ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ಭಾರತ ದೇಶ, ಕರ್ನಾಟಕ ಏಡ್ಸ್ (AIDS Day) ಮುಕ್ತ ದೇಶ /ರಾಜ್ಯ ಆಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.
ಇಲ್ಲಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನ 2023 ಮತ್ತು 25ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇತ್ತೀಚಿನ ದಿನಗಳಲ್ಲಿ ಎಚ್‌ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ನಮ್ಮ ಸಮಾಜವನ್ನು ಎಚ್‌ಐವಿ ಮುಕ್ತ ಸಮಾಜವನ್ನಾಗಿ (HIV free society) ಮಾಡಬೇಕು. ಇದಕ್ಕಾಗಿ ಜನರಲ್ಲಿ ಮತ್ತು ಯುವಜನರಲ್ಲಿ ಈ ಕುರಿತು ಜಾಗೃತಿ ಮೂಡಬೇಕು ಎಂದು ಹೇಳಿದರು.
2015-2020 ರವರೆಗೆ ಏಡ್ಸ್ ಪೀಡಿತರ ಸಂಖ್ಯೆಯನ್ನು ಸೊನ್ನೆಗೆ ತನ್ನಿ ಎಂಬ ಘೋಷವಾಕ್ಯವಿತ್ತು. ಆದರೆ ಈ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಈ ಘೋಷಣೆಯನ್ನು ಕಾರ್ಯರೂಪಕ್ಕೆ ತರುವುದು ಕೇವಲ ಆರೋಗ್ಯ ಇಲಾಖೆಯ ಹೊಣೆಯಾಗಿರದೇ, ಇಡೀ ಸಮಾಜದ ಹೊಣೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ: Fraud Case : ಅಮಾಯಕರ ಬ್ಯಾಂಕ್ ಅಕೌಂಟ್‌ಗಳಿಗೆ ಕನ್ನ ಹಾಕಿದ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು!
ಇಷ್ಟೆಲ್ಲ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿಯನ್ನು ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಏಡ್ಸ್ ಪೀಡಿತರೊಂದಿಗೆ ಸಿಎಂ ಮಾತುಕತೆ
ಸಮಾರಂಭದಲ್ಲಿ ಭಾಗವಹಿಸಿದ್ದ ಏಡ್ಸ್ ಕಾಯಿಲೆ ಪೀಡಿತ ವ್ಯಕ್ತಿಯೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಯಿಲೆ ಬಂದ ನಂತರ 26 ವರ್ಷಗಳ ಕಾಲ ಬದುಕಿದ್ದಾರೆ ಹಾಗೂ ಧೈರ್ಯವಾಗಿದ್ದಾರೆ ಎಂದು ಸಭಿಕರಿಗೆ ತಿಳಿಸಿದರು. ಆಂಜಿಯೋಪ್ಲಾಸ್ಟಿಯಾಗಿದ್ದರೂ ಧೈರ್ಯವಾಗಿ ಅದನ್ನು ಎದುರಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ: Solar Storm: ಇಂದು ಬೀಸಲಿದೆ ಸೌರ ಬಿರುಗಾಳಿ! ರೇಡಿಯೋ, ಇಂಟರ್‌ನೆಟ್ ಸಿಗ್ನಲ್ ಮೇಲೆ ಪ್ರಭಾವ
ಈ ಸಂದರ್ಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ನಟಿ ಸಂಜನಾ ಹಾಗೂ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.