Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ! - Vistara News

ಕರ್ನಾಟಕ

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

Karnataka Cabinet expansion: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ಮೂಲಕ ಇದೇ ಮೊದಲ ಬಾರಿಗೆ ಮಂತ್ರಿ ಪಟ್ಟ ಗಿಟ್ಟಿಸಿಕೊಂಡ ಖುಷಿಯಲ್ಲಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಅಜ್ಜಿಯಾಗಿದ್ದಾರೆ. ಒಂದೇ ದಿನ ಎರಡು ಸಂತಸದ ಸುದ್ದಿಯನ್ನು ಅವರು ಪಡೆದಂತಾಗಿದೆ.

VISTARANEWS.COM


on

Laxmi Hebbalkar oath taking as a minister
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ (Laxmi Hebbalkar) ಅವರಿಗೆ ಇಂದು ಶುಭ ಶನಿವಾರ. ಅವರು ಶನಿವಾರ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಮೊದಲ ಬಾರಿಗೆ ಮಂತ್ರಿ ಪಟ್ಟವನ್ನು ಅಲಂಕರಿಸಿದ್ದಾರೆ. ಇದೇ ವೇಳೆ ಅವರು ಅಜ್ಜಿಯೂ ಆಗಿದ್ದಾರೆ.

ಪುತ್ರ ಮೃಣಾಲ್ ಹಾಗೂ ಹಿತಾ ದಂಪತಿಗೆ ಹೆಣ್ಣು ಮಗು ಜನಿಸಿದೆ. ಈ ಮೂಲಕ ಇವರ ಮನೆಗೆ ಮತ್ತೊಂದು ಪುಟ್ಟ ಲಕ್ಷ್ಮಿ ಪ್ರವೇಶ ಆದಂತೆ ಆಗಿದೆ. ಒಂದು ಕಡೆ ಸಚಿವರಾಗಿರುವ ಖುಷಿಯಲ್ಲಿದ್ದ ಲಕ್ಷ್ಮಿ ಅವರಿಗೆ ಈ ಸುದ್ದಿಯು ಸಖತ್‌ ಖುಷಿ ಕೊಟ್ಟಿದೆ.

ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಸೊಸೆ ಹಿತಾ ಮೃಣಾಲ್ ಹೆಬ್ಬಾಳ್ಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ವಿಷಯವಾಗಿ ಅವರು ತಮ್ಮ ಆಪ್ತರ ಬಳಿ ಖುಷಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Karnataka Cabinet: ಸಂಪುಟದಲ್ಲಿ ಸೋತರೂ ಖಾತೆಯಲ್ಲಿ ಗೆದ್ದ ಡಿ.ಕೆ. ಶಿವಕುಮಾರ್‌: ಇಲ್ಲಿದೆ ಎಲ್ಲ ಸಚಿವರ ಖಾತೆಗಳ ಪಟ್ಟಿ

ಎರಡನೇ ಬಾರಿಯೇ ಬಂಪರ್‌

ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ ಎರಡನೇ ಬಾರಿಗೆ ವಿಜಯ ಸಾಧಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಅವರ ಸಂಪುಟ ಸೇರುವ ಅವಕಾಶ ಒದಗಿ ಬಂದಿದೆ. ಲಿಂಗಾಯತ ಕೋಟಾದಡಿ ಹೆಬ್ಬಾಳ್ಕರ್ ಅವರು ಸಂಪುಟ ಸೇರಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮಧ್ಯೆ ಏರ್ಪಟ್ಟಿದ್ದ ತೀವ್ರ ಪೈಪೋಟಿಯ ಮಧ್ಯೆಯೂ ರಮೇಶ್‌ ಬೆಂಬಲಿಗ ಹಾಗೂ ಬಿಜೆಪಿ ಅಭ್ಯರ್ಥಿ ನಾಗೇಶ ಮನ್ನೋಳಕರ್ ಅವರನ್ನು ಮಣಿಸುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಯಶಸ್ವಿಯಾಗಿದ್ದರು.

ಅಲ್ಲದೆ, ತಮ್ಮ ಕ್ಷೇತ್ರದಲ್ಲಿ ಪ್ರಭಾವವನ್ನು ಹೊಂದಿಲ್ಲದೆ, ಕಾಂಗ್ರೆಸ್‌ ಮಟ್ಟಿಗೆ ಬೆಳಗಾವಿ ಜಿಲ್ಲೆಯಲ್ಲಿ ಹಿಡಿತವನ್ನು ಸಾಧಿಸಿದ್ದಾರೆ. ಚುನಾವಣೆಗೂ ಪೂರ್ವದಲ್ಲಿ ಪಕ್ಷ ಸಂಘಟನೆಗೆ ಸಾಕಷ್ಟು ಶ್ರಮ ವಹಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಥಣಿಯಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಇದನ್ನು ಅವರು ಬಹಿರಂಗವಾಗಿಯೇ ಹೇಳಿಕೊಂಡಿದ್ದಲ್ಲದೆ, ಬೆಂಬಲಿಗರ ಸಭೆಯನ್ನೂ ನಡೆಸಿದ್ದರು. ಕೊನೆಗೆ ಬಿಜೆಪಿ ಹೈಕಮಾಂಡ್‌ ರಮೇಶ್‌ ಜಾರಕಿಹೊಳಿ ಅವರ ಒತ್ತಡಕ್ಕೆ ಮಣಿದು ಅವರ ಬೆಂಬಲಿಗ ಮಹೇಶ್‌ ಕುಮಟಳ್ಳಿ ಅವರಿಗೆ ಟಿಕೆಟ್‌ ನೀಡಿತ್ತು. ಇದರಿಂದ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಸವದಿ ಮುಂದಾಗಿದ್ದರು. ಆದರೆ, ಈ ವೇಳೆ ಮಧ್ಯ ಪ್ರವೇಶ ಮಾಡಿದ್ದ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಕರೆತಂದು ಪಕ್ಷ ಸೇರ್ಪಡೆ ಮಾಡಿಸಿದ್ದರು. ಅಲ್ಲದೆ, ಲಕ್ಷ್ಮಣ ಸವದಿ ಅವರು ಈಗ ಗೆದ್ದು ಬೀಗಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್‌ ಪದಗ್ರಹಣ; ವಿಡಿಯೊ ಇಲ್ಲಿದೆ

ಇದನ್ನೂ ಓದಿ: ‌Electricity Bill: ಇವತ್ತಿಂದ ಕರೆಂಟ್‌ ಬಿಲ್‌ ಕಟ್ಟಂಗಿಲ್ಲ; ಇದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಆರ್ಡರ್!

