Site icon Vistara News

Datti Awards: ಮೈಸೂರಿನಲ್ಲಿ ಮಾ.18ಕ್ಕೆ ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ: ಶಿವಾನಂದ ತಗಡೂರು

KUWJ Datti Awards Awards to be presented in Mysuru on March 18 says Shivananda Tagadur

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (KUWJ) ಕೊಡ ಮಾಡುವ ಕೆಯುಡಬ್ಲ್ಯುಜೆ ದತ್ತಿ ಪ್ರಶಸ್ತಿ (Datti Awards) ಪ್ರದಾನ ಸಮಾರಂಭವು ಶನಿವಾರ (ಮಾರ್ಚ್ 18) ಬೆಳಗ್ಗೆ 10.35ಕ್ಕೆ ಮೈಸೂರಿನ ಅಗ್ರಹಾರದ ರಾಜೇಂದ್ರ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಶಿವಮೊಗ್ಗದಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಇದೇ ಮೊದಲ ಬಾರಿಗೆ ಸಾಂಸ್ಕೃತಿಕ ನಗರಿಯಲ್ಲಿ ಈ ಕಾರ್ಯಕ್ರಮವನ್ನು ಸಂಘಟಿಸಲಾಗಿದೆ. ಮೈಸೂರು ಜಿಲ್ಲಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಹೈಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಉದ್ಘಾಟಿಸಿ, ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಔಟ್ಲುಕ್ ಮಾಜಿ ಸಂಪಾದಕ ಕೃಷ್ಣಪ್ರಸಾದ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ರಾಜ್ಯದ ಹಿರಿ-ಕಿರಿಯ ಪತ್ರಕರ್ತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

28 ಪ್ರಶಸ್ತಿ ಪ್ರದಾನ

ಕೆಯುಡಬ್ಲ್ಯುಜೆ ಹೆಸರಿನಲ್ಲಿರುವ ವಿವಿಧ ದತ್ತಿ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ಪ್ರದಾನ ಮಾಡಲಾಗುವುದು. ಇದರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ, ಗೊಮ್ಮಟ ಮಾಧ್ಯಮ ಪ್ರಶಸ್ತಿ, ಡಿವಿಜಿ ಪ್ರಶಸ್ತಿ, ಯಶೋದಮ್ಮ ಜಿ. ನಾರಾಯಣ ಪ್ರಶಸ್ತಿಗಳೂ ಸೇರಿವೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Elections : ಕಾಂಗ್ರೆಸ್‌ಗೆ ಬೀದಿ ಪಕ್ಕದ ಜಾಗವೂ ಸಿಗಬಾರದು ಎಂದ ಸ್ಮೃತಿ ಇರಾನಿ; ಸಿಲಿಂಡರ್‌ ಇಟ್ಟು ಪ್ರತಿಭಟನೆ!

ವಿಜಯವಾಣಿ ಸಂಪಾದಕ ಕೆ.ಎನ್. ಚನ್ನೇಗೌಡ ಮತ್ತು ಹಿರಿಯ ಪತ್ರಕರ್ತ ಜಿ.ಎನ್. ಮೋಹನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಲ್ಲದೆ, ಶಾಸಕ ಎಸ್.ಎ. ರಾಮದಾಸ್, ಮೈಸೂರಿನ ಉದ್ಯಮಿ ಎಂ. ರಾಜೇಂದ್ರ, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಉಪಸ್ಥಿತರಿರುವರು.

Exit mobile version