ಬೆಂಗಳೂರು: ಭಾರತೀಯ ಪಾರಂಪರಿಕ ವೈದ್ಯಕೀಯ ಪದ್ಧತಿ ಆಯುರ್ವೇದ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಡಾ. ಲೇಖನ ಪಂಡಿತ್ ಅವರು ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಯ (Ayurveda Unani Medical Council) ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಪ್ರಸ್ತುತ ಆಯುರ್ವೇದ ವೈದ್ಯಕೀಯ ಪದ್ಧತಿಯಡಿ ಆರೋಗ್ಯ ಕ್ಷೇತ್ರದಲ್ಲಿ ಸೇವೆ ನೀಡುತ್ತಿರುವ ಡಾ. ಲೇಖನ ಪಂಡಿತ್ ಅವರ ಸೇವೆ ಮತ್ತು ಅನುಭವವನ್ನು ಪರಿಗಣಿಸಿ ರಾಜ್ಯ ಸರ್ಕಾರ ಅವರನ್ನು ಮಂಡಳಿಯ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ಇದನ್ನೂ ಓದಿ: Mahavir Jayanti : ರಾಜ್ಯದಲ್ಲಿ ಮಹಾವೀರ ಜಯಂತಿ ಸರಕಾರಿ ರಜಾ ದಿನ ಬದಲಾವಣೆ, ಏಪ್ರಿಲ್ 3ರ ಬದಲು ಏಪ್ರಿಲ್ 4
ಕಳೆದ ಮಾರ್ಚ್ 27ರಂದು ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಈ ನೇಮಕಾತಿಯಿಂದ ಆಯುರ್ವೇದ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ ಎಂದು ಡಾ.ಲೇಖನ ಪಂಡಿತ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.