Site icon Vistara News

Women’s Day 2023: ಮಾ.20ರಂದು ಮಹಿಳಾ ದಿನಾಚರಣೆ; ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿಗಳು, ನೌಕರರಿಗೆ ರಜೆ

Establishment of Backward Classes Category-I Pinjara, Nadaf and 13 Other Castes Development Corporation

ಬೆಂಗಳೂರು: ಕರ್ನಾಟಕ ಸರ್ಕಾರಿ ನೌಕರರ ಸಂಘದಿಂದ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (Women’s Day 2023) ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಮಾ.20 ರಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿಗಳು ಹಾಗೂ ನೌಕರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆ ನೀಡಲಾಗಿದೆ.

ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ(ಆಡಳಿತ ಸುಧಾರಣೆ) ಜಿ.ಸುಧಾ ಅವರು ಸುತ್ತೋಲೆ ಹೊರಡಿಸಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿಗಳು, ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೊಳಪಟ್ಟು ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ಮಟ್ಟಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | KSRTC Employees Strike: ಕೆಎಸ್‌ಆರ್‌ಟಿಸಿ ಎಂಡಿ ಸಂಧಾನ ಸಫಲ; ಸಾರಿಗೆ ನೌಕರರ ಮುಷ್ಕರ ವಾಪಸ್

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ ವಸ್ತು ಪ್ರದರ್ಶನ, ವಿಚಾರ ಸಂಕಿರಣ

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ (KASSIA) ವಿಜಯನಗರದ ಕಚೇರಿಯಲ್ಲಿ ಒಂದು ದಿನದ ವಸ್ತು ಪ್ರದರ್ಶನ, ವಿಚಾರ ಸಂಕಿರಣವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ವಿವಿಧ ಭಾಗಗಳಿಂದ ಆಗಮಿಸಿದ ಮಹಿಳೆಯರು ಆಭರಣ ಸೇರಿ ವಿವಿಧ ಅಲಂಕಾರಿಕ ವಸ್ತುಗಳ ಸ್ಟಾಲ್​ಗಳ ಮೂಲಕ ಪ್ರದರ್ಶನ, ಮಾರಾಟ ನಡೆಸಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾದ ಡಾ.ಶೋಭರಾಣಿ ಐಪಿಎಸ್​, ಡಾ.ಶಾಲಿನಿ ನಲ್ವಾಡ್​ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಕಾಸಿಯಾ ಅಧ್ಯಕ್ಷ ನರಸಿಂಹಮೂರ್ತಿ, ಕಾರ್ಯಕ್ರಮಕ್ಕೆ ಬಂದ ಅತಿಥಿಗಳು, ಮಹಿಳೆಯರಿಗೆ ಯಾವ ರೀತಿ ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು, ಆರೋಗ್ಯದ ಬಗ್ಗೆ ಹೇಗೆ ಕಾಳಜಿವಹಿಸಬೇಕು ಎಂಬ ಹಲವು ವಿಷಯಗಳ ಬಗ್ಗೆ ತಿಳಿಸಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

Exit mobile version