Karnataka Budget 2023: ಶ್ರಮೇವ ಜಯತೆಯ ಬಜೆಟ್: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹರ್ಷ - Vistara News

ಕರ್ನಾಟಕ

Karnataka Budget 2023: ಶ್ರಮೇವ ಜಯತೆಯ ಬಜೆಟ್: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹರ್ಷ

Karnataka Budget 2023: “ಸರ್ವೇ ಜನಾಃ ಸುಖಿನೋ ಭವಂತು” ಎಂಬುದನ್ನು ಸಾಕ್ಷಾತ್ ಜಾರಿಗೊಳಿಸುವ ಮಹತ್ವಾಕಾಂಕ್ಷಿ ಬಜೆಟ್ ಎಂದಿದ್ದಾರೆ ಸಚಿವ ಶಿವರಾಂ ಹೆಬ್ಬಾರ್.

VISTARANEWS.COM


on

Union Budget 2023
ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: “ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಫೆ.೧೭) ಮಂಡಿಸಿದ 2023-24ನೇ ಸಾಲಿನ ಆಯವ್ಯಯದಲ್ಲಿ ಶ್ರಮಿಕರ ಅಭ್ಯುದಯಕ್ಕೆ ಮಹತ್ವದ ಹೆಜ್ಜೆಗಳನ್ನು ಇರಿಸಲಾಗಿದ್ದು, ಇದು ಯಾವುದೇ ತೆರಿಗೆ ಹೊರೆ ಇಲ್ಲದ ಕೃಷಿಕ, ಕಾರ್ಮಿಕ, ಮಹಿಳೆಯರು ಸೇರಿದಂಗೆ “ಸರ್ವೇ ಜನಾಃ ಸುಖಿನೋ ಭವಂತು” ಎಂಬುದನ್ನು ಸಾಕ್ಷಾತ್ ಜಾರಿಗೊಳಿಸುವ ಮಹತ್ವಾಕಾಂಕ್ಷಿ ಬಜೆಟ್ (Karnataka Budget 2023) ಆಗಿದೆ” ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ರಾಜ್ಯ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರಿಗೆ ಮುಂಗಡ ಪತ್ರದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಕಾರ್ಮಿಕರ ಸಂಕ್ಷೇಮದಿಂದ ಅಭಿವೃದ್ಧಿ ಸಾಧ್ಯ ಎಂಬುದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ನಂಬಿಕೆ ಇರಿಸಿರುವುದು ಬಜೆಟ್‍ನಿಂದ ಸಾಬೀತಾಗಿದೆ ಎಂದಿದ್ದಾರೆ.”

ಇದನ್ನೂ ಓದಿ: Smriti Mandhana: ಆರ್​ಸಿಬಿ ತಂಡಕ್ಕೆ ಸ್ಮೃತಿ ಮಂಧಾನಾ ನಾಯಕಿ

“ರಾಜ್ಯಕ್ಕೆ ವಲಸೆ ಬಂದಿರುವ ಕಾರ್ಮಿಕರ ಯೋಗಕ್ಷೇಮದ ಹಿನ್ನೆಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೆರವು ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಕಾರ್ಮಿಕರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಗಳನ್ನು ನೀಡುವ ಸಲುವಾಗಿ ರಾಜ್ಯಾದ್ಯಂತ 19 ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯ (ಇಎಸ್‍ಐ)ಗಳನ್ನು ಸ್ಥಾಪಿಸುವುದು ಮತ್ತು ಹುಬ್ಬಳ್ಳಿ- ದಾವಣಗೆರೆ ಇಎಸ್‍ಐ ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯವನ್ನು 50 ರಿಂದ 100ಕ್ಕೆ ಏರಿಸಿರುವ ಮುಖ್ಯಮಂತ್ರಿಗಳ ಕ್ರಮ ಅಭಿನಂದನೀಯ” ಎಂದು ಹೆಬ್ಬಾರ್ ಹೇಳಿದ್ದಾರೆ.

ರಾಜ್ಯದ ಇಎಸ್‍ಐ ಆಸ್ಪತ್ರೆಗಳನ್ನು ಬಲಪಡಿಸಲು ಏಳು ಆಸ್ಪತ್ರೆಗಳಲ್ಲಿ ಐಸಿಯು ಸ್ಥಾಪಿಸಲು ಆರು ಆಸ್ಪತ್ರೆಗಳಲ್ಲಿ ಆಯುಷ್ ಘಟಕ ಆರಂಭ, ಜಿಲ್ಲೆಗೆ ಒಂದರಂತೆ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಕೆ, ಹೊಸದಾಗಿ ಆರಂಭಿಸಿರುವ 19 ಇಎಸ್‍ಐ ಚಿಕಿತ್ಸಾಲಯಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮತ್ತು ಆರು ಹೊಸ ಚಿಕಿತ್ಸಾಲಯಗಳನ್ನು ಆರಂಭಕ್ಕೆ ಮುಂದಡಿ ಇರಿಸಿರುವ ಮುಂಗಡ ಪತ್ರದ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ

ಕೈಗಾರಿಕಾ ಸ್ನೇಹಿ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಕಾರ್ಖಾನೆ, ಬಾಯ್ಲರುಗಳು ಮತ್ತು ಕೈಗಾರಿಕೆ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಗಳ ಸೇವೆಗಳನ್ನು ಸಕಾಲದಲ್ಲಿ ಸುಲಭವಾಗಿ ಒದಗಿಸುವ ಸಲುವಾಗಿ ಹೊಸ ಆನ್‍ಲೈನ್‍ ತಂತ್ರಾಂಶ ಅಭಿವೃದ್ಧಿಪಡಿಸಲು ಮುಂಗಡ ಪತ್ರದಲ್ಲಿ ಅನುವು ಮಾಡಿಕೊಡಲಾಗಿದೆ. ಅಸಂಘಟಿತ ಕಾರ್ಮಿಕರ ವಲಯವನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಅಸಂಘಟಿತ ಕಾರ್ಮಿಕರ ಬದುಕಿಗೆ ಭದ್ರತೆ ಒದಗಿಸುವ ಸಲುವಾಗಿ “ಕರ್ನಾಟಕ ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿ” ಸ್ಥಾಪಿಸುವ ಪ್ರಕಟಣೆಯ ದೂರದೃಷ್ಟಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral Video: ಕರಾಚಿ ಪೊಲೀಸ್​ ಮುಖ್ಯಸ್ಥರ ಕಚೇರಿಯನ್ನು ಅತಿಕ್ರಮಿಸಿದ್ದ ಐವರು ಟಿಟಿಪಿ ಉಗ್ರರ ಹತ್ಯೆಗೈದ ಪಾಕ್​ ಭದ್ರತಾ ಪಡೆ

ಅಸಂಘಟಿತ ವಲಯ ಭದ್ರತೆ ಯೋಜನೆಯಡಿಯಲ್ಲಿ ಆಸ್ತಿ ತೆರಿಗೆ ಮೇಲೆ ಹೆಚ್ಚಿನ ಸೆಸ್‍ ವಿಧಿಸದೆ ಆಂತರಿಕ ಸೆಸ್‍ಗಳಲ್ಲಿನ ಮಾರ್ಪಾಡು ಮೂಲಕ ರಾಜ್ಯದ 75 ಲಕ್ಷಕ್ಕೂ ಅಧಿಕ ಅಸಂಘಟಿತ ಕಾರ್ಮಿಕರಿಗೆ ಭದ್ರತೆ ಪ್ರಕಟಣೆ ಮೂಲಕ ಭರ್ಜರಿ ಕೊಡುಗೆ ನೀಡಲಾಗಿದೆ ಎಂದಿದ್ದಾರೆ.

“ಎರಡು ಕಾರ್ಮಿಕ ಅದಾಲತ್‍ಗಳ ಮೂಲಕ ಕಾರ್ಮಿಕರ ಬಾಕಿ ಅರ್ಜಿಗಳ ವಿಲೇವಾರಿ, ಕಾರ್ಮಿಕ ಶಿಶುಪಾಲನಾ ಕೇಂದ್ರಗಳ ಸ್ಥಾಪನೆ, ಕಾರ್ಮಿಕ ಮಕ್ಕಳ ಶ್ರೇಯೋಭಿವೃದ್ಧಿಗೆ ಜಾರಿ ಮಾಡಿರುವ ವಿದ್ಯಾ ನಿಧಿ, ಉಚಿತ ಬಸ್ ಪಾಸ್, ಕಲಿಕಾ ಉಪಕರಣಗಳ ವಿತರಣೆ ಸೇರಿದಂತೆ ವಿವಿಧ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗಾಗಿ 23 ಲಕ್ಷ ಫಲಾನುಭವಿ ಮತ್ತು ಅವರ ಕುಟುಂಬಗಳಿಗೆ 1,785 ಕೋಟಿ ರೂ. ನೆರವು ನೀಡಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷಿಸಿದ್ದು, ಡಬಲ್ ಇಂಜಿನ್ ಸರ್ಕಾರ ಶ್ರಮಿಕರ ಏಳ್ಗೆಗೆ ಕಟಿಬದ್ಧವಾಗಿದ್ದು, ಕಾರ್ಮಿಕರ ಪರ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ”ಎಂದು ಸಚಿವ ಹೆಬ್ಬಾರ್ ಅಭಿಪ್ರಾಯಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಗೂ ಬಜೆಟ್‍ನಲ್ಲಿ ಆದ್ಯತೆ

“2023-24 ಮುಂಗಡ ಪತ್ರದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಕೊಡುಗೆ ನೀಡಲಾಗಿದೆ ಎಂದು ಹರ್ಷಿಸಿರುವ ಸಚಿವ ಹೆಬ್ಬಾರ್, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್, ಪ್ರಧಾನ ಮಂತ್ರಿ ಮತ್ಸ್ಯ ಬಂಡೆ ಯೋಜನೆಯಡಿ ಕೃತಕ ಬಂಡೆ ಸಾಲುಗಳ ನಿರ್ಮಾಣ, ಬಿತ್ತನೆ ಮೀನು ಮರಿ ದಾಸ್ತಾನಿಗೆ 20 ಕೋಟಿ ರೂ. ಪರಿಸರ ಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನ ವಿತರಣೆ, ದೋಣಿಗಳ ಸಂರಕ್ಷಣೆಗೆ ಅನುದಾನ, ಇಸ್ರೋದ ಜಿಪಿಎಸ್‍ ಅಳವಡಿಕೆಗೆ ಆದ್ಯತೆ 10 ಸಾವಿರ ಮೀನುಗಾರರಿಗೆ ವಸತಿ ಸೌಕರ್ಯ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಗೆ ಬಜೆಟ್‍ನಲ್ಲಿ ಕೊಡುಗೆ ನೀಡಲಾಗಿದೆ” ಎಂದು ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ.