ಜಗದೀಶ್‌ ಶೆಟ್ಟರ್‌ ಸೇರ್ಪಡೆಯಲ್ಲೂ ಮಹತ್ವದ ಪಾತ್ರ

ಜಗದೀಶ್‌ ಶೆಟ್ಟರ್‌ ಅವರು ಬಿಜೆಪಿಯಲ್ಲಿದ್ದಾಗ ಅವರ ವಿರುದ್ಧ ಸ್ಪರ್ಧೆ ಮಾಡಿದ್ದ ಮಹೇಶ್ ನಲವಾಡ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಇದಾದ ಬಳಿಕ ತಕ್ಷಣವೇ ಕಾರ್ಯಪ್ರವೃತ್ತರಾದ ಲಕ್ಷ್ಮೀ ಹೆಬ್ಬಾಳ್ಕರ್‌ ತಮ್ಮ ಅಳಿಯ, ಕಾಂಗ್ರೆಸ್‌ನ ಯುವ ನಾಯಕ ರಜತ್ ಉಳ್ಳಾಗಡ್ಡಿಮಠ ಅವರನ್ನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿರವಂತೆ ಸೂಚಿಸಿದರು. ಅವರು ಈ ನಿಟ್ಟಿನಲ್ಲಿ ಸಕಲ ಪ್ರಯತ್ನವನ್ನು ಮಾಡುತ್ತಿರುವಾಗಲೇ ಬಿಜೆಪಿಯಿಂದ ಶೆಟ್ಟರ್‌ಗೆ ಟಿಕೆಟ್‌ ಕೈತಪ್ಪಿತ್ತು. ಆಗ ಅವರ ಮಾಸ್ಟರ್‌ ಪ್ಲ್ಯಾನ್‌ ಮಾಡುವ ಲಕ್ಷ್ಮಿ ಹೆಬ್ಬಾಳ್ಕರ್, ಅಳಿಯನ ಮೂಲಕ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ಗೆ ಕರೆತಂದರು. ಈ ಮೂಲಕ ಲಿಂಗಾಯತ ಮತ ಕ್ರೋಢೀಕರಣದಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Hanuman Chalisa: ನಗರ್ತಪೇಟೆ ಹಲ್ಲೆ ಕೇಸ್‌; ರಾಜ್ಯದಲ್ಲಿ ಹೆಚ್ಚಿದ ಹಿಂದೂ ವಿರೋಧಿ ನಡೆ: ಪ್ರಲ್ಹಾದ್‌ ಜೋಶಿ ಆಕ್ರೋಶ

Hanuman Chalisa: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಆಯ್ತು ಎಫ್‌ಎಸ್‌ಎಲ್ ವರದಿ ಬಂದರೂ ಕ್ರಮವಿಲ್ಲ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿದೆ. ಅಂದರೆ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲವಾಗಿದೆ! ಎಂದು ಸಚಿವ ಪ್ರಲ್ಹಾದ್‌ ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

VISTARANEWS.COM


on

Pralhad Joshi attack on Karnataka Congress Government for Nagarthapet assault case
Koo

ಹುಬ್ಬಳ್ಳಿ: ರಾಜ್ಯದಲ್ಲಿ ಈಗ ಹಿಂದೂ ವಿರೋಧಿ ಮತ್ತು ದೇಶ ವಿರೋಧಿ ನಡೆ ತೀವ್ರವಾಗಿದ್ದು, ಕಾಂಗ್ರೆಸ್ ಸರ್ಕಾರವೇ ಇದಕ್ಕೆಲ್ಲ ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಕಿಡಿಕಾರಿದ್ದಾರೆ. ಬೆಂಗಳೂರಿನ ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಯೊಂದರಲ್ಲಿ ಹನುಮಾನ್‌ ಚಾಲೀಸಾ (Hanuman Chalisa) ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ (Nagarthapet assault case) ಮಾಡಿದ ಕೃತ್ಯವನ್ನು ಕಟುವಾಗಿ ಖಂಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್‌ ಜೋಶಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಏಕೆ ಹೀಗೆ ಹಿಂದೂ ವಿರೋಧಿ ಕೃತ್ಯಗಳು ಘಟಿಸುತ್ತಿವೆ? ಇದಕ್ಕೆ ಕಾಂಗ್ರೆಸ್ ಸರ್ಕಾರದ ಮೃದು ಧೋರಣೆಯೇ ಕಾರಣ ಎಂದು ಖಂಡಿಸಿದರು.

ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಆಯ್ತು ಎಫ್‌ಎಸ್‌ಎಲ್ ವರದಿ ಬಂದರೂ ಕ್ರಮವಿಲ್ಲ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆದರೂ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ಈಗ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ನಡೆದಿದೆ. ಅಂದರೆ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲವಾಗಿದೆ! ಎಂದು ಸಚಿವ ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದರು.

ದುಷ್ಕರ್ಮಿಗಳಿಗೆ ಬೆಂಬಲ

ಪಾಕಿಸ್ತಾನ ಜಿಂದಾಬಾದ್ ಮತ್ತು ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಇಂಥ ಅಹಿತಕರ ಘಟನೆಗಳ ವಿರುದ್ಧ ಏನು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಈಗಲೂ ಬಾಯಿ ಬಿಡುತ್ತಿಲ್ಲ. ಇದರಿಂದ ದುಷ್ಕರ್ಮಿಗಳಿಗೆ ಬೆಂಬಲ ಸಿಕ್ಕಂತಾಗಿದೆ. ಸರ್ಕಾರದ ಈ ನಡೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಪ್ರಲ್ಹಾದ್‌ ಜೋಶಿ ಹೇಳಿದರು.

