ಕರ್ನಾಟಕ
Lalbagh Flower Show 2023 | ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ; ಉದ್ಯಾನ ನಗರಿಯ ಗತ ವೈಭವ ಮರುಸೃಷ್ಟಿಗೆ ಕ್ರಮ
ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಸಸ್ಯಕಾಶಿಯ ಫಲಪುಷ್ಪ (Lalbagh Flower Show 2023) ಪ್ರದರ್ಶನದಲ್ಲಿ ರಾಜಧಾನಿ ಬೆಂಗಳೂರಿನ ಇತಿಹಾಸದ ದರ್ಶನವನ್ನು ದೇಶ-ವಿದೇಶಿ ಹೂಗಳ ಚಿತ್ತಾರದೊಂದಿಗೆ ಕಣ್ತುಂಬಿಕೊಳ್ಳಬಹುದು.
ಬೆಂಗಳೂರು: ಬೆಂಗಳೂರು ಉದ್ಯಾನ ನಗರ ಎಂದು ಈಗಾಗಲೇ ಪ್ರಸಿದ್ಧಿಯಾಗಿದೆ. ಅಭಿವೃದ್ಧಿಯಲ್ಲಿ ಈ ಹೆಸರು ಹಿಂದೆ ಸರಿದಿದ್ದು, ಮತ್ತೊಮ್ಮೆ ಉದ್ಯಾನ ನಗರದ ಗತ ವೈಭವವನ್ನು ಮರುಕಳಿಸುವಂತೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವನ್ನು (Lalbagh Flower Show 2023) ಉದ್ಘಾಟಿಸಿ ಮಾತನಾಡಿದರು.
ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನಕಲಾ ಸಂಘದ ವತಿಯಿಂದ ಲಾಲ್‍ಬಾಗ್‌ನ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ 20ರಿಂದ ಶುರುವಾಗಲಿದೆ. ಈ ಬಾರಿ ರಾಜಧಾನಿ ಬೆಂಗಳೂರು ನಗರದ ಇತಿಹಾಸದ ದರ್ಶನವಾಗಲಿದೆ.
ಉದ್ಯಾನನಗರ ಹೆಸರು ಕಾಯಂ
ಬೆಂಗಳೂರಿನ ಲಾಲ್ ಬಾಗ್, ಕಬ್ಬನ್ ಪಾರ್ಕ್ ಸೇರಿದಂತೆ ಪ್ರಮುಖ ಉದ್ಯಾನಗಳನ್ನು ಉತ್ತಮವಾಗಿಟ್ಟುಕೊಂಡು ಬಿಬಿಎಂಪಿ ನಿರ್ವಹಿಸುವ ಹೊಸ ಉದ್ಯಾನವನಗಳಲ್ಲಿ ಹೆಚ್ಚಿನ ಸಸ್ಯ ಸಂಪತ್ತನ್ನು ಬೆಳೆಸುವುದು ಹಾಗೂ ಹೊರವಲಯದಲ್ಲಿ ಹೊಸ ಉದ್ಯಾನಗಳನ್ನು ನಿರ್ಮಿಸುವ ಮೂಲಕ ಉದ್ಯಾನ ನಗರ ಹೆಸರನ್ನು ಖಾಯಂ ಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ತಿಳಿಸಿದರು.
ರಾಜ್ಯದಲ್ಲಿ ಹಸಿರು ಪದರ ವಿಸ್ತರಣೆಯಾಗಬೇಕು
ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ಅತ್ಯಂತ ಜನಪ್ರಿಯವಾಗಿದ್ದು, ಪ್ರತಿ ವರ್ಷ ಲಕ್ಷಾಂತರ ಜನ ಭೇಟಿ ನೀಡುತ್ತಾರೆ. ಈ ಬಾರಿ 10- 15 ಲಕ್ಷ ಜನ ಬರುವ ನಿರೀಕ್ಷೆ ಇದೆ. ಅದಕ್ಕಾಗಿ ತೋಟಗಾರಿಕಾ ಇಲಾಖೆ ವ್ಯವಸ್ಥೆ ಗಳನ್ನು ಮಾಡಿಕೊಂಡಿದೆ. ಫಲಪುಷ್ಪ ಎಲ್ಲರಿಗೂ ಬಹಳ ಪ್ರಿಯವಾಗಿರುವಂಥದ್ದು, ಇಲ್ಲಿ ಪ್ರದರ್ಶನದ ಮುಖಾಂತರ ರಾಜ್ಯದ ಸಸ್ಯಸಂಪತ್ತು ಎಷ್ಟು ದೊಡ್ಡದಿದೆ, ವಿಭಿನ್ನ, ವಿಸ್ತಾರವಾಗಿದೆ ಎಂದು ಪ್ರದರ್ಶನವಾಗುತ್ತದೆ.
