ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ನಗರದ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ ಆ.8ರಿಂದ 19ವರೆಗೆ 216ನೇ ಫಲಪುಷ್ಪ ಪ್ರದರ್ಶನ (Lalbagh Flower Show) ನಡೆಯಲಿದೆ. ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ (Dr BR Ambedkar) ಅವರ ಜೀವನಗಾಥೆಯ ಥೀಮ್ ನೋಡುಗರನ್ನು ರಂಜಿಸಲಿದ್ದು, ಆಗಸ್ಟ್ 8 ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಫ್ಲವರ್ ಶೋಗೆ ಚಾಲನೆ ನೀಡಲಿದ್ದಾರೆ.
ಈ ಬಗ್ಗೆ ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಾಮಲಾ ಇಕ್ಬಾಲ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಆಗಸ್ಟ್ 8 ರಿಂದ 19ವರೆಗೆ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಅಂಬೇಡ್ಕರ್ ಅವರ ಜೀವನ ಆಧಾರಿತ ಪುಷ್ಪ ಪ್ರದರ್ಶನ ಇರಲಿದ್ದು, ಆಗಸ್ಟ್ 8ರಂದು ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಇನ್ನು ಮುಖ್ಯ ಅತಿಥಿಯಾಗಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತ ಅಂಬೇಡ್ಕರ್ ಅವರು ಬರಲಿದ್ದಾರೆ ಎಂದ ತಿಳಿಸಿದ್ದಾರೆ.
ಸ್ವಾತಂತ್ರೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ವಿಷಯಾಧಾರಿತ ಹೂವಿನ ಪ್ರತಿಕೃತಿ ಕಣ್ಮನ ಸೆಳೆಯಲಿದೆ.
— DIPR Karnataka (@KarnatakaVarthe) July 9, 2024
ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್ 8 ರಿಂದ 19ರ ವರೆಗೆ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇದಕ್ಕಾಗಿ… pic.twitter.com/GXWB93YpOr
ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾತನಾಡಿ, ಈ ಬಾರಿ ಲಾಲ್‌ಬಾಗ್ ಪರಿಸರದಲ್ಲಿ ಭೀಮ ಸಂದೇಶ ಅನಾವರಣವಾಗಲಿದೆ. 12 ದಿನಗಳ ಕಾಲ 6 ಆಂಬ್ಯುಲೆನ್ಸ್ ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತೇವೆ. ಡೆಂಗ್ಯೂ ಆತಂಕ ಇರುವುದರಿಂದ ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಆಗಿತ್ತು, ಈ ಬಾರಿ ಅಂತಹ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು.
ಪ್ರವೇಶ ಶುಲ್ಕ ಎಷ್ಟು?
168 ವಿವಿಧ ಪ್ರಭೇದದ ಸಸ್ಯಗಳನ್ನು ನಾವೇ ಬೆಳೆದಿದ್ದೇವೆ. ದ್ವಿ ಚಕ್ರ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ, ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಆದಷ್ಟು ಮೆಟ್ರೋ ಬಳಸಬೇಕು. ಆನ್‌ಲೈನ್ ಟಿಕೆಟ್ ಕೂಡ ಲಭ್ಯವಿರುತ್ತದೆ. ಪ್ರವೇಶ ಶುಲ್ಕ ಮಕ್ಕಳಿಗೆ 30 ರೂ., ಸಾಮಾನ್ಯರಿಗೆ 100 ರೂ. ಇರಲಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರಲಿದೆ ಎಂದು ತೋಟಗಾರಿಕೆ ಇಲಾಖೆ ನಿರ್ದೇಶಕ ರಮೇಶ್ ಮಾಹಿತಿ ನೀಡಿದರು.