ಇದನ್ನೂ ಓದಿ: Amitabh Bachchan: ಅಮಿತಾಭ್‌ ಬೆಲ್ ಬಾಟಮ್‌ ಪ್ಯಾಂಟ್‌ನಲ್ಲಿ ಹರಿದಾಡಿತ್ತಂತೆ ಇಲಿ!

“ಸೀಮೆ ಎಣ್ಣೆ ದೋಣಿಗಳಿಗೆ ಪೆಟ್ರೋಲ್/ ಡೀಸೆಲ್ ಇಂಜಿನ್ ಅಳವಡಿಕೆಗೆ ಸಹಾಯ ಧನ, ಡೀಸೆಲ್ ಮಿತಿ 2 ಲಕ್ಷ ಕಿ.ಮೀಗೆ ಏರಿಕೆ, ಡಿಬಿಟಿ ಮೂಲಕ ಸೀಮೆ ಎಣ್ಣೆ ಸಹಾಯ ಧನ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ, “ಮತ್ಸ್ಯ ಸಿರಿ” ಯೋಜನೆಯಡಿ ದೋಣಿಗಳ ನಿರ್ಮಾಣ, ಐಐಟಿ ಮಾದರಿ ಕಾರವಾರ ಎಂಜಿನಿಯರಿಂಗ್ ಕಾಲೇಜ್ ಉನ್ನತೀಕರಣ, ಕಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದ ನಾರಾಯಣ ಗುರು ವಸತಿ ಶಾಲೆ, 250 ಕೋಟಿ ರೂ. ವೆಚ್ಚದಲ್ಲಿ 500 ಕಾಲು ಸಂಕಗಳ ನಿರ್ಮಾಣ, ಕಾರವಾರ ಜಿಲ್ಲೆಯಲ್ಲಿ ಹೊಸ ವಿಮಾನ ನಿಲ್ದಾಣ ಆರಂಭ ಹೀಗೆ ರಾಜ್ಯ ಬಜೆಟ್‍ನಲ್ಲಿ ಜಿಲ್ಲೆಗೆ ಹಲವು ಕೊಡುಗೆಗಳನ್ನು ನೀಡಲಾಗಿದೆ” ಎಂದಿದ್ದಾರೆ.

ಹೀಗೆ ಆರೋಗ್ಯ, ಮೂಲ ಸೌಕರ್ಯ, ಮೀನುಗಾರಿಕೆ, ಕನ್ನಡ ಮತ್ತು ಸಂಸ್ಕೃತಿ, ಪ್ರವಾಸೋದ್ಯಮ, ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯ ಅಡಿಯಲ್ಲಿ ಜಿಲ್ಲೆಯಲ್ಲಿ ವಿವಿಧ ಯೋಜನೆಗಳ ಜಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಾಗಿದ್ದು, ಇದಕ್ಕೆ ಸಚಿವ ಶಿವರಾಂ ಹೆಬ್ಬಾರ್ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ಕಾಡಾನೆ ರಕ್ಷಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಪಶುವೈದ್ಯರ ಶ್ಲಾಘಿಸಿದ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

karnataka Weather Forecast: ಸುಡುವ ಬಿಸಿಲಿನಲ್ಲೂ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣ ಇದ್ದರೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ಹಲವೆಡೆ ಗುಡುಗು ಸಹಿತ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸಚೂನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಉಳಿದೆಡೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರವಾದ ಮಳೆಯಾಗಬಹುದು. ಮಲೆನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಧಗೆಯು ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶವು 39ರ ಗಡಿದಾಟಲಿದೆ. ಇದರಿಂದಾಗಿ ಉರಿ ಬಿಸಿಲು ಜನರನ್ನು ಹೈರಾಣಾಗಿಸಲಿದೆ.

ಇದನ್ನೂ ಓದಿ: Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

ಹೀಟ್‌ ವೇವ್‌

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ತಾಪಮಾನ ಹೆಚ್ಚಳ ಇರಲಿ ಎಚ್ಚರ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Lok Sabha Election: ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ.

VISTARANEWS.COM


on

Lok Sabha Election
Koo

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ ಕಾರಣಕ್ಕೂ ಒಪ್ಪದ ಮೋದಿ (Narendra modi) ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ ಹೇಳಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಅವರು ಇಂದು ಪ್ರಜಾಧ್ವನಿ-02 ಲೋಕಸಭಾ ಚುನಾವಣಾ ಪ್ರಚಾರ (Lok Sabha Election) ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿ ಸಂಯುಕ್ತ ಪಾಟೀಲ್ ಅವರ ಪರವಾಗಿ ಮತದಾರರಲ್ಲಿ ಮತ ಯಾಚಿಸಿ ಮಾತನಾಡಿದರು.