ಸಸ್ಯಸಂಪತ್ತನ್ನು ಬೆಳೆಸುವುದು ನಮ್ಮ ಉದ್ದೇಶ. ರಾಜ್ಯದಲ್ಲಿ ಹಸಿರು ಪದರ ವಿಸ್ತರಣೆಯಾಗಬೇಕು. ಅದಕ್ಕಾಗಿ ಹಸಿರು ಆಯವ್ಯಯವನ್ನು ರೂಪಿಸಲಾಗಿದೆ. 100 ಕೋಟಿ ರೂ.ಗಳನ್ನು ಹಸಿರು ವಿಸ್ತರಣೆಗಾಗಿ ಮೀಸಲಿರಿಸಿದೆ. ಅದರ ಅನುಷ್ಠಾನವೂ ಆಗುತ್ತಿದೆ. ಗುಡ್ಡಗಾಡು ಪ್ರದೇಶಗಳ ಸಂಪೂರ್ಣ ಹಸಿರು ಮಾಡಿ ಪರಿಸರ ಸಮತೋಲನ ಕಾಯ್ದುಕೊಳ್ಳಲು ರಾಜ್ಯದಲ್ಲಿ ಪ್ರಥಮ ಬಾರಿಗೆ ದೊಡ್ಡ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಇದರ ಜೊತೆಗೆ ತೋಟಗಾರಿಕೆ ವಿಸ್ತರಣೆಯೂ ಆಗಬೇಕು. ಲಾಲ್ ಬಾಗ್ ನಿಂದ ಹಿಡಿದು ರಾಜ್ಯದೆಲ್ಲೆಡೆ ತೋಟಗಾರಿಕೆ ಇದೆ. ಇವುಗಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ರೂಪಿಸುತ್ತಿದ್ದು, ಬಜೆಟ್ ನಲ್ಲಿ ಅನುದಾನ ನೀಡಬೇಕೆನ್ನುವ ಚಿಂತನೆಯೂ ಇದೆ. ತೋಟಗಾರಿಕೆಯಿಂದ ಹಸಿರು ಹೆಚ್ಚುವುದರ ಜತೆಗೆ ಅಲ್ಲಿ ಉತ್ಪಾದನೆ, ಉತ್ಪನ್ನ ಹೆಚ್ಚಾಗುತ್ತದೆ ಹಾಗೂ ಪೌಷ್ಟಿಕ ಆಹಾರವನ್ನು ಒದಗಿಸಲು ಸಾಧ್ಯವಿದೆ. ದೊಡ್ಡ ಪ್ರಮಾಣದಲ್ಲಿ ತೋಟಗಾರಿಕೆಯನ್ನು ವಿಸ್ತರಿಸಿ, ಫಾರ್ಮ್‌ಗಳನ್ನು ಬೆಳೆಸುವ ಕೆಲಸವನ್ನು ಸರ್ಕಾರ ಮಾಡುತ್ತದೆ ಎಂದರು.
ಜನ ಫಲಪುಷ್ಪಗಳನ್ನು ಬೆಳೆಸಲು ಪ್ರಯತ್ನಿಸಬೇಕು
ಜನ ಫಲಪುಷ್ಪ ಪ್ರದರ್ಶನದ ಲಾಭ ಪಡೆಯಲಿ ಹಾಗೂ ತಮ್ಮದೇ ರೀತಿಯಲ್ಲಿ ಫಲಪುಷ್ಪಗಳನ್ನು ಬೆಳೆಸಲು ತಮ್ಮ ಪ್ರಯತ್ನ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ತೋಟಗಾರಿಕಾ ಸಚಿವ ಮುನಿರತ್ನ, ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ ಮೊದಲಾದವರು ಉಪಸ್ಥಿತರಿದ್ದರು.
11 ದಿನಗಳ ಫ್ಲವರ್ ಶೋ
ಜನವರಿ 20ರಿಂದ 30 ರವರಗೆ ಒಟ್ಟು 11 ದಿನಗಳ ಕಾಲ ಫ್ಲವರ್ ಶೋ ನಡೆಯಲಿದೆ. ಈ ಬಾರಿ ಒಟ್ಟು 112 ಪುಷ್ಪ ಡೋಮ್‌ಗಳ ಪ್ರದರ್ಶನವಿದ್ದು, ಹಾಲೆಂಡ್, ಕೊಲಂಬಿಯಾ, ಇಸ್ರೇಲ್, ಚಿಲಿ, ನೆದರ್‌ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾ, ಯಥೋಪಿಯಾ ಸೇರಿದಂತೆ 11 ವಿದೇಶಗಳ 69 ಜಾತಿಯ ಹೂಗಳನ್ನು ಪ್ರದರ್ಶಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಡಾರ್ಜಿಲಿಂಗ್‌ನ ಸಿಂಬಡಿಯ ಆರ್ಕಿಡ್ಸ್ ಹೂವು ಈ ಬಾರಿಯ ಪ್ರಮುಖ ಆಕರ್ಷಣೆ ಆಗಿದೆ. ತೋಟಗಾರಿಕೆ ಇಲಾಖೆ ವತಿಯಿಂದಲೇ 6 ಲಕ್ಷ ಹೂವಿನ ಕುಂಡಗಳನ್ನು ಪ್ರದರ್ಶಿಸಲಾಗುತ್ತಿದೆ. ಬೆಂಗಳೂರು ಇತಿಹಾಸದ ಪ್ರತಿಬಿಂಬವಾಗಿ ಲಾಲ್ ಬಾಗ್ ಬಂಡೆ, ವರ್ಟಿಕಲ್ ಗಾರ್ಡನ್ ರೂಪದಲ್ಲಿ ಗಡಿ ಗೋಪುರ, ಕಾಡುಮಲ್ಲೇಶ್ವರ ದೇವಾಲಯ, ಟಿಪ್ಪುವಿನ ಬೇಸಿಗೆ ಅರಮನೆ, ಹೈಕೋರ್ಟ್, ಬೆಂಗಳೂರು ಅರಮನೆ, ವಿಧಾನಸೌಧದ ಕಲಾಕೃತಿಗಳು ಬಣ್ಣ ಬಣ್ಣದ ಹೂಗಳ ನಡುವೆ ಅರಳಿವೆ.
