Site icon Vistara News

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

Lacchi Poojarthi

ಉಡುಪಿ: ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಅವರಿಗೆ ಮಾತೃ ವಿಯೋಗವಾಗಿದೆ. ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) (Lacchi Poojarthi) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ನಿಧನರಾದರು.

ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಲಚ್ಚಿ ಪೂಜಾರ್ತಿ ಕೃಷಿಕರಾಗಿದ್ದರು. ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನ ಏರಿದ ಪ್ರತಿ ಸಂದರ್ಭದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಅವರು, ತಾಯಿ ಮನೆಗೆ ತೆರಳಿ ಆಶೀರ್ವಾದ ಪಡೆಯುತ್ತಿದ್ದರು. ಅಲ್ಲದೇ ಚುನಾವಣೆ ವೇಳೆ ತಾಯಿಯೊಂದಿಗೆ ತೆರಳಿ ಮತ ಚಲಾಯಿಸುತ್ತಿದ್ದರು. ಇನ್ನು ತಮ್ಮ ಯಶಸ್ಸಿನಲ್ಲಿ ತಾಯಿಯವರ ಪಾತ್ರ ಮಹತ್ವದ್ದು ಎಂದು ಯಾವಾಗಲೂ ಸ್ಮರಿಸುತ್ತಿದ್ದರು.

ಲಚ್ಚಿ ಪೂಜಾರ್ತಿ ಅವರ ನಿಧನಕ್ಕೆ ಕುಂದಾಪುರ ಶಾಸಕ ಕಿರಣ್‌ ಕುಮಾರ್‌ ಕೊಡ್ಲಿ, ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ, ಕಾರ್ಕಳ ಶಾಸಕ ಸುನೀಲ್‌ ಕುಮಾರ್‌ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ವಿಧಿವಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಪುತ್ರಿ (Veerappa Moily’s daughter ) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (Hamsa Moily) ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಪುತ್ರಿ ಹಂಸ ಮೊಯ್ಲಿ ಸಾವಿನ ಸುದ್ದಿ ತಿಳಿದು ಛತ್ತೀಸ್‌ಘಡದಲ್ಲಿದ್ದ ವೀರಪ್ಪ ಮೊಯ್ಲಿ ರಾತ್ರಿಯೇ ವಾಪಾಸ್ ಆಗಿದ್ದಾರೆ.

ಹಂಸ ಮೊಯ್ಲಿ ಅವರು ಭರತನಾಟ್ಯ ಕಲಾವಿದೆ ಆಗಿದ್ದರು. 46 ವರ್ಷದ ಹಂಸ ಮೊಯ್ಲಿ ಅವರು ಇತ್ತೀಚೆಗೆ ಅಸೌಖ್ಯದಿಂದ ಬಳಲುತ್ತಿದ್ದರು. ಭರತನಾಟ್ಯ ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಸಿನಿಮಾʻ ಶೃಂಗಾರಂʼನಲ್ಲಿ ನಟಿಸಿದ್ದರು.

ಇದನ್ನೂ ಓದಿ | Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

ಅನಾರೋಗ್ಯದಿಂದಾಗಿ ಏಕಾಏಕಿ ಬಳಲಿದ್ದ ಅವರು, ನಿನ್ನೆ ಸಂಜೆ ಅಸ್ವಸ್ಥರಾಗಿದ್ದರು. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವೀರಪ್ಪಮೊಯ್ಲಿ ಅವರ ಮೂರನೇ ಪುತ್ರಿಯಾಗಿದ್ದ ಹಂಸ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ʻಜನಾನುರಾಗಿʼ ಎಂಬ ಹೆಸರು ಪಡೆದಿದ್ದ ಅವರು, ತಮದೇ ಆದ ಚೌಕಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭರತ ನಾಟ್ಯ ಕಲಾವಿದರಾಗಿದ್ದ ಹಂಸ ಮೊಯ್ಲಿ ಅವರು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.

Exit mobile version