ಮಂಡ್ಯ: ಮಂಡ್ಯ, ಮೈಸೂರು ಭಾಗದಲ್ಲಿ ಚಿರತೆಗಳ ಹಾವಳಿ ಮಿತಿ ಮೀರಿದೆ. ಕಾಡಿನಿಂದ ನಾಡಿಗೆ ಬರುತ್ತಿರುವ ಚಿರತೆಗಳಿಗೆ ಜಾನುವಾರುಗಳು ಒಂದೆಡೆ ಬಲಿಯಾಗುತ್ತಿದ್ದರೆ, ಮನುಷ್ಯರ ಮೇಲೂ ದಾಳಿ ನಡೆಸುತ್ತಿವೆ. ಇದರಿಂದ ಜನರೂ ಸಹ ಭಯಭೀತರಾಗಿದ್ದಾರೆ. ಇದೀಗ ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ರೈತ ಮಹಿಳೆಯೊಬ್ಬರ ಮೇಲೆ ಚಿರತೆ ದಾಳಿ (Leopard attack) ನಡೆಸಿದ್ದು, ಸಣ್ಣಪುಟ್ಟ ಗಾಯಗಳಿಂದ ಅವರು ಬಚಾವ್ ಆಗಿದ್ದಾರೆ.
ಮಂಡ್ಯ ತಾಲೂಕಿನ ಅವ್ವೇರಹಳ್ಳಿ ಗ್ರಾಮ ಬಸಮ್ಮಣ್ಣಿ ಎಂಬುವವರು ಚಿರತೆ ದಾಳಿಯಿಂದ ಗಾಯಗೊಂಡವರು. ಇವರು ಜಮೀನಿಗೆ ತೆರಳುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದೆ ಎನ್ನಲಾಗಿದೆ. ಏಕಾಏಕಿ ಚಿರತೆ ದಾಳಿ ನಡೆಸಿದ್ದರಿಂದ ಮೊದಲು ಬಸಮ್ಮಣ್ಣಿ ಅವರಿಗೆ ಏನು ಮಾಡವುದೆಂದು ತೋಚಲಿಲ್ಲ. ತಕ್ಷಣವೇ ಕೂಗಿಕೊಂಡಿದ್ದಾರೆ. ಆಗ ಸುತ್ತಮುತ್ತಲಿನ ಜನರೂ ವಿಷಯ ತಿಳಿದು ಕೂಗಿದ್ದರಿಂದ ಚಿರತೆ ಓಡಿ ಹೋಗಿದೆ ಎಂದು ಹೇಳಲಾಗಿದೆ.
ಗಾಯಗೊಂಡ ಬಸಮ್ಮಣ್ಣಿ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಆದರೆ, ಸ್ಥಳೀಯ ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದವರು ಅರಣ್ಯ ಇಲಾಖೆ ಅಧಿಕಾರಿಗಳ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ. ತಕ್ಷಣವೇ ಚಿರತೆಯನ್ನು ಸೆರೆ ಹಿಡಿಯಬೇಕೆಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ | Bomb threat : ಬಸವೇಶ್ವರ ನಗರದ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇ-ಮೇಲ್; ಬಾಂಬ್ ಸ್ಕ್ವಾಡ್‌ನಿಂದ ಪರಿಶೀಲನೆ