ಬಸವಣ್ಣ ಹುಟ್ಟಿದ ಸ್ಥಳವಾಗಿರುವ ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆಯನ್ನು ಈ ಬಜೆಟ್ ನಲ್ಲಿ ಘೋಷಿಸಲಾಗಿದೆ. 2013 ರಲ್ಲಿ ಬಸವಣ್ಣನವರ ಜನ್ಮದಿಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನವನ್ನು ಸ್ವೀಕರಿಸಿದ್ದೇನೆ. ನನಗೆ ಬಸವಾದಿ ಶರಣರ ತತ್ವಾದರ್ಶಗಳ ಮೇಲೆ ಅಪಾರ ನಂಬಿಕೆಯಿದೆ. ಶರಣರ ಹಾದಿಯಲ್ಲಿ ನಡೆಯುವ ಪ್ರಯತ್ನ ಮಾಡುತ್ತಿದ್ದೇನೆ. ಬಸವಣ್ಣನವರ ವಿಚಾರಧಾರೆಯನ್ನು ಪಾಲಿಸಬೇಕೆಂಬ ಉದ್ದೇಶದಿಂದ ಅವರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಇಡಬೇಕೆಂದು ಆದೇಶ ಮಾಡಿದೆ. ಜಾತಿ ವರ್ಗ ವ್ಯವಸ್ಥೆ ತೊಲಗಿ ಸಮಾನತೆ ಸ್ಥಾಪನೆಯಾಗಿ, ಜಾತ್ಯಾತೀತ ಸಮಾಜ ನಿರ್ಮಾಣವಾಗಬೇಕೆಂಬ ಆಶಯವನ್ನು ಬಸವಣ್ಣನವರು ಹೊಂದಿದ್ದರು. ವಿಶ್ವಗುರು ಬಸವಣ್ಣನವರನ್ನು ‘ಸಾಂಸ್ಕೃತಿಕ ನಾಯಕ’ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ಈ ಕಾರ್ಯವನ್ನು ಬಿಜೆಪಿಯಿಂದ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರಾಗಲಿ ಮಾಡಲಿಲ್ಲ ಎಂದರು.

ಮೋದಿಯವರು ಕಂಬಳಿ ಹಾಕಿಕೊಂಡು ಮಾಡಿದ ಭಾಷಣ ಕೇವಲ ನಾಟಕ

ಕಾಂಗ್ರೆಸ್ ನವರು ಶಿವಾಜಿ ಮಹಾರಾಜರು ಹಾಗೂ ಕಿತ್ತೂರು ರಾಣಿ ಚೆನ್ನಮ್ಮನಿಗೆ ಗೌರವ ನೀಡಲಿಲ್ಲ ಎಂದು ಮೋದಿಯವರು ಸುಳ್ಳು ಹೇಳಿದ್ದರು , ಆದರೆ ಸರ್ಕಾರದ ವತಿಯಿಂದ ಕಿತ್ತೂರು ಚೆನ್ನಮ್ಮ ದಿನಾಚರಣೆಯನ್ನು ಆಚರಿಸಬೇಕೆಂಬ ಆದೇಶವನ್ನು ಮಾಡಿದ್ದು ನಮ್ಮ ಕಾಂಗ್ರೆಸ್ ಸರ್ಕಾರವೇ. ಮೋದಿಯವರು ಕರಿಕಂಬಳಿ ವೇಷ ಹಾಕಿಕೊಂಡು ಭಾಷಣ ಮಾಡಿರುವುದು ಕೇವಲ ನಾಟಕವೇ ಹೊರತು, ಕುರುಬ ಸಮುದಾಯದ ಮೇಲಿನ ಪ್ರೀತಿಯಿಂದಲ್ಲ. ಇವರ ವೇಷ ಭೂಷಣ ನಾಟಕಗಳು ಭಾರತೀಯರಿಗೆ ಈಗ ಅರ್ಥವಾಗಿದೆ ಎಂದರು.

ಕರ್ನಾಟಕದ 28 ಲೋಕಸಭಾ ಚುನಾವಣೆಯಲ್ಲಿ ಒಬ್ಬ ಕುರುಬ ಸಮುದಾಯದವರಿಗಾದರೂ ಟಿಕೇಟನ್ನು ಬಿಜೆಪಿಯ ಮೋದಿ ನೀಡಿಲ್ಲ , ಒಬ್ಬ ಮುಸಲ್ಮಾನನಿಗಾಗಲಿ, ಒಬ್ಬ ಕ್ರಿಶ್ಚಯನ್ನರಿಗಾಗಲಿ ಟಿಕೇಟು ನೀಡಿಲ್ಲ. ಏಕೆಂದರೆ ಬಿಜೆಪಿಯವರಿಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೇ ಇಲ್ಲ ಎಂದರು.

