Site icon Vistara News

Lakshmi Hebbalkar : ಮಾನವೀಯತೆ ಮೆರೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್; ರಕ್ತದ ಮಡುವಲ್ಲಿ ಬಿದ್ದ ಯುವಕರು ಆಸ್ಪತ್ರೆಗೆ

Lakshmi Hebbalkar

ಚಾಮರಾಜನಗರ: ಬೈಕ್ ಹಾಗೂ‌ ಆಟೋ ಮುಖಾಮುಖಿ ಡಿಕ್ಕಿ ಹೊಡೆದ (Road Accident) ಪರಿಣಾಮ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ನರಳಾಡುತ್ತಿದ್ದ ಇಬ್ಬರು ಯುವಕರ ನೆರವಿಗೆ ಧಾವಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಾನವೀಯತೆಯ (Humanity of Minister) ಮೆರೆದಿದ್ದಾರೆ.

ಅಪಘಾತ ಸ್ಥಳದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್‌ ದೌಡು

ಗೃಹಲಕ್ಷ್ಮಿ ಯೋಜನೆ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಚಾಮರಾಜನಗರದಲ್ಲಿ ಆಯೋಜಿಸಲಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸಚಿವರು ಮಂಡ್ಯಕ್ಕೆ ತೆರಳುತ್ತಿದ್ದರು. ನಗರದ ಹೊರವಲಯದ ಸಂತೇಮರಳ್ಳಿ ಮುಖ್ಯ ರಸ್ತೆಯ ದೊಡ್ಡಪೇಟೆ ಕ್ರಾಸ್ ಬಳಿ ಬೈಕ್ ನಲ್ಲಿ ಚಲಿಸುತ್ತಿದ್ದ ಇಬ್ಬರು ಯುವಕರು ಆಟೋ‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಬಿದ್ದು ನರಳುತ್ತಿದ್ದರು.

Lakshmi hebbalkar

ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ಸಚಿವರು, ತಮ್ಮ ಕಾರನ್ನು ನಿಲ್ಲಿಸಿ ಆಂಬ್ಯುಲೆನ್ಸ್‌ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದರು. ಕೆಲಸದ ಒತ್ತಡದ ಮಧ್ಯೆಯೂ ಸಚಿವರು ಗಾಯಾಳುಗಳನ್ನು ಸಾಗಿಸಲು ಎಲ್ಲ ವ್ಯವಸ್ಥೆ ಮಾಡಿದರು.

ಬೇಗ ಬೇಗ, ಯಾರಾದ್ರೂ ಬನ್ನಿ ಎಂದ ಹೆಬ್ಬಾಳ್ಕರ್‌

ಕಾರಿನಲ್ಲಿ ತೆರಳುತ್ತಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಅಪಘಾತವಾದುದನ್ನು ನೋಡಿ ಕೂಡಲೇ ವಾಹನ ನಿಲ್ಲಿಸುವಂತೆ ಸೂಚಿಸಿದರು. ತಕ್ಷಣವೇ ಕೆಳಗಿಳಿದು ಬೇಗ ಬೇಗ ಬನ್ನಿ, ಆಸ್ಪತ್ರೆಗೆ ಸೇರಿಸೋಣ ಎಂದರು. ಜತೆಗೆ ಯಾರಾದ್ರೂ ನಾಲ್ಕು ಜನ ಬನ್ನಿ, ಕೂಡಲೇ ಬನ್ನಿ ಎಂದು ಕೇಳಿಕೊಂಡರು. ಅವರ ಮನವಿಗೆ ಜನರು ತಕ್ಷಣ ಸ್ಪಂದಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲು ನೆರವಾದರು.

ಅಪಘಾತ ಸ್ಥಳಕ್ಕೆ ಧಾವಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಈ ವೇಳೆ ಸ್ಥಳೀಯರು ದೊಡ್ಡಪೇಟೆ ಕ್ರಾಸ್ ನಲ್ಲಿ ಪದೇಪದೆ ಅಪಘಾತ ಸಂಭವಿಸುತ್ತಿದ್ದು, ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಮನವಿ ಮಾಡಿದರು. ಗಾಯಾಳುಗಳಿಗೆ ನೆರವಾದ ಸಚಿವರ ಮಾನವೀಯತೆ ಕಾರ್ಯ ಸ್ಥಳೀಯರು ಮೆಚ್ಚುಗೆ ಪಾತ್ರವಾಯಿತು.

ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಈ ಹಿಂದೆಯೂ ಹಲವು ಬಾರಿ ಈ ರೀತಿ ಜೀವನ್ಮರಣ ಹೋರಾಟದಲ್ಲಿದ್ದವರ ರಕ್ಷಣೆಗೆ ಧಾವಿಸಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಅವರು ತಾಯಿ ಮನಸ್ಸಿನಿಂದ ಪ್ರತಿಕ್ರಿಯಿಸುತ್ತಾರೆ ಎನ್ನುವುದು ಅವರ ಅಭಿಮಾನಿಗಳ ಮಾತು.

ಇದನ್ನೂ ಓದಿ: Lakshmi Hebbalkar : ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಾಕ್ಟರ್‌ ಆಗ್ಬೇಕು ಅಂತ ಆಸೆ ಇತ್ತಂತೆ! ಈಗ ಅದು ಬೇರೆ ರೀತಿಯಲ್ಲಿ ಈಡೇರಿದೆ!

ಗೃಹಲಕ್ಷ್ಮಿ ಸಭೆ ನಡೆಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಚಾಮರಾಜ ನಗರ: ಆಗಸ್ಟ್ 30ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಮರಾಜನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು.

ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಈ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Exit mobile version