ಮಂಡ್ಯ: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ (Kalladka Prabhakara Bhat) ನಿರೀಕ್ಷಣಾ ಜಾಮೀನು ಕೊಡಿಸಲು ವಾದಿಸಿದ್ದ ವಕೀಲರನ್ನು ಕಾಂಗ್ರೆಸ್ ಪಕ್ಷದಿಂದ ವಜಾ ಮಾಡಲಾಗಿದೆ.
ಶ್ರೀರಂಗಪಟ್ಟಣ ತಾಲೂಕು ಕಾಂಗ್ರೆಸ್‌ನ ಕಾನೂನು ಘಟಕದ ಅಧ್ಯಕ್ಷ ಡಿ.ಚಂದ್ರೇಗೌಡರನ್ನು ಪಕ್ಷದಿಂದ ವಜಾಗೊಳಿಸಿ ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷ ಗೌರಿಶಂಕರ್ ಆದೇಶ ನೀಡಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ಪಕ್ಷದ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಕಲ್ಲಡ್ಕ ಪ್ರಭಾಕರ್ ವಿರುದ್ಧ ಶ್ರೀರಂಗಪಟ್ಟಣದ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣದ ಸಂಬಂಧ ಅವರ ಪರವಾಗಿ ವಾದ ಮಂಡನೆ ಮಾಡಿದ್ದ ವಕೀಲ ಚಂದ್ರೇಗೌಡ, ಭಟ್ಟರಿಗೆ ಜಾಮೀನು ಕೊಡಿಸಿದ್ದರು. ಮುಸ್ಲಿಂ ಮಹಿಳೆಯರ ಕುರಿತು ಆಕ್ಷೇಪಾರ್ಹ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ಟರ ವಿರುದ್ಧ ಪ್ರಕರಣ ದಾಖಲಾಗಿತ್ತು. ಡಿಸೆಂಬರ್ 23ರಂದು ಶ್ರೀರಂಗಪಟ್ಟಣದ ಸಂಕೀರ್ತನಾ ಯಾತ್ರೆಯಲ್ಲಿ ಭಾಷಣ ಮಾಡಲಾಗಿತ್ತು.
ಪ್ರಕರಣದಲ್ಲಿ ಕಲ್ಲಡ್ಕ ಪ್ರಭಾಕರ್ ವಿರುದ್ಧ ವಾದ ಮಂಡನೆ ಮಾಡಿ ಜಾಮೀನು ಕೊಡಿಸಿರುವುದು ಪಕ್ಷದ ಕಾನೂನು ಘಟಕದ ನಿಯಮಗಳಿಗೆ ವಿರುದ್ಧವಾಗಿರುವುದರಿಂದ ಚಂದ್ರೇಗೌಡರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವುದಾಗಿ ಜಿಲ್ಲಾ ಕಾಂಗ್ರೆಸ್‌ನ ಕಾನೂನು ಘಟಕದ ಅಧ್ಯಕ್ಷ ತಿಳಿಸಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಕೇಸ್; ಕಲ್ಲಡ್ಕ ಪ್ರಭಾಕರ ಭಟ್‌ಗೆ ಜಾಮೀನು