ಬಿಜೆಪಿ ರೈತ ಸಾಲ ಮನ್ನಾ ಮಾಡಿಲ್ಲ

ಸ್ವಾಮಿನಾಥನ್ ವರದಿ ಜಾರಿಯಾಗದೇ , ರೈತರು ತಮ್ಮ ಬೆಳೆಗಳಿಗೆ ನ್ಯಾಯಯುತ ಬೆಲೆ ನೀಡಲು ಹೋರಾಟ ಮಾಡುತ್ತಲೇ ಇದ್ದಾರೆ. ಈ ಹೋರಾಟದಲ್ಲಿ 700 ಕ್ಕೂ ಹೆಚ್ಚು ರೈತರು ಮೃತಪಟ್ಟರು. ಮೋದಿಯವರು 10 ವರ್ಷಗಳ ಪ್ರಧಾನಿಯ ಅವಧಿಯಲ್ಲಿ ಒಮ್ಮೆಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, 76 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಿದರು. ನಾನು ಸಿಎಂ ಆದ ನಂತರ 27 ಲಕ್ಷ ರೈತರಿಗೆ 8165 ಕೋಟಿ ರೈತ ಸಾಲ ಮನ್ನಾ ಮಾಡಿದೆ. ಬಿಜೆಪಿಯವರು ರೈತ ಸಾಲ ಮನ್ನಾ ಮಾಡಲೇ ಇಲ್ಲ. ಯಡಿಯೂರಪ್ಪನವರು ‘ರೈತ ಸಾಲ ಮನ್ನಾ ಮಾಡಲು ಮನವಿ ಮಾಡಿದಾಗ,’ನಮ್ಮಲ್ಲಿ ನೋಟು ಪ್ರಿಂಟ್ ಮಾಡುವ ಮಷೀನು ಇಲ್ಲ ’ ಎಂದಿದ್ದರು. ರೈತ ಸಾಲ ಮನ್ನಾ ಮಾಡದಿದ್ದ ಮೋದಿಯವರು ದೇಶದ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಮೋದಿಯವರು ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸದೇ ‘ಸುಳ್ಳಿನ ಸರದಾರ’ ಆಗಿದ್ದಾರೆ ಎಂದರು.

ಇದನ್ನೂ ಓದಿ: Lok Sabha Election : ಮೋದಿ ಗ್ಯಾರಂಟಿ ಪಡೆಯಲು ಜೋಶಿ ಗೆಲ್ಲಿಸಿ; ಏಕನಾಥ ಶಿಂಧೆ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಗ್ಯಾರಂಟಿ ಯೋಜನೆಗಳು ಎಲ್ಲ ಜಾತಿ ಧರ್ಮದವರಿಗೆ ತಲುಪುತ್ತಿದೆ. ಶಕ್ತಿ ಯೋಜನೆ ಸೇರಿದಂತೆ ಎಲ್ಲ ಗ್ಯಾರಂಟಿಗಳಿಗೆ ರಾಜ್ಯದ ಮಹಿಳೆಯರಿಂದ ಹೆಚ್ಚಿನ ಪ್ರಶಂಸೆ ದೊರೆತಿದೆ ಎಂದರು.

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ

ಮೀಸಲಾತಿಯಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನರೇಂದ್ರ ಮೋದಿಯವರು ದಲಿತರಿಗೆ, ಹಿಂದುಳಿದವರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕಾಂಗ್ರೆಸ್ ಕೊಡುತ್ತಾರೆ ಎಂದು ಸುಳ್ಳು ತಮ್ಮ ಪ್ರಚಾರ ಭಾಷಣದಲ್ಲಿ ಹೇಳುತ್ತಾರೆ. ಮೋದಿಯವರು ನಮ್ಮ ಸಂವಿಧಾನವನ್ನು ಓದಬೇಕು. ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಜಾತಿ ಧರ್ಮ ಭೇದವಿಲ್ಲದೆ ಎಲ್ಲರೂ ಮೀಸಲಾತಿಗೆ ಅರ್ಹರು ಎಂದು ಸಂವಿಧಾನ ಸ್ಪಷ್ಟವಾಗಿ ಹೇಳುತ್ತದೆ. ನರೇಂದ್ರ ಮೋದಿಗೆ ದಲಿತರು, ಹಿಂದುಳಿದವರನ್ನು ಮುಸಲ್ಮಾನರ ವಿರುದ್ಧ ಎತ್ತಿ ಕಟ್ಟುತ್ತಾ ದ್ವೇಶದ ರಾಜಕಾರಣ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಗ್ಯಾರಂಟಿ ಗಳನ್ನು ಜಾರಿಗೆ ತಂದ ಮೇಲೆ ಸರ್ಕಾರದಲ್ಲಿ ಸಂಬಳ ಕೊಡಲು ದುಡ್ಡಿಲ್ಲ ಎಂದು ಸುಳ್ಳು ಹೇಳಿದ್ದಾರೆ. ಅವರಿಗೆ ಕರ್ನಾಟಕದ ಹಣಕಾಸಿನ ಪರಿಸ್ಥಿತಿ ಗೊತ್ತಿದೆಯೋ ಇಲ್ಲವೋ ತಿಳಿದಿಲ್ಲ.ಖಜಾನೆ ಖಾಲಿಯಾಗಿದ್ದರೆ ನಾವು ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಾಗುತ್ತಿ ತ್ತೇ? 36000 ಕೋಟಿ ರೂಗಳನ್ನು ವೆಚ್ಚ ಮಾಡಲು ಸಾಧ್ಯವಾಗುತ್ತಿತ್ತೆ. ಯಾರಾದರೂ ಸರ್ಕಾರಿ ನೌಕರ ನಮಗೆ ಸಂಬಳ ನಿಂತುಹೋಗಿದೆ ಎಂದರೆ ನಾನು ರಾಜಕೀಯ ನಿವೃತಿ ಪಡೆಯುತ್ತೇನೆ. ಸುಳ್ಳು ಹೇಳಲು ಇತಿಮಿತಿ ಇರಬೇಕು ಎಂದರು.

ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು.

1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಹಾಗೂ ಗ್ಯಾರಂಟಿಗಳಿಗೆ ಮೀಸಲಿರಿಸಲಾಗಿದೆ ನರೇಂದ್ರ ಮೋದಿಯವರೇ ಎಂದರು. ಕಾಂಗ್ರೆಸ್ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಮೊದಲು ಗ್ಯಾರಂಟಿ ಜಾರಿ ಮಾಡಿದರೆ ಆರ್ಥಿಕವಾಗಿ ದಿವಾಳಿಯಾಗುತ್ತಾರೆ ಎನ್ನುತ್ತಿದ್ದವರು ಈಗ ಚುನಾವಣೆ ಯಾಗುವರೆಗೆ ಮಾತ್ರ ಗ್ಯಾರಂಟಿಗಳು ಇರಲಿವೆ ಎನ್ನುತ್ತಿದ್ದಾರೆ. ಅಪಪ್ರಚಾರವನ್ನು ಬಿಜೆಪಿ ಕೂಡಲೇ ನಿಲ್ಲಿಸಬೇಕು. ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು. ಇದು ನಿರಂತರ. ಜನ ಆಶೀರ್ವದಿಸಿ ಮತ್ತೆ ಅಧಿಕಾರ ಕೊಟ್ಟರೇ ಮುಂದೆಯೂ ಜಾರಿಯಾಗಲಿದೆ ಎಂದರು.

ಸಾಮಾಜಿಕವಾಗಿ ಶಕ್ತಿ ತುಂಬುವವರು

ಮೋದಿಯವರು ಲೂಟಿ ಹೊಡೆಯುವ ಗ್ಯಾಂಗ್ ಬಂದಿದೆ ಎಂದಿದ್ದಾರೆ. ನಾವು ಲೂಟಿ ಹೊಡೆಯುವವರಲ್ಲ. ಈ ರಾಜ್ಯದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ತುಂಬುವವರು. ಸಮಾಜದ ಮುಖ್ಯವಾಹಿನಿಗೆ ಅವರು ಬರಬೇಕೆಂದು ನಂಬಿಕೆ ಇಟ್ಟವರು ಕಾಂಗ್ರೆಸ್ ನವರು . ಲೂಟಿ ಮಾಡಲು ಬಂದಿದ್ದವರು ಬಿಜೆಪಿಯವರು ಎಂದರು.

40% ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ

ಗುತ್ತಿಗೆದಾರರ ಸಂಘದವರು 40% ಸರ್ಕಾರ ಎಂದು ಹೇಳಿದ್ದರು. ಇದರ ತನಿಖೆಗೆ ಆಯೋಗ ಈಗಾಗಲೇ ರಚನೆಯಾಗಿ ತನಿಖೆ ನಡೆಯುತ್ತಿದೆ. ಆರೋಪ ಸಾಬೀತಾದರೆ ಲೂಟಿ ಹೊಡೆದ ಗ್ಯಾಂಗ್ ನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ಮತ ಹಾಕುವ ಮುನ್ನ ನುಡಿದಂತೆ ಯಾರು ನಡೆದಿದ್ದಾರೆ ಎಂದು ಮತದಾರರು ಪರಿಶೀಲಿಸಬೇಕು ಎಂದರು.

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ

ಕೇಂದ್ರ ಸರ್ಕಾರದಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. ಅವನ್ನೂ ಭರ್ತಿ ಮಾಡಿಲ್ಲ.ಭರ್ತಿ ಮಾಡಿದ್ದರೆ ದಲಿತರು ಹಿಂದುಳಿದವರಿಗೆ 50% ಮೀಸಲಾತಿ ದೊರೆಯುತ್ತಿತ್ತು. ಉಳಿದದ್ದು ಇತರರಿಗೆ ದೊರೆಯುತ್ತಿತ್ತು. ನರೇಂದ್ರ ಮೋದಿಯವರು ಅದನ್ನೂ ಮಾಡಲಿಲ್ಲ. ಎಲ್ಲಾ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಇವನ್ನು ಕಡಿಮೆ ಮಾಡುವುದಾಗಿ ಹೇಳಿದ್ದರು. ಯಾವುದರ ಬೆಲೆಯೂ ಕಡಿಮೆ ಮಾಡಲು ಆಗಲಿಲ್ಲ. ಒಳ್ಳೆಯ ದಿನಗಳು ಬರುತ್ತವೆ ಎಂದು ಹೇಳಿ ಹತ್ತು ವರ್ಷ ಗಳಾದರೂ ಬಡವರ ಜೀವನ ಸುಧಾರಣೆ ಆಗಲಿಲ್ಲ. ಬದಲಿಗೆ ಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ರೈತರು ವ್ಯವಸಾಯಕ್ಕೆ ವೆಚ್ಚ ಮಾಡುವ ಹಣ ಮೂರು ಪಟ್ಟು ಹೆಚ್ಚಾಯಿತು ಹೊರತು ಆದಾಯ ದುಪ್ಪಟ್ಟು ಆಗಲಿಲ್ಲ. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

