Vistara Kannada Sambhrama : ನಿಮ್ಮ ನಿರ್ಧಾರ ನಿಮ್ಮದಾಗಲಿ; ವಿಸ್ತಾರ ಕನ್ನಡ ಸಂಭ್ರಮದಲ್ಲಿ ಯುವಜನತೆಗೆ ರಮೇಶ್‌ ಕಿವಿಮಾತು - Vistara News

ಕರ್ನಾಟಕ

Vistara Kannada Sambhrama : ನಿಮ್ಮ ನಿರ್ಧಾರ ನಿಮ್ಮದಾಗಲಿ; ವಿಸ್ತಾರ ಕನ್ನಡ ಸಂಭ್ರಮದಲ್ಲಿ ಯುವಜನತೆಗೆ ರಮೇಶ್‌ ಕಿವಿಮಾತು

Vistara Kannada Sambhrama : ನೋಡಿದ್ದು ಸುಳ್ಳಾಗಬಹುದು, ಕೇಳಿದ್ದೂ ಸುಳ್ಳಾಗಿಸಬಹುದು. ನಿಧಾನವಾಗಿ ಯೋಚಿಸಿದಾಗ ನಿಜವು ತಿಳಿವುದು. ಹೀಗಾಗಿ ಎಲ್ಲರೂ ನಿಧಾನವಾಗಿ ಯೋಚಿಸಿ ಕೆಲಸ ಮಾಡಿ ಎಂದು ರಮೇಶ್‌ ಅರವಿಂದ್‌ ಯುವ ಜನತೆಗೆ ಕಿವಿಮಾತು ಹೇಳಿದ್ದಾರೆ.

VISTARANEWS.COM


on

ramesh aravind in vistara kannada sambrama
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಪ್ಪ ಹೇಳಿದರು, ಅಮ್ಮ ಹೇಳಿದರು, ಅಜ್ಜ, ಅಜ್ಜಿ ಹೇಳಿದರು ಅಂತಾನೋ ಅಥವಾ ಇನ್ಯಾರೋ ಹೇಳಿದರು ಎಂದೋ ಇಲ್ಲವೇ ಮಾಡುತ್ತಿದ್ದರು ಎಂದೋ ನೀವು ಕಣ್ಣು ಮುಚ್ಚಿಕೊಂಡು ಅದನ್ನು ಮಾಡಬೇಡಿ. ಏನು ಮಾಡಿದರೆ ಸರಿ? ನಾವು ಏಕೆ ಇದನ್ನು ಮಾಡುತ್ತಿದ್ದೇವೆ? ಇದರಿಂದ ಏನಾಗುತ್ತದೆ? ನನಗೆ ಮಾಡುತ್ತಿರುವುದು ಸರಿ ಅನ್ನಿಸುತ್ತಿದೆಯಾ ಎಂದು ಪರಾಮರ್ಶೆ ಮಾಡಿಕೊಂಡು ಮಾಡಿ ಎಂದು ಯುವ ಜನತೆಗೆ ಜನಪ್ರಿಯ ನಟ ರಮೇಶ್‌ ಅರವಿಂದ್‌ (Actor Ramesh Aravind) ಅವರು “ವಿಸ್ತಾರ ಕನ್ನಡ ಸಂಭ್ರಮ” (Vistara Kannada Sambhrama) ಕಾರ್ಯಕ್ರಮದಲ್ಲಿ ಕಿವಿ ಮಾತು ಹೇಳಿದರು.

ವಿಸ್ತಾರ ನ್ಯೂಸ್‌ (Vistara News) ಆಯೋಜಿಸಿರುವ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮದಲ್ಲಿ ಮಾತನಾಡಿದ ರಮೇಶ್‌ ಅರವಿಂದ್‌ ಅವರು, ನೋಡಿದ್ದು ಸುಳ್ಳಾಗಬಹುದು, ಕೇಳಿದ್ದೂ ಸುಳ್ಳಾಗಬಹುದು. ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು. ಹೀಗಾಗಿ ಎಲ್ಲರೂ ನಿಧಾನವಾಗಿ ಯೋಚಿಸಿ ಕೆಲಸ ಮಾಡಿ ಎಂದು ಹೇಳಿದರು.

ramesh aravind in vistara kannada sambrama

ವಿಸ್ತಾರ ನ್ಯೂಸ್‌ ಪ್ರಕಾಶನದಿಂದ ನಾಲ್ಕು ಅತ್ಯುತ್ತಮ ಪುಸ್ತಕಗಳನ್ನು ಇಂದು ಹೊರತರಲಾಗಿದೆ. ಇದೊಂದು ಉತ್ತಮ ಕಲ್ಪನೆಯಾಗಿದೆ. ಎಲ್ಲರೂ ಪುಸ್ತಕ ಪ್ರೀತಿಯನ್ನು ಹೊಂದಿರಬೇಕು. ಇನ್ನು ಪುಸ್ತಕಗಳನ್ನು ನಾವು ಹೊತ್ತೊಯ್ಯುವುದಕ್ಕಿಂತ ಪುಸ್ತಕಗಳು ನಮ್ಮನ್ನು ಕರೆದೊಯ್ಯಬೇಕು. ಅವು ನಮಗೆ ದಾರಿದೀಪವಾಗಬೇಕು, ಮಾರ್ಗದರ್ಶನ ನೀಡಬೇಕು. ರಾಜಮಾರ್ಗವನ್ನು ತೋರಬೇಕು ಎಂದು ರಮೇಶ ಅರವಿಂದ್‌ ಅವರು ಇದೇ ವೇಳೆ ಹೇಳಿದರು.