ಸರ್ಕಾರದ ನಡೆಯೇ ಹಿಂದೂ ವಿರೋಧಿಗಳಿಗೆ ಧೈರ್ಯ

ಪಾಕಿಸ್ತಾನ ಜಿಂದಾಬಾದ್ ಘೋಷಣೆಕೋರರನ್ನು ಸಂರಕ್ಷಿಸುವ ಕೆಲಸ ಈ ಸರ್ಕಾರದಿಂದ ನಡೆಯಿತು. ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಸಹ ಅಂದು ಮೀಡಿಯದವರಿಗೆ ಬಾಯಿಗೆ ಬಂದ ಹಾಗೆ ಬೈದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಇದನ್ನು ಸಮರ್ಥಿಸಿಕೊಂಡಿದ್ದರು. ಇದೆಲ್ಲವೂ ಈಗ ಹಿಂದೂ ವಿರೋಧಿಗಳಿಗೆ ಧೈರ್ಯ ತಂದುಕೊಟ್ಟಿದೆ ಎಂದು ಪ್ರಲ್ಹಾದ್‌ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ನಾವೇನೇ ಮಾಡಿದರೂ ರಕ್ಷಣೆಗೆ ಸರ್ಕಾರವೇ ಇದೆ ಎಂಬ ಭಾವನೆ ಆರೋಪಿಗಳಲ್ಲಿದೆ. ಹೀಗಾಗಿ ಈಗ ಹನುಮಾನ್ ಚಾಲೀಸ್ ಹಾಕುವವರ ಮೇಲೆ ಹಲ್ಲೆ ಮಾಡುವ ಮಟ್ಟಕ್ಕೆ ಹಿಂದೂ ವಿರೋಧಿಗಳು ಬಲಿಷ್ಠ ಮನಸ್ಥಿತಿ ತಲುಪಿದ್ದಾರೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಪ್ರಮುಖ ಕಾರಣ ಎಂದು ಸಚಿವ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಆಶ್ರಯ

ಹಿಂದೂ ವಿರೋಧಿ ನಡೆ ಅನುಸರಿಸುತ್ತಿರುವ ಕಿಡಿಗೇಡಿಗಳಿಗೆ ಕಾಂಗ್ರೆಸ್ ಸರ್ಕಾರ ಆಶ್ರಯ ಕೊಡುತ್ತಿದೆ. ಇದೇ ರೀತಿ ತುಷ್ಟೀಕರಣದ ರಾಜಕಾರಣ ಮಾಡಿದರೆ ಜನರೇ ತಕ್ಕ ಉತ್ತರ ಕೊಡಲಿದ್ದಾರೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಎಚ್ಚರಿಸಿದರು.

ಇದನ್ನೂ ಓದಿ: Hanuman Chalisa: ನಗರ್ತಪೇಟೆ ಹಲ್ಲೆ ಕೇಸ್‌; ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ ದೂರು!

ಏನಿದು ಹಲ್ಲೆ ಪ್ರಕರಣ?

ಭಾನುವಾರ ಸಾಯಂಕಾಲ 6.15ರ ಸುಮಾರಿಗೆ ಐದು ಮಂದಿ ಬೆಂಗಳೂರಿನ ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಗೆ ಬಂದಿದ್ದಾರೆ. ಅಲ್ಲಿ ಹಿಂದು ದೇವರ ಭಜನೆ ಹಾಕಿದ್ದರಿಂದ ಬಂದ್‌ ಮಾಡಲು ಹೇಳಿದ್ದಾರೆ. ಅದಕ್ಕೆ ಅಂಗಡಿಯಾತ ಮುಖೇಶ್‌, ನನ್ನ ಅಂಗಡಿ ನನ್ನ ಇಷ್ಟ ಎಂದು ವಿರೋಧ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರ ಗುಂಪು ಮುಖೇಶ್‌ ಮೇಲೆ ದಾಳಿ ಮಾಡಿದ್ದಾರೆ. ಮುಖೇಶ್‌ ಸಹ ಆವೇಶದಿಂದ ಪ್ರತಿದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ನಾಲ್ಕೈದು ಮಂದಿ ಇದ್ದಿದ್ದರಿಂದ ಮುಖೇಶ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈವರೆಗೆ ಒಟ್ಟು ಐದು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೊಬ್ಬ ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಲಾಗಿದೆ.

Continue Reading

ಬೆಂಗಳೂರು

Hanuman Chalisa: ನಗರ್ತಪೇಟೆ ಹಲ್ಲೆ ಕೇಸ್‌; ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ ದೂರು!

Hanuman Chalisa: ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗೆ ಕೆಪಿಸಿಸಿ ಕಾನೂನು ಘಟಕದಿಂದದೂರು ನೀಡಲಾಗಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ಘಟನೆಯನ್ನು ತಿರುಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದೆ.

VISTARANEWS.COM


on

MP Tejaswi surya participate at Nagarthapet protest and KPCC Legal Cell complaint against him
Koo

ಬೆಂಗಳೂರು: ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಯೊಂದರಲ್ಲಿ ಹನುಮಾನ್‌ ಚಾಲೀಸಾ (Hanuman Chalisa) ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ (Nagarthapet assault case) ಮಾಡಿದ ಕೃತ್ಯವನ್ನು ಖಂಡಿಸಿ ಬಿಜೆಪಿ (BJP Karnataka) ಬೃಹತ್‌ ಪ್ರತಿಭಟನೆಯನ್ನು ನಡೆಸಿದೆ. ಈ ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗೆ ಕಾಂಗ್ರೆಸ್‌ (Congress Karnataka) ದೂರು ನೀಡಿದೆ. ನಗರ್ತಪೇಟೆಯಲ್ಲಿ ಧಾರ್ಮಿಕ ಭಾವನೆ ಕೆರಳಿಸಿ, ಪ್ರತಿಭಟನೆಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರಲಾಗಿದೆ.

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗೆ ಕೆಪಿಸಿಸಿ ಕಾನೂನು ಘಟಕದಿಂದ (KPCC Legal Cell) ದೂರು ನೀಡಲಾಗಿದೆ. ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣದಲ್ಲಿ ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ಘಟನೆಯನ್ನು ತಿರುಚಿರುತ್ತಾರೆ. ಅಲ್ಲದೆ, ಘಟನೆ ನಡೆದ ಸ್ಥಳದಲ್ಲಿ ಹನುಮಾನ್ ಚಾಲೀಸಾ ಪಠಣೆ ಮಾಡಲು ಕರೆ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದೆ.

ಕಾಂಗ್ರೆಸ್‌ ದೂರಿನಲ್ಲೇನಿದೆ?

ಲೋಕಸಭೆಯ ಚುನಾವಣೆಯ (Lok Sabha Election 2024) ಹಿನ್ನೆಲೆಯಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ದುರುದ್ದೇಶದಿಂದ ಬೆಂಗಳೂರಿನ ನಗರ್ತಪೇಟೆಯಲ್ಲಿ ಪ್ರತಿಭಟನೆ ನಡೆಸಲು ಪ್ರಚೋದಿಸುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು ಮಾಡಿಕೊಳ್ಳಬೇಕು.

ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿ ಮಾಲೀಕರೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಕೋಮು ದ್ವೇಷ ಮೂಡಿಸುವ ಸಲುವಾಗಿ ಬಿಜೆಪಿಯ ನಾಯಕರು ತಿರುಚಿರುತ್ತಾರೆ. ದಿನಾಂಕ:18-03-2024 ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಭೇಟಿ ನೀಡಿ ಅಂಗಡಿಯ ಮುಂದೆ ಗುಂಪು ಸೇರಿಸಿ 19 ಮಾರ್ಚ್ 2024 ರ ಮಧ್ಯಾಹ್ನ 12 ಗಂಟೆಗೆ ಹನುಮಾನ್ ಚಾಲೀಸಾ ಪಠಣೆ ಮಾಡಲು ಕರೆ ನೀಡಿ ಧಾರ್ಮಿಕ ಘೋಷಣೆಗಳನ್ನು ಕೂಗಿರುತ್ತಾರೆ. ಸರ್ವೋಚ್ಚ ನ್ಯಾಯಾಲಯದ ಆದೇಶ ಮತ್ತು ಚುನಾವಣಾ ಆಯೋಗದ ಪ್ರಕಾರ ಚುನಾವಣೆಯ ಸಂದರ್ಭದಲ್ಲಿ ಕೋಮು, ಮತ, ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತಹ ಕೃತ್ಯವೆಸಗುವುದು ಅಪರಾಧ. ನೀತಿ ಸಂಹಿತೆ ಉಲ್ಲಂಘಿಸಿ ಪ್ರತಿಭಟನೆಗೆ ಕರೆ ನೀಡಿರುವ ತೇಜಸ್ವಿ ಸೂರ್ಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋರುತ್ತೇನೆ ಎಂದು ಕೆಪಿಸಿಸಿ ವಕ್ತಾರ ಮತ್ತು ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್‌ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Nagarthpet protest by BJP

ಏನಿದು ಹಲ್ಲೆ ಪ್ರಕರಣ?

ಭಾನುವಾರ ಸಾಯಂಕಾಲ 6.15ರ ಸುಮಾರಿಗೆ ಐದು ಮಂದಿ ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಗೆ ಬಂದಿದ್ದಾರೆ. ಅಲ್ಲಿ ಹಿಂದು ದೇವರ ಭಜನೆ ಹಾಕಿದ್ದರಿಂದ ಬಂದ್‌ ಮಾಡಲು ಹೇಳಿದ್ದಾರೆ. ಅದಕ್ಕೆ ಅಂಗಡಿಯಾತ ಮುಖೇಶ್‌, ನನ್ನ ಅಂಗಡಿ ನನ್ನ ಇಷ್ಟ ಎಂದು ವಿರೋಧ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರ ಗುಂಪು ಮುಖೇಶ್‌ ಮೇಲೆ ದಾಳಿ ಮಾಡಿದ್ದಾರೆ. ಮುಖೇಶ್‌ ಸಹ ಆವೇಶದಿಂದ ಪ್ರತಿದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ನಾಲ್ಕೈದು ಮಂದಿ ಇದ್ದಿದ್ದರಿಂದ ಮುಖೇಶ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈವರೆಗೆ ಒಟ್ಟು ಐದು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೊಬ್ಬ ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಲಾಗಿದೆ.

Nagarthpet protest by BJP

ಇದನ್ನೂ ಓದಿ: Hanuman Chalisa: ನಗರ್ತಪೇಟೆಯಲ್ಲಿ ಗುಡುಗಿದ ‘ಕೇಸರಿ’; ಕಠಿಣ ಕ್ರಮದ ಭರವಸೆ, ಪ್ರತಿಭಟನೆಗೆ ವಿರಾಮ

ಪ್ರತಿಭಟನೆ ನಡೆಸಿ ಕೈಬಿಟ್ಟ ಬಿಜೆಪಿ

ಈ ಸಂಬಂಧ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ (BJP Karnataka) ಬೃಹತ್‌ ಪ್ರತಿಭಟನೆ ನಡೆಸಿತ್ತು. ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ಜೈ ಶ್ರೀರಾಮ್‌ (Jai Shriram) ಘೋಷಣೆ ಕೂಗಲಾಗಿತ್ತು. ಶೋಭಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ತೇಜಸ್ವಿ ಸೂರ್ಯ ಅವರು ಪೊಲೀಸರಿಗೆ ಗುರುತು ಸಿಗದಂತೆ ಕ್ಯಾಪ್‌ ಹಾಗೂ ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಸ್ಥಳಕ್ಕೆ ಬಂದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಹಿಂದುಗಳು ಸೇರಿ ಪ್ರತಿಭಟನೆಯನ್ನು ನಡೆಸಿದ್ದರು. ಆಗ ಪೊಲೀಸ್‌ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಾಪಸ್‌ ಪಡೆಯಲಾಗಿದೆ.

Continue Reading

ಪ್ರಮುಖ ಸುದ್ದಿ

Hanuman Chalisa : ಇವತ್ತು ಜೈಲ್, ನಾಳೆ ಬೇಲ್, ಮತ್ತೆ ಅದೇ ಖೇಲ್‌; ನಗರ್ತ ಪೇಟೆ ಕಿರಾತಕರ ಸ್ಟೇಟಸ್‌

Hanuman Chalisa : ದುಷ್ಟರ ಗುಂಪೊಂದು ನಗರ್ತ ಪೇಟೆಯಲ್ಲಿ ಹಿಂದೂ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಜೈಲಿನಿಂದ ಹೊರಬಂದ ಮೇಲೆ ಇನ್ನಷ್ಟು ಅಟ್ಯಾಕ್‌ಗಳು ನಡೆಯಲಿವೆ ಎಂದು ಎಚ್ಚರಿಕೆ ನೀಡಿದೆ.

