Leopard Attack: ಹೊನ್ನಾವರದಲ್ಲಿ ಚಿರತೆ ದಾಳಿಗೆ ಜಾನುವಾರು ಬಲಿ; ಹಂಪಿ ಪವರ್ ಹೌಸ್‌ನಲ್ಲಿ ಚಿರತೆ ಪ್ರತ್ಯಕ್ಷ - Vistara News

ಉತ್ತರ ಕನ್ನಡ

Leopard Attack: ಹೊನ್ನಾವರದಲ್ಲಿ ಚಿರತೆ ದಾಳಿಗೆ ಜಾನುವಾರು ಬಲಿ; ಹಂಪಿ ಪವರ್ ಹೌಸ್‌ನಲ್ಲಿ ಚಿರತೆ ಪ್ರತ್ಯಕ್ಷ

Leopard Attack: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಹೊನ್ನಾವರದಲ್ಲಿ ಹಸುವಿನ ಮೇಲೆ ದಾಳಿ ನಡೆಸಿದ್ದರೆ, ವಿಜಯನಗರದ ಹಂಪಿ ಪವರ್‌ ಹೌಸ್‌ನಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.

VISTARANEWS.COM


on

Cattle killed in leopard attack in Honnavar, Leopard spotted at Hampi power house
ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ಚಿರತೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ/ ವಿಜಯನಗರ: ರಾಜ್ಯದಲ್ಲಿ ಚಿರತೆ ದಾಳಿ (Leopard Attack) ಮುಂದುವರಿದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಮತ್ತೆ ಚಿರತೆ ಕಾಟ ಆರಂಭವಾಗಿದೆ. ಎರಡು ವಾರದಲ್ಲಿ 6 ಜಾನುವಾರುಗಳ ಮೇಲೆ ಚಿರತೆ ದಾಳಿ ನಡೆಸಿದೆ.

ಕಳೆದೊಂದು ವಾರದಿಂದ ಸಾಲ್ಕೋಡು, ಕೊಂಡದಕುಳಿ, ಕೆರೆಮನೆ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. 2 ಕರುಗಳು ಸೇರಿ 6 ಜಾನುವಾರುಗಳ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ. ಪದೆ ಪದೇ ಚಿರತೆ ದಾಳಿಯಿಂದಾಗಿ ಹೊನ್ನಾವರ ಭಾಗದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಚಿರತೆ ದಾಳಿಗಳು ನಡೆಯುತ್ತಿದ್ದರೂ ಅರಣ್ಯ ಇಲಾಖೆ ಕಣ್ಮುಚ್ಚಿ ಕುಳಿತುಕೊಂಡಿದೆ ಎಂದು ಗ್ರಾಮಸ್ಥರು ಅಸಮಾಧಾನ ಹೊರಹಾಕಿದ್ದಾರೆ. ಆದಷ್ಟು ಬೇಗ ಚಿರತೆ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Modi In Karnataka : ರೈತರ ಸಂಕಟಗಳಿಗೆ ಮೋದಿ, ಬೊಮ್ಮಾಯಿ ಕಾರಣ; 11 ಪ್ರಶ್ನೆಗಳಿಗೆ ಉತ್ತರಿಸಲು ಸಿದ್ದರಾಮಯ್ಯ ಸವಾಲು

ವಿಜಯನಗರದಲ್ಲೂ ಚಿರತೆ ಭೀತಿ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿ ಪವರ್ ಹೌಸ್‌ನಲ್ಲಿ (HPC) ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಕಾಣಿಸಿಕೊಂಡ ಸುದ್ದಿ ಕೇಳಿ ಜನರು ಭಯಭೀತರಾಗಿದ್ದಾರೆ. ಕಳೆದ ಬುಧವಾರವೂ ಚಿರತೆ ಪ್ರತ್ಯಕ್ಷವಾಗಿತ್ತು, ಈಗ ಮತ್ತೆ ವಿದ್ಯುತ್ ಪೂರೈಕೆ ಮಾಡುವ ಕೇಂದ್ರದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆ ಪ್ರತ್ಯಕ್ಷ್ಯವಾಗಿರುವ ದೃಶ್ಯವೆಲ್ಲ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೀಗಾಗಿ ಕೇಂದ್ರಕ್ಕೆ ಬರಲು ಸಿಬ್ಬಂದಿ ಹಿಂದೇಟು ಹಾಕುತ್ತಿದ್ದಾರೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಮಳೆ

Rain News : ಶುರುವಾಯ್ತು ಮಳೆ ಅವಘಡ; ಮಲಗಿದ್ದಾಗ ಚಾವಣಿ ಕುಸಿದು ಮಹಿಳೆ ಸಾವು

Rain News : ಒಂದು ಕಡೆ ಸಿಡಿಲಿಗೆ ಸಾವು-ನೋವು ಸಂಭವಿಸುತ್ತಿದ್ದರೆ, ಮತ್ತೊಂದು ಕಡೆ ರಾತ್ರಿ ಮಲಗಿದ್ದಾಗ ದಿಢೀರ್‌ ಮನೆ ಚಾವಣಿ ಕುಸಿದಿದೆ. ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಪಾಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

VISTARANEWS.COM


on

By

Rain news
Koo

ವಿಜಯನಗರ: ಧಾರಕಾರವಾಗಿ ಸುರಿಯುತ್ತಿರುವ ಮಳೆ (Rain News) ನಾನಾ ಅವಾಂತರವನ್ನು ಸೃಷ್ಟಿ ಮಾಡಿದ್ದು, ಜನರ ಸಾವು-ನೋವಿಗೆ ಕಾರಣವಾಗಿದೆ. ಭಾರಿ ಮಳೆಗಾಳಿಗೆ ಚಾವಣಿ ಕುಸಿದು ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಘಟನೆ ನಡೆದಿದೆ. ನಾಗಮ್ಮ (48) ಮೃತ ದುರ್ದೈವಿ.

ರಾತ್ರಿ ಪೂರ್ತಿ ಸುರಿದ ಭಾರಿ ಮಳೆಯೊಂದಿಗೆ, ರಭಸವಾಗಿ ಬೀಸಿದ ಗಾಳಿಗೆ ಮನೆ ಚಾವಣಿ ಕುಸಿದಿದೆ. ಈ ವೇಳೆ ನಾಗಮ್ಮ ಗಂಭೀರ ಗಾಯಗೊಂಡಿದ್ದರು. ಕೂಡಲೇ ಕುಟುಂಬಸ್ಥರು ಕೊಟ್ಟೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಾಗಮ್ಮ ಮೃತಪಟ್ಟಿದ್ದಾರೆ. ಕೊಟ್ಟೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗುಡುಗು ಮಳೆಗೆ ಕೆರೆಯಂತಾದ ರಸ್ತೆಗಳು

ಬಿಸಿಲಿನ ಧಗೆಗೆ ತತ್ತರಿಸಿದ್ದ ಬೀದರ್ ಜನತೆಗೆ ಶುಕ್ರವಾರ ರಾತ್ರಿಯಿಂದಲೇ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದೆ. ಏಕಾಏಕಿ ಮಳೆಯಿಂದಾಗಿ ವಾಹನ ಸವಾರರು, ಸಾರ್ವಜನಿಕರ ಪರದಾಡಿದರು. ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು. ತರಕಾರಿ, ತೋಟಗಾರಿಕೆ ಬೆಳೆಗಳು ಭಾರಿ ಪ್ರಮಾಣದಲ್ಲಿ ಹಾನಿಯಾಗಿವೆ. ಸಿಡಿಲು ಬಡಿದು ಬರೂರು ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಔರಾದ್, ಕಮಲನಗರ, ಭಾಲ್ಕಿ ತಾಲೂಕಿನಲ್ಲಿ‌ ಧಾರಾಕಾರ ಮಳೆ ಆಗುತ್ತಿದ್ದರೆ, ಬಸವಕಲ್ಯಾಣ, ಹುಮನಾಬಾದ್‌, ಚಿಟಗುಪ್ಪಾ ತಾಲೂಕುಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.

ಇದನ್ನೂ ಓದಿ: Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

ಮಳೆಯಲ್ಲಿಯೇ ಕ್ರಿಕೆಟ್‌ ಆಟ

ಕೊಪ್ಪಳದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ವರುಣನ ಆಗಮನದಿಂದ‌ ಜನರು ಸಂತಸಗೊಂಡಿದ್ದರು. ಬಿಸಿಲಿನಿಂದ‌ ಕಂಗೆಟ್ಟಿದ್ದವರು ಮಳೆಯಲ್ಲಿಯೇ ಯುವಕರು ಕ್ರಿಕೆಟ್ ಆಡಿದರು. ಗದಗ ಜಿಲ್ಲೆಯ ಮುಂಡರಗಿ, ಶಿರಹಟ್ಟಿ ಸೇರಿದಂತೆ ಹಲವೆಡೆ ಬಿರುಗಾಳಿ ಸಮೇತ ಗುಡುಗು ಮಳೆಯಾಗುತ್ತಿದೆ. ಮಳೆ ಶುರುವಾದ ಹಿನ್ನೆಲೆ ಜನಜೀವನ‌ ಅಸ್ತವ್ಯಸ್ತವಾಗಿತ್ತು. ಯಾದಗಿರಿ ನಗರದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದ್ದು, ಕಳೆದ ಅರ್ಧ ಗಂಟೆಯಿಂದ ಸುರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಎಡಬಿಡದೇ ಮಳೆ ಸುರಿಯುತ್ತಿದೆ. ಕೊಪ್ಪಳ ಜಿಲ್ಲೆಯಲ್ಲೂ ಭಾರಿ ಮಳೆಗೆ ಕೆಲವು ಕಡೆ ಹೊಲದ ಒಡ್ಡುಗಳು ಒಡೆದು ಹೋಗಿವೆ. ಕೊಪ್ಪಳ ತಾಲೂಕಿನ ಬೆಟಗೆರಿ ಹಾಗೂ ಬೋಚನಹಳ್ಳಿಯಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಾವಳಿಯಲ್ಲೂ ಮಳೆ ಅಬ್ಬರ

ಕರಾವಳಿಯ ಉತ್ತರಕನ್ನಡಕ್ಕೂ ವರುಣ ಕಾಲಿಟ್ಟಿದ್ದಾನೆ. ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮಳೆ ಅಬ್ಬರಿಸುತ್ತಿತ್ತು. ಶನಿವಾರ ಬೆಳಗ್ಗೆಯಿಂದ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಏಪ್ರಿಲ್ 22ರವರೆಗೆ ಮಳೆಯ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

Boat Capsizes: ಇಂದು ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ.

VISTARANEWS.COM


on

boat capsizes in bhatkal
Koo

ಕಾರವಾರ: ಅರಬ್ಬೀ ಸಮುದ್ರದಲ್ಲಿ (arabian sea) ಭಾರಿ ಗಾಳಿ ಮಳೆಯಿಂದಾಗಿ ಒಂದು ಮೀನುಗಾರಿಕಾ ಬೋಟ್ (Fishing boat capsizes) ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು (fishermen) ರಕ್ಷಿಸಲಾಗಿದೆ.

ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾದೇವ ಖಾರ್ವಿ ಎಂಬವರ ಮಾಲಕತ್ವದ ಓಂ ಮಹಾಗಣಪತಿ ಹೆಸರಿನ ಬೋಟ್ ಮುಳುಗಡೆಯಾಗಿದೆ.

ಇಂದು ಬೆಳಿಗ್ಗೆ 5 ಗಂಟೆಯ ವೇಳೆಗೆ 4 ಮಂದಿ ಮೀನುಗಾರರು ಈ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅರಬ್ಬೀ ಸಮದ್ರದಲ್ಲಿ ಕಾಣಿಸಿಕೊಂಡ ಭಾರೀ ಗಾಳಿ ಮಳೆಗೆ ಬೋಟ್ ಪಲ್ಟಿಯಾಗಿದೆ. ಸ್ಥಳದಲ್ಲಿದ್ದ ಇನ್ನೊಂದು ಬೋಟ್‌ನವರಿಂದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಬೋಟ್ ದುರ್ಘಟನೆಯಿಂದ ಮಾಲೀಕರಿಗೆ ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

ಇಂದು ಉತ್ತರಕನ್ನಡ ಜಿಲ್ಲೆಯ ಕರಾವಳಿಯಾದ್ಯಂತ ಭಾರೀ ಗಾಳಿ ಮಳೆ ಪ್ರಾರಂಭಗೊಂಡಿದೆ. ಸಮುದ್ರಕ್ಕೆ ತೆರಳುವವರಿಗೆ ಜಿಲ್ಲಾಡಳಿತ ಈ ಕುರಿತು ಅಲರ್ಟ್‌ ನೀಡಿದೆ.

ದೋಣಿ ಮುಳುಗಿ ಇಬ್ಬರು ಸಾವು, 7 ಮಂದಿ ನಾಪತ್ತೆ

ಭುವನೇಶ್ವರ:‌ ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿ (Mahanadi River)ಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿ ಬಿದ್ದ (Boat Capsizes) ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನಂತರ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಇನ್ನೂ ಏಳು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇತರ ಏಳು ಪ್ರಯಾಣಿಕರು ಇನ್ನೂ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಜತೆಗೆ ಐದು ಡೈವರ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿ, ನಾಲ್ವರು ಶಾಲಾ ಮಕ್ಕಳು ಜಲಸಮಾಧಿಯಾಗಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಇಂದೂ ಅಂತಹದ್ದೇ ದುರಂತ ಸಂಭವಿಸಿದೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿತ್ತು. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ದೋಣಿ ಮಗುಚಿತ್ತು.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading

ಮಳೆ

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Rain News: ಬೆಂಗಳೂರಿನಲ್ಲಿ ಮಳೆ ಯಾವಾಗ ಬರುತ್ತೆ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆಯಿಂದ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೆಂಗಳೂರು ಸೇರಿದಂತೆ ಹಲವೆಡೆ ವಾರಾಂತ್ಯದಲ್ಲಿ ಗುಡುಗು ಸಹಿತ ಗಾಳಿ, ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ವಾರಾಂತ್ಯದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಚದುರಿದಂತೆ ಹಗುರದಿಂದ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಬೆಳಗಾವಿ, ಧಾರವಾಡದಲ್ಲೂ ವರುಣನ ಸಿಂಚನವಾಗಲಿದೆ.

ಇದನ್ನೂ ಓದಿ: Instagram Reel: ಪ್ರಾಣಕ್ಕೇ ಕುತ್ತು ತಂದ ಇನ್‌ಸ್ಟಾಗ್ರಾಮ್‌ ರೀಲ್ಸ್‌; ಸಾಹಸ ಪ್ರದರ್ಶಿಸಲು ಹೋಗಿ 21 ವರ್ಷದ ಯುವಕ ಸಾವು

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ಉಡುಪಿಯಲ್ಲಿ ಸಾಧಾರಣ ಮಳೆಯಾಗಲಿದೆ.

ಇನ್ನೂ ಮಳೆಯಿಲ್ಲದೇ ಕಂಗೆಟ್ಟಿರುವ ರಾಜಧಾನಿ ಬೆಂಗಳೂರಿಗೂ ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಸಮಯದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 37 ಹಾಗೂ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಮುನ್ಸೂಚನೆ

ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Lok Sabha Election 2024: ಕಾರವಾರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ನಡೆಯಿತು.

VISTARANEWS.COM


on

kaalnadige Jatha programme in Uttara kannada
Koo

ಕಾರವಾರ: ಜಿಲ್ಲೆಯಾದ್ಯಂತ ಮತದಾನ ಜಾಗೃತಿಗಾಗಿ (Voting Awareness) ಜಿಲ್ಲಾ ಸ್ವೀಪ್ ಸಮಿತಿ ನೇತೃತ್ವದಲ್ಲಿ ಹತ್ತು ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದ್ದು, ಕಳೆದ ವಿಧಾನಸಭಾ ಚುನಾವಣೆಗಿಂತ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಮತದಾರರು ದಾಖಲೆ ಪ್ರಮಾಣದಲ್ಲಿ ಮತದಾನ ಮಾಡಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ್‌ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪ್ರಯುಕ್ತ ಸ್ವೀಪ್ ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಕಾಲ್ನಡಿಗೆ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಪಾರರ್ದಶಕ ಮತ್ತು ನ್ಯಾಯ ಸಮ್ಮತವಾದ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 85 ವರ್ಷ ಮೇಲ್ಪಟ್ಟ ಹಿರಿಯ ನೋಂದಾಯಿತ ನಾಗರಿಕರು ಹಾಗೂ ದಿವ್ಯಾಂಗ ಮತದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತದಾರರನ್ನು ಜಾಗೃತಗೊಳಿಸಲಾಗುತ್ತಿದೆ ಎಂದರು.

ಇದನ್ನೂ ಓದಿ: Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಮಾತನಾಡಿ, ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡುವಲ್ಲಿ ಯುವ ಮತದಾರರ ಪಾತ್ರ ಮಹತ್ವದ್ದಾಗಿರುತ್ತದೆ. ತಾವೆಲ್ಲರೂ ಯಾವುದೇ ಆಮಿಷಗಳಿಗೆ ಒಳಗಾಗದೇ ಜಾಗೃತ ಮತದಾರರಾಗಬೇಕು.

ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ಅಕ್ಕಪಕ್ಕದ ಮನೆಯವರಿಗೆ ಕಡ್ಡಾಯ ಮತದಾನದ ಮಹತ್ವವನ್ನು ಮನವರಿಕೆ ಮಾಡಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರಣೆ ನೀಡಬೇಕು. ಸಮಾಜಕ್ಕೆ ಉತ್ತಮರೆನಿಸಬಹುದಾದ ನಾಯಕರನ್ನು ಆರಿಸುವಲ್ಲಿ ಪ್ರಜ್ಞಾವಂತ ಯುವ ಮತದಾರರು ನೆರವಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಆವರಣದಿಂದ ಆರಂಭಗೊಂಡ ಜಾಥಾವು ಡಾ.ಪಿಕಳೆ ರಸ್ತೆ, ಸುಭಾಷ್ ಚಂದ್ರ ಬೋಸ್ ವೃತ್ತ, ಸವಿತಾ ಹೋಟೆಲ್ ವೃತ್ತ, ಟಿಎಚ್‌ಒ ಆಫೀಸ್ ಸರ್ಕಲ್ ಮಾರ್ಗವಾಗಿ ಸಾಗಿ ಜಿ.ಪಂ. ಆವರಣದಲ್ಲಿ ಅಂತ್ಯಗೊಂಡಿತು. ಬಳಿಕ ಜಿ.ಪಂ. ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ‘ನಾ ಭಾರತ’ ಚುನಾವಣಾ ಜಾಗೃತಿ ಗೀತೆಯನ್ನು ಪ್ರದರ್ಶಿಸಲಾಯಿತು.

ಇದನ್ನೂ ಓದಿ: Money Guide: ಮ್ಯೂಚುವಲ್‌ ಫಂಡ್‌ನಲ್ಲಿ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಇದರಲ್ಲಿನ ವಿಧಗಳ ಬಗ್ಗೆ ಇಲ್ಲಿದೆ ಮಾಹಿತಿ

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Continue Reading
Advertisement
KKR vs RCB
ಕ್ರಿಕೆಟ್1 min ago

KKR vs RCB: ತವರಿನ ಸೋಲಿಗೆ ಸೇಡು ತೀರಿಸೀತೇ ಆರ್​ಸಿಬಿ?

Surabhi Jain
ಪ್ರಮುಖ ಸುದ್ದಿ25 mins ago

Surabhi Jain : 30 ವರ್ಷಕ್ಕೆ ಮೃತಪಟ್ಟ ಫ್ಯಾಷನ್ ಐಕಾನ್​ ಸುರಭಿ ಜೈನ್

RCB vs KKR
ಕ್ರೀಡೆ58 mins ago

RCB vS KKR: ಗ್ರೀನ್​ ಜೆರ್ಸಿಯಲ್ಲಿ ಆರ್​ಸಿಬಿ ಅದೃಷ್ಟ ಹೇಗಿದೆ; ಎಷ್ಟು ಗೆಲುವು ಎಷ್ಟು ಸೋಲು?

Modi in Karnataka Here live video of Modi rally in Chikkaballapur
Lok Sabha Election 20241 hour ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Modi in Karnataka today Cm Siddaramaiah asks 11 questions to PM Modi
Lok Sabha Election 20241 hour ago

Modi in Karnataka: ಇಂದು ಕರ್ನಾಟಕಕ್ಕೆ ಮೋದಿ; ಪ್ರಧಾನಿಗೆ 11 ಪ್ರಶ್ನೆ ಕೇಳಿದ ಸಿಎಂ ಸಿದ್ದರಾಮಯ್ಯ

Uttarakaanda Movie bande kaaka rangayana Raghu
ಸ್ಯಾಂಡಲ್ ವುಡ್1 hour ago

Uttarakaanda Movie: ‘ಬಂಡೆ ಕಾಕಾ’ ನಾಗಿ ‘ಉತ್ತರಕಾಂಡ’ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ರಂಗಾಯಣ ರಘು

India Economy
ಪ್ರಮುಖ ಸುದ್ದಿ1 hour ago

Indian Economy : ಭಾರತದ ಆರ್ಥಿಕತೆ ಚೀನಾಕ್ಕಿಂತ ವೇಗವಾಗಿ ಬೆಳೆಯುತ್ತಿದೆ ಎಂದ ಐಎಮ್​ಎಫ್​

ರಾಜಕೀಯ2 hours ago

Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

Road Accident in karnataka
ಕೊಡಗು2 hours ago

Road Accident : ಯಮ ರೂಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಸ್ಕೂಟರ್‌ ಸವಾರ ಸಾವು, ಬಾಲಕ ಗಂಭೀರ

Gut Health
ಲೈಫ್‌ಸ್ಟೈಲ್2 hours ago

Gut Health: ನಿಮ್ಮ ಕರುಳಿನ ಆರೋಗ್ಯಕ್ಕಾಗಿ ಬೇಸಿಗೆಯಲ್ಲಿ ಈ ಡ್ರಿಂಕ್ಸ್ ಸೇವಿಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Here live video of Modi rally in Chikkaballapur
Lok Sabha Election 20241 hour ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ3 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ4 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ24 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

ಟ್ರೆಂಡಿಂಗ್‌