ಇದನ್ನೂ ಓದಿ | KSOU Admission : ಮುಕ್ತ ವಿವಿ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ
ಕರ್ನಾಟಕ
Cauvery Protest: ಸಿಲಿಕಾನ್ ಸಿಟಿಯಲ್ಲೂ ಕಾವೇರುತ್ತಿದೆ ಕಾವೇರಿ ಕಿಚ್ಚು; ಇಂದು ಬೆಂಗಳೂರು ಬಂದ್ ಫಿಕ್ಸ್?
ಕಳೆದ ಮೂರು ದಿನಗಳಿಂದ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ (Cauvery protest) ಮಾಡುತ್ತಿದ್ದಾರೆ. ಇಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ (Karnataka bundh) ದಿನಾಂಕವೂ ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರು: ರಾಜಧಾನಿಯಲ್ಲಿ ಇಂದು ಕಾವೇರಿ ನೀರಿನ (Cauvery dispute) ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ (Supreme court) ಪ್ರತಿಭಟಿಸಿ ಸಾಲು ಸಾಲು ಪ್ರತಿಭಟನೆಗಳು (Cauvery Protest) ನಡೆಯಲಿವೆ. ಬೆಂಗಳೂರು ಮತ್ತು ಕರ್ನಾಟಕ ಬಂದ್‌ಗೂ ಇಂದೇ ದಿನ ಫಿಕ್ಸ್ ಆಗುವ ಸಾಧ್ಯತೆ ಇದೆ.
ಕಾವೇರಿಗಾಗಿ ಇಂದು ಕನ್ನಡಪರ ಹೋರಾಟಗಾರರು ರೋಡಿಗಿಳಿಯಲಿದ್ದು, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿದ್ದಾರೆ. ಕಳೆದ ಮೂರು ದಿನಗಳಿಂದ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ ದಿನಾಂಕವೂ ಘೋಷಣೆ ಮಾಡುವ ಸಾಧ್ಯತೆ ಇದೆ.
ಕರ್ನಾಟಕ ಜಲಸಂರಕ್ಷಣಾ ಸಮಿತಿಯಿಂದ ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂಪಾರ್ಕ್‌ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ 100ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿವೆ. ಬೆಂಗಳೂರಿನ ಪ್ರಮುಖ ಅಪಾರ್ಟ್ಮೆಂಟ್ ಅಸೋಸಿಯೇಷನ್, ಲೇಔಟ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ, ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಐಟಿ ಕಂಪನಿಗಳು ಭಾಗಿಯಾಗಲಿವೆ. ಸಭೆ ಬಳಿಕ ಹೋರಾಟದ ರೂಪುರೇಷೆಯ ಬಗ್ಗೆ ನಿರ್ಧಾರವಾಗಲಿದೆ.
ಹಲವು ಪ್ರತಿಭಟನೆಗಳು
ರಾಜಧಾನಿಯಲ್ಲಿ ಇಂದು ಹಲವು ಸಂಘಟನೆಗಳಿಂದ ಪ್ರಮುಖ ಪ್ರತಿಭಟನೆಗಳು ನಡೆಯಲಿವೆ.
1) ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದಿಂದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಕುವೆಂಪು ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಲಿದ್ದು ಕರವೇಯ ನೂರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
2) ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಬೆಳಿಗ್ಗೆ 10 ಗಂಟೆಗೆ ಕರ್ನಾಟಕ- ತಮಿಳುನಾಡು ಅತ್ತಿಬೆಲೆ ಗಡಿ ಬಂದ್ ಆಗಲಿದ್ದು, ಕರವೇಯ ಸಾವಿರಾರು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
3) ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬೆಂಗಳೂರಿನಿಂದ ಬೆಳಿಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ನಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.
4) ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನಿಂದ ಬೆಳಿಗ್ಗೆ 11.30ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಯಲಿದೆ.
5) ಮಧ್ಯಾಹ್ನ 1-30 ಕ್ಕೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರುಗಳಾದ ಪ್ರವೀಣ್ ಕುಮಾರ್ ಶೆಟ್ಟಿ, ಶಿವರಾಮೇಗೌಡ, ಕನ್ನಡಸೇನೆಯ ರಾಜ್ಯಾಧ್ಯಕ್ಷ ಕೆ.ಆರ್ ಕುಮಾರ್, ಕನ್ನಡ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ದೇವ್, ಕನ್ನಡಪರ ಹೋರಾಟಗಾರ ಹೆಚ್.ವಿ ಗಿರೀಶ್ ಗೌಡ ಸೇರಿದಂತೆ ಅನೇಕ ಕನ್ನಡಪರ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ: Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್
ಉಡುಪಿ
Chaitra Kundapura : ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಸೀಜ್ ಆಗಿದ್ದು 3.67 ಕೋಟಿ, ಹಾಲಶ್ರೀಯ ಐಷಾರಾಮಿ ಕಾರು ನೋಡಿದ್ರಾ?
Chaitra Kundapura : ಚೈತ್ರಾ ಕುಂದಾಪುರ ಗ್ಯಾಂಗ್ ಮಾಡಿದ ವಂಚನೆಯಲ್ಲಿ ಇದುವರೆಗೆ ಒಟ್ಟು 3.67 ಕೋಟಿ ಮೌಲ್ಯದ ವಸ್ತು, ನಗದನ್ನು ವಾಪಸ್ ಪಡೆಯಲಾಗಿದೆ. ಜಮೀನು ಮತ್ತು ಇತರ ವಿಚಾರಗಳ ಲೆಕ್ಕಾಚಾರ ಆಗಿಲ್ಲ.