VISTARANEWS.COM


on

Hanuman Chalisa Warning
Koo

ಬೆಂಗಳೂರು: ಬೆಂಗಳೂರಿನ ನಗರ್ತ ಪೇಟೆಯ ಅಂಗಡಿಯಲ್ಲಿ ಹನುಮಾನ್‌ ಚಾಲೀಸಾ (Hanuman Chalisa) ಶ್ಲೋಕ ಹಾಕಿದ ಎಂಬ ಕಾರಣಕ್ಕಾಗಿ ಹಿಂದು ವ್ಯಾಪಾರಿಯೊಬ್ಬನ (Attack on Hindu Trader) ಮೇಲೆ ಐವರು ಯುವಕರು ಹಲ್ಲೆ ನಡೆಸಿದ ಘಟನೆ ದೇಶಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದೆ. ಇದು ರಾಜಕೀಯ ತಿರುವುಗಳನ್ನು ಪಡೆದುಕೊಂಡು ಪ್ರತಿಭಟನೆಗಳು ಭುಗಿಲೆದ್ದಿವೆ. ಆದರೆ, ಅಮಾಯಕ ಯುವಕನ ಮೇಲೆ ಅಮಾನುಷ ಹಲ್ಲೆ ನಡೆಸಿದ ಈ ಕಿರಾತಕರ ಗ್ಯಾಂಗ್‌ಗೆ (Gang of Miscreants) ಇನ್ನೂ ಬುದ್ಧಿ ಬಂದಿಲ್ಲ. ಅವರ ದುಷ್ಟತನ ಮತ್ತು ಕ್ರೌರ್ಯ ಯಾವ ಮಟ್ಟಕ್ಕಿದೆ ಎಂದರೆ ಬಂಧಿತರಲ್ಲಿ ಒಬ್ಬನ ಸಹೋದರ ಸ್ಟೇಟಸ್‌ ಪೋಸ್ಟ್‌ (Whats app Status) ಹಾಕಿಕೊಂಡು ಎಚ್ಚರಿಕೆಯನ್ನು ನೀಡಿದ್ದಾನೆ. ಆರೋಪಿಗಳ ಬಂಧನವಾದ ಬೆನ್ನಿಗೇ ಒಬ್ಬ ದುಷ್ಟನ ಸೋದರ ಹಾಕಿರುವ ಪೋಸ್ಟ್‌ ಎಂಥವರನ್ನಾದರೂ ಕೆರಳಿಸುವಂತಿದೆ. ಅದರ ಭಾವಾರ್ಥ ಹೀಗಿದೆ: ಇವತ್ತು ಜೈಲ್‌, ನಾಳೆ ಬೇಲ್‌, ಮತ್ತೆ ಅದೇ ಖೇಲ್‌. ಅಂದರೆ ಇವತ್ತು ಜೈಲಾಗುತ್ತೆ, ನಾಳೆ ಬೇಲಾಗುತ್ತದೆ. ನಂತರ ಮತ್ತದೇ ಆಟ ಶುರು ಮಾಡ್ತೀವಿ!

ಮಾರ್ಚ್‌ 17ರ ಭಾನುವಾರ ಸಾಯಂಕಾಲ 6.15ರ ಹೊತ್ತು. ನಗರ್ತ ಪೇಟೆಯ ಜುಮ್ಮಾ ಮಸೀದಿ ರಸ್ತೆಯಲ್ಲಿರುವ ಸಿದ್ಧಣ್ಣ ಗಲ್ಲಿಯಲ್ಲಿ ಕಾರ್ಯಾಚರಿಸುತ್ತಿರುವ ಕೃಷ್ಣ ಟೆಲಿಕಾಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮುಕೇಶ್‌ ಅವರು ಹನುಮಾನ್‌ ಚಾಲೀಸಾ ಹಾಕಿದ್ದರು.

ಆಗ ಅಲ್ಲಿಗೆ ಆಗಮಿಸಿದ ಸುಲೇಮಾನ್‌, ಷಹನವಾಜ್‌, ರೋಹಿತ್‌, ಡ್ಯಾನಿಷ್‌, ತರುಣ್‌ ಅಲಿಯಾಸ್‌ ದಡಿಯಾ ಮತ್ತು ಇನ್ನೊಬ್ಬ ವ್ಯಕ್ತಿ ಹಿಂದು ದೇವರ ಭಜನೆಯನ್ನು ಬಂದ್‌ ಮಾಡಲು ಹೇಳಿದ್ದಾರೆ. ಅಂಗಡಿಯಲ್ಲಿದ್ದ ಮುಖೇಶ್‌, ನನ್ನ ಅಂಗಡಿ ನನ್ನ ಇಷ್ಟ ಎಂದು ವಿರೋಧ ಮಾಡಿದ್ದಾರೆ. ಈಗ ಆಜಾನ್‌ ಟೈಮ್‌, ದೇವರ ಭಜನೆ ಹಾಕುವಂತಿಲ್ಲ ಎಂದು ಎಚ್ಚರಿಕೆ ನೀಡಿದರು. ಆದರೆ, ಮುಕೇಶ್‌ ಅವರ ಮಾತು ಕೇಳಿಲ್ಲ. ನಾನು ನಮ್ಮ ದೇವರ ಹಾಡು ಹಾಕಿದರೆ ನಿಮಗೇನು ತೊಂದರೆ ಎಂದು ಕೇಳಿದ್ದಾರೆ.

ಇದರಿಂದ ಸಿಟ್ಟಿಗೆದ್ದ ಯುವಕರ ಗುಂಪು ಮುಖೇಶ್‌ ಮೇಲೆ ದಾಳಿ ಮಾಡಿದ್ದಾರೆ. ಮುಖೇಶ್‌ ಸಹ ಆವೇಶದಿಂದ ಪ್ರತಿದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ನಾಲ್ಕೈದು ಮಂದಿ ಇದ್ದಿದ್ದರಿಂದ ಮುಖೇಶ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ದೂರು ದಾಖಲಿಸಿಕೊಂಡಿರುವ ಸುಲೇಮಾನ್‌, ಷಹನವಾಜ್‌, ರೋಹಿತ್‌, ಡ್ಯಾನಿಷ್‌, ತರುಣ್‌ ಅಲಿಯಾಸ್‌ ದಡಿಯಾ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ : Hanuman Chalisa: ನಗರ್ತಪೇಟೆಯಲ್ಲಿ ಗುಡುಗಿದ ‘ಕೇಸರಿ’; ಕಠಿಣ ಕ್ರಮದ ಭರವಸೆ, ಪ್ರತಿಭಟನೆಗೆ ವಿರಾಮ

ಎಚ್ಚರಿಕೆ ಸ್ಟೇಟಸ್‌ ಹಾಕಿದ ಸುಲೇಮಾನ್‌ ಸೋದರ

ಈ ನಡುವೆ ಹಲ್ಲೆಕೋರರಲ್ಲಿ ಒಬ್ಬನಾದ ಸುಲೇಮಾನ್‌ನ ಸಹೋದರ ಸೈಯದ್‌ ಎಂಬಾತ ಪೊಲೀಸರು ಮತ್ತು ಜನರಿಗೆ ಎಚ್ಚರಿಕೆ ಕೊಡುವ ರೀತಿಯಲ್ಲಿ ಸ್ಟೇಟಸ್‌ ಹಾಕಿಕೊಂಡಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.