Continue Reading

ಪ್ರಮುಖ ಸುದ್ದಿ

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

ಬೆಂಗಳೂರಿನಲ್ಲಿ ಹಗಲಡೀ 38 ಡಿಗ್ರಿ ಸೆಲ್ಸಿಯಸ್​ ತಾಪಮಾನವಿತ್ತು. ಸಂಜೆ ವೇಳೆ ಜೋಉ ಗಾಳಿಯೊಂದಿಗೆ ಮಳೆ ಬಂತು. ಮಳೆ ಜೋರಾಗಿರಲಿಲ್ಲ ಗಾಳಿಯ ವೇಗ ಮಿತಿ ಮೀರಿತ್ತು. ಹೀಗಾಗಿ ಕೊಂಬೆಗಳು ಉರುಳಿ ಬಿದ್ದವು. ಕೊಡಿಗೆಹಳ್ಳಿಯ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಸಂಜೆ ವೇಳೆ ಮರ ಬಿದ್ದು ಬೈಕ್ ಸವಾರ ಗಾಯಗೊಂಡಿದ್ದಾನೆ. ಅವರು ಮರ ಬಿದ್ದ ರಭಸಕ್ಕೆ ಆಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

VISTARANEWS.COM


on

Rain News
Koo

ಬೆಂಗಳೂರು: ಮಿತಿಮೀರಿದ ತಾಪಮಾನದಿಂದ ಬೇಸತ್ತಿದ ಬೆಂಗಳೂರಿನ ಮಂದಿಗೆ ಗುರುವಾರ ಸಂಜೆ ಸುರಿದ ಸಣ್ಣ ಮಳೆ ಸಮಾಧಾನ (Rain News) ತಂದಿತು. ಆದರೆ, ಮಳೆಗಿಂತ ಅಧಿಕ ಗಾಳಿಯೇ ಬೀಸಿದ ಕಾರಣ ಕೆಲವೆಡೆ ಸಣ್ಣ ಪುಟ್ಟ ಅನಾಹುತಗಳು ಸಂಭವಿಸಿದವು. ವಾಹನಗಳ ಮೇಲೆ ಮರದ ಕೊಂಬೆಗಳು ಬಿದ್ದು ಹಾನಿಗೊಂಡವು. ಬೈಕ್​ ಸವಾರರೊಬ್ಬರು ಏಟು ಬಿದ್ದು ಆಸ್ಪತ್ರೆ ಸೇರಿದರು. ಅದೇ ರೀತಿ ಮೊದಲ ಮಳೆಗೆ ಆಯಿಲ್​ ಬಿದ್ದಿದ್ದ ರಸ್ತೆಗಳು ಒದ್ದೆಯಾಗಿ 30ಕ್ಕೂ ಹೆಚ್ಚು ಬೈಕ್​ಗಳು ಸ್ಕಿಡ್ ಆಗಿ ಬಿದ್ದವು.

ಬೆಂಗಳೂರಿನಲ್ಲಿ ಹಗಲಿಡೀ 38 ಡಿಗ್ರಿ ಸೆಲ್ಸಿಯಸ್​ ತಾಪಮಾನವಿತ್ತು. ಸಂಜೆ ವೇಳೆ ಜೋಉ ಗಾಳಿಯೊಂದಿಗೆ ಮಳೆ ಬಂತು. ಮಳೆ ಜೋರಾಗಿರಲಿಲ್ಲ ಗಾಳಿಯ ವೇಗ ಮಿತಿ ಮೀರಿತ್ತು. ಹೀಗಾಗಿ ಕೊಂಬೆಗಳು ಉರುಳಿ ಬಿದ್ದವು. ಕೊಡಿಗೆಹಳ್ಳಿಯ ರೈಲ್ವೆ ಪ್ಯಾರಲ್ ರಸ್ತೆಯಲ್ಲಿ ಸಂಜೆ ವೇಳೆ ಮರ ಬಿದ್ದು ಬೈಕ್ ಸವಾರ ಗಾಯಗೊಂಡಿದ್ದಾನೆ. ಅವರು ಮರ ಬಿದ್ದ ರಭಸಕ್ಕೆ ಆಘಾತಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅದೇ ರೀತಿ ಕಾರಿನ ಮೇಲೆ ಮೇಲೆ ಮರ ಬಿದ್ದ ಪರಿಣಾಮ ಕಾರಿಗೆ ಹಾನಿಯಾಗಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಪೆಟ್ಟಾಗಿದೆ.