ಬೆಂಗಳೂರು: ಉದ್ಯಮಿ ಗೋವಿಂದ ಪೂಜಾರಿ (Govinda poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ (Bynduru BJP Ticket) ಕೊಡಿಸುವುದಾಗಿ ಐದು ಕೋಟಿ ರೂ. ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್‌ನಿಂದ ಈಗಾಗಲೇ ಸಾಕಷ್ಟು ಪ್ರಮಾಣದ ನಗದು, ಚಿನ್ನಾಭರಣ ಮತ್ತು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೀಗೆ ವಶಪಡಿಸಿಕೊಳ್ಳಲಾದ ನಗದು ಮತ್ತು ವಸ್ತುಗಳ ಒಟ್ಟು ಮೌಲ್ಯ ಸುಮಾರು 3.67 ಕೋಟಿ ರೂ! (Money and gold worth 3.67 Crores) ಅಂದರೆ ಗೋವಿಂದ ಪೂಜಾರಿಗೆ ವಂಚಿಸಿದ ಮೊತ್ತದಲ್ಲಿ ಸುಮಾರು ಶೇಕಡಾ 75ರಷ್ಟನ್ನು ಮರಳಿ ಪಡೆಯಲಾಗಿದೆ. ಡಿಸಿಪಿ ಅಬ್ದುಲ್ ಅಹ್ಮದ್ ಹಾಗೂ ಎಸಿಪಿ ರೀನಾ ಸುವರ್ಣಾ ನೇತೃತ್ವದ ತಂಡದಿಂದ ವಿಚಾರಣೆ ನಡೆದ ವೇಳೆ ಮಾಹಿತಿ ಪಡೆದು ದಾಳಿ ಮಾಡಿ ಇವುಗಳನ್ನು ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಆರೋಪಿಗಳು ಖರೀದಿಸಿರುವ ಜಮೀನು ಮತ್ತಿತರ ವಿಚಾರಗಳು ಸೇರಿಲ್ಲ.
ಇತರೆ ವಂಚನೆ ಪ್ರಕರಣಗಳಿಗೆ ಹೋಲಿಸಿದರೆ ಬಿಜೆಪಿ ಟಿಕೆಟ್ ವಂಚನೆ ಪ್ರಕರಣದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚು ಜಪ್ತಿ ಆಗಿದೆ ಎನ್ನಲಾಗಿದೆ. ಒಟ್ಟಾರೆ ಹಣದಲ್ಲಿ 23 ಲಕ್ಷ ಮೌಲ್ಯದ ಚಿನ್ನಾಭರಣಗಳಿವೆ.
ಹಾಗಿದ್ದರೆ ಯಾರ ಕೈಯಿಂದ ಎಷ್ಟೆಷ್ಟು ಸಿಕ್ಕಿದೆ ಎಂಬುದರ ವಿವರ ಇಲ್ಲಿದೆ
ಚೈತ್ರಾ ಕುಂದಾಪುರ: ದಿ ಕಿಂಗ್ ಪಿನ್ (Chaitha kundapura: The Kingpin)
ಪ್ರಕರಣದ ನಂಬರ್ ಒನ್ ಆರೋಪಿಯಾಗಿರುವ ಚೈತ್ರಾ ಕುಂದಾಪುರ ಕೈಯಿಂದ 81 ಲಕ್ಷ ನಗದು, 1.23 ಲಕ್ಷ ಮೌಲ್ಯದ ಚಿನ್ನಾಭರಣ, 1.8 ಕೋಟಿ ಮೊತ್ತದ ನಿಶ್ಚಿತ ಠೇವಣಿ, 12 ಲಕ್ಷ ಮೌಲ್ಯದ ಕಿಯಾ ಕಾರು ವಶವಾಗಿದೆ.
ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri Swameeji)
ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಅವರಿಗೆ ಸೇರಿದ ಸುಮಾರು 56 ಲಕ್ಷ ರೂ.ವನ್ನು ಮಠದಿಂದ ವಶಕ್ಕೆ ಪಡೆಯಲಾಗಿದೆ (ಮೈಸೂರಿನ ವಕೀಲ ಪ್ರಣವ್ ಪ್ರಸಾದ್ ಅಲ್ಲಿ ಇಟ್ಟುಬಂದ ಹಣ). ಪರಿಚಯಸ್ಥನ ಬಳಿ 25 ಲಕ್ಷ ರೂ. ಸಿಕ್ಕಿದೆ. 25 ಲಕ್ಷ ಮೌಲ್ಯದ ಇನ್ನೋವಾ ಕಾರು ವಶವಾಗಿದೆ.
ಗಗನ್ ಕಡೂರ್: ದ ಮಾಸ್ಟರ್ ಮೈಂಡ್ (Gagan Kadur : The Mastermind)
ಇಡೀ ಪ್ರಕರಣದ ಮಾಸ್ಟರ್ ಮೈಂಡ್ ಆಗಿರುವ, ವಂಚನೆಗೆ ಹಲವು ನಾಟಕಗಳನ್ನು ಹೆಣೆದ ನಿರ್ದೇಶಕ ಗಗನ್ ಕಡೂರು ಕೈಯಿಂದ 20 ಲಕ್ಷ ರೂ. ನಗದು ಸಿಕ್ಕಿದೆ. ಈತ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯೂ ಹೌದು.
