Site icon Vistara News

ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷ ; ಆ.8 ರಂದು 13 ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಒಂದು ಕಿ.ಮೀ. ವ್ಯಾಪ್ತಿಯಲ್ಲಿರುವ 13 ಶಾಲೆಗಳಿಗೆ ಆ.8ರಂದು ರಜೆ ಘೋಷಿಸಿ ಬೆಳಗಾವಿ ನಗರ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ) ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 5ರಂದು ಮಧ್ಯಾಹ್ನ ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷವಾಗಿ ಕಟ್ಟಡ ಕಾರ್ಮಿಕನೊಬ್ಬನ ಮೇಲೆ ದಾಳಿ ಮಾಡಿತ್ತು. ಆದರೆ ಮೂರು ದಿನಗಳು ಕಳೆದರೂ ಚಿರತೆ ಪತ್ತೆಯಾಗಿಲ್ಲ. ಹೀಗಾಗಿ ಗಾಲ್ಫ್ ಮೈದಾನದ ಪ್ರದೇಶದಲ್ಲಿ ಚಿರತೆ ಇರುವ ಶಂಕೆ ಹಿನ್ನೆಲೆಯಲ್ಲಿ 7 ಬೋನುಗಳನ್ನು ಇರಿಸಿ, ಸಿಸಿ ಕ್ಯಾಮರಾ ಅಳವಡಿಸಿ, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ರಕ್ಷಣಾ ಇಲಾಖೆಗೆ ಸೇರಿದ 250 ಎಕರೆ ಪ್ರದೇಶದ ವ್ಯಾಪ್ತಿಯೊಳಗೆ ಚಿರತೆ ಇರುವ ಶಂಕೆ ಇದ್ದು, 50ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೀಗಾಗಿ ಜಾಧವ ನಗರ, ಹನುಮಾನ ನಗರ, ಕುವೆಂಪು ನಗರ, ಸಹ್ಯಾದ್ರಿ ನಗರ, ಕ್ಲಬ್ ರಸ್ತೆ, ಕ್ಯಾಂಪ್ ಪ್ರದೇಶದಲ್ಲಿರುವ ಶಾಲೆಗಳಿಗೆ ಡಿಡಿಪಿಐ ಮೌಖಿಕ ಆದೇಶದನ್ವಯ ಬೆಳಗಾವಿ ನಗರ ಬಿಇಒ ಆದೇಶ ಆದೇಶ ಹೊರಡಿಸಿದ್ದಾರೆ.

ಈ ಕೆಳಕಂಡ ಶಾಲೆಗಳಿಗೆ ಆ.೮ರಂದು ರಜೆ ಘೋಷಿಸಲಾಗಿದೆ;

ಇದನ್ನೂ ಓದಿ | Belagavi | ಜಾಧವ ನಗರದಲ್ಲಿ ಚಿರತೆ ಪ್ರತ್ಯಕ್ಷ ಪ್ರಕರಣ : ಮುಂದುವರಿದ ಕಾರ್ಯಾಚರಣೆ

Exit mobile version