ಹಲ್ಲೆ ಮಾಡಿ ಬಂಧನಕ್ಕೊಳಗಾದರೂ ಆರೋಪಿಗಳ ಕ್ರೌರ್ಯ ಇನ್ನೂ ಕಡಿಮೆಯಾಗಿಲ್ಲ. ಅವರಿಗೆ ಸಮಾಜದ ಹೆದರಿಕೆ ಸ್ವಲ್ಪವೂ ಇಲ್ಲ ಎನ್ನುವುದಕ್ಕೆ ಈ ಪೋಸ್ಟ್‌ ಸಾಕ್ಷ್ಯ ಒದಗಿಸಿದೆ.

ಬಂಧಿತ ಆರೋಪಿ ಸುಲೇಮಾನ್ ಸಹೋದರ ಸೈಯದ್‌ ಹಾಕಿದ ಪೋಸ್ಟ್‌ ಹೀಗಿದೆ.: ಆಜ್‌ ಜೈಲ್‌, ಕಲ್‌ ಬೇಲ್‌, ಫಿರ್‌ ವೊಹಿ ಪುರಾನಾ ಖೇಲ್‌! ಅಂದರೆ ಇವತ್ತು ಜೈಲ್ ನಾಳೆ ಬೇಲ್ ಮತ್ತೆ ಅದೇ ಹಿಂದಿನ ಆಟ ಶುರು ಅಂತ ಆತ ಬರೆದುಕೊಂಡಿದ್ದಾನೆ. ಈ ಹುಡುಗ ಅಪ್ರಾಪ್ತ ವಯಸ್ಕನಂತೆ ಕಾಣುತ್ತಿದ್ದಾನೆ. ಆದರೆ, ಇಷ್ಟು ಸಣ್ಣ ವಯಸ್ಸಿಗೇ ಇಷ್ಟೊಂದು ನಿರ್ಭಯವಾಗಿ ಎಚ್ಚರಿಕೆ ನೀಡಲು ಹೇಗೆ ಸಾಧ್ಯವಾಯಿತು ಎಂಬ ಪ್ರಶ್ನೆಯೂ ಎದ್ದು ನಿಂತಿದೆ.

MP Tejaswi surya participate at Nagarthapet protest

ಸಿಡಿದೆದ್ದ ಬಿಜೆಪಿ ನಾಯಕರು, ಕಾರ್ಯಕರ್ತರು

ಹನುಮಾನ್‌ ಚಾಲಿಸಾ ಹಾಕಿದ್ದಕ್ಕೆ ಈ ರೀತಿ ಹಲ್ಲೆ ಮಾಡಿದ ದುಷ್ಟರ ವಿರುದ್ಧ ಮತ್ತು ಪದೇಪದೆ ನಡೆಯುತ್ತಿರುವ ಇಂಥ ಘಟನೆಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ನಗರ್ತ ಪೇಟೆಯಲ್ಲಿ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿದಂತೆ ಸಂಸದರು, ಶಾಸಕರು, ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾದರು. ಅಲ್ಲಿ ಜೈಶ್ರೀರಾಮ್‌ ಘೋಷಣೆ ಮೊಳಗಿತು.

Continue Reading

ಬೆಂಗಳೂರು

Hanuman Chalisa: ನಗರ್ತಪೇಟೆಯಲ್ಲಿ ಹಿಂದೂ ಯುವಕನ ಮೇಲಿನ ಹಲ್ಲೆಗೆ ಪ್ರಕಾಶ್ ರೈ ಪ್ರತಿಕ್ರಿಯೆ ಹೀಗಿದೆ!

Hanuman Chalisa: ನಗರ್ತಪೇಟೆಯಲ್ಲಿನ ಹಲ್ಲೆ ಪ್ರಕರಣವನ್ನು ನಟ ಪ್ರಕಾಶ್‌ ರೈ ಖಂಡಿಸಿದ್ದಾರೆ. ಯಾವುದೇ ಧರ್ಮದವರು ಈ ರೀತಿ ಮಾಡಿದರೂ ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ. ಆದರೆ, ಅವರ ಈ ಪ್ರತಿಕ್ರಿಯೆಗೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪ್ರಕಾಶ್‌ ರೈ ಎಕ್ಸ್‌ ಅಕೌಂಟ್‌ ಹ್ಯಾಕ್‌ ಆಗಿದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Hanuman Chalisa Prakash Raj reacted to the attack on a Hindu youth in Nagarthapet
Koo

ಬೆಂಗಳೂರು: ಹಿಂದುತ್ವ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ನಡೆ ಬಗ್ಗೆ ಆಗಾಗ ಕಿಡಿಕಾರುತ್ತಲೇ ಬರುತ್ತಿರುವ ನಟ ಪ್ರಕಾಶ್‌ ರೈ ಈ ಬಾರಿ ಹಿಂದು ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಮೊಬೈಲ್‌ ಅಂಗಡಿಯೊಂದರಲ್ಲಿ ಹನುಮಾನ್‌ ಚಾಲೀಸಾ (Hanuman Chalisa) ಹಾಕಿದ್ದಕ್ಕೆ ಅಂಗಡಿಯಾತನ ಮೇಲೆ ಹಲ್ಲೆ (assault case) ಮಾಡಿದ ಕೃತ್ಯವನ್ನು ರೈ ಖಂಡಿಸಿದ್ದಾರೆ. ಈ ಘಟನೆಯನ್ನು ಯಾರೇ ಮಾಡಿದ್ದರೂ ಖಂಡನೀಯ ಎಂದು ಹೇಳಿದ್ದಾರೆ. ಆದರೆ, ಇದಕ್ಕೆ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪ್ರಕಾಶ್‌ ರೈ ಅಕೌಂಟ್‌ ಹ್ಯಾಕ್‌ ಆಗಿರಬೇಕು, ಹೀಗೆ ಹಿಂದುಗಳ ಪರವಾಗಿ ನೀವು ನಿಂತರೆ, ಶಾಂತಿ ಪ್ರಿಯರ ಬೆಂಬಲ ನಿಮಗೆ ಸಿಗದೇ ಹೋಗಬಹುದು ಎಂದು ಕಾಲೆಳೆದಿದ್ದಾರೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಕಾಶ್‌ ರೈ, ನಗರ್ತಪೇಟೆಯಲ್ಲಿನ ಹಲ್ಲೆ ಪ್ರಕರಣವನ್ನು ಕಟುವಾಗಿ ಖಂಡಿಸಿದ್ದಾರೆ. ಇದೊಂದು ಗೂಂಡಾ ವರ್ತನೆಯಾಗಿದ್ದು, ಸಹಿಸಲು ಅಸಾಧ್ಯ. ಯಾವುದೇ ಧರ್ಮದವರು ಈ ರೀತಿ ಮಾಡಿದರೂ ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.