ಧನರಾಜ್ ಹಾಗೂ ರಮೇಶ್: ನಾಟಕದ ಪಾತ್ರಧಾರಿಗಳು (Dhanaraj, Ramesh)
ಚಿಕ್ಕಮಗಳೂರಿನ ಐಬಿಯಲ್ಲಿ ಕುಳಿತು ನಾನೇ ಆರೆಸ್ಸೆಸ್ ಪ್ರಚಾರಕ್ ವಿಶ್ವನಾಥ್ ಜಿ ಎಂದು ಪರಿಚಯಿಸಿಕೊಂಡ ರಮೇಶ್ ಮತ್ತು ಅವನಿಗೆ ವೇಷ ಹಾಕಿಸಿದ ಇನ್ನೋವಾ ಚಾಲಕ ಧನರಾಜ್ ಕೈಯಿಂದ ಸಿಕ್ಕಿರುವ ಮೊತ್ತ ಆರು ಲಕ್ಷ ರೂ. ಇದು ನಾಟಕದಲ್ಲಿ ಪಾತ್ರ ಮಾಡಿದ್ದಕ್ಕಾಗಿ ಅವರಿಗೆ ಸಿಕ್ಕಿರುವ ಸಂಭಾವನೆ.
ಇದನ್ನೂ ಓದಿ: Chaitra Kundapura : ಚೈತ್ರಾ ಕುಂದಾಪುರ; ಯಾರಿವಳು ಫೈರ್‌ಬ್ರಾಂಡ್ ಹುಡುಗಿ?, ಆಕೆ ಟಿವಿ ನಿರೂಪಕಿ, ಉಪನ್ಯಾಸಕಿ ಆಗಿದ್ದಳು!
ಹಾಲಶ್ರೀ ಖರೀದಿಸಿದ್ದ ಕಾರು ಈಗ ಸಿಸಿಬಿ ಕಚೇರಿಯಲ್ಲಿ ಪಾರ್ಕಿಂಗ್
ಹಾಲಶ್ರೀ ಸ್ವಾಮೀಜಿ ತಾನು ವಂಚನೆ ನಡೆಸಿ ಪಡೆದ ಹಣದಲ್ಲಿ ಜಾಗ ಖರೀದಿ, ಪೆಟ್ರೋಲ್ ಪಂಪ್ ಖರೀದಿ ಮಾಡಿದ್ದರು. ಅದರ ಜತೆ ಒಂದು ಇನ್ನೋವಾ ಕ್ರಿಸ್ಟಾ ಕಾರನ್ನೂ ಖರೀದಿಸಿದ್ದರು. ಸುಮಾರು 25 ಲಕ್ಷ ಮೌಲ್ಯದ ಕಾರು ಸಿಸಿಬಿ ಕಚೇರಿಯ ಮುಂಭಾಗದಲ್ಲಿದೆ.
ಹಿರಿಯ ಸ್ವಾಮೀಜಿಯೊಬ್ಬರಿಂದ ಕಾರಿಗೆ ಪೂಜೆ ಮಾಡಿಸಿಕೊಂಡಿದ್ದ ಹಾಲಶ್ರೀ ಇತ್ತೀಚೆಗೆ ತಲೆಮರೆಸಿಕೊಳ್ಳುವ ಸಂದರ್ಭದಲ್ಲಿ ಕಾರನ್ನು ಮಠದಲ್ಲಿ ಅಡಗಿಸಿಟ್ಟಿದ್ದರು. ಸಿಕ್ಕಿಬಿಳುವ ಭಯದಿಂದ ಕಾರಿನ ನಂಬರ್ ಪ್ಲೇಟ್ ತೆಗೆದಿದ್ದರು. ಈ ನಡುವೆ ಈ ಕಾರು ಮೈಸೂರಿನಲ್ಲಿತ್ತು ಎಂಬ ಮಾಹಿತಿಯೂ ಇದೆ.
ಕರ್ನಾಟಕ
Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್
ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಮಂಡ್ಯ: ಮಂಡ್ಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾವೇರಿ ಕಿಚ್ಚು (Cauvery Dispute) ಕಾವೇರಿದ್ದು, ಇಂದು ಮಂಡ್ಯ ಪೂರ್ತಿ ಬಂದ್ (Mandya Bundh) ಆಗಿದೆ. ವರ್ತಕರು ಸ್ವಯಂಪ್ರೇರಿತರಾಗಿ ಬಂದ್ ಮಾಡಿದ್ದಾರೆ. ಪ್ರತಿಭಟನಾಕಾರರು (Cauvery protest) ಮುಂಜಾನೆಯಿಂದಲೇ ಹೆದ್ದಾರಿಯಲ್ಲಿ ಮಲಗಿ, ಕಬ್ಬಿನ ಜಲ್ಲೆ ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಂದಿನ ಹೋರಾಟಕ್ಕೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದಾರೆ. ಇಂದಿನ ರೈತರ ಹೋರಾಟದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಸಿ.ಟಿ ರವಿ ಹಾಗೂ ಮಧ್ಯಾಹ್ನ 12ಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಿ ಮಂಡ್ಯದಲ್ಲಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹೋರಾಟದಲ್ಲಿ ಭಾಗಿಗಳಾಗಲಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗದಲ್ಲಿ ರೈತರ ಪ್ರತಿಭಟನೆ ಹಲವು ದಿನಗಳಿಂದ ನಡೆಯುತ್ತಿದೆ. ಇಂದು ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ. ಮಂಡ್ಯದ ಸಂಜಯ ವೃತ್ತದಲ್ಲಿ ಟೀ ತಯಾರಿಸಿ ಪ್ರತಿಭಟನೆಯನ್ನು ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಆಯೋಜಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಸುಪ್ರಿಂ ಕೋರ್ಟ್ ನೀಡಿರುವ ತೀರ್ಪಿನ ಪ್ರತಿಯಿಂದ ಟೀ ತಯಾರಿಸಿ ಪ್ರತಿಭಟನೆ ನಡೆಯಲಿದೆ. ಹಾಗೆಯೇ ಕಿವಿಗೆ ಹೂ ಮುಡಿದು, ಪಟ್ಟೆ ಪಟ್ಟೆ ಚಡ್ಡಿ ಧರಿಸಿಯೂ ಪ್ರತಿಭಟನೆಗೆ ನಿರ್ಧರಿಸಲಾಗಿದೆ.
ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ಭದ್ರತೆಗಾಗಿ 6 ಡಿಎಆರ್, 4 ಕೆ ಎಸ್ ಆರ್ ಪಿ ತುಕಡಿ ಜೊತೆಗೆ 200 ಜನ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾವಹಿಸಿದ್ದಾರೆ.
ಬೆಳಗೆಯಿಂದ ಕಾರ್ಯ ನಿರ್ವಹಿಸ್ತಿದ್ದ ಪೆಟ್ರೋಲ್ ಬಂಕ್‌ಗಳನ್ನು ಬೆಂಬಲ ನೀಡುವಂತೆ ಹಿತ ರಕ್ಷಣಾ ಸಮಿತಿ ಸದಸ್ಯರು ಬಂದ್ ಮಾಡಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ರ್ಯಾಪಿಡ್ ಆಕ್ಸನ್ ಪೋರ್ಸ್ ಆಗಮಿಸಿದ್ದು, ಮಂಡ್ಯದ ಸಂಜಯ ವೃತ್ತದಲ್ಲಿ ನಿಯೋಜಿಸಲಾಗಿದೆ. ಬೆಳವಣಿಗೆಗಳ ಮೇಲೆ ಭದ್ರತಾ ಸಿಬ್ಬಂದಿ ನಿಗಾ ವಹಿಸಿದ್ದಾರೆ. ಪ್ರತಿಭಟನೆ ತೀವ್ರಗೊಂಡಿದ್ದು, ಹೆದ್ದಾರಿಯಲ್ಲೇ ಮಲಗಿ ಪ್ರತಿಭಟಿಸುತ್ತಿದ್ದಾರೆ.
ಮದ್ದೂರು ಪಟ್ಟಣದಲ್ಲಿಯೂ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಸ್ವಯಂ ಪ್ರೇರಿತರಾಗಿ ಬಂದ್‌ಗೆ ಸಹಕರಿಸಲು ವರ್ತಕರು ನಿರ್ಧರಿಸಿದ್ದಾರೆ. ಮಂಡ್ಯ ಬಂದ್ ಹಿನ್ನೆಲೆಯಲ್ಲಿ ಮೆಡಿಕಲ್ ಶಾಪ್, ಹಾಲಿನ ಮಳಿಗೆಗಳು, ಹೋಟೆಲ್ ಸೇರಿ ಅತ್ಯಗತ್ಯ ಸೇವೆಗಳು ಮಾತ್ರ ಲಭ್ಯವಿವೆ. ಕೆ. ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಂದಿನಂತೆ ಸೇವೆ ಲಭ್ಯವಿದೆ.
“ಇಂದು ಮಂಡ್ಯ ರೈತ ಹಿತ ರಕ್ಷಣಾ ಸಮಿತಿ ಬಂದ್‌ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ತನಕ ಮಂಡ್ಯ ಸಂಪೂರ್ಣ ಬಂದ್ ಮಾಡಲಾಗುವುದು. ಬಂದ್‌ಗೆ ಸ್ವಯಂಪ್ರೇರಿತವಾಗಿ ಸಾರ್ವಜನಿಕರು ಬೆಂಬಲ ನೀಡಿದ್ದಾರೆʼʼ ಎಂದು ಜೆಡಿಎಸ್ ಮುಖಂಡ ಶ್ರೀಕಂಠೇ ಗೌಡ ಹೇಳಿದ್ದಾರೆ.
ಇದನ್ನೂ ಓದಿ: Cauvery Protest : ಮಂಡ್ಯದಲ್ಲಿ ಬೆಳಗ್ಗಿನಿಂದಲೇ ಜಲಾಕ್ರೋಶ; ತಮಿಳುನಾಡಿಗಷ್ಟೇ ಅಲ್ಲ ಬೆಂಗಳೂರಿಗೂ ನೀರು ಬಿಡಬೇಡಿ!
ಕರ್ನಾಟಕ
Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!
Halashri Swameeji : ಹಾಲಶ್ರೀ ಸ್ವಾಮೀಜಿಯ ಇನ್ನೊಂದು ದೋಖಾ ಬಯಲಾಗಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಅವರು ಪಿಡಿಒ ಒಬ್ಬರಿಗೆ ವಂಚನೆ ಮಾಡಲಾದ ಬಗ್ಗೆ ದೂರು ದಾಖಲಾಗಿದೆ. ಹಾಗಿದ್ದರೆ ಈ ಕೋಟಿ ಕುಳ ಪಿಡಿಒ ಯಾರು?
