Site icon Vistara News

Land Acquisition | ಕೈಗಾರಿಕೆ-ವಿಮಾನ ನಿಲ್ದಾಣಕ್ಕಾಗಿ ಭೂಸ್ವಾಧೀನ; ರೈತರಿಂದ ವಿರೋಧ, ಉಗ್ರ ಪ್ರತಿಭಟನೆ

bagalakote protest Land Acquisition murugesh nirani

ಬಾಗಲಕೋಟೆ: ವಿಮಾನ ನಿಲ್ದಾಣ ಮತ್ತು ಕೈಗಾರಿಕೆ ಸ್ಥಾಪನೆಗಾಗಿ ರಾಜ್ಯ ಸರ್ಕಾರದಿಂದ ನಡೆಯುತ್ತಿರುವ ಭೂಸ್ವಾಧೀನ (Land Acquisition) ಪ್ರಕ್ರಿಯೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ನಾಗರಿಕರು ಜಿಲ್ಲೆಯ ಹಲಕುರ್ಕಿ ಗ್ರಾಮದಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಬಾದಾಮಿ- ಕೆರೂರ- ಬಾಗಲಕೋಟೆ ಮಾರ್ಗ ಬಂದ್ ಮಾಡಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಸರ್ಕಾರದಿಂದ ನಡೆಯುತ್ತಿರುವ ಭೂಸ್ವಾಧೀನ ಕ್ರಮವನ್ನು ವಿರೋಧಿಸಿ ಗ್ರಾಮಸ್ಥರಿಂದ ರಸ್ತೆ ತಡೆ ನಡೆದಿದೆ. ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ. ಬಾದಾಮಿ- ಕೆರೂರ- ಬಾಗಲಕೋಟೆ ಮಾರ್ಗವನ್ನು ಬಂದ್‌ ಮಾಡಲಾಗಿರುವ ಕಾರಣ, ಸಂಚಾರ ಅಸ್ತವ್ಯಸ್ತವಾಗಿದ್ದು, ಪ್ರಯಾಣಿಕರು ತೀವ್ರವಾಗಿ ಪರದಾಡುವಂತಾಗಿದೆ.

ಸಚಿವ ನಿರಾಣಿ ವಿರುದ್ಧ ಆಕ್ರೋಶ, ಫೋಟೊಗೆ ಚಪ್ಪಲಿ ಹಾರ
ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಬಗ್ಗೆ ತೀವ್ರ ಆಕ್ರೋಶವನ್ನು ಹೊರ ಹಾಕಿರುವ ಗ್ರಾಮಸ್ಥರು, ಅವರ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದೇ ವೇಳೆ ಸಚಿವ ಮುರುಗೇಶ್ ನಿರಾಣಿ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭೂಸ್ವಾಧೀನ ಕ್ರಮವನ್ನು ಕೂಡಲೇ ಕೈಬಿಡಬೇಕು. ನಾವು ಯಾವುದೇ ಕಾರಣಕ್ಕೂ ನಮ್ಮ ಜಮೀನನ್ನು ಬಿಟ್ಟು ಕೊಡಲಾರೆವು. ಸರ್ಕಾರದ ಇದೇ ರೀತಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ | Video Viral | ಕುಮಟಾದಲ್ಲಿ ಮದ್ಯ ಸೇವಿಸಿ ತೂರಾಡಿ ರಂಪಾಟ‌ ಮಾಡಿದ ಶಿಕ್ಷಕ; ನಾಗರಿಕರ ಆಕ್ರೋಶ

Exit mobile version