Site icon Vistara News

CM Basavaraja Bommai : ಎಲ್ಲರಿಗೂ ಒಂದೇ ಕಾನೂನು, ರಾಹುಲ್‌ಗೂ ಅದೇ ಕಾನೂನು ಎಂದ ಬೊಮ್ಮಾಯಿ

BPL Card holders will get half liter nandini milk says BJP Manifesto

ಬೆಂಗಳೂರು: ʻʻದೇಶದಲ್ಲಿ ಎಲ್ಲರಿಗೂ ಒಂದೇ ಕಾನೂನು. ರಾಹುಲ್ ಗಾಂಧಿಗೆ ಒಂದು ಉಳಿದವರಿಗೆ ಇನ್ನೊಂದು ಎಂಬುದಿಲ್ಲ. ದೇಶದಲ್ಲಿ ಕಾನೂನು ವ್ಯವಸ್ಥೆಯಿದ್ದು ಕಾನೂನಿನ ಪ್ರಕಾರ ಎಲ್ಲಾ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದರು. ಅವರು ರಾಹುಲ್‌ ಗಾಂಧಿ ಅವರನ್ನು ಸಂಸತ್‌ ಸದಸ್ಯತ್ವದಿಂದ ಅನರ್ಹಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ಪ್ರತಿಕ್ರಿಯಿಸಿದರು.

ʻʻಏನು ಮಾತನಾಡಿದರೂ ನಡೆಯುತ್ತದೆ ಎನ್ನುವ ಭಾವನೆ ಇದೆ. ಅವರಿಗೆ ಸರಿಪಡಿಸಿಕೊಳ್ಳಲು ಅವಕಾಶವಿತ್ತು.
ಆದರೆ ಅವರು ಸರಿಪಡಿಸಿಕೊಳ್ಳಲಿಲ್ಲ. ವಿರೋಧ ಪಕ್ಷದದವರನ್ನ ಚುನಾವಣೆಯಲ್ಲಿ ಸೋಲಿಸಬೇಕು ಅಥವಾ ಸಂಸತ್ತಿನಲ್ಲಿ ಚರ್ಚೆ ಮಾಡಬೇಕು. ಅದು ಬಿಟ್ಟು ಹಾದಿಬೀದಿಯಲ್ಲಿ ವೈಯಕ್ತಿಕ ನಿಂದನೆ ಮಾಡಿ ಮಾತನಾಡಿದರೆ, ಖಂಡಿತವಾಗಿಯೂ ಅದಕ್ಕೆ ಕಾನೂನು ಇದೆʼʼ ಎಂದರು ಬೊಮ್ಮಾಯಿ

ʻʻರಾಹುಲ್ ಗಾಂಧಿ ಕೇವಲ ವ್ಯಕ್ತಿಯ ವಿರುದ್ಧ ಅಲ್ಲ. ಒಂದು ವರ್ಗದ ವಿರುದ್ಧ ಮಾತನಾಡಿದ್ದಾರೆ. ಬಹಳ ಜನರಿಗೆ ಇದರಿಂದ ನೋವಾಗಿದೆ. ಅವರಲ್ಲರೂ ಪ್ರಕರಣ ದಾಖಲಿಸಿದ್ದರು. ಅಂತಿಮವಾಗಿ ನ್ಯಾಯಾಲಯ ತೀರ್ಪು ನೀಡಿದೆʼʼ ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಮೊದಲ ಪಟ್ಟಿ ಬಿಡುಗಡೆಯಾಗಿರುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ. ಅದರಲ್ಲಿ ಹೊಸತನವೇನಿಲ್ಲ. ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಕಾದು ನೋಡಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆ ನಿಶ್ಚಿತ

ʻʻದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸುತ್ತಿದ್ದು, 10 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಪ್ರಧಾನಿ ಮೋದಿ ಅವರು ಬಿಜೆಪಿಯ ವಿಜಯದ ಕಹಳೆಯನ್ನು ಊದಲಿದ್ದಾರೆʼʼ ಎಂದರು. ಎಂದರು.
ಪ್ರಧಾನಿ ಮೋದಿಯ ದೊಡ್ಡ ಬಲ ನಮಗೆ ಇದೆ. ಡಬಲ್ ಇಂಜಿನ್ ಸರ್ಕಾರದ ಒಳ್ಳೆಯ ಕೆಲಸ ಇಟ್ಟುಕೊಂಡು ಜನರ ಆಶಿರ್ವಾದ ಪಡೆಯುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗುವುದು ನಿಶ್ಚಿತ. ಮೇ ತಿಂಗಳಲ್ಲಿ ಮತ್ತೊಮ್ಮೆ ವಿಜಯೋತ್ಸವಕ್ಕೆ ಮೋದಿಯವರನ್ನ ಕರೆಯುತ್ತೇವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Next CM: ಮುಂದಿನ ಸಿಎಂ ನಾನೇ ಎಂದು ಬೊಮ್ಮಾಯಿ ಹೇಳಿದ್ದರಲ್ಲಿ ತಪ್ಪೇನಿದೆ: ಬಿ.ಎಸ್‌. ಯಡಿಯೂರಪ್ಪ ಹೀಗೆ ಹೇಳಿದ್ದು ಯಾಕೆ?

Exit mobile version