ಗದಗ: ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ (Bynduru BJP ticket) ಕೊಡಿಸುವುದಾಗಿ ಚೈತ್ರಾ ಕುಂದಾಪುರ (Chaitra Kundapura) ಗ್ಯಾಂಗ್ ಐದು ಕೋಟಿ ರೂ. ವಂಚಿಸಿದ ಪ್ರಕರಣ ಜಗಜ್ಜಾಹೀರಾಗಿದೆ. ಈ ಪ್ರಕರಣದ ಮೂರನೇ ಆರೋಪಿ ಹಿರೇಹಡಗಲಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri swameeji) ಈಗ ಇನ್ನೊಂದು ದೋಖಾ ಮಾಡಿದ ಮಾಹಿತಿ ಬಯಲಾಗಿದೆ. ಅವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ (Shirahatti BJP Ticket) ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(PDO-Panchayat development officer) ಒಬ್ಬರಿಂದ 1 ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಮುಂಡರಗಿ ಠಾಣೆಯಲ್ಲಿ (Mundargi Station) ಪ್ರಕರಣ ದಾಖಲಾಗಿದೆ.
ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯ್ತಿ ಪಿಡಿಒ ಆಗಿದ್ದ ಸಂಜಯ್ ಚಡವಾಳ (Sanjay Chadavala) ಅವರಿಗೇ ಈ ವಂಚನೆ ನಡೆದಿರುವುದು. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಜಯ್ ಅವರು ಹಾಲಶ್ರೀ ಅವರ ಜನಪ್ರಿಯತೆ, ಬಿಜೆಪಿ ನಾಯಕರ ಒಡನಾಟ ಕಂಡು ಅವರ ಮೂಲಕ ಟಿಕೆಟ್ ಪಡೆಯಬಹುದು ಎಂದು ಭಾವಿಸಿದ್ದರು. ಮಾತುಕತೆಯ ವೇಳೆ ಒಂದು ಕೋಟಿ ರೂ.ಗೆ ಡೀಲ್ ಆಗಿತ್ತು. ಸಂಜಯ್ ಒಂದು ಕೋಟಿ ರೂ. ಹಣವನ್ನು ಹಾಲಶ್ರೀ ಅವರಿಗೆ ನೀಡಿದ್ದರು ಎನ್ನಲಾಗಿದೆ.
ಆದರೆ, ಶಿರಹಟ್ಟಿ ಟಿಕೆಟ್ ಕೊಡಿಸುವಲ್ಲಿ ಹಾಲಶ್ರೀ ವಿಫಲರಾಗಿದ್ದರು. ಅದಾದ ಬಳಿಕ ಸಂಜಯ್ ತನ್ನ ಹಣ ವಾಪಸ್ ಕೊಡಬೇಕು ಎಂದು ಹಾಲಶ್ರೀ ಬೆನ್ನು ಬಿದ್ದಿದ್ದರು. ಆದರೆ, ಹಾಲಶ್ರೀ ದಿನ ದೂಡುತ್ತಲೇ ಇದ್ದರು. ಈ ನಡುವೆ, ಗೋವಿಂದ ಪೂಜಾರಿ ಪ್ರಕರಣ ಎದ್ದುಬಂದಿತ್ತು. ಸೆಪ್ಟೆಂಬರ್ 8ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಹಾಲಶ್ರೀ ತಮ್ಮ ಇನ್ನಷ್ಟು ಅಕ್ರಮಗಳು ಬಯಲಿಗೆ ಬರುವುದು ಬೇಡ ಎಂದು ಸಂಜಯ್ ಅವರಿಗೆ ಕರೆ ಮಾಡಿ ಹಣ ತೆಗೆದುಕೊಂಡು ಹೋಗುವಂತೆ ತಿಳಿಸಿದ್ದರು.
ಸಂಜಯ್ ಅವರು ಒಂದೆರಡು ದಿನ ಬಿಟ್ಟು ಹಣಕ್ಕಾಗಿ ಮಠಕ್ಕೆ ತೆರಳಿದರೆ ಅಷ್ಟು ಹೊತ್ತಿಗೆ ಹಾಲಶ್ರೀ ಮಠದಿಂದಲೇ ನಾಪತ್ತೆಯಾಗಿದ್ದರು. ಈ ವೇಳೆ ಸಂಜಯ್ ಅವರು ಹಾಲಶ್ರೀ ಚಾಲಕನ ಸಂಪರ್ಕ ಮಾಡಿದ್ದರು ಆಗ ಚಾಲಕ ಹಿರೇಹಡಗಲಿ ಮಠದಿಂದ ಮೈಸೂರಿನತ್ತ ತೆರಳಿ ಆಗಿತ್ತು.
ಈ ನಡುವೆ, ಹಾಲಶ್ರೀ ಕಾರು ಚಾಲಕ ಸಿಸಿಬಿ ಬಲೆಗೆ ಬಿದ್ದಿದ್ದ. ಈ ನಡುವೆ ಕಾರು ಚಾಲಕ ಮತ್ತು ಪಿಡಿಒ ಸಂಜಯ್ ನಡೆದಿರುವ ಮಾತುಕತೆ, ಫೋನ್ ಕಾಲ್ ಬೆನ್ನು ಹತ್ತಿ ಪಿಡಿಒ ಸಂಜಯ್‌ನನ್ನು ವಿಚಾರಣೆ ನಡೆಸಿದ್ದರು. ಆಗ ಹಾಲಶ್ರೀಯ ಇನ್ನೊಂದು ಹಗರಣ ಬೆಳಕಿಗೆ ಬಂದಿದೆ. ಸಿಸಿಬಿ ವಿಚಾರಣೆಯ ಬಳಿಕ ಸಂಜಯ್ ಈಗ ಮುಂಡರಗಿ ಠಾಣೆಗೆ ದೂರು ನೀಡಿದ್ದಾರೆ.
