ಮೈಸೂರು: ಇಲ್ಲಿನ ತಿ.ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದ ಬಳಿಯ ಶ್ರೀ ಮಲ್ಲಿಕಾರ್ಜುನಸ್ವಾಮಿ ಬೆಟ್ಟದಲ್ಲಿ ಎರಡು ಚಿರತೆ (Leopard in mysore) ಪ್ರತ್ಯಕ್ಷವಾಗಿವೆ. ಬಂಡೆಕಲ್ಲುಗಳ ಮೇಲೆ ಚಿರತೆ ಕುಳಿತಿರುವ ದೃಶ್ಯವನ್ನು ಗ್ರಾಮಸ್ಥರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.
ಚಿರತೆ ಪ್ರತ್ಯಕ್ಷದಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಿದ್ದು, ಚಿರತೆಗಳ ದಾಳಿ ಭೀತಿಯಿಂದ ಜಾನುವಾರುಗಳನ್ನು ಮೇಯಿಸಲು ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಚಿರತೆಗಳನ್ನು ಸೆರೆ ಹಿಡಿದು ದೂರದ ಅರಣ್ಯ ಪ್ರದೇಶಕ್ಕೆ ಬಿಡುವಂತೆ ಗ್ರಾಮಸ್ಥರ ಒತ್ತಾಯಿಸಿದ್ದಾರೆ.
ಎರಡು ದಿನಗಳ ಹಿಂದೆ ಚಿರತೆ ದಾಳಿಗೆ ಬಲಿಯಾದ ಯುವಕ
ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ ಎಂಬಾತ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ. ಹೋಗುವಾಗಲೋ ಅಥವಾ ಬರುವಾಗಲೋ ಚಿರತೆ ಅವನ ಮೇಲೆ ದಾಳಿ ಮಾಡಿದ್ದು, ಯುವಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದ.
ಉಕ್ಕಲಗೆರೆ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವು ಬೆಟ್ಟದ ಮೇಲಿದ್ದು, ಕಲ್ಲು ಬಂಡೆಗಳ ನಡುವೆ ಸಾಗಬೇಕಾಗಿದೆ. ಈ ವೇಳೆ ಹೊಂಚು ಹಾಕಿ ಕುಳಿತ ಚಿರತೆ ಆತನ ಮೇಲೆ ದಾಳಿ ಮಾಡಿರಬಹುದು ಶಂಕಿಸಲಾಗಿದೆ. ಚಿರತೆ ದಾಳಿಗೆ ಸಿಲುಕಿ ಯುವಕ ಬಲಿಯಾಗಿದ್ದ ಸ್ಥಳದಲ್ಲಿಯೇ ಎರಡು ಚಿರತೆಗಳು ಪ್ರತ್ಯಕ್ಷವಾಗಿವೆ.
ಇದನ್ನೂ ಓದಿ | ತಾಯಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ನಡು ರಸ್ತೆಯಲ್ಲಿ ತಲೆಗೆ ಪಿಸ್ತೂಲ್ ಇಟ್ಟು ಮಾರಣಾಂತಿಕ ಹಲ್ಲೆ