ಪ್ರಕಾಶ್‌ ರೈ ಟ್ವೀಟ್‌ನಲ್ಲೇನಿದೆ?

“ಈ ಗೂಂಡಾಗಳನ್ನು ಬಂಧಿಸಿ ಶಿಕ್ಷೆಗೆ ಗುರಿಪಡಿಸಬೇಕು. ಯಾವುದೇ ಧರ್ಮದ ಯಾವುದೇ ವ್ಯಕ್ತಿಯಿಂದ ಇಂತಹ ಗೂಂಡಾಗಿರಿ ಕೃತ್ಯಗಳು ನಡೆದರೂ ಅದನ್ನು ಯಾವುದೇ ಕಾರಣಕ್ಕೂ ಸಹಿಸಬಾರದು” ಎಂದು #justasking ಹ್ಯಾಷ್‌ಟ್ಯಾಗ್‌ ಮೂಲಕ ಪ್ರಕಾಶ್‌ ರೈ ಪೋಸ್ಟ್‌ ಮಾಡಿದ್ದರು.

ಅಚ್ಚರಿ ಹೊರಹಾಕಿದ ನೆಟ್ಟಿಗರು

ಪ್ರಕಾಶ್‌ ರೈ ಅವರ ಈ ಟ್ವೀಟ್‌ಗೆ ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದು ನಿಜವಾಗಿಯೂ ಪ್ರಕಾಶ್‌ ರೈ ಅವರೇನಾ ಎಂದು ಪ್ರಶ್ನೆ ಮಾಡಿದ್ದಾರೆ. ಮಗದೊಬ್ಬರು ಪ್ರತಿಕ್ರಿಯೆ ನೀಡಿ, “ನಿಮ್ಮ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಅನ್ನಿಸುತ್ತಿದೆ. ಏಕೆಂದರೆ ಹಲ್ಲೆಗೊಳಗಾದ ಅಂಗಡಿಯ ಮಾಲೀಕ ಒಬ್ಬ ಹಿಂದು ಆಗಿದ್ದಾನೆ’ ಎಂದು ಕಾಲೆಳೆದಿದ್ದಾರೆ. ಮತ್ತೆ ಕೆಲವರು “ಇದು ಮೋಸ” (ಚೀಟಿಂಗ್‌ ಕರ್ತಾ ಹೈ ತೂ) ಎಂದು ವ್ಯಂಗ್ಯವಾಡಿದ್ದಾರೆ.

“ಸರ್ ದಯವಿಟ್ಟು ಹಾಗೆ ಮಾಡಬೇಡಿ. ಇಲ್ಲದಿದ್ದರೆ ಶಾಂತಿಯುತ ಸಮುದಾಯವು ನಿಮ್ಮನ್ನು ಬೆಂಬಲಿಸುವುದನ್ನು ನಿಲ್ಲಿಸಿಬಿಡುತ್ತದೆ” ಎಂದು ಸ್ಮೈಲಿಂಗ್‌ ಇಮೋಜಿ ಹಾಕಿ ಕುಟುಕಿದ್ದಾರೆ. ಅಲ್ಲದೆ, “ನೀವು ಈಗ ಸಂತ್ರಸ್ತ ಮಾತನಾಡುತ್ತಿರುವ ವಿಡಿಯೊವನ್ನು ಹಾಕುವುದಲ್ಲ, ಆತನ ಮೇಲೆ ದಾಳಿ ಮಾಡುತ್ತಿರುವ ವಿಡಿಯೊವನ್ನು ಪೋಸ್ಟ್‌ ಮಾಡಬೇಕಿತ್ತು, ನಾಚಿಕೆಯಾಗಬೇಕು ನಿಮಗೆ ಎಂದು ಇನ್ನೊಂದು ಕಮೆಂಟ್‌ನಲ್ಲಿ ಹಾಕಲಾಗಿದೆ. ಆದರೆ, ಮತ್ತೆ ಕೆಲವರು ಪ್ರಕಾಶ್‌ ರೈ ಬೆಂಬಲಕ್ಕೆ ನಿಂತಿದ್ದಾರೆ. ನಿಜವಾದ ಭಾರತೀಯರು ಸದಾ ಭಾರತದ ಪ್ರಜಾಪ್ರಭುತ್ವನ್ನು ಗೌರವಿಸುತ್ತಾರೆ” ಎಂದು ಒಬ್ಬರು ಹೇಳಿದ್ದಾರೆ.

ಏನಿದು ಹಲ್ಲೆ ಪ್ರಕರಣ?

ಭಾನುವಾರ ಸಾಯಂಕಾಲ 6.15ರ ಸುಮಾರಿಗೆ ಐದು ಮಂದಿ ನಗರ್ತಪೇಟೆಯಲ್ಲಿನ ಮೊಬೈಲ್‌ ಅಂಗಡಿಗೆ ಬಂದಿದ್ದಾರೆ. ಅಲ್ಲಿ ಹಿಂದು ದೇವರ ಭಜನೆ ಹಾಕಿದ್ದರಿಂದ ಬಂದ್‌ ಮಾಡಲು ಹೇಳಿದ್ದಾರೆ. ಅದಕ್ಕೆ ಅಂಗಡಿಯಾತ ಮುಖೇಶ್‌, ನನ್ನ ಅಂಗಡಿ ನನ್ನ ಇಷ್ಟ ಎಂದು ವಿರೋಧ ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವಕರ ಗುಂಪು ಮುಖೇಶ್‌ ಮೇಲೆ ದಾಳಿ ಮಾಡಿದ್ದಾರೆ. ಮುಖೇಶ್‌ ಸಹ ಆವೇಶದಿಂದ ಪ್ರತಿದಾಳಿ ಮಾಡಿದ್ದಾರೆ. ಆದರೆ, ಆರೋಪಿಗಳು ನಾಲ್ಕೈದು ಮಂದಿ ಇದ್ದಿದ್ದರಿಂದ ಮುಖೇಶ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈವರೆಗೆ ಒಟ್ಟು ಐದು ಜನ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಪ್ರತಿಭಟನೆ ನಡೆಸಿ ಕೈಬಿಟ್ಟ ಬಿಜೆಪಿ

