Site icon Vistara News

ಬಿಬಿಎಂಪಿ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಕೆಯ ಕೊನೇ ದಿನಾಂಕ ಅ.31ಕ್ಕೆ ವಿಸ್ತರಣೆ

ಬಿಬಿಎಂಪಿ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಕೊನೇ ದಿನಾಂಕವನ್ನು ಅಕ್ಟೋಬರ್‌ 31ಕ್ಕೆ ವಿಸ್ತರಿಸಲಾಗಿದೆ.

ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಸಹಾಯ ಧನ, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌, ಅಂಧ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ ಸ್ಟಿಕ್‌ ನೀಡುವುದು ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕೊನೇ ದಿನಾಂಕವನ್ನು ಈ ಹಿಂದೆ ಸೆ.19ರಿಂದ ಅಕ್ಟೋಬರ್‌ 19ರವರೆಗೆ ಬಿಬಿಎಂಪಿ ವಿಸ್ತರಣೆ ಮಾಡಿತ್ತು. ಆದರೆ, ಯೋಜನೆಗಳಿಂದ ಹೆಚ್ಚಿನ ಫಲಾನುಭವಿಗಳಿಗೆ ಅನುಕೂಲವಾಗಲು ಕೊನೇ ದಿನಾಂಕವನ್ನು ಮತ್ತೆ ಅ.31ಕ್ಕೆ ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ | Bengaluru Road | ಬೆಂಗಳೂರು ರಸ್ತೆಯ ಒಂದು ಗುಂಡಿ ಮುಚ್ಚಲು 10 ಸಾವಿರ ರೂಪಾಯಿ ಬೇಕಾ?

Exit mobile version