Site icon Vistara News

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಕೇಸ್ : ಕೋರ್ಟ್​​ಗೆ ಹಾಜರಾದ ಬಿಎಸ್‌ವೈ

ಬಿಎಸ್‌ವೈ

ಬೆಂಗಳೂರು : ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಶನ್ ಕೇಸ್​ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಶುಕ್ರವಾರ) ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ ಹಾಜರಾದರು. ಬಿಎಸ್‌ವೈ ಪರ ವಕೀಲರು ಜಾಮೀನು ಕೋರಿ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಅರ್ಜಿ ವಿಚಾರಣೆ ನಡೆಸಲಾಯಿತು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಸೂಚನೆ ನೀಡಿ ವಿಚಾರಣೆಯನ್ನ ಜೂನ್ 18ಕ್ಕೆ ಮುಂದೂಡಿದರು.

2000-2001 ರಲ್ಲಿ ಐಟಿ ಪಾರ್ಕ್​ಗೆಂದು ಕೆಐಎಡಿಬಿಯಿಂದ ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಬಿ.ಎಸ್. ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆ ಡಿನೋಟಿಫಿಕೇಶನ್​ ಮಾಡಲಾಗಿತ್ತು. ಹೀಗಾಗಿ 2013ರಲ್ಲಿ ವಾಸುದೇವರೆಡ್ಡಿ ಎಂಬುವವರು ಠಾಣೆಯಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನ ಸಂಬಂಧ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೋರ್ಟ್​ ಸಮನ್ಸ್ ಜಾರಿಗೊಳಿಸಿತ್ತು. ಸದ್ಯ ಈಗ ಇದೇ ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್​ ಜೂನ್ 18ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಇದನ್ನು ಓದಿ| ಯಡಿಯೂರಪ್ಪ ಸರ್ಜಿಕಲ್‌ ಸ್ಟ್ರೈಕ್‌ ಫೇಲ್‌: ಬಿಜೆಪಿಯಲ್ಲಿ ಸಂತೋಷ್‌ ಮೇಲುಗೈ

Exit mobile version