ಈ ಸಂಬಂಧ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಬಿಜೆಪಿ (BJP Karnataka) ಬೃಹತ್‌ ಪ್ರತಿಭಟನೆ ನಡೆಸಿತ್ತು. ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಘಟನಾ ಸ್ಥಳದಲ್ಲಿ ಜೈ ಶ್ರೀರಾಮ್‌ (Jai Shriram) ಘೋಷಣೆ ಕೂಗಲಾಗಿತ್ತು. ಶೋಭಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ತೇಜಸ್ವಿ ಸೂರ್ಯ ಅವರು ಪೊಲೀಸರಿಗೆ ಗುರುತು ಸಿಗದಂತೆ ಕ್ಯಾಪ್‌ ಹಾಗೂ ಮುಖಕ್ಕೆ ಮಾಸ್ಕ್‌ ಹಾಕಿಕೊಂಡು ಸ್ಥಳಕ್ಕೆ ಬಂದಿದ್ದರು. ಸಾವಿರಾರು ಸಂಖ್ಯೆಯಲ್ಲಿ ಹಿಂದುಗಳು ಸೇರಿ ಪ್ರತಿಭಟನೆಯನ್ನು ನಡೆಸಿದ್ದರು. ಆಗ ಪೊಲೀಸ್‌ ಹಿರಿಯ ಅಧಿಕಾರಿಗಳು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರಿಂದ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ವಾಪಸ್‌ ಪಡೆಯಲಾಗಿದೆ.

Continue Reading
Advertisement
MS Dhoni
ಕ್ರೀಡೆ3 mins ago

IPL 2024: ಐಪಿಎಲ್​ ವೇಳೆ ತಾಳ್ಮೆ ಕಳೆದುಕೊಂಡಿದ್ದ ಧೋನಿಗೂ ಬಿದ್ದಿತ್ತು ದಂಡದ ಬರೆ

Amit Mishara
ಕ್ರೀಡೆ5 mins ago

IPL 2024 : ಐಪಿಎಲ್​ನಲ್ಲಿ ಹ್ಯಾಟ್ರಿಕ್​ ವಿಕೆಟ್ ಸಾಧನೆ ಮಾಡಿದ ಬೌಲರ್​ಗಳ ವಿವರ ಇಲ್ಲಿದೆ

Sudha Kongara
ಕಾಲಿವುಡ್9 mins ago

Actor Suriya: `ಸುಧಾ ಕೊಂಗರ’ ನಿರ್ದೇಶನದ ಸಿನಿಮಾ ಇನ್ನೂ ಸೆಟ್ಟೇರಲೇ ಇಲ್ಲ! ಸೂರ್ಯ ಹೇಳಿದ್ದೇನು?

Pralhad Joshi attack on Karnataka Congress Government for Nagarthapet assault case
ಬೆಂಗಳೂರು11 mins ago

Hanuman Chalisa: ನಗರ್ತಪೇಟೆ ಹಲ್ಲೆ ಕೇಸ್‌; ರಾಜ್ಯದಲ್ಲಿ ಹೆಚ್ಚಿದ ಹಿಂದೂ ವಿರೋಧಿ ನಡೆ: ಪ್ರಲ್ಹಾದ್‌ ಜೋಶಿ ಆಕ್ರೋಶ

CAA Supreme court
ದೇಶ11 mins ago

‌CAA: ಸಿಎಎಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ, ಸರ್ಕಾರಕ್ಕೆ ಸ್ಪಂದಿಸಲು 3 ವಾರ ಗಡುವು

uniliver
ವಾಣಿಜ್ಯ20 mins ago

Unilever Comapny: ಐಸ್‌ಕ್ರೀಮ್‌ ಉದ್ಯಮದಿಂದ ಹಿಂದೆ ಸರಿದ ಯೂನಿಲಿವರ್ ಕಂಪೆನಿ; 7,500 ಉದ್ಯೋಗ ಕಡಿತದ ಸೂಚನೆ

MP Tejaswi surya participate at Nagarthapet protest and KPCC Legal Cell complaint against him
ಬೆಂಗಳೂರು35 mins ago

Hanuman Chalisa: ನಗರ್ತಪೇಟೆ ಹಲ್ಲೆ ಕೇಸ್‌; ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್‌ ದೂರು!

IND vs PAK
ಕ್ರೀಡೆ38 mins ago

Champions Trophy: ಪಾಕಿಸ್ತಾನದಲ್ಲೇ ಚಾಂಪಿಯನ್ಸ್​ ಟ್ರೋಫಿ; ಪಿಸಿಬಿ ಅಧ್ಯಕ್ಷ ನಖ್ವಿ ವಿಶ್ವಾಸ

Hanuman Chalisa Warning
ಪ್ರಮುಖ ಸುದ್ದಿ41 mins ago

Hanuman Chalisa : ಇವತ್ತು ಜೈಲ್, ನಾಳೆ ಬೇಲ್, ಮತ್ತೆ ಅದೇ ಖೇಲ್‌; ನಗರ್ತ ಪೇಟೆ ಕಿರಾತಕರ ಸ್ಟೇಟಸ್‌

Hanuman Chalisa Prakash Raj reacted to the attack on a Hindu youth in Nagarthapet
ಬೆಂಗಳೂರು42 mins ago

Hanuman Chalisa: ನಗರ್ತಪೇಟೆಯಲ್ಲಿ ಹಿಂದೂ ಯುವಕನ ಮೇಲಿನ ಹಲ್ಲೆಗೆ ಪ್ರಕಾಶ್ ರೈ ಪ್ರತಿಕ್ರಿಯೆ ಹೀಗಿದೆ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Nagarthpet protest by BJP
ಬೆಂಗಳೂರು3 hours ago

Hanuman Chalisa: ನಗರ್ತಪೇಟೆ ಉದ್ವಿಗ್ನ; ಜೈಶ್ರೀರಾಮ್‌ ಕೂಗಿದ ಹಿಂದು ಕಾರ್ಯಕರ್ತರು, ಶೋಭಾ ಕರಂದ್ಲಾಜೆ ಪೊಲೀಸ್‌ ವಶಕ್ಕೆ

dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು22 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

ಟ್ರೆಂಡಿಂಗ್‌