ಕಳೆದ ಬಾರಿ 60-70 ಲಕ್ಷ ಲಾಭ ಆಗಿದೆ.. ಈ ಬಾರಿ ಕೂಡ ಸಾಕಷ್ಟು ಆದಾಯ ಬರುವ ನಿರೀಕ್ಷೆ ಇದೆ. ವಾಕಿಂಗ್ ಬರುವವರು ಕೂಡ ಟಿಕೆಟ್ ತೆಗೆದುಕೊಂಡು ಬರಬೇಕು. ಪಾರ್ಕ್‌ನಲ್ಲಿ ಜೇನು ಹುಳುಗಳು ಇಲ್ಲ, ಎರಡು ವರ್ಷಗಳ ಹಿಂದೆ ಇತ್ತು, ಈಗ ಇಲ್ಲ. ಬಹುತೇಕ ಪ್ಲಾಸ್ಟಿಕ್ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಫಲಪುಷ್ಪ ಪ್ರದರ್ಶನದಲ್ಲಿ ಅರಳಲಿದೆ ಡಾ. ಅಂಬೇಡ್ಕರ್ ಜೀವನಗಾಥೆ!
ಈ ಬಾರಿ ರಾಜಧಾನಿಯ ಲಾಲ್‌ಬಾಗ್‌ನಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವ (Independence Day) ಫಲಪುಷ್ಪ ಪ್ರದರ್ಶನ (Lalbagh Flower Show) ಹಲವು ವಿಶೇಷತೆಗಳನ್ನು ಹೊಂದಿದೆ. ಮುಖ್ಯವಾಗಿ ಈ ಬಾರಿಯ ಥೀಮ್ ಹಾಗೂ ವಿಶೇಷ ಆಕರ್ಷಣೆ, ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (Dr BR Ambedkar) ಅವರ ಜೀವನಗಾಥೆ ನೋಡುಗರನ್ನು ರಂಜಿಸಲಿದೆ.
ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಗಸ್ಟ್‌ನಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನ (Lalbagh Flower Show) ವೀಕ್ಷಿಸಲು ಜನ ಕಾತರದಿಂದ ಕಾಯುತ್ತಾರೆ. ಪ್ರತಿ ವರ್ಷ ವಿಭಿನ್ನ ಥೀಮ್ನಲ್ಲಿ ಫ್ಲವರ್ ಶೋ ಆಯೋಜಿಸುವ ಮೂಲಕ ಲಾಲ್‌ಬಾಗ್‌ಗೆ ಅಸಂಖ್ಯಾತ ಜನರನ್ನು ಆಕರ್ಷಿಸಲಾಗುತ್ತದೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗಿ ಲಾಲ್‌ಬಾಗ್‌ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರ ಜೀವನ ಗಾಥೆಯನ್ನು ಬಿಂಬಿಸುವ ಪುಷ್ಪ ಪ್ರದರ್ಶನ ಆಯೋಜಿಸಲಾಗುತ್ತಿದ್ದು, ವಿದೇಶಿ ಹಾಗೂ ಸ್ವದೇಶಿ ಹೂಗಳಿಂದ ಈ ಬಾರಿಯ ಫ್ಲವರ್ ಶೋ ಕಂಗೊಳಿಸಲಿದೆ.
