Site icon Vistara News

Teachers Association: ಸೆ.5ರಂದು ಶಿಕ್ಷಕರಿಂದ ಹಕ್ಕೊತ್ತಾಯ ಪತ್ರ ಅಭಿಯಾನ; ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರಕ್ಕೆ ಒತ್ತಾಯ

Primary Teachers Association

ಬೆಂಗಳೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು 6 ರಿಂದ 8ನೇ ತರಗತಿಗೆ ನಿಯುಕ್ತಿಗೊಳಿಸುವುದು, ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 5 ರಂದು ರಾಜ್ಯ ಸರ್ಕಾರಕ್ಕೆ ಹಕ್ಕೋತ್ತಾಯ ಪತ್ರ ಸಲ್ಲಿಸಲು ಪ್ರಾಥಮಿಕ ಶಾಲಾ ಶಿಕ್ಷಕರು ನಿರ್ಧರಿಸಿದ್ದಾರೆ. ಬೇಡಿಕೆಗಳಿಗೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (Teachers Association) ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಪದವೀಧರ ಶಿಕ್ಷಕರ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಸೆಪ್ಟೆಂಬರ್ 5 ರಂದು ಕಡ್ಡಾಯವಾಗಿ “ನಮ್ಮ ದಿನ, ನಮ್ಮ ಹಕ್ಕೊತ್ತಾಯ” ಪತ್ರವನ್ನು ಸಚಿವರು, ಶಾಸಕರ ಮೂಲಕ ಮುಖ್ಯ ಮಂತ್ರಿಗಳಿಗೆ ಹಾಗೂ ಶಿಕ್ಷಣ ಸಚಿವರಿಗೆ ಕಡ್ಡಾಯವಾಗಿ ಸಲ್ಲಿಸಬೇಕು. ಇದಕ್ಕಾಗಿ ಮಾದರಿ “ಹಕ್ಕೊತ್ತಾಯ ಪತ್ರವನ್ನು ರಾಜ್ಯ ಸಂಘದಿಂದ ಕಳುಹಿಸಲಾಗುವುದು ಎಂದು ರಾಜ್ಯದ ಎಲ್ಲ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಸೂಚಿಸಿದ್ದಾರೆ.

ಇದನ್ನೂ ಓದಿ | NAVIKA Summit: ಮತ್ತೆ ಬಂದ ನಾವಿಕ! ವಿಶ್ವ ಕನ್ನಡ ಸಮ್ಮೇಳನಕ್ಕೆ ಭರ್ಜರಿ ತಯಾರಿ, ಕ್ಷಣಗಣನೆ

ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ನಿರ್ಣಯಗಳು

  1. ರಾಜ್ಯದ ಸೇವಾನಿರತ ಪದವೀಧರ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ 6 ರಿಂದ 8 ತರಗತಿ ಬೋಧನೆಗೆ ನಿಯುಕ್ತಿಗೊಳಿವುದು ಹಾಗೂ ಆರ್ಥಿಕ ಸೌಲಭ್ಯಗಳನ್ನು ನೀಡಲು ಸರ್ಕಾರಕ್ಕೆ ಸೂಕ್ತ ಕಾಲಾವಕಾಶ ಕೊಟ್ಟು, ಬೇಡಿಕೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಲು ತೀರ್ಮಾನಿಸಲಾಯಿತು.
  2. ತಾಲೂಕು, ಜಿಲ್ಲೆ, ರಾಜ್ಯ ಹಂತದಲ್ಲಿ ರಾಜ್ಯ ಸಂಘದ ನಿರ್ದೇಶನದಂತೆ ಬೈಲಾ ನಿಯಮದ ವಿರುದ್ಧ ಕಾರ್ಯನಿರ್ವಹಿಸುತ್ತಿರುವವರ ವಿರುದ್ಧ ಸಂಘದ ಬೈಲಾ 4(2), 6(9), h(ಎಸ್), 18(1) ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಯಿತು.
  3. ಶಿಕ್ಷಕರ ದಿನಾಚರಣೆಯಂದು “ನಮ್ಮ ದಿನ, ನಮ್ಮ ಹಕ್ಕೊತ್ತಾಯ” ಎಂಬ ಘೋಷ ವಾಕ್ಯದಡಿ ಸಚಿವರಿಗೆ, ಶಾಸಕರಿಗೆ ಪದವೀಧರ ಶಿಕ್ಷಕರನ್ನು 6 ರಿಂದ 8ಕ್ಕೆ ಕಾಲಮಿತಿಯಲ್ಲಿ ವಿಲೀನಗೊಳಿಸುವಂತೆ “ಹಕ್ಕೊತ್ತಾಯ ಪತ್ರ” ಹಾಗೂ ಶಾಲೆಗೊಂದು ಸ್ಮಾರ್ಟ್ ಕ್ಲಾಸ್ ಅಭಿಯಾನ ಪತ್ರ ನೀಡಲು ತೀರ್ಮಾನಿಸಲಾಯಿತು.
  4. ಎನ್.ಪಿ.ಎಸ್ ರದ್ದುಗೊಳಿಸಿ, ಒ.ಪಿ.ಎಸ್. ಜಾರಿಗೊಳಿಸುವಂತೆ AIPTF ವತಿಯಿಂದ ಹಮ್ಮಿಕೊಂಡಿರುವ “ಭಾರತ ಯಾತ್ರೆಯನ್ನು ಯಶಸ್ವಿಗೊಳಿಸಲು ತೀರ್ಮಾನಿಸಲಾಯಿತು.
  5. ಜಿಲ್ಲಾ ಹಂತದಲ್ಲಿ ಜಿಲ್ಲಾ ಅಧ್ಯಕ್ಷರು, ಕಾರ್ಯದರ್ಶಿಗಳು, ತಾಲೂಕು ಅಧ್ಯಕ್ಷರು ಕಾರ್ಯದರ್ಶಿಗಳು, ನಿರ್ದೇಶಕರು ಶಿಕ್ಷಕರನ್ನು ಕರೆದು ಸಭೆಯನ್ನು ನಡೆಸಿ ರಾಜ್ಯ ಸಂಘಕ್ಕೆ ಪದವೀಧರ ಶಿಕ್ಷಕರನ್ನು 6 ರಿಂದ 8ಕ್ಕೆ ವಿಲೀನಗೊಳಿಸಲು ಸೂಕ್ತ ಸಲಹೆಗಳನ್ನು ನೀಡುವಂತೆ ತೀರ್ಮಾನಿಸಲಾಯಿತು.
  6. 7ನೇ ವೇತನ ಆಯೋಗದ ಸೇವಾ ಸೌಲಭ್ಯಗಳ ಕುರಿತು ಆಯೋಗದೊಂದಿಗೆ ಚರ್ಚಿಸಿ ಜಾರಿಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು. ಹಾಗೂ ಇನ್ನಿತರ ಹಲವಾರು ನಿರ್ಣಯಗಳನ್ನು ಕೈಗೊಳ್ಳಲಾಯಿತು.
Exit mobile version