Site icon Vistara News

Lakshmi Hebbalkar: ಪೌಷ್ಟಿಕ ಆಹಾರ ತಯಾರಿಕೆ ಘಟಕಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ

Lakshmi Hebbalkar

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್‌ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು (Bengaluru News) ಪರಿಶೀಲಿಸಿದರು.

ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ‌ ತಯಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಯಾವುದೇ ಲೋಪದೋಷ ಆಗದಂತೆ, ಎಚ್ಚರ ವಹಿಸಿ ಆಹಾರ ಪದಾರ್ಥಗಳನ್ನು ಪೂರೈಸಲು ಸೂಚನೆ ನೀಡಿದರು. ಜತೆಗೆ ಪ್ರತಿಯೊಂದು ಆಹಾರ ಪದಾರ್ಥಗಳನ್ನು ಪರಿಶೀಲಿಸಿ, ಮಾಹಿತಿ ನೀಡಿದರು.

ಇದನ್ನೂ ಓದಿ: Nalanda University: ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ನಲ್ಲಿ ಏನೇನಿವೆ?

ಈ ವೇಳೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ. ಪ್ರಕಾಶ್, ಹಿರಿಯ ನಾಗರೀಕರ, ವಿಶೇಷ ಚೇತನರ ಇಲಾಖೆಯ ನಿರ್ದೇಶಕ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಎನ್.ಎಚ್. ನಿಶ್ಚಲ್, ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕ ಸಿದ್ದರಾಮಪ್ಪ ಉಪಸ್ಥಿತರಿದ್ದರು.

Exit mobile version