿಕೆ ಮಾಡಲು ಇಟ್ಟುಕೊಳ್ಳಲಾಗಿದೆಯೇ? ಎಂಬಿತ್ಯಾದಿ ಪ್ರಶ್ನೆಗಳು ಮೂಡಿವೆ. ಈಗ ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ನರೇಶ್ ಅವರ ಹೇಳಿಕೆ ಮೇಲೆ ಎಲ್ಲವೂ ಗೊತ್ತಾಗಬೇಕಿದೆ.