Site icon Vistara News

Lakshmi Hebbalkar: ಸ್ಮೃತಿ ಇರಾನಿ ಭೇಟಿಯಾದ ಲಕ್ಷ್ಮೀ ಹೆಬ್ಬಾಳ್ಕರ್: ಅನುದಾನ ಬಿಡುಗಡೆಗೆ ಮನವಿ

Laxmi Hebbalkar with Smriti Irani

ಬೆಳಗಾವಿ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರನ್ನು ಭೇಟಿ ಮಾಡಿ, ಕೇಂದ್ರ ಪುರಸ್ಕೃತ ಯೋಜನೆಗಳ ಅನುದಾನ ಬಿಡುಗಡೆ ಕುರಿತಂತೆ ಸುದೀರ್ಘವಾಗಿ ಮಾತುಕತೆ ನಡೆಸಿದರು.

ಕೇಂದ್ರ ಪುರಸ್ಕೃತ ಯೋಜನೆಗಳಾದ ಸಖಿ ಒನ್ ಸ್ಟಾಪ್ ಸೆಂಟರ್, ಸಖಿ ನಿವಾಸ್, ಶಕ್ತಿ ಸದನ್, ಉಜ್ವಲ್ ಹಾಗೂ ಸ್ವಾಧಾರ ಗೃಹ ಯೋಜನೆಗಳ ಅನುದಾನ ಬಿಡುಗಡೆಗೊಳಿಸುವಂತೆ ವಿನಂತಿಸಿದರು. ಐಸಿಡಿಎಸ್ ಯೋಜನೆಯಡಿ ಅಂಗನವಾಡಿಗಳಿಗೆ ನೀಡಬೇಕಿರುವ ಅಕ್ಕಿ ಮತ್ತು ಗೋಧಿ ಕಳೆದ ಒಂದು ವರ್ಷದಿಂದ ಬಿಡುಗಡೆಯಾಗದೆ ಬಾಕಿ ಉಳಿದಿರುವ ಕುರಿತು ಸಹ ಕೇಂದ್ರ ಸಚಿವರ ಗಮನ ಸೆಳೆದ ಲಕ್ಷ್ಮೀ ಹೆಬ್ಬಾಳಕರ್, ಕೂಡಲೆ ಬಿಡುಗಡೆಗೊಳಿಸಲು ಕ್ರಮ ತೆಗೆದುಕೊಳ್ಳುವಂತೆ ಕೋರಿದರು.

ಜತೆಗೆ ರಾಜ್ಯದಲ್ಲಿ ಹೊಸದಾಗಿ ರಚನೆಯಾಗಿರುವ 51 ತಾಲೂಕುಗಳಿಗೆ ಶಿಶು ಅಭಿವೃದ್ಧಿ ಕಚೇರಿ ಮಂಜೂರು ಮಾಡುವಂತೆ ಮತ್ತು ಸಿಬ್ಬಂದಿ ನೀಡುವಂತೆ ಹಾಗೂ ಸಕ್ಷಮ್ ಯೋಜನೆಯಡಿಯ ಅಂಗನವಾಡಿ ಕೇಂದ್ರಗಳನ್ನು ಸ್ಮಾರ್ಟ ಕ್ಲಾಸ್ ರೂಂ ಆಗಿ ಪರಿವರ್ತಿಸಲು ಸಹ ಲಕ್ಷ್ಮೀ ಹೆಬ್ಬಾಳ್ಕರ್‌ ಮನವಿ ಮಾಡಿದರು.

ಇದನ್ನೂ ಓದಿ | COVID Subvariant JN1: ಆಕ್ಸಿಜನ್ ಸಿಲಿಂಡರ್, ಪ್ಲಾಂಟ್ ಎಷ್ಟಿದೆ? ವಾರದಲ್ಲಿ ವರದಿ ಕೊಡಲು ಸೂಚನೆ

ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸ್ಮೃತಿ ಇರಾನಿ, ತಕ್ಷಣ ಎಲ್ಲವುಗಳಿಗೆ ಸಂಬಂಧಿಸಿದಂತೆ ಸಮಗ್ರ ವರದಿ ನೀಡುವಂತೆ ಮತ್ತು ಅನುದಾನ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಇದನ್ನೂ ಓದಿ | Sharavathi victims: ಶರಾವತಿ ಸಂತ್ರಸ್ತರ ಬಾಕಿ ಪ್ರಕರಣದ ತ್ವರಿತ ಇತ್ಯರ್ಥಕ್ಕೆ ಈಶ್ವರ ಖಂಡ್ರೆ ಸೂಚನೆ

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಜೆ.ಸಿ.ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್ ಈ ಸಂದರ್ಭದಲ್ಲಿ ಇದ್ದರು.

ಮೇಕೆದಾಟು ಯೋಜನೆಗೆ ಅನುಮತಿ ಕೊಡಲು ಪ್ರಧಾನಿಗೆ ಸಿದ್ದರಾಮಯ್ಯ ಮೊರೆ

ನವ ದೆಹಲಿ: ಗೃಹ ಸಚಿವ ಅಮಿತ್ ಶಾ (Home Minister Amit Shah) ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಒತ್ತಾಯಿಸಿದ್ದೇವೆ. ಅವರೂ ಸಹ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ಅಲ್ಲದೆ, ಮೇಕೆದಾಟು ಯೋಜನೆ (Mekedatu Project) ಕೈಗೊಳ್ಳಲು ಶೀಘ್ರ ಅನುಮತಿ ನೀಡುವಂತೆ ಸಹ ಪ್ರಧಾನಿಗೆ ಈ ಸಂದರ್ಭದಲ್ಲಿ ಮನವಿ ಮಾಡಿರುವುದಾಗಿ ಸಿಎಂ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ಇದನ್ನೂ ಓದಿ | Lok Sabha Election: ಲೋಕಸಭೆ ಎಲೆಕ್ಷನ್ ಮೋದಿ v/s ಖರ್ಗೆ! ಕುತೂಹಲ ಕೆರಳಿಸಿದ ‘ಇಂಡಿಯಾ’ ನಡೆ

ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಿಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Exit mobile version