ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಕಳಚೆ ಭೂ ಕುಸಿತದಿಂದ ಹಾನಿಗೊಳಗಾದ ಪ್ರದೇಶದ ಪ್ರಮುಖರೊಂದಿಗೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್, ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ನೀಡಿ, ಕಳಚೆ ಗ್ರಾಮದ 667 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಮನವಿ ಮಾಡಿದರು.
2021 ರ ಜುಲೈನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಕಳೆಚೆ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿ ಮನೆಗಳಿಗೆ, ಕೃಷಿ ಭೂಮಿ ಹಾಗೂ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿ ಉಂಟಾಗಿದೆ. ಹೀಗಾಗಿ ಕಳಚೆ ಗ್ರಾಮದ 667 ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಲು ಅನುಮತಿ ನೀಡುವಂತೆ ಹಾಗೂ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಅಥವಾ ಬೇರೆ ಯಾವುದೇ ಅನುದಾನದಡಿ ಪುನರ್ವಸತಿ ಕಲ್ಪಿಸಲು ಅನುದಾನ ಮಂಜೂರು ಮಾಡುವಂತೆ ಸಚಿವರು ಮನವಿ ಮಾಡಿದರು.
ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಭಾಗ್ವತ್, ಮಂಡಲ ಉಪಾಧ್ಯಕ್ಷ ವೆಂಕಟರಮಣ ಬೆಳ್ಳಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಪುನರ್ವಸತಿ ಸಮಿತಿಯ ಪ್ರಮುಖರಾದ ಗಜಾನನ ಭಟ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಇದನ್ನೂ ಓದಿ | Tiger Captured | ಕೊಡಗಿನಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ವ್ಯಾಘ್ರ ಸೆರೆ