ಈ ಸಲ ಲಾಲ್‌ಬಾಗ್‌ನಲ್ಲಿ ನಡೆಯಲಿರುವ ಫ್ಲವರ್ ಶೋಗೆ (Lalbagh Flower Show) ಸುಮಾರು 3 ಕೋಟಿ ರೂಪಾಯಿ ವೆಚ್ಚವಾಗಲಿದೆ. ಈಗಾಗಲೇ ಸಿದ್ಧತೆಗಳನ್ನು ಆರಂಭಿಸಿದ್ದು, ಹೂಗಳ ಆಯ್ಕೆ ನಡೆಯುತ್ತಿದೆ. ಎಂದಿನಂತೆ ಆಂಥೋರಿಯಂ, ಲಿಲ್ಲಿ, ಆರ್ಕಿಡ್, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್ ಹೂಗಳು, ರೆಡ್‌ಹಾಟ್ ಪೋಕರ್, ಆಲ್‌ಸ್ಟೋಮೇರಿಯನ್ ಲಿಲ್ಲಿ, ಪೂಷಿಯಾ, ಅಗಪಾಂಥಸ್, ಸೈಕ್ಲೋಮನ್, ಕ್ಯಾಲಾಲಿಲ್ಲಿ, ಸುಗಂಧ ರಾಜ ಮುಂತಾದ ಹೂಗಳಿಂದ ಅಂಬೇಡ್ಕರ್ ಅರಳಲಿದ್ದಾರೆ. 10-12 ದೇಶಗಳಿಂದ ಹೂಗಳನ್ನು ತರಿಸಿಕೊಳ್ಳಲಾಗುತ್ತದೆ. ಕೊಲಂಬಿಯಾ, ನೆದರ್ ಲ್ಯಾಂಡ್ಸ್, ಬೆಲ್ಜಿಯಂ, ಕೀನ್ಯಾ, ಆಸ್ಟ್ರೇಲಿಯಾದಿಂದ ಹೂಗಳು ಲಾಲ್‌ಬಾಗ್‌ಗೆ ಆಗಮಿಸಲಿವೆ. ಫ್ಲವರ್ ಶೋನಲ್ಲಿ 60ಕ್ಕೂ ಹೆಚ್ಚು ಜಾತಿಯ ಹೂಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಒಟ್ಟು 15 ಲಕ್ಷದಷ್ಟು ಹೂಗಳನ್ನು ಬಳಕೆ ಮಾಡಿಕೊಳ್ಳುವ ಸಾಧ್ಯತೆ ಇದೆ. ಸದ್ಯ ಲಾಲ್ ಬಾಗ್ ಗಾರ್ಡನ್ನಲ್ಲಿ 4 ಸಾವಿರಕ್ಕೂ ಹೆಚ್ಚು ವಿವಿಧ ಬಗೆಯ ಹೂಗಳನ್ನು ಸಿದ್ಧಮಾಡಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ | Kannada New Movie: ಇದು ʼಎʼ ಅಲ್ಲ ʼಬಿʼ ಅಲ್ಲ ‘ಸಿ’ ಸಾಂಗ್! ಹಾಡು ರಿಲೀಸ್ ಮಾಡಿದ ಲೂಸ್ ಮಾದ
ಇದಲ್ಲದೇ ವಿವಿಧ ಬಗೆಯ ಆಕರ್ಷಕ ಬೋನ್ಸಾಯ್, ಇಕೆಬಾನ ಹಾಗೂ ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಗಳ ಪ್ರದರ್ಶನವೂ ಇರಲಿದೆ. ಸಧ್ಯ ಒಂದೊಂದೇ ವಿದೇಶಿ ಹೂಗಳನ್ನು ತರಿಸಿಕೊಳ್ಳಲಾಗುತ್ತಿದೆ ಎಂದು ಲಾಲ್‌ಬಾಗ್ ನಿರ್ದೇಶಕ ರಮೇಶ್ ತಿಳಿಸಿದ್ದಾರೆ. ಈ ವರ್ಷ ಸುಮಾರು 50 ಮಾದರಿಯ ಪ್ರದರ್ಶನಕ್ಕೆ ಸಲಹೆಗಳು ಬಂದಿದ್ದು ಅಂತಿಮವಾಗಿ ಅಂಬೇಡ್ಕರ್ ಅವರ ಥೀಮ್ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಹಿಂದೆ ಭಕ್ತಿ ಭಂಡಾರಿ ಬಸವಣ್ಣ ಮತ್ತು ಹೆಮ್ಮೆಯ ನಟ ಪುನೀತ್ ರಾಜ್ ಕುಮಾರ್ ಅವರ ಫಲಪುಷ್ಪ ಪ್ರದರ್ಶನ ನಡೆದಿತ್ತು.