ಇದನ್ನೂ ಓದಿ: ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

ಕೆಲ ರಸ್ತೆಗಳು ಆಯಿಲ್‌ ಮಯ

ಸಂಜೆ ವೇಳೆ ಮಳೆ ಸುರಿದ ಕಾರಣ ಬೇಸಿಗೆಯಲ್ಲಿ ರಸ್ತೆ ಮೇಲೆ ಬಿದ್ದಿದ್ದ ಆಯಿಲ್ ಮೇಲಕ್ಕೆ ಬಂದು ನಿಂತಿತು. ಇದರಿಂದಾಗಿ ದ್ವಿಚಕ್ರ ವಾಹನಗಳು ಆಯತಪ್ಪಿ ಬಿದ್ದವು ಸಣ್ಣ ಮಳೆ ಬಿದ್ದ ಕಡೆಗಳಲ್ಲಿ ರಸ್ತೆಗಳಲ್ಲಿ ಆಯಿಲ್ ಕಾಣಿಸಿಕೊಂಡಿತು. ವಿಚಾರ ತಿಳಿಯದೆ ವೇಗವಾಗಿ ಹೋದ ಸ್ಕೂಟರ್​ಗಳು ಬಿದ್ದವು. ವಿಧಾನಸೌಧದ ಮುಂಭಾಗದ ರಸ್ತೆ , ಹಾಗು ಪೀಣ್ಯ ಎಲಿವೇಟೆಡ್ ಫ್ಲೈ ಓವರ್ , ಸಿಐಡಿ ಮುಂಭಾಗದ ರಸ್ತೆಯಲ್ಲಿ ಅವಾಂತರ ನಡೆಯಿತು.

ರಸ್ತೆ ಮೇಲೆ ಮಣ್ಣು ಹಾಕಿ ದ್ವಿಚಕ್ರ ವಾಹನ ಸಂಚಾರಕ್ಕೆ ಪೊಲೀಸರು ಅವಕಾಶ ಮಾಡಿಕೊಟ್ಟರು.

Continue Reading

ರಾಜಕೀಯ

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election 2024: ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಅಭ್ಯರ್ಥಿ ಪರ ಮತಯಾಚಿಸಿದರು.

VISTARANEWS.COM


on

Election campaign for Congress candidate Samyukta Patil in Prajadhwani convention at Bagalkot
Koo

ಬಾಗಲಕೋಟೆ: ಇಲ್ಲಿನ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ (Lok Sabha Election 2024) ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading
Advertisement
Karnataka Weather Forecast
ಮಳೆ18 mins ago

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

Religious Freedom
ಸಂಪಾದಕೀಯ47 mins ago

ವಿಸ್ತಾರ ಸಂಪಾದಕೀಯ: ಅಮೆರಿಕದ ಬುದ್ಧಿಗೇಡಿಗಳ ವರದಿಯಲ್ಲಿ ಭಾರತದ ಬಗ್ಗೆ ಹಸಿ ಸುಳ್ಳುಗಳು

Health Tips Kannada
ಆರೋಗ್ಯ48 mins ago

Health Tips Kannada: ಕಣ್ಣಿನ ಕೆಳಗೆ ಕಪ್ಪಾಗಿದೆಯೇ? ಇಲ್ಲಿದೆ ಸರಳ ಮನೆಮದ್ದು

Dina Bhavishya
ಭವಿಷ್ಯ2 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Lok Sabha Election
ಪ್ರಮುಖ ಸುದ್ದಿ7 hours ago

Lok Sabha Election : ಕುರುಬರಿಗೆ ಟಿಕೆಟ್ ಕೊಡದ ಮೋದಿ ಕಂಬಳಿ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ

Tsering Namgyal
ದೇಶ7 hours ago

Tsering Namgyal: ಲಡಾಕ್‌ನಲ್ಲಿ ತ್ಸೆರಿಂಗ್‌ ನಾಮ್‌ಗ್ಯಾಲ್‌ಗೆ ಟಿಕೆಟ್‌ ಕೊಟ್ಟ ಕಾಂಗ್ರೆಸ್; ಭಾರಿ ಹೈಡ್ರಾಮಾ

IPL 2024
ಪ್ರಮುಖ ಸುದ್ದಿ7 hours ago

IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

Ragini Khanna
ಸಿನಿಮಾ7 hours ago

Ragini Khanna: ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದಕ್ಕೆ ಕ್ಷಮೆ ಕೇಳಿದ ನಟ ಗೋವಿಂದ ಸೋದರ ಸೊಸೆ!

Rain News
ಪ್ರಮುಖ ಸುದ್ದಿ7 hours ago

Rain News : ಬೆಂಗಳೂರಿನಲ್ಲಿ ಸಂಜೆ ಸುರಿದ ಸಣ್ಣ ಮಳೆಗೆ ಕೆಲವೆಡೆ ಅನಾಹುತ

Election campaign for Congress candidate Samyukta Patil in Prajadhwani convention at Bagalkot
ರಾಜಕೀಯ8 hours ago

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ12 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