ಯಾರೀ ಕೋಟಿ ಕುಳ ಸಂಜಯ್, ದೂರಿನಲ್ಲೇನಿದೆ?
ಸಂಜಯ್ ಚವಡಾಳ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರು. ಎಸ್ ಸಿ (ಮಾದಿಗ) ಸಮುದಾಯಕ್ಕೆ ಸೇರಿದವರು. ಎಸ್ ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸುವ ಆಸಕ್ತಿಹೊಂದಿದ್ದ ಸಂಜಯ್ ಅರುಂಧತಿ ಫೌಂಡೇಷನ್ ಹೆಸರಲ್ಲಿ ಸಾಮಾಜಿಕ ಸೇವೆ ಮಾಡುತ್ತಿದ್ದರು. ಒಬ್ಬ ಪಿಡಿಒ ಆಗಿ ಕೋಟಿಗಟ್ಟಲೆ ಹಣ ಕೊಟ್ಟು ಟಿಕೆಟ್ ಪಡೆಯುವಷ್ಟು ಗಟ್ಟಿ ಕುಳಾನಾ ಎನ್ನುವ ಪ್ರಶ್ನೆಗೆ ಸಂಪೂರ್ಣ ವಿಚಾರಣೆ ಬಳಿಕವೇ ಉತ್ತರ ಸಿಗಬೇಕಾಗಿದೆ. ಅವರ ಘನಾಂದಾರಿ ಕೆಲಸಗಳಿಗಾಗಿ ಅವರು ಕರ್ತವ್ಯ ಲೋಪದ ಆರೋಪದಲ್ಲಿ ಸದ್ಯ ಅಮಾನತುಗೊಂಡಿದ್ದಾರೆ.
ಇದನ್ನೂ ಓದಿ: Halashri Swameeji: ಹಾಲ ಮಠದ ಚರಿತ್ರೆಯಲ್ಲಿ ಕಪ್ಪು ಚುಕ್ಕೆ; ಕರ್ನಾಟಕದ ಯೋಗಿಯಾಗುವ ಕನಸು ಹೊತ್ತಿದ್ದ ಹಾಲಶ್ರೀ!
ಹಾಲಶ್ರೀಯಿಂದ ತನಗೂ ಕೋಟಿ ರೂಪಾಯಿ ವಂಚನೆ ಆಗಿರುವ ಬಗ್ಗೆ ಸಿಸಿಬಿ ವಿಚಾರಣೆಯಲ್ಲಿ ಹೇಳಿಕೊಂಡಿರುವ ಸಂಜಯ್ ಶಿರಹಟ್ಟಿ ಮೀಸಲು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಜನರ ಮುಂದೆ ಬಿಂಬಿಸಿಕೊಂಡಿದ್ದರು. ಟಿಕೆಟ್ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೊಂಡಿದ್ದರು.
ಸೆಪ್ಟೆಂಬರ್ 19 ನೇ ತಾರೀಕು ಮಧ್ಯರಾತ್ರಿ ಠಾಣೆ ಬಂದು ಸಂಜಯ್ ದೂರು ನೀಡಿದ್ದು ಅದರಲ್ಲಿ ಚುನಾವಣೆ ಮುಂಚಿತವಾಗಿ 1 ಕೋಟಿ ರೂಪಾಯಿ ಹಣವನ್ನು ಶ್ರೀಗಳಿಗೆ ನೀಡಿದ್ದಾಗಿ ಹೇಳಿದ್ದಾರೆ. ಮೂರು ಕಂತುಗಳಲ್ಲಿ ಹಣ ನೀಡಿದ್ದಾಗಿ ದೂರಿನಲ್ಲಿ ದಾಖಲಿಸಿದದಾರೆ. ಆದರೆ, ಸೂಕ್ತ ದಾಖಲೆ ಇಲ್ಲದ ಹಿನ್ನೆಲೆಯಲ್ಲಿ ಕೇವಲ ಎನ್ ಸಿಆರ್ ದಾಖಲಿಸಿ ಕಳುಹಿಸಿರುವ ಮುಂಡರಗಿ ಪೊಲೀಸರು, ದಾಖಲೆ ತೆಗೆದುಕೊಂಡು ಬರುವಂತೆ ಸೂಚಿಸಿದ್ದಾರೆ.
ದೂರು ನೀಡಿದ ಬಳಿಕ ಸಂಜಯ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಸಂಜಯ್. ಒಟ್ಟಿನಲ್ಲಿ ಹಾಲಶ್ರೀ ಮಾಡಿಕೊಂಡಿರುವ ಭಾನಗಡಿ ಒಂದೆರಡಲ್ಲ!
-
ಪ್ರಮುಖ ಸುದ್ದಿ24 hours ago
Lina Mukherjee: ಇಸ್ಲಾಮಿಕ್ ದೇಶದಲ್ಲಿ ಹಂದಿ ಮಾಂಸ ತಿಂದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ!
-
ಪ್ರಮುಖ ಸುದ್ದಿ15 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ21 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ5 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್18 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ17 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಕ್ರೈಂ17 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ಉಡುಪಿ14 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