Site icon Vistara News

ವಿಧಾನ ಪರಿಷತ್‌ ಚುನಾವಣೆ ಶಾಂತಿಯುತ ; 49 ಅಭ್ಯರ್ಥಿಗಳ ಭವಿಷ್ಯ ಮತಪಟ್ಟಿಗೆಯಲ್ಲಿ ಭದ್ರ

Vidhana soudha

ಬೆಂಗಳೂರು: ವಿಧಾನ ಪರಿಷತ್‌ನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ಚುನಾವಣೆ ಸಣ್ಣ ಪುಟ್ಟ ಗೊಂದಲಗಳನ್ನು ಹೊರತುಪಡಿಸಿ ಸೋಮವಾರ ಸುಗಮ ಹಾಗೂ ಶಾಂತಿಯುತವಾಗಿ ನಡೆಯಿತು. 49 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಜೂನ್‌ 15ರಂದು ಎಣಿಕೆ ಕಾರ್ಯ ನಡೆದು ಫಲಿತಾಂಶ ಹೊರಬೀಳಲಿದೆ.

ಸಂಜೆ 5 ಗಂಟೆಗೆ ಮತದಾನ ಮುಕ್ತಾಯವಾದಾಗ ನಾಲ್ಕೂ ಕ್ಷೇತ್ರಗಳಲ್ಲಿ ಸರಾಸರಿ 73.25% ಮತದಾನ ದಾಖಲಾಗಿದೆ. ವಾಯವ್ಯ ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತದಾನವಾಗಿದೆ. ಕಳೆದ ಬಾರಿ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ. 55.51% ಮತದಾನವಾಗಿತ್ತು, ಈ ಬಾರಿ 80.57% ಮತದಾನವಾಗಿದೆ. ಹಾಗೆಯೇ ಪದವೀಧರ ಕ್ಷೇತ್ರದಲ್ಲೂ ಈ ಬಾರಿ ಅತಿಹೆಚ್ಚು ಮತದಾನವಾಗಿದೆ. ಕಳೆದ ಬಾರಿ ವಾಯವ್ಯ ಪದವೀಧರ ಕ್ಷೇತ್ರದಲ್ಲಿ 47.84% ಮಂದಿ ಹಕ್ಕು ಚಲಾಯಿಸಿದ್ದರು, ಈ ಬಾರಿ ಪದವೀಧರ ಕ್ಷೇತ್ರದಲ್ಲಿ 59.68% ಮತ ಚಲಾವಣೆಯಾಗಿದೆ.
ಇನ್ನು ಪಶ್ಚಿಮ ಶಿಕ್ಷಣ ಕ್ಷೇತ್ರದಲ್ಲಿ 84% ಮತದಾನವಾಗಿದ್ದು, ದಕ್ಷಣ ಪದವೀಧರ ಕ್ಷೇತ್ರದಲ್ಲಿ 70% ಮತದಾನವಾಗಿದೆ.

ನಾಲ್ಕೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 11 ಜಿಲ್ಲೆಗಳು ಇವೆ. ವಾಯವ್ಯ ಶಿಕ್ಷಕರ, ಪದವೀಧರ ಕ್ಷೇತ್ರವು ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳನ್ನು ಒಳಗೊಂಡಿದೆ. ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳು ಬರುತ್ತವೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರ ಕನ್ನಡ ಜಿಲ್ಲೆಗಳು ಇವೆ.

ಇದನ್ನೂ ಓದಿ | ವಿಸ್ತಾರ Explainer: ರಾಷ್ಟ್ರಪತಿ ಚುನಾವಣೆ 2022- ಯಾರ ಮತಕ್ಕೆ ಎಷ್ಟು ಬೆಲೆ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

Exit mobile version