ಚಾಮರಾಜನಗರ: ಇಲ್ಲಿನ ಗುಂಡ್ಲುಪೇಟೆ ತಾಲೂಕಿನ ಹುಲ್ಲೇಪುರ ಗ್ರಾಮದಲ್ಲಿ ಸಾಕುನಾಯಿ ಹಾಗೂ ಜಾನುವಾರುಗಳ ಮೇಲೆ ಚಿರತೆ ದಾಳಿ (Leopard Attack) ನಡೆಸಿದೆ. ಗ್ರಾಮದ ಸದಾಶಿವಮೂರ್ತಿ ಎಂಬುವವರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.
ಶುಕ್ರವಾರವಷ್ಟೆ ವೆಂಕಟರಮಣ ಸ್ವಾಮಿ ಬೆಟ್ಟ ತಪ್ಪಲಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಜಮೀನಿನಲ್ಲಿ ಚಿರತೆ ಪತ್ತೆಯಾಗಿದ್ದು, ಸಾಕು ನಾಯಿಯನ್ನು ಹೊತ್ತೊಯ್ದಿದೆ. ಕಳೆದ ಒಂದು ವಾರದಿಂದ ಕಿಲಗೆರೆ ವೆಂಕಟರಮಣ ಸ್ವಾಮಿ ಬೆಟ್ಟದ ಸಮೀಪ ಕಾಣಿಸಿಕೊಳ್ಳುತ್ತಿದ್ದು, ಜಾನುವಾರುಗಳ ಮೇಲೆ ದಾಳಿ ಮಾಡಿ ಕೊಂದಿದೆ.
ಅರಣ್ಯಾಧಿಕಾರಿಗಳು ಕೈಕಟ್ಟಿ ಕುಳಿತುಕೊಳ್ಳದೆ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಚಿರತೆ ಸೆರೆಗೆ ಹೆಚ್ಚಿನ ಬೋನಿಡುವಂತೆ ರೈತ ಸದಾಶಿವಮೂರ್ತಿ ಆಗ್ರಹಿಸಿದ್ದಾರೆ. ನಿರಂತರ ಚಿರತೆ ದಾಳಿಯಿಂದ ಜಮೀನಿಗೆ ಹೋಗಲು ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ಇದನ್ನೂ ಓದಿ | ಹೊನ್ನಾಳಿ ಡಾನ್ | ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಡಾನ್ ಆಗಿದ್ದ ಹೊನ್ನಾಳಿ ಹೋರಿ ಇನ್ನಿಲ್ಲ; ಬಿಕ್ಕಿ ಬಿಕ್ಕಿ ಅತ್ತ ಮಾಲೀಕರು