ವಿಸ್ತಾರ ನ್ಯೂಸ್‌ನವರು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಸದಾ ಮಾಡಿಕೊಂಡು ಬರುತ್ತಿದ್ದಾರೆ. ಇದೇ ನಮಗೆ ಆಪ್ಯಾಯತೆಯನ್ನು ತಂದು ಕೊಡುತ್ತದೆ. ನಮ್ಮ ಸಂಸ್ಕೃತಿಯನ್ನು ಈ ವಾಹಿನಿಯು ಉತ್ತಮವಾಗಿ ಬಿತ್ತರಿಸುತ್ತಿದೆ. ಇಡೀ ತಂಡಕ್ಕೆ ನನ್ನ ಧನ್ಯವಾದಗಳು ಎಂದು ರಮೇಶ್‌ ಅರವಿಂದ್‌ ಈ ಸಂದರ್ಭದಲ್ಲಿ ಹೇಳಿದರು.

ramesh aravind in vistara kannada sambrama

ವಿಸ್ತಾರ ನ್ಯೂಸ್‌ಗೆ ಹ್ಯಾಪಿ ಬರ್ತ್‌ಡೇ: ಲಕ್ಷ್ಮಣ ರಾವ್‌

ವರ್ಷದ ಸಂಭ್ರಮದಲ್ಲಿರುವ ವಿಸ್ತಾರ ನ್ಯೂಸ್‌ಗೆ ಹ್ಯಾಪಿ ಬರ್ತ್ ಡೇ. ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದು ನನಗೆ ಸಂತಸ ತಂದಿದೆ. ವಿಸ್ತಾರ ಬೇರೆಲ್ಲ ಸುದ್ದಿ ವಾಹಿನಿಗಿಂತ ಭಿನ್ನ ಅನ್ನೋದನ್ನು ತೋರಿಸುತ್ತಾ ಬಂದಿದೆ. ಇದು ಬರೀ ಸುದ್ದಿ ವಾಹಿನಿಯಲ್ಲ, ನಾಡಿನ ಸಂಸ್ಕೃತಿಯ ವಾಹಿನಿಯಾಗಿದೆ. ಹರಿಪ್ರಕಾಶ್ ಕೋಣೆಮನೆಯವರ ಟಾರ್ಗೆಟ್ ಈಗಿನ ಜನರೇಶನ್ ಆಗಿದೆ. ಅವರು ಕಿರಿಯರ ಮೂಲಕ ಕನ್ನಡವನ್ನು ಬೆಳೆಸಲು ಹೊರಟಿದ್ದಾರೆ. ವಿಸ್ತಾರ ನ್ಯೂಸ್‌ 50 ವರ್ಷ, ನೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಲಿ ಎಂದು ಕವಿ ಲಕ್ಷ್ಮಣ ರಾವ್ ಹೇಳಿದರು.

Vistara prakashana book released and ramesh aravind

ಇಂದು ನಮ್ಮ ಪ್ರಕಾಶನದಿಂದ 50% ರಿಯಾಯಿತಿ: ಬಸವರಾಜ್‌ ಕೊನೇಕಾ

ಸಿದ್ದಲಿಂಗೇಶ್ವರ ಬುಕ್‌ ಡಿಪೊ ಮತ್ತು ಪ್ರಕಾಶನದ ಮಾಲೀಕ ಬಸವರಾಜ್ ಕೊನೇಕಾ ಮಾತನಾಡಿ, ಯುಗಾದಿ ಕಥಾ ಸ್ಪರ್ಧೆಗೆ ತುಂಬಾ ಸಂತಸದಿಂದ ಒಪ್ಪಿಗೆ ಕೊಟ್ಟಿದ್ದೆ. ಆ ಕಥೆಗಳನ್ನು ಪುಸ್ತಕ ರೂಪದಲ್ಲಿ ತರಲು ಒಪ್ಪಿಕೊಂಡರು. ಇಡೀ ಕರ್ನಾಟಕ ಕನ್ನಡ ಸಂಭ್ರಮ ಮಾಡುವ ಹೊತ್ತಲ್ಲೇ ವಿಸ್ತಾರ ಸಂಭ್ರಮ ಆಚರಿಸುತ್ತಿದೆ. ಇವತ್ತು ನಮ್ಮ ಪ್ರಕಾಶನದಿಂದ 50% ರಿಯಾಯಿತಿ ಕೊಟ್ಟಿದ್ದೇವೆ. ಈ ಸಮಾರಂಭಕ್ಕೆ ನನ್ನನ್ನು ಕರೆದು ಗೌರವಿಸಿದ್ದಕ್ಕೆ ನನ್ನ ಧನ್ಯವಾದಗಳು ಎಂದು ಹೇಳಿದರು.

ಇದನ್ನೂ ಓದಿ: Vistara Kannada Sambhrama :‌ ವಿಸ್ತಾರ ಪ್ರಕಾಶನದ ನಾಲ್ಕು ಪುಸ್ತಕಗಳ ಲೋಕಾರ್ಪಣೆ; ಏನಿದರ ವಿಶೇಷತೆ?

ವಿಸ್ತಾರ ನೂರು ವರ್ಷ ಪೂರೈಸಲಿ

ನಟಿ ಬೃಂದಾ ಆಚಾರ್ಯ ಮಾತನಾಡಿ, ವಿಶಾಲ ಇತಿಹಾಸವಿರುವ ಕನ್ನಡವನ್ನು ಈ ರೀತಿ ಸಂಭ್ರಮಿಸುತ್ತಿದ್ದೇವೆ. ಮುಂಬೈನಿಂದ ಬಂದ ನನ್ನನ್ನು ಕನ್ನಡಿಗರು ಒಪ್ಪಿಕೊಂಡಿದ್ದಾರೆ. ಕನ್ನಡ ನಾಡು, ನುಡಿ ನಮ್ಮ ಜತೆ ಇರಲಿ. ವಿಸ್ತಾರ ನೂರಾರು ವರ್ಷಗಳನ್ನು ಪೂರೈಸಲಿ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Hassan Pen Drive Case: ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದು, ಎಚ್‌ಡಿ ರೇವಣ್ಣ ಅವರು ಉತ್ತರ ಕರ್ನಾಟಕದ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಮನೆಯಲ್ಲೇ ಇದ್ದಾರೆ ಎಂದೂ ಹೇಳಲಾಗುತ್ತಿದೆ.

VISTARANEWS.COM


on

hassan pen drive case hd revanna prajwal revanna
Koo

ಹಾಸನ: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿರುವ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋಗಳ ಆರೋಪಿಗಳಾಗಿರುವ (Hassan Pen Drive Case) ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗು ಹಾಸನ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ನೊಟೀಸ್ (Notice) ಅನ್ನು ಅಂಟಿಸಿ ಎಸ್‌ಐಟಿ (SIT) ಟೀಂ ವಾಪಸಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಪ್ರಜ್ವಲ್‌ ರೇವಣ್ಣ ಜರ್ಮನಿಗೆ ತೆರಳಿದ್ದು, ಎಚ್‌ಡಿ ರೇವಣ್ಣ ಅವರು ಉತ್ತರ ಕರ್ನಾಟಕದ ಚುನಾವಣೆ ಪ್ರಚಾರಕ್ಕೆ ತೆರಳಿದ್ದಾರೆ ಎನ್ನಲಾಗಿದೆ. ಮನೆಯಲ್ಲೇ ಇದ್ದಾರೆ ಎಂದೂ ಹೇಳಲಾಗುತ್ತಿದೆ.

ಇಂದು ಸ್ಥಳ ಮಹಜರು

ಇಂದು ಹೊಳೆನರಸೀಪುರಕ್ಕೆ ತೆರಳಿರುವ ಎಸ್‌ಐಟಿ ಟೀಂ, ಏಪ್ರಿಲ್ 28ರಂದು ದೂರು ನೀಡಿದ್ದ ಸಂತ್ರಸ್ತ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರ್ ನಡೆಸಲಿದೆ. ಹೊಳೆನರಸೀಪುರದ ಎಚ್‌ಡಿ ರೇವಣ್ಣ ಮನೆಯಲ್ಲಿ ಕೂಡ ಮಹಜರ್ ನಡೆಸಬೇಕಿದೆ. ತಾನು ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ರೇವಣ್ಣ ಲೈಂಗಿಕ ಕಿರುಕುಳ ನೀಡಿದ್ದಾಗಿ ಮಹಿಳೆ ದೂರು ನೀಡಿದ್ದರು.

ಹೊಳೆನರಸೀಪುರ ನಗರ ಠಾಣೆ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದರು. ಬಳಿಕ ಪ್ರಕರಣವನ್ನು ಸರ್ಕಾರ ಎಸ್‌ಐಟಿಗೆ ವಹಿಸಿತ್ತು. ನಿನ್ನೆ ಮಹಿಳೆಯ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿಕೊಂಡಿದೆ. ಇಂದು ಖುದ್ದು ಮಹಿಳೆ ಸಮ್ಮುಖದಲ್ಲಿ ಸ್ಥಳ ಮಹಜರ್ ಮಾಡಬೇಕಿದೆ.

ಪ್ರಜ್ವಲ್‌ಗೆ ನೋಟಿಸ್‌ ಇಶ್ಯೂ ಹೇಗೆ?

ಪ್ರಕರಣದ ಎ1 ಹೆಚ್.ಡಿ ರೇವಣ್ಣ ಹಾಗೂ ಎ2 ಪ್ರಜ್ವಲ್‌ ರೇವಣ್ಣ ಇಬ್ಬರಿಗೂ ನೊಟೀಸ್ ಇಶ್ಯೂ ಆಗಿದ್ದು, ಇದನ್ನು ಪ್ರಜ್ವಲ್‌ಗೆ ತಲುಪಿಸುವುದು ಹೇಗೆ ಎಂಬುದು ಈಗ ಎಸ್‌ಐಟಿ ಮುಂದಿರುವ ಪ್ರಶ್ನೆಯಾಗಿದೆ. ಪ್ರಜ್ವಲ್ ಸದ್ಯ ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದು, ಎರಡು ತಿಂಗಳ ಟೂರಿಸ್ಟ್ ವೀಸಾದಲ್ಲಿ ತೆರಳಿದ್ದಾರೆ.

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಆದರೆ ಪ್ರಜ್ವಲ್ ರೇವಣ್ಣಗೆ ನೊಟೀಸ್ ಕೊಟ್ಟು ಕರೆಸಿಕೊಳ್ಳಲು ಫ್ರಾಂಕ್‌ಫರ್ಟ್ ಟ್ರೀಟಿ ಏನು ಹೇಳುತ್ತದೆ ಎಂದು ತಿಳಿಯಬೇಕಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಹೆಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಸದ್ಯ ತೀವ್ರಗತಿಯಲ್ಲಿ ಸಾಗುತ್ತಿರುವ ತನಿಖೆ ಪ್ರಜ್ವಲ್‌ ಗೈರುಹಾಜರಿಯಲ್ಲಿ ವಿಳಂಬಗತಿಗೆ ಜಾರಬಹುದು. ಚುನಾವಣೆ ಬಿಸಿ ಮುಗಿದ ನಂತರ ಹಳ್ಳ ಹಿಡಿಯಲೂಬಹುದು. ಆದರೆ ಒಬ್ಬ ಸಂಸತ್‌ ಸದಸ್ಯ ತಲೆ ತಪ್ಪಿಸಿಕೊಂಡಿದ್ದಾರೆಂದರೆ ಕ್ಷೇತ್ರಕ್ಕೆ, ಪಕ್ಷಕ್ಕೆ ಹಾಗೂ ಇಡೀ ರಾಜ್ಯಕ್ಕೆ ಮುಜುಗರದ ಸಂಗತಿ.

ಅರೋಪಿಗಾಗಿ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೊಟೀಸ್ ಜಾರಿ ಮಾಡುವ ಸಾಧ್ಯತೆ ಇದೆ. ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಹಾಗೂ ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿ, “ಯಾರನ್ನೇ ಆದರೂ ಏಕಾಏಕಿ ಬಂಧನ ಮಾಡುವುದಿಲ್ಲ” ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೊಟೀಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

“ನಾವು SIT ಮಾಡಿ ತನಿಖೆಗೆ ಚಾಲನೆ ಕೊಟ್ಟಿದ್ದೇವೆ. ಅವರೇನೂ ಮಾಡಿಲ್ಲ ಅಂತ ಅಮಿತ್ ಶಾ ಹೇಳಿದ್ದಾರೆ. ಇದರಲ್ಲಿ ಯಾರನ್ನೂ ರಕ್ಷಣೆ ಮಾಡುವಂತಹದ್ದು ಏನೂ ಇಲ್ಲ. ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬೇಕೋ ಅದನ್ನ ಮಾಡ್ತೀವಿ. ಇದರಲ್ಲಿ ಬಹಳ ಜನರ ಜೀವನ ಇದೆ. ಇಷ್ಟ ಬಂದ ಹಾಗೆ ತನಿಖೆ‌ ಮಾಡೋಕೆ ಆಗೊಲ್ಲ. SIT ತನಿಖೆ ಶುರುವಾಗಿದೆ. ನೊಟೀಸ್‌ ಕೊಟ್ಟಿದ್ದಾರೆ. ದೂರು ಕೊಟ್ಟವರ ಹೇಳಿಕೆ ಪಡೆದಿದ್ದಾರೆ. ಏನು ಕಾನೂನು ಪ್ರಕ್ರಿಯೆ ಇದೆಯೋ ಆ ರೀತಿ ಮಾಡ್ತಿದ್ದಾರೆ” ಎಂದು ಪರಮೇಶ್ವರ್‌ ತಿಳಿಸಿದ್ದಾರೆ.

ಇದನ್ನೂ ಓದಿ: Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

Continue Reading

ಕ್ರೈಂ

Assault Case: ನನ್ನ ಪ್ರೇಯಸಿಗೆ ಮೆಸೇಜ್ ಮಾಡ್ತೀಯಾ ಎಂದು ಬೆರಳು ಕಟ್!

Assault Case: ಫ್ಲವರ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಹರ್ಷಿತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಶಶಾಂಕ್ ಹಾಗೂ ಹಾಗೂ ಚಂದನ್ ಎಂಬವರು ಲಾಂಗ್‌ ಬೀಸಿದ್ದಾರೆ. ಲಾಂಗು- ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರೂ ಹರ್ಷಿತ್‌ನ ಬಲಗೈನ ಹೆಬ್ಬೆರಳು ಕಟ್ ಆಗಿದೆ. ಎಡಗೈನ ಮುಂಗೈಯನ್ನು ಎರಡು ತುಂಡು ಮಾಡಿದ್ದಾರೆ.

VISTARANEWS.COM


on

assault case finger cut basavanagudi
ಆರೋಪಿಗಳಾದ ಶಶಾಂಕ್‌, ಚಂದನ್
Koo

ಬೆಂಗಳೂರು: ತನ್ನ ಪ್ರಿಯತಮೆ (Lover) ಜೊತೆ ಗೆಳೆತನ‌ (Friendship) ಬೆಳೆಸಿದ್ದಕ್ಕೆ ಯುವಕನ ಮೇಲೆ ಮಾಜಿ ಪ್ರಿಯಕರ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿ (Assault Case) ಯುವಕನೊಬ್ಬನ ಬೆರಳುಗಳನ್ನೇ ಕತ್ತರಿಸಿ (Finger cut) ಹಾಕಿದ್ದಾನೆ. ಬಸವನಗುಡಿ ಬುಲ್ ಟೆಂಬಲ್ ರಸ್ತೆಯಲ್ಲಿರುವ ಪುಲ್ವಾಡಿ ಫ್ಲವರ್ ಶಾಪ್‌ನಲ್ಲಿ ಏಪ್ರಿಲ್ 28ರಂದು ರಾತ್ರಿ 8.30ಕ್ಕೆ ಈ ಘಟನೆ (Crime news) ನಡೆದಿದೆ.

ಫ್ಲವರ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಹರ್ಷಿತ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಶಶಾಂಕ್ ಹಾಗೂ ಹಾಗೂ ಚಂದನ್ ಎಂಬವರು ಲಾಂಗ್‌ ಬೀಸಿದ್ದಾರೆ. ಲಾಂಗು- ಮಚ್ಚಿನಿಂದ ಹಲ್ಲೆ ನಡೆಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರೂ ಹರ್ಷಿತ್‌ನ ಬಲಗೈನ ಹೆಬ್ಬೆರಳು ಕಟ್ ಆಗಿದೆ. ಎಡಗೈನ ಮುಂಗೈಯನ್ನು ಎರಡು ತುಂಡು ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ ಹೀಗಿದೆ: ಬಿಕಾಂ ಮುಗಿಸಿದ್ದ ಹರ್ಷಿತ್ ತಂದೆಯ ಫ್ಲವರ್ ಡೆಕೊರೇಷನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಕಟ್ಟಡದಲ್ಲಿ ಒಂದು ಡಯೋಗ್ನಾಸ್ಟಿಕ್ ಸೆಂಟರ್ ಇದೆ. ಡಯೋಗ್ನಾಸ್ಟಿಕ್ ಸೆಂಟರ್‌ನಲ್ಲಿ ಯುವತಿ ಕೆಲಸ ಮಾಡುತ್ತಿದ್ದಳು. ಚಿಲ್ಲರೆ ಕೇಳಲು ಹೋಗಿ‌ ಬಂದಾಗ ಯುವತಿ ಮತ್ತು ಹರ್ಷಿತ್ ಮಧ್ಯೆ ಗೆಳೆತನ ಬೆಳೆದಿದೆ. ಅದೇ ಗೆಳೆತನ ನಂಬರ್ ಎಕ್ಸ್‌ಚೇಂಜ್ ಆಗಿ ಚಾಟ್ ಮಾಡುವ ಹಂತಕ್ಕೆ ಬಂದಿತ್ತು.

ಆದರೆ ಆ ಯುವತಿಯನ್ನು ಪ್ರೀತಿ ಮಾಡುತ್ತಿದ್ದ ಆರೋಪಿ ಶಶಾಂಕ್‌ಗೆ, ಇವರಿಬ್ಬರ ಮಧ್ಯೆ ಏನೋ ನಡೆಯುತ್ತಿದೆ ಅನ್ನುವ ಅನುಮಾನ ಮೂಡಿತ್ತು. ಯುವತಿಯ ಮೊಬೈಲ್ ಪರಿಶೀಲನೆ ವೇಳೆ ಚಾಟ್ ಮಾಡಿರುವುದು ಕಂಡಿದೆ. ಇದರಿಂದ ಶಶಾಂಕ್ ಕೋಪದಿಂದ ಕುದ್ದು ಹೋಗಿದ್ದ. ಕೇವಲ ಸ್ನೇಹಿತರ ನಡುವಿನ ರೀತಿಯ ಮೆಸೇಜ್‌ಗಳಿದ್ದರೂ ಕೋಪದಿಂದ ಕುರುಡಾಗಿದ್ದ ಶಶಾಂಕ್‌ ಅದನ್ನು‌ ಸಹಿಸಿಕೊಳ್ಳಲು ಸಿದ್ಧವಿರಲಿಲ್ಲ. ಹರ್ಷಿತ್‌ಗೆ ಒಂದು ಗತಿ ಕಾಣಿಸಬೇಕು ಎಂದು ನಿರ್ಧರಿಸಿದ್ದ.

ಏಪ್ರಿಲ್ 28ರಂದು ಸ್ನೇಹಿತ ಚಂದನ್‌ನನ್ನು ಕರೆಸಿಕೊಂಡಿದ್ದ. ಇಬ್ಬರೂ ಬಾರ್‌ನಲ್ಲಿ ಕುಡಿದು ಲಾಂಗ್ ಜೊತೆಗೆ ಹರ್ಷಿತ್ ಅಂಗಡಿಗೆ ಬಂದಿದ್ದಾರೆ. ಬಂದವರೇ ಹರ್ಷಿತ್ ಮೇಲೆ ಯದ್ವಾತದ್ವಾ ಲಾಂಗ್‌ ಬೀಸಿ ಪರಾರಿ ಆಗಿದ್ದಾರೆ. ಕೈಯಿಂದ ರಕ್ತ ಸೋರುತ್ತಿದ್ದರೂ‌ ಹರ್ಷಿತ್‌ ಫುಟ್‌ಪಾತ್ ಮೇಲೆ ಬಂದು ನಿಂತಿದ್ದಾನೆ. ಕೆಲವೇ ಹೊತ್ತಲ್ಲಿ ಫುಟ್‌ಪಾತ್ ರಕ್ತದ ಕೋಡಿಯಾಗಿದೆ. ತುಂಡಾದ ಬೆರಳನ್ನು ಬಟ್ಟೆಯಲ್ಲಿ ಸುತ್ತಿಕೊಂಡು ಹರ್ಷಿತ್‌ ಆಸ್ಪತ್ರೆಗೆ ಹೋಗಿದ್ದಾನೆ.

ಹರ್ಷಿತ್‌ನನ್ನು ಪಕ್ಕದಲ್ಲೇ ಇರುವ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಗಳನ್ನು ಶಂಕರಪುರ ಠಾಣೆ ಪೊಲೀಸರು ಹೆಡೆಮುರಿ ಕಟ್ಟಿ ವಿಚಾರಿಸಿಕೊಳ್ಳುತ್ತಿದ್ದಾರೆ.

Physical Abuse: ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಒತ್ತಡ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರು ಹೆಣ್ಮಕ್ಕಳಿಗೆ ಎಷ್ಟು ಸೇಫ್ ಎಂಬ ಪ್ರಶ್ನೆ ಮತ್ತೆ ಮತ್ತೆ ಎದುರಾಗುತ್ತಲೇ ಇದೆ. ಇಂಥ ಕರಾಳ ಪ್ರಕರಣಗಳು ಘಟಿಸುತ್ತಲೇ ಇವೆ. ನಿನ್ನೆ ರಾತ್ರಿ ಬಿಹಾರ ಮೂಲದ ದಂಪತಿಗೆ ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ.

ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಿನ್ನೆ ರಾತ್ರಿ 10:30ರ ಸುಮಾರಿಗೆ ನಡೆದ ಘಟನೆ ಇದು.

ಇದನ್ನೂ ಓದಿ: Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

ಜೊತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ.

ಇದರಿಂದ ಭಯಭೀತರಾದ ದಂಪತಿ ಸಹಾಯ ಕೋರಿ ಬೆಂಗಳೂರು ಪೋಲಿಸರಿಗೆ ಫೋನ್ ಮಾಡಿದರೂ ಸರಿಯಾದ ರೆಸ್ಪಾನ್ಸ್ ಸಿಕ್ಕಿಲ್ಲ. ಕಿರುಕುಳದ ಬಗ್ಗೆ ಬೆಂಗಳೂರು ಪೋಲಿಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಬೆಂಗಳೂರು ಪೋಲಿಸರು ಸ್ಪಂದಿಸದಿದ್ದುದರಿಂದ ಬಿಹಾರ ಪೋಲಿಸರಿಗೆ ದಂಪತಿ ಫೋನ್ ಮಾಡಿದ್ದಾರೆ. ಕೊಡಿಗೆಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ; ಕಿಡಿ ಕಾರಿದ ಬಹುಭಾಷಾ ನಟಿ ಪೂನಂ ಕೌರ್

Continue Reading

ಕ್ರೈಂ

Physical Abuse: ನಡುಬೀದಿಯಲ್ಲಿ ಲೈಂಗಿಕ ಕಿರುಕುಳ, ಹೆಂಡತಿಯನ್ನು ಕಳಿಸುವಂತೆ ಗಂಡನಿಗೆ ಬೆದರಿಕೆ

Physical Abuse: ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ.

VISTARANEWS.COM


on

physical abuse bangalore crime
Koo

ಬೆಂಗಳೂರು: ಸಿಲಿಕಾನ್‌ ಸಿಟಿ (Silicon city) ಬೆಂಗಳೂರು ಹೆಣ್ಣು ಮಕ್ಕಳಿಗೆ ಎಷ್ಟು ಸೇಫ್ ಎಂಬ ಪ್ರಶ್ನೆ ಮತ್ತೆ ಮತ್ತೆ ಎದುರಾಗುತ್ತಲೇ ಇದೆ. ಇಂಥ ಕರಾಳ ಪ್ರಕರಣಗಳು (Crime news) ಘಟಿಸುತ್ತಲೇ ಇವೆ. ನಿನ್ನೆ ರಾತ್ರಿ ಬಿಹಾರ ಮೂಲದ ದಂಪತಿಗೆ ಲೈಂಗಿಕ ಕಿರುಕುಳದ (Physical abuse) ಕರಾಳ ಅನುಭವ ಆಗಿದ್ದು, ಅದರಿಂದ ಪಾರಾಗಲು ಇಬ್ಬರೂ ಒದ್ದಾಡಿದ್ದಾರೆ.

ನಗರದಲ್ಲಿ ಪದೇ ಪದೆ ಬೆಳಕಿಗೆ ಬರುತ್ತಿರುವ ಹೆಣ್ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಇದೂ ಒಂದು ಸೇರ್ಪಡೆ. ರಾತ್ರಿ ಸಮಯದಲ್ಲಿ ಯುವತಿಯೊಬ್ಬಳಿಗೆ ಪುಂಡರು ಲೈಂಗಿಕ ಕಿರುಕುಳ ನೀಡಿದ್ದಾರೆ. ನಡು ರಸ್ತೆಯಲ್ಲೇ ಯುವತಿಗೆ ಲೈಂಗಿಕ ಕಿರುಕುಳ ಮಾಡಿದ್ದಾರೆ ಎಂದು ಯುವತಿ ಹಾಗೂ ಆಕೆಯ ಪತಿ ಆರೋಪಿಸಿದ್ದಾರೆ. ಕೊಡಿಗೆಹಳ್ಳಿಯ ವಿರೂಪಾಕ್ಷಪುರದಲ್ಲಿ ನಿನ್ನೆ ರಾತ್ರಿ 10:30ರ ಸುಮಾರಿಗೆ ನಡೆದ ಘಟನೆ ಇದು.

ಜೊತೆಗಿದ್ದ ದಂಪತಿಯ ಬಳಿ ಬಂದ ಮೂರ್ನಾಲ್ಕು ಪುಂಡರು, ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಯುವತಿಗೆ ಒತ್ತಾಯ ಮಾಡಿದ್ದಾರೆ. ಒಪ್ಪದಿದ್ದಾಗ ಕಿಡ್ನ್ಯಾಪ್ ಮಾಡುವ ಬೆದರಿಕೆ ಹಾಕಿದ್ದಾರೆ. ಈ ದಂಪತಿ ಬಿಹಾರ ಮೂಲದವರಾಗಿದ್ದು, ಈ ದಂಪತಿಗೆ ನಿನ್ನೆ ರಾತ್ರಿ ಕರಾಳ ಅನುಭವವಾಗಿದೆ. ಹೆಂಡತಿಯನ್ನು ಕಳಿಸುವಂತೆ ಪುಂಡರು ಗಂಡನಿಗೆ ಬೆದರಿಕೆ ಹಾಕಿದ್ದಾರೆ. ಗಂಡನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ.

ಇದರಿಂದ ಭಯಭೀತರಾದ ದಂಪತಿ ಸಹಾಯ ಕೋರಿ ಬೆಂಗಳೂರು ಪೊಲೀಸರಿಗೆ ಫೋನ್ ಮಾಡಿದರೂ ಸರಿಯಾದ ರೆಸ್ಪಾನ್ಸ್ ಸಿಕ್ಕಿಲ್ಲ. ಕಿರುಕುಳದ ಬಗ್ಗೆ ಬೆಂಗಳೂರು ಪೋಲಿಸ್ ಸಹಾಯವಾಣಿಗೆ ಕರೆ ಮಾಡಿದ್ದರು. ಬೆಂಗಳೂರು ಪೋಲಿಸರು ಸ್ಪಂದಿಸದಿದ್ದುದರಿಂದ ಬಿಹಾರ ಪೋಲಿಸರಿಗೆ ದಂಪತಿ ಫೋನ್ ಮಾಡಿದ್ದಾರೆ. ಕೊಡಿಗೆಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಧ್ಯಪ್ರದೇಶ: ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆ (Love Jihad) ಯಾಗಿದ್ದು, ಆಕೆ ಪ್ರಿಯಕರ ಜುನೈದ್‌ (Junaid) ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮಧ್ಯಪ್ರದೇಶ (Madhya pradesh) ಧಾರ್‌ ಜಿಲ್ಲೆಯಲ್ಲಿ ಈ ಘಟನೆ ನಡೆಸಿದ್ದು, ಸಾಮಾಜಿಕ ಜಾಲತಾಣ (Social Media) ದಲ್ಲಿ ವಿಡಿಯೋ ಬಹಳ ಸುದ್ದಿ ಮಾಡುತ್ತಿದೆ. ಪೊಲೀಸ್‌ ಮಾಹಿತಿ ಪ್ರಕಾರ, ಜುನೈದ್‌ ಎಂಬಾತನ ಹೆಸರಿನಲ್ಲಿ ಬುಕ್‌ ಆಗಿದ್ದ ಹೊಟೇಲ್‌ ರೂಂನಲ್ಲಿ ಹಿಂದೂ ಯುವತಿಯ(24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ.

ವಟಿಕಾ ಎಂಬ ಹೊಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿ ಎರಡು ದಿನಗಳಿಂದ ಆರೋಪಿ ಜುನೈದ್‌ ಜೊತೆ ಹೊಟೇಲ್‌ನಲ್ಲಿ ತಂಗಿದ್ದಳು. ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಾಗಿಲು ಒಡೆದು ನೋಡಿದಾಗ ಆಕೆಯ ದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ಮದುವೆಗೆ ನಿರಾಕರಿಸಿದ್ದಕ್ಕೆ ಸೂಸೈಡ್‌

ಇನ್ನು ಆರೋಪಿ ಜುನೈದ್‌ ಮದುವೆಗೆ ನಿರಾಕರಿಸಿದಕ್ಕೆ ಬೇಸರಗೊಂಡು ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್‌ ಆದಿಕಾರಿ ಅಮಿತ್‌ ಕುಮಾರ್‌ ಮಿಶ್ರಾ, 24 ವರ್ಷದ ಯುವತಿ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದೆವು. ಆಕೆ ತನ್ನ ಚೂಡಿದಾರ್‌ ಶಾಲಿನಿಂದ ಕುತ್ತಿಗೆ ಬಿಗಿದು ಸಾವಿಗೆ ಶರಣಾಗಿದ್ದಾಳೆ. ಇನ್ನು ಈಕೆ ಎರಡು ದಿನಗಳಿಂದ ಜುನೈದ್‌ ಎಂಬಾತನ ಜತೆ ಹೊಟೇಲ್‌ನಲ್ಲಿ ತಂಗಿದ್ದಳು ಎಂಬ ಮಾಹಿತಿ ಇದೆ.

ಇದನ್ನೂ ಓದಿ:America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

ಯುವತಿ ಮತ್ತು ಆರೋಪಿ ಜುನೈದ್‌ ಇಂಧೋರ್‌ನ ಮಹುಗಾವ್‌ ಜಿಲ್ಲೆಯವರಾಗಿದ್ದು, ಇಬ್ಬರೂ ಒಂದೇ ತರಗತಿಯಲ್ಲಿ ಓದುತ್ತಿದ್ದರು. ಕಾಲೇಜಿನಲ್ಲೇ ಇಬ್ಬರು ಪರಸ್ಪರ ಪ್ರೀತಿಸಲು ಶುರುಮಾಡಿದ್ದು, ಕಳೆದ ಐದು ವರ್ಷದಿಂದ ರಿಲೇಶನ್‌ಶಿಪ್‌ನಲ್ಲಿದ್ದರು. ಯುವತಿ ತನ್ನನ್ನು ಮದುವೆ ಆಗುವಂತೆ ಜುನೈದ್‌ನನ್ನು ಆಗಾಗ ಒತ್ತಾಯಿಸುತ್ತಿದ್ದಳು. ಆದರೆ ಆತ ಮದುವೆಗೆ ತಯಾರಿರಲಿಲ್ಲ. ನೆಪ ಹೇಳಿಕೊಂಡು ಮದುವೆಯನ್ನು ಮುಂದಕ್ಕೆ ತಳ್ಳುತ್ತಲೇ ಇದ್ದ. ಇದೇ ಕಾರಣಕ್ಕೆ ಬೇಸರಗೊಂಡಿದ್ದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇವರಿಬ್ಬರ ಪ್ರೀತಿಯ ವಿಷಯ ಮನೆಯವರಿಗೂ ತಿಳಿದಿತ್ತು. ಇದೀಗ ನಾಪತ್ತೆಯಾಗಿರುವ ಜುನೈದ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Murder case: ಹೆಂಡ್ತಿ ಮೇಲೆ ಸಂಶಯ; ಕುಡಿದು ಬಂದು ಕೊಡಲಿಯಿಂದ ಕೊಚ್ಚಿ ಕೊಂದ

Continue Reading

ಪ್ರಮುಖ ಸುದ್ದಿ

Karnataka Weather: ಇಂದು ಚಿಕ್ಕಮಗಳೂರು, ಕೊಡಗು, ಮೈಸೂರು ಸೇರಿ ವಿವಿಧೆಡೆ ಮಳೆ ಮುನ್ಸೂಚನೆ

Karnataka Weather: ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ ಸೇರಿ ಹಲವು ಜಿಲ್ಲೆಗಳಲ್ಲಿ ತೀವ್ರ ಶಾಖದ ಅಲೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

Karnataka Weather
Koo

ಬೆಂಗಳೂರು: ಮೇ 1ರಂದು ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ರಾಜ್ಯದಾದ್ಯಂತ ಮೇ 5ರವರೆಗೆ ಒಣ ಹವೆ ಇರುವ ಸಾಧ್ಯತೆ ಇದೆ. ಮೇ 6ರಂದು ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೆಯೇ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಮೇ 7ರಂದು ಕೂಡ ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ನಾಲ್ಕು ದಿನ ಶಾಖದ ಅಲೆಯ ಎಚ್ಚರಿಕೆ

ಮೇ 1 ರಿಂದ ಮೇ 4ರವರೆಗೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ (ಬಯಲು ಪ್ರದೇಶ), ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು (ಬಯಲು ಪ್ರದೇಶ) ಮತ್ತು ಚಿಕ್ಕ ಬಳ್ಳಾಪುರ ಜಿಲ್ಲೆಗಳು ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ.

ತಾಪಮಾನದ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮೇ 4 ರವರೆಗೆ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳವರೆಗೆ ಬಾಗಲಕೋಟೆ, ಕಲಬುರಗಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬೆಚ್ಚನೆಯ ರಾತ್ರಿಯ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಇನ್ನು ಮುಂದಿನ 5 ದಿನಗಳವರೆಗೆ ರಾಜ್ಯದಾದ್ಯಂತ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ.

ಇದನ್ನೂ ಓದಿ | Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಇನ್ನು ಮುಂದಿನ 48 ಗಂಟೆಗಳು: ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 38°C ಮತ್ತು 24°C ಇರುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ ದಾಖಲು!

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ದಿನೇದಿನೆ ತಾಪಮಾನ (Temperature) ಏರಿಕೆಯಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚು ತಾಪಮಾನ (Karnataka Weather) ವರದಿಯಾಗುತ್ತಿದ್ದು, ರಾಯಚೂರಿನಲ್ಲಿ ಸೋಮವಾರ, ಕಳೆದ 7 ವರ್ಷಗಳಲ್ಲೇ ಗರಿಷ್ಠ ತಾಪಮಾನ 45.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಕಂಡುಬಂದಿದೆ.

ಏ.29ರ ಬೆಳಗ್ಗೆ 8.30 ರಿಂದ ಏ.30 ಬೆಳಗ್ಗೆ 8.30ರವರೆಗೆ ರಾಜ್ಯದ ಜಿಲ್ಲಾವಾರು ಗರಿಷ್ಠ ತಾಪಮಾನ ನೋಡುವುದಾದರೆ, ರಾಯಚೂರಿನಲ್ಲಿ 45.6 ಡಿಗ್ರಿ ಸೆ. ದಾಖಲಾಗಿದೆ. ಕೊಡಗಿನಲ್ಲಿ 38.6 ಡಿಗ್ರಿ ಸೆ. ತಾಪಮಾನ ದಾಖಲಾಗಿದ್ದು, ಇದು ಎಲ್ಲ ಜಿಲ್ಲೆಗಳಿಗಿಂತ ಕಡಿಮೆಯಾಗಿದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ 39.8 ಡಿಗ್ರಿ ಸೆ. ಹೊರತುಪಡಿಸಿ, ಎಲ್ಲ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆ. ಮೀರಿದೆ.

Continue Reading
Advertisement
delhi schools bomb threat
ಪ್ರಮುಖ ಸುದ್ದಿ21 mins ago

Bomb Threat: ದಿಲ್ಲಿಯ ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್‌ ಬೆದರಿಕೆ, ಮಕ್ಕಳ ತೆರವು

Columbia University
ವಿದೇಶ46 mins ago

Columbia University: ಕೊಲಂಬಿಯಾ ವಿವಿ ಪ್ರವೇಶಿಸಿದ ನ್ಯೂಯಾರ್ಕ್‌ ಪೊಲೀಸರು; ಪ್ಯಾಲೆಸ್ತೀನ್‌ ಪರ ಪ್ರತಿಭಟನಾಕಾರರ ಬಂಧನ

High-tec Gadget
ತಂತ್ರಜ್ಞಾನ58 mins ago

High-tech Gadget: ಸೆಕೆಗೆ ಎಸಿ, ಫ್ಯಾನ್‌, ಕೂಲರ್‌ ಸಾಕಾಗ್ತಿಲ್ವಾ..? ಹಾಗಿದ್ರೆ ಇಲ್ಲಿದೆ ನೋಡಿ ಹೈಟೆಕ್‌ ಗ್ಯಾಜೆಟ್‌

hassan pen drive case hd revanna prajwal revanna
ಕ್ರೈಂ1 hour ago

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Bhavyashree Poojary exit Neenade Naa Serial
ಕಿರುತೆರೆ1 hour ago

Bhavyashree Poojary: ರಮೇಶ್‌ ಅರವಿಂದ್‌ ನಿರ್ಮಾಣದ ಧಾರಾವಾಹಿಗೆ ಗುಡ್‌ಬೈ ಹೇಳಿದ ಭವ್ಯಶ್ರೀ ಪೂಜಾರಿ! ಕಾರಣವೇನು?

Heat Wave
ದೇಶ2 hours ago

Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

SS Rajamouli Announces Baahubali Crown of Blood Animated Series
ಟಾಲಿವುಡ್2 hours ago

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

Viral video
ವೈರಲ್ ನ್ಯೂಸ್2 hours ago

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

lok sabha election 2024 voting
ಪ್ರಮುಖ ಸುದ್ದಿ2 hours ago

Lok Sabha Election 2024: ಎರಡು ಹಂತದ ಚುನಾವಣೆ ವೇಳೆ ಶೇ.84ರಷ್ಟು ಕ್ಷೇತ್ರಗಳಲ್ಲಿ ಮತದಾನ ಕುಸಿತ; ಎಫೆಕ್ಟ್ ಏನು?

Aamir Khan on collaborating with SRK, Salman Khan
ಸಿನಿಮಾ